Breaking News

ರಾಜ್ಯ

ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ತೆರವು ಮಾಡಿದ ಬುಡಾ ಅಧಿಕಾರಿಗಳು

ಬೆಳಗಾವಿ ರಾಮತೀರ್ಥ ನಗರದಲ್ಲಿ ಸಾರ್ವಜನಿಕ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ಬುಡಾ ಅಧಿಕಾರಿಗಳು ತೆರವು ಮಾಡಿದ್ದಾರೆ. ಹೌದು ಮಂಗಳವಾರ ಬೆಳಿಗ್ಗೆ ಜೆಸಿಬಿಗಳ ಸಹಾಯದಿಂದ ರಾಮತೀರ್ಥ ನಗರದಲ್ಲಿ ಯೋಜನೆ ಸಂಖ್ಯೆ 35, 40, 41ರಲ್ಲಿ ಸಾರ್ವಜನಿಕರ ಅನುಕೂಲಕ್ಕೆ ಮೀಸಲಿಟ್ಟಿದ್ದ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ್ದ ಕಟ್ಟಡಗಳನ್ನು ನೆಲಸಮಗೊಳಿಸಲಾಯಿತು. ಈ ಸಂಬಂಧ ಮಾತನಾಡಿದ ಬುಡಾ ಎಇಇ ಮಹಾಂತೇಶ ಹಿರೇಮಠ ಅವರು ಯಾವುದೇ ಅನಧಿಕೃತ ಮನೆಗಳನ್ನು ಯಾರೂ ಕೂಡ ಕಟ್ಟಬಾರದು. ಪ್ರಾಧಿಕಾರಕ್ಕಾಗಿ ನಾವು ವಶಪಡಿಸಿಕೊಂಡಿರುವ ಅಥವಾ …

Read More »

ವಸತಿ ನಿಲಯದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ

ವಸತಿ ನಿಲಯದಲ್ಲೇ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೈಲಹೊಂಗಲ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಹಾಸ್ಟೇಲ್‍ನಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಕೊಡ್ಡಿವಾಡ ಗ್ರಾಮದ ಪರುಶರಾಮ ಕೋನೇರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಬೇರೆ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ಬಳಿಕ ಈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ವಿದ್ಯಾರ್ಥಿ ಬಾಗಿಲು ತೆರೆಯದ ಕಾರಣ ಇತರ ವಿದ್ಯಾರ್ಥಿಗಳು ಪೆÇಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು …

Read More »

KSRTC ಹೆಸರಿನಲ್ಲಿ ನಕಲಿ ಉದ್ಯೋಗ ಜಾಹೀರಾತು

ಕೆಎಸ್‌ಆರ್ ಟಿಸಿ ನಿಗಮದ ಹೆಸರು ದುರುಪಯೋಗ ಮಾಡಿಕೊಂಡು ಉದ್ಯೋಗ ಜಾಹೀರಾತು ನೀಡಿದ ಎನ್ ಜಿಓ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸನ್ಮಾರ್ಗ ಎನ್ ಜಿಓ ಎಂಬ ಸಂಸ್ಥೆಯು ಕೆಎಸ್ ಆರ್ ಟಿಸಿ ಹೆಸರು ಬಳಸಿ ಉದ್ಯೋಗದ ಜಾಹಿರಾತು ನೀಡಿದೆ. ಇದರ ವಿರುದ್ಧ ಶಿವಮೊಗ್ಗ ಕೆಎಸ್‌ಆರ್ ಟಿಸಿ ವಿಭಾಗದ ಮುಖ್ಯಸ್ಥ ಮರಿಗೌಡ ದೂರು ದಾಖಲಿಸಿದ್ದಾರೆ. ಡ್ರೈವರ್ ಗಳು ಬೇಕಾಗಿದ್ದಾರೆ ಎಂದು ಜಾಹೀರಾತು ನೀಡಲಾಗಿದ್ದು, 650 ಹುದ್ದೆಗಳು ಖಾಲಿಯಿದೆ ಎಂದು …

Read More »

ಮತ್ತೆ {ಗೋಕಾಕ} ಘಟಪ್ರಭಾ ಶಿಂಗಲಾಪೂರ ಹತ್ತಿರ ಮೊಸಳೆ ಪ್ರತ್ಯಕ್ಷ

ಗೋಕಾಕ: ಕಳೆದ ಎರಡು ವಾರದ ಹಿಂದೆ ಗೋಕಾಕ ಫಾಲ್ಸ್ ನಲ್ಲಿ ಮೊಸಳೆ ಕಾಣಿಸಿ ಕೊಂಡಿತ್ತು. ಎರಡು ವಾರ ಕಳೆದರೂ ಕೂಡ ಮೊಸಳೆ ಪತ್ತೆ ಹಚ್ಚುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ್ ವಿಫಲ ವಾಗಿದೆ. ಇವಾಗ ಮತ್ತೊಂದು ಮೊಸಳೆ ಶಿಂಗಲಾ ಪುರ ಮಾರ್ಕಂಡೇಯ ಘತಪ್ರಭೆ ನದಿ ಸೇರುವ ಸ್ಥಳದಲ್ಲಿ ಮತ್ತೆ ಮೊಸಳೆ ಪ್ರತ್ಯಕ್ಷ ವಾಗಿದೆ ಇದರಿಂದ ಸಾರ್ವಜನಿಕ ರಲ್ಲಿ ಆತಂಕ ಉಂಟಾಗಿದೆ.   ಇದಕ್ಕೆಲ್ಲ ಕಾರಣ ಅರಣ್ಯ ಇಲಾಖೆಯ ದುರ್ಲಕ್ಷ್ಯವೆ ಕಾರಣ ಎನ್ನ …

Read More »

ಬೆಳಗಾವಿ ಗಡಿ ವಿವಾದ: ಸರ್ವಪಕ್ಷಗಳ ಸಭೆಗೆ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ‘ಬೆಳಗಾವಿ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವುದರಿಂದ ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷಗಳ ಸಭೆ ಕರೆದು, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.   ಟ್ವೀಟ್‌ ಮಾಡಿರುವ ಅವರು, ‘ಬೆಳಗಾವಿ ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ ಇದೇ 23ರಂದು ವಿಚಾರಣೆ ನಡೆಸಲಿದೆ. ಅದನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆಭರದ ಸಿದ್ಧತೆ ನಡೆಸಿದ್ದಾರೆ. …

Read More »

ಸುಪ್ರೀಂನಲ್ಲಿ ಬೆಳಗಾವಿ ಗಡಿ ವಿವಾದದ ಬಗ್ಗೆ ಹೋರಾಡಲು ಸರ್ವಸನ್ನದ್ಧ: ಬೊಮ್ಮಾಯಿ

ಬೆಂಗಳೂರು: ಸುಪ್ರೀಂಕೋರ್ಟ್‌ನಲ್ಲಿ ಬೆಳಗಾವಿ ಗಡಿ ವಿವಾದದ ಬಗ್ಗೆ ಹೋರಾಡಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಾಳೆ (ನ.23) ಸುಪ್ರಿಂಕೋರ್ಟ್‌ನಲ್ಲಿ ಬೆಳಗಾವಿ ಗಡಿ ವಿವಾದ 18 ವರ್ಷಗಳ ಬಳಿಕ ವಿಚಾರಣೆಗೆ ಬರುವುದರಿಂದ, ಮಹಾರಾಷ್ಟ್ರ ಸರ್ಕಾರದ ಮುಖ್ಯಮಂತ್ರಿ ಈ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.   ‘ಕರ್ನಾಟಕದ ಪರ ತೀರ್ಪು ಬರುವಂತೆ ನಮ್ಮ ವಕೀಲರ ತಂಡವನ್ನು ಸಿದ್ಧಗೊಳಿಸಲಾಗಿದೆ’ ಎಂದು …

Read More »

ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು,ರಾಜ್ಯದಲ್ಲಿಯೂ ಕಠಿಣ ಕ್ರಮ : ಅಭಯ್ ಪಾಟೀಲ

ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ತಂದು ತೀವ್ರತರವಾದ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ಯುಪಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಆಗ್ರಹಿಸಿದರು. ಮಂಗಳವಾರ ಬೆಳಗಾವಿಯ ಖಾಸಗಿ ಹೋಟೆಲ್‍ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಅಭಯ್ ಪಾಟೀಲ್ ರಾಜ್ಯ ಮತ್ತು ದೇಶ ವಿರೋಧಿ ಕೃತ್ಯದಲ್ಲಿ ತೊಡಗಿದ ಜನರ ವಿರುದ್ಧ ಉಗ್ರ ಕ್ರಮ ಆಗಬೇಕು ಎಂದು ನಾವು ಮೊದಲಿನಿಂದ ಒತ್ತಾಯಿಸುತ್ತಿದ್ದೇವೆ. ಈ …

Read More »

ಸಿಮೆಂಟ್ ಕಂಟೇನರ್ ವಾಹನ ಡಿಕ್ಕಿ , ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ

ಸಿಮೆಂಟ್ ಕಂಟೇನರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಹೌದು ಮಂಗಳವಾರ ಬೆಳಿಗ್ಗೆ ನಗರದ ಶಿವಾಜಿ ಗಾರ್ಡನ್ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಸಿಮೆಂಟ್ ಕಂಟೇನರ್ ವಾಹನ ಗುದ್ದಿದೆ. ವ್ಯಕ್ತಿಯ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ತಕ್ಷಣವೇ ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳು ಶಿವಾಜಿ ನಗರದ ರಾಮಸ್ವಾಮಿ ಗೌಡರ ಎಂದು ಗುರುತಿಸಲಾಗಿದೆ. ಘಟನೆಯಿಂದ ಈ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ …

Read More »

ಗೋಕಾಕ ತಹಶೀಲ್ದಾರ್ ಕಚೇರಿಯಲ್ಲಿ ಕಂಪ್ಯೂಟರ್ ಕಳ್ಳತನ

ಗೋಕಾಕ ತಹಶೀಲ್ದಾರ್ ಕಚೇರಿಯಲ್ಲಿ ಕಂಪ್ಯೂಟರ್ ಕಳ್ಳತನವಾಗಿರುವ ಘಟನೆ ನಡೆದಿದೆ. ಹೌದು ಕಳ್ಳರು ಮನೆ, ದೇವಸ್ಥಾನಕ್ಕೆ ಕನ್ನ ಹಾಕುತ್ತಿದ್ದರು ಆದರೆ. ಇದೀಗ ತಹಶೀಲ್ದಾರ್ ಕಚೇರಿ ಮೇಲೂ ತಮ್ಮ ವಕ್ರದೃಷ್ಟಿ ಬೀರಿದ್ದು. ಪಹಣಿ ಪತ್ರಿಕೆ ನೀಡುವ ಕಂಪ್ಯೂಟರ್‍ನ್ನು ಎಗರಿಸಿಕೊಂಡು ಪರಾರಿಯಾಗಿದ್ದಾರೆ. ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಪಾಸ್ವರ್ಡ್, ಲಾಗಿನ್ ಲಾಕ್ ಮಾಡಲಾಗಿದೆ. ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಕಳ್ಳರಿಗೆ ಬಲೆ ಬೀಸಿದ್ದಾರೆ. ಈ ಸಂಬಂಧ ಶಹರ ಠಾಣೆಯಲ್ಲಿ ಕೇಸ್ …

Read More »

ಅಂಗವಿಕಲರು ಸರ್ಕಾರಿ ಸೌಲಭ್ಯ ಪಡೆದು ಸ್ವಾವಲಂಬಿಯಾಗಿ – ರಮೇಶ ಕತ್ತಿ.

ಅಂಗವಿಕಲರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸ್ವಾವಲಂಬಿಯಾಗಿ ತಮ್ಮ ಆರ್ಥಿಕ ಮಟ್ಟ ಸುಧಾರಿಸಿಕೋಳ್ಳಬೇಕು ಎಂದು ಬಿ ಡಿ ಸಿ ಸಿ ಬ್ಯಾಂಕ್ ಅದ್ಯಕ್ಷ ರಮೇಶ ಕತ್ತಿ ಹೇಳಿದರು. ಹುಕ್ಕೇರಿ ತಾಲೂಕಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ವಿಕಲಚೆತನ ಮತ್ತು ಹಿರಿಯ ನಾಗರಿಕ ಸಬಲಿಕರಣ ಇಲಾಖೆ ವತಿಯಿಂದ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿ ಮಾದ್ಯಮಗಳೊಂದಿಗೆ ಮಾತನಾಡುತ್ತಾ ದಿವಂಗತ ಉಮೇಶ ಕತ್ತಿ ಯವರ ಅನುದಾನದಲ್ಲಿ ಅಂಗವಿಕಲರಿಗೆ ಕೋಡಮಾಡಿದ ತ್ರಿಚಕ್ರ ವಾಹನಗಳನ್ನು ಪಡೆದ ಫಲಾನುಭವಿಗಳು …

Read More »