Breaking News

ರಾಜ್ಯ

ಉತ್ತರ ಕರ್ನಾಟಕ ಭಾಗದಲ್ಲಿ ಸಿದ್ದರಾಮಯ್ಯ ಹಾಗೂ ದಕ್ಷಿಣ ಕರ್ನಾಟಕ ಭಾಗದಲ್ಲಿ ಡಿ.ಕೆ.ಶಿ.ಅಖಾಡಕ್ಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಮೂಡಿಸುವುದಕ್ಕಾಗಿ ಮಹತ್ವದ ಬಸ್ ಯಾತ್ರೆ ಆಯೋಜನೆ ಮಾಡಲಾಗಿದ್ದು, ಜನವರಿ 3 ರಿಂದ ಕೈ ಕಲಿಗಳು ಅಖಾಡಕ್ಕೆ ಇಳಿಯಲಿದ್ದಾರೆ. ಜನವರಿ 3ರಂದು ಬಸವ ಕಲ್ಯಾಣದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಬಸ್ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮಧ್ಯೆ ಭಿನ್ನಮತ ಮೂಡಿದೆ ಎಂದು ಹೇಳಲಾಗುತ್ತಿತ್ತು. ಆದರೆ ಉಭಯ ನಾಯಕರೂ ಈ ಮಾತನ್ನು ನಿರಾಕರಿಸಿದ್ದು, ಇಬ್ಬರೂ ಒಟ್ಟಾಗಿ ಬಸ್ ಯಾತ್ರೆ …

Read More »

ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜಿಸಿ ಅತಿಕ್ರಮಣ ತೆರವುಗೊಳಿಸಿದ ಮಹಾನಗರ ಪಾಲಿಕೆ

ವಿಜಯಪುರ ದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜಿಸಿದೆ. ಅತಿಕ್ರಮಣ ಗೊಂಡಿದ್ದ ರಸ್ತೆ ತೆರವು ಮಾಡಲಾಗಿದೆ‌.ವಿಜಯಪುರ ‌ನಗರದ ವಲ್ಲಭಭಾಯಿ ವೃತ್ತದಿಂದ ವಿಶ್ವೇಶ್ವರಯ್ಯ ವೃತ್ತದ ವರೆಗೆ ಅತಿ ಕ್ರಮಣ ತೆರವು ಮಾಡಲಾಯಿತು. 100 ಫೂಟ್ ಅಗಲವಿರುವ ರಸ್ತೆಯಲ್ಲಿ ಹಲವು ಕಡೆ ಅತೀಕ್ರಮಣವಾಗಿತ್ತು. ಈ ಕುರಿತು ಮಹಾನಗರ ಪಾಲಿಕೆ ಹಲವು ಬಾರಿ ನೋಟಿಸ್ ಜಾರಿ‌ ಮಾಡಿದ್ದರೂ ಸಹಿತ ಅತಿಕ್ರಮಣ ತೆರವುಗೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ಮಾಡಲಾಯಿತು. …

Read More »

ಹೈಕಮಾಂಡ್ ಚಿತ್ತ ಕರ್ನಾಟಕದತ್ತ’ : ಶೀಘ್ರವೇ ರಾಜ್ಯಕ್ಕೆ ಪ್ರಧಾನಿ ಮೋದಿ , ಅಮಿತ್ ಶಾ ಭೇಟಿ

ಬೆಂಗಳೂರು : ಗುಜರಾತ್ ಚುನಾವಣೆ ಬಳಿಕ ಬಿಜೆಪಿ ಚಿತ್ತ ಕರ್ನಾಟಕದತ್ತ ಹರಿದಿದ್ದು, ಬಿಜೆಪಿ ವರಿಷ್ಟರು ಶೀಘ್ರವೇ ಕರ್ನಾಟಕಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಈ ತಿಂಗಳು ಹಾಗೂ ಮುಂದಿನ ತಿಂಗಳು ಪ್ರಧಾನಿ ಮೋದಿ ಹಾಗೂ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ವಿವಿಧ ನಾಯಕರುಗಳು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಧಾನಿ ಮೋದಿ ಅವರು ಜ. 2ನೇ ವಾರ ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಗಾವಿಯಲ್ಲಿ …

Read More »

2 ಎ ಮೀಸಲಾತಿ ಹೋರಾಟ ತಾರ್ಕಿಕ ಹಂತಕ್ಕೆ; ಬೆಳಗಾವಿಯಲ್ಲಿ ಡಿ.12 ರಂದು ವಿರಾಟ್ ಪಂಚಶಕ್ತಿ ಸಮಾವೇಶ

ದಾವಣಗೆರೆ: ಬೆಳಗಾವಿಯ ಗಾಂಧಿಭವನದಲ್ಲಿ ಡಿ.12 ರಂದು ವಿರಾಟ್ ಪಂಚಶಕ್ತಿ ಸಮಾವೇಶ ನಡೆಯಲಿದೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ-2 ಎ ಮೀಸಲಾತಿ ನೀಡಬೇಕು ಎಂಬ 2 ವರ್ಷ 2 ತಿಂಗಳ ಹೋರಾಟ ತಾರ್ಕಿಕ ಹಂತಕ್ಕೆ ತಲುಪಿದೆ. ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಡಿ. 22 ರ ಒಳಗೆ …

Read More »

ಕಾರ್ಮಿಕರಿಗೆ ಕಿಟ್ಟ್ ಹಸ್ತಾಂತರಿಸಿದ ಶಾಸಕ ಅನಿಲ ಬೆನಕೆ

ಬೆಳಗಾವಿ: ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ನೀಡಲಾಗುವ ಕಾರ್ಮಿಕರ ಕಿಟ್ಟಗಳನ್ನು ಶಾಸಕ ಅನಿಲ ಬೆನಕ ಅವರು ವಿತರಣೆ ಮಾಡಿದರು, ಇಂದು ಮಾಹಾಂತೇಶ ನಗರದ ಮಹಾಂತ ಭವನ ಬಳಿ ವಿವಿಧ ಕಟ್ಟಡ ಕಾರ್ಮಿಕರಾದ ಪೆಂಟರ್, ಪ್ಲಂಬರ್, ಗೌಂಡಿ, ಹೀಗೆ ವಿವಿಧ ರೀತಿಯ ಕಾರ್ಮಿಕರಿಗೆ ಕಿಟ್ಟ್ ಗಳನ್ನು ಹಂಚಿಕೆ ಮಾಡಿದರು, ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅನಿಲ ಬೆನಕೆ ಅವರು, ಲೇಬರ್ ಕಾರ್ಡ್ …

Read More »

ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ:ಆರ್ ಅಶೋಕ್

ಬೆಂಗಳೂರು : ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಸಚಿವ ಆರ್ ಅಶೋಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಅಶೋಕ್ ಕಾಂಗ್ರೆಸ್ ನ ಶಾಸಕರು ಮತ್ತು ನಾಯಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ. ಸದ್ಯದಲ್ಲೇ ಶಾಸಕರನ್ನು ತಮ್ಮ ಪಕ್ಷಕ್ಕೆ ಸೇಡೆ ಮಾಡಿಕೊಳ್ಳುತ್ತೇವೆ ಎಂದು ಅಶೋಕ್ ಹೇಳಿದರು. ಕಾಂಗ್ರೆಸ್ ನಾಯಕರಿಗೆ ಈಗ ಭಯ ಶುರುವಾಗಿದೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಆ ಪಕ್ಷಕ್ಕೆ ಯಾರೂ ವಲಸೆ …

Read More »

ಡಿ.18 ರಂದು ಧಾರವಾಡದಲ್ಲಿ ಉದ್ಯೋಗ ಮೇಳ

ಧಾರವಾಡ : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಧಾರವಾಡದ ಜೆಎಸ್‌ಎಸ್ ಆವರಣದಲ್ಲಿ ಡಿಸೆಂಬರ್ 18 ರಂದು ಉದ್ಯೋಗ ಮೇಳ ಆಯೋಜನೆ ಮಾಡಿದೆ. ಉದ್ಯೋಗ ಮೇಳದಲ್ಲಿ ಅಂದಾಜು 70 ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗವಹಿಸಲಿದ್ದು, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.   ಎಸ್. ಎಸ್. ಎಲ್. ಸಿ ಅನುತ್ತೀರ್ಣ ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ, ಬಿಎ, ಬಿಕಾಂ ಇನ್ನಿತರ ಪದವಿ ಮತ್ತು ಸ್ನಾತಕೋತರ ಪದವಿ ಪಾಸಾದ ಅಭ್ಯರ್ಥಿಗಳು …

Read More »

ಶಿರಸಿ ಪ್ರತ್ಯೇಕ ಜಿಲ್ಲೆ: ರಾಜಕಾರಣಿಗಳಿಗಿಂತ ಜನರ ಅಭಿಪ್ರಾಯ ಮುಖ್ಯ -ದೇಶಪಾಂಡೆ

ಶಿರಸಿ: ಉತ್ತರ ಕನ್ನಡವನ್ನು ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸುವ ವಿಚಾರಕ್ಕೆ ಸಂಬಂಧಿಸಿ ರಾಜಕಾರಣಿಗಳಿಗಿಂತ ಜನರ ಅಭಿಪ್ರಾಯ ಮುಖ್ಯ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು.   ‘ಜಿಲ್ಲೆ ದೊಡ್ಡದಾಗಿರುವ ಕಾರಣ ಅಭಿವೃದ್ಧಿ ಆಗಿಲ್ಲ ಎಂಬ ವಾದ ಒಪ್ಪಲಾಗದು. ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಸುದೀರ್ಘ ಅವಧಿಗೆ ಆಡಳಿತ ನಡೆಸಿದ್ದೇನೆ. ಸಾಕಷ್ಟು ಅಭಿವೃದ್ಧಿಯನ್ನೂ …

Read More »

ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ

ಬೆಳಗಾವಿ: ತಹಶೀಲ್ದಾರರೊಬ್ಬರು ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು 25 ತೊಲ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ. ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಚುನಾವಣೆ ಕರ್ತವ್ಯ ನಿಮಿತ್ತ ಅವರು ಮನೆಗೆ ಬೀಗ ಹಾಕಿ ತೆರಳಿದ್ದನ್ನು ತಿಳಿದ ಕಳ್ಳರು ಮನೆಗೆ ಹೊಕ್ಕಿದ್ದರು. ತಡರಾತ್ರಿಯಲ್ಲಿ ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ …

Read More »

ಟಿವಿ ವಾಹಿನಿಗಳವರು ಕಥೆಯನ್ನು ಹೇಳಿ, ಮುಕ್ತಾಯ ಮಾಡದೇ ಬಿಡುವುದು ಸರಿಯಲ್ಲ’ -ದರ್ಶನ್‌

ಮೈಸೂರು: ‘ಇಲ್ಲಿನ ತಿ.ನರಸೀಪುರ ರಸ್ತೆಯಲ್ಲಿರುವ ನನ್ನ ತೋಟದಲ್ಲಿ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರ್ಮಿಕ ಅಪರಾಧಿ ಎನ್ನುವುದು ಸಾಬೀತಾಗಿದ್ದು, ನ್ಯಾಯಾಲಯವು 43 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಪೋಕ್ಸೊ ಅಡಿಯಲ್ಲಿ ದೀರ್ಘಾವಧಿ ಶಿಕ್ಷೆ ನೀಡಿದ ದೇಶದ ಮೊದಲ ಪ್ರಕರಣ ಇದಾಗಿದ್ದು, ಕಾಮುಕರಿಗೆ ಪಾಠವಾಗಬೇಕು. ಹೆಣ್ಮಕ್ಕಳನ್ನು ಮುಟ್ಟಬಾರದೆಂಬ ಸಂದೇಶ ಇಂತಹ ತೀರ್ಪುಗಳ ಮೂಲಕ ಹೋಗಬೇಕು’ ಎಂದು ಚಿತ್ರನಟ ದರ್ಶನ್‌ ಹೇಳಿದ್ದಾರೆ. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಘಟನೆ ನಡೆದಾಗ, …

Read More »