Breaking News

ರಾಜ್ಯ

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 150 ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಗ್ಗೆ ನಾಯಕರ ಮಹತ್ವದ ಚರ್ಚೆ

ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಸಭೆ ನಡೆದಿದೆ. ಸುನಿಲ್ ಕನಗೋಲು ವರದಿ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಸಲಹೆ ನೀಡಲಾಗಿದೆ. ಸುನಿಲ್ ಟೀಂ ನೀಡಿರುವ ವರದಿ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ನಾಯಕರು ಚರ್ಚೆ ನಡೆಸಿದ್ದು, ಡಿಸೆಂಬರ್ ಒಳಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ. ಮೊದಲ ಹಂತದಲ್ಲಿ 150 ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು …

Read More »

ತೂಕ ಇಳಿಸೋಕೆ ವಾಕಿಂಗ್ ಸಾಕಾಗಲ್ಲ, ತಜ್ಞರು ಹೇಳೋ ಈ ಟಿಪ್ಸ್ ಕೇಳಿ

ದಿನಂಪ್ರತಿ 10,000 ಹೆಜ್ಜೆಗಳಷ್ಟು ನಡೆಯುವುದು ಉತ್ತಮ ಆರೋಗ್ಯಕರ ಜೀವನದ ಬುನಾದಿ ಎಂದೆನಿಸಿದೆ. ಹಲವಾರು ವರ್ಷಗಳಿಂದ ಇದೇ ಸೂತ್ರವನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಬಂದಿದ್ದಾರೆ. ಜನರು ಕೂಡ ತಮ್ಮ ಫಿಟ್‌ನೆಸ್ ಟ್ರ್ಯಾಕರ್‌ಗಳಲ್ಲಿ ಈ ಮೈಲುಗಲ್ಲನ್ನು ಸಾಧಿಸಲು ಪ್ರಯತ್ನಿಸುತ್ತಾರೆ. ಹಾಗಿದ್ದರೆ ಇಲ್ಲಿ ವಿಚಾರ ಮಾಡಬೇಕಾದ ಪ್ರಶ್ನೆಯೆಂದರೆ ದಿನವೂ ಹತ್ತುಸಾವಿರ ಹೆಜ್ಜೆಗಳ ನಡಿಗೆಯು ಸ್ಥೂಲಕಾಯತೆ ಮತ್ತು ಮಧುಮೇಹದಂತಹ ದೀರ್ಘಕಾಲದ ಪರಿಸ್ಥಿತಿಗಳನ್ನು ತಡೆಯಲು ಸಹಾಯ ಮಾಡುತ್ತದೆಯೇ ಎಂಬುದಾಗಿದೆ. ಆರೋಗ್ಯಕರ ತೂಕಕ್ಕೆ ಎಷ್ಟು ಹೆಜ್ಜೆಗಳನ್ನು ಹಾಕಬೇಕು? ಈ ಕುರಿತು …

Read More »

ಶಾಸಕರಿಗೆ ತಲಾ 100 ಕೋಟಿ ರೂ. ಕೊಟ್ಟು ಆಪರೇಷನ್ ಕಮಲ ಆರೋಪ: ಹೈಡ್ರಾಮಾ

ಹೈದರಾಬಾದ್: ತೆಲಂಗಾಣದಲ್ಲಿ ಟಿ.ಆರ್.ಎಸ್. ಶಾಸಕರಿಗೆ ತಲಾ 100 ಕೋಟಿ ರೂ. ಕೊಟ್ಟು ಬಿಜೆಪಿ ಖರೀದಿಗೆ ಯತ್ನಿಸಿದೆ ಎಂದು ಆರೋಪಿಸಿ ಸಚಿವರು ಮತ್ತು ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ನಾಯಕರು ಬುಧವಾರ ರಾತ್ರಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದರು, ಟಿ.ಆರ್‌.ಎಸ್. ಶಾಸಕರನ್ನು ಖರೀದಿಸಲು ಬಿಜೆಪಿಯ ಯತ್ನಿಸಿದೆ ಎಂದು ದೂರಿದ ಪ್ರತಿಭಟನಾಕಾರರು ವಿಜಯವಾಡ ಹೆದ್ದಾರಿಯ ಹೈದರಾಬಾದ್ ಬಳಿಯ ಚೌಟುಪ್ಪಲ್‌ ನಲ್ಲಿ ಧರಣಿ ನಡೆಸಿದರು. ಪ್ರತಿಭಟನೆಯಲ್ಲಿ ಸಚಿವರಾದ ಗಂಗೂಲ ಕಮಲಾಕರ್ ಮತ್ತು ಇಂದ್ರಕರನ್ ರೆಡ್ಡಿ …

Read More »

ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ದೀಪಾವಳಿ ಗಿಫ್ಟ್‌ ನೀಡಿದೆ. ಹೌದು, ರಾಜ್ಯ ಸರ್ಕಾರವು ಒಂದು ಸರ್ಕಾರವು ಒಂದು ಸಾವಿರ ಗೌರವ ಧನವನ್ನು ಹೆಚ್ಚಳ ಮಾಡಿದೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆದೇಶದ ಪ್ರಕಾರ ಸೆಪ್ಟಂಬರ್‌, ಆಕ್ಟೋಬರ್‌, ನವೆಂಬರ್‌ ತಿಂಗಳ ತನಕ ಮೂರು ತಿಂಗಳ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶವನ್ನು ಹೊರಡಿಸಿದೆ. ಆಶಾ ಕಾರ್ಯಕರ್ತೆಯರ ಸಂಖ್ಯೆಗೆ ಅನುಗುಣವಾಗಿ ಅದೇಶವನ್ನು ಹೊರಡಿಸಿದ್ದು, ಈ ಮೂಲಕ ದೀಪಾವಳಿ ಗಿಫ್ಟ್‌ ಸಿಕ್ಕಿದೆ. …

Read More »

ಲಿವಿಂಗ್ ಟುಗೆದರ್ ಟೆನ್ಶನ್- ಮಹಿಳಾ ಆಯೋಗಕ್ಕೆ ದೂರುಗಳ ಸುರಿಮಳೆ

ಬೆಂಗಳೂರು: ಪತಿ-ಪತ್ನಿ ಕಲಹ, ವರದಕ್ಷಿಣೆ ಕಿರುಕುಳ, ಮದುವೆಯಾಗೋದಾಗಿ ನಂಬಿಸಿ ಮೋಸ ಹೀಗೆ ನಾನಾ ಕೇಸ್‍ಗಳನ್ನು ಆಟೆಂಡ್ ಮಾಡ್ತಿರುವ ಮಹಿಳಾ ಆಯೋಗಕ್ಕೆ ಈಗ ಹೊಸ ತಲೆನೋವು ಶುರುವಾಗಿದೆ ಅದೇ ಲಿವಿಂಗ್ ಟುಗೆದರ್ (Living Together) ಕಂಟಕ. ಬೆಂಗಳೂರಿನಲ್ಲಿ ಈಗ ಲಿವಿಂಗ್ ಟುಗೆದರ್ ಕಲಹ ಹೆಚ್ಚಾಗ್ತಿದೆಯಂತೆ. ಅದರಲ್ಲೂ ಲಿವಿಂಗ್ ಟುಗೆದರ್ ಜೋಡಿಗಳಲ್ಲಿ ಕಲಹ ಉಂಟಾಗಿ ಅನೇಕ ಹೆಣ್ಣುಮಕ್ಕಳು ಮಹಿಳಾ ಆಯೋಗ (Women Commission) ದ ಮೆಟ್ಟಿಲೇರುತ್ತಿದ್ದಾರಂತೆ. ಕಾಲೇಜ್, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾಗಿ ಲಿವಿಂಗ್ …

Read More »

ಚಿಣ್ಣರಿಗೂ ಬಂತು ಉತ್ಸವದ ಹಿಗ್ಗು

ಕಿತ್ತೂರು: ಐತಿಹಾಸಿಕ ಉತ್ಸವದಲ್ಲಿ ಒಂದೆಡೆ ವರ್ಣರಂಜಿತ ವೇದಿಕೆಗಳಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದರೆ, ಮತ್ತೊಂದೆಡೆ ಮಕ್ಕಳು ವಿವಿಧ ಆಟಗಳನ್ನಾಡಿ ಸಂಭ್ರಮದಲ್ಲಿ ಮಿಂದೆದ್ದರು. ಇಲ್ಲಿನ ಕೋಟೆ ಆವರಣದ ಮುಂಭಾಗದಲ್ಲಿ ಮಕ್ಕಳು ಹಾಗೂ ಯುವಕರಿಗಾಗಿ ವಿವಿಧ ಆಟಿಕೆಗಳನ್ನು ಅಳವಡಿಸಲಾಗಿದೆ. ಎಲ್ಲವೂ ವಿದ್ಯುತ್ ಚಾಲಿತ ಆಟಿಕೆಗಳೇ ಇರುವುದು ಈ ಬಾರಿಯ ವಿಶೇಷ. ಚಿಣ್ಣರು ಬಾತುಕೋಳಿ, ಬೈಕ್‌ಗಳ ತಿರುಗುಂಡಿ ಮೇಲೆ ಕುಳಿತು ಸಂಭ್ರಮಿಸಿದರು. ಮತ್ತೆ ಕೆಲವರು ಜಾರುಬಂಡೆಯಿಂದ ಜಾರಿ ನಲಿದರು. ರಬ್ಬರ್‌ನಿಂದ ಮಾಡಿದ ಡಾನ್ಸಿಂಗ್‌ ರೋಪ್ …

Read More »

SC&ST ಮೀಸಲಾತಿ ಹೆಚ್ಚಳ; ಮೊದಲು ಧ್ವನಿ ಎತ್ತಿದ್ದೆ ನಾವು : ಶ್ರೀರಾಮುಲು

ಕುರುಗೋಡು : ಸಮೀಪದ ಸೋಮಲಾಪುರ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅವರ ಪೂರ್ತಿ ಪ್ರತಿಷ್ಠಾಪನೆ ಯನ್ನು ಸಚಿವ ಬಿ. ಶ್ರೀರಾಮುಲು ಹಾಗೂ ಶಾಸಕ ಜೆ. ಎನ್. ಗಣೇಶ್ ನೆರೆವೇರಿಸಿದರು. ನಂತರ ಸಚಿವ ಶ್ರೀರಾಮುಲು ಮಾತನಾಡಿ, ಮಹರ್ಷಿ ವಾಲ್ಮೀಕಿ ಜ್ಞಾನದ ಆಗರವಾಗಿದ್ದಾರೆ. ರಾಮಾಯಣ ಮಹಾಕಾವ್ಯದ ಮೂಲಕ ತಮ್ಮಲ್ಲಿನ ಜ್ಞಾನ ಭಂಡಾರವನ್ನು ಜಗತ್ತಿಗೆ ಪರಿಚಯಿಸಿದ್ದಾರೆ’ ಎಂದು ಹೇಳಿದರು. ಜನಸಮುದಾಯದ ಎಲ್ಲ ಸಮಸ್ಯೆಗಳು, ಸಂಕಟಗಳು ಹಾಗೂ ಸವಾಲುಗಳಿಗೆ ವಾಲ್ಮೀಕಿ ರಾಮಾಯಣದಲ್ಲಿ ಉತ್ತರ ಮತ್ತು ಪರಿಹಾರವಿದೆ. ಮಾನವೀಯ …

Read More »

ವಾಹನ ಪಲ್ಟಿಯಾಗಿ ಹಲವರಿಗೆ ಗಾಯ: ಮಾನವೀಯತೆ ಮೆರೆದ ಶಾಸಕ ನಡಹಳ್ಳಿ

ಮುದ್ದೇಬಿಹಾಳ: ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದು15 ಜನರು ಗಾಯಗೊಂಡ ಘಟನೆ ಬುಧವಾರ ಸಂಜೆ ಸಂಭವಿಸಿದೆ. ತಾಲೂಕಿನ ಅಡವಿ ಹುಲಗಬಾಳ ಗ್ರಾಮದ ಬೀರಪ್ಪನ ಬೆಟ್ಟದಲ್ಲಿ ದೀಪಾವಳಿ ಪಾಡ್ಯದಂದು ನಡೆದ ಜಾತ್ರೆ, ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಸ್ವಗ್ರಾಮದತ್ತ ಹೊರಟಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿ ಬಿದ್ದು ಅದರಲ್ಲಿ ಇದ್ದ ಇಬ್ಬರು ಮಕ್ಕಳು, ಮೂವರು ವೃದ್ಧರು ಸೇರಿ …

Read More »

ಅಕ್ರಮ ಸಂಬಂಧಕ್ಕೆ ಅಡ್ಡಿ ಅಂತ ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ್ಳು!

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ಪತ್ನಿಯೇ ಪತಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯ ಯಲಹಂಕದಲ್ಲಿ ನಡೆದಿದೆ. ಮೃತನನ್ನು ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ಪ್ರಕರಣ ಸಂಬಂಧ ಚಂದ್ರಶೇಖರ್ ಪತ್ನಿ ಶ್ವೇತಾ ಹಾಗೂ ಆಕೆಯ ಪ್ರಿಯಕರ ಹಿಂದೂಪುರ (Hindupura) ದ ಸುರೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಚಂದ್ರಶೇಖರ್ (Chandrashekhar) ಮತ್ತು ಶ್ವೇತಾ (Shwetha) ಕಳೆದ ನಾಲ್ಕು ವರ್ಷಗಳ ಹಿಂದೆ ಮದುವೆ (Marriage) ಯಾಗಿದ್ದರು. ಇಬ್ಬರ ನಡುವೆ ಹದಿನಾರು ವರ್ಷದ ಅಂತರ ಇತ್ತು. …

Read More »

ನ. 1ಕ್ಕೆ JDS ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ : H.D.K

ಬೆಂಗಳೂರು: 2023ರ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್‌ಗಿಂತ ಮೊದಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗೋದು ಬಹುತೇಕ ಖಚಿತವಾಗಿದೆ. ನ. 1ರಂದು ಮುಳಬಾಗಿಲಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಜೆಡಿಎಸ್‌ನ ಮೊದಲ ಪಟ್ಟಿ ರಿಲೀಸ್ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ತಿಳಿಸಿದರು. ಜೆಪಿ ಭವನದಲ್ಲಿ ಮಾತನಾಡಿದ ಅವರು, ಈಗಾಗಲೇ 123 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಫೈನಲ್ ಆಗಿದೆ. ಕಳೆದ ವಾರ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಸಲ್ಲಿಸಲಾಗಿದೆ. …

Read More »