Breaking News

ರಾಜ್ಯ

ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ

ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ವೀರಜ್ಯೋತಿಯ ಸ್ವಾಗತ, ಆನೆಯ ಮೇಲೆ ವೀರಮಾತೆ ಚನ್ನಮ್ಮಾಜಿಯ ಭವ್ಯ ಮರವಣಿಗೆಗೆ ಕಿತ್ತೂರು ಕಲ್ಮಠದ ರಾಜಯೋಗಿಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು, ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ಹೌದು ಬೆಂಗಳೂರಿನಿಂದ ಆರಂಭವಾಗಿ ಇಡೀ ರಾಜ್ಯ ಸಂಚರಿಸಿ ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ವಾಗತಿಸಲಾಯಿತು. …

Read More »

ಬಸವಲಿಂಗ ಸ್ವಾಮಿಜೀಗಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮಿಜೀಗಳು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ರೂಂ.ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅಪಪ್ರಚಾರ ಮಾಡಿದ್ದಕ್ಕೆ ಮನನೊಂದಿದ್ದರು ಎಂದು ಹೇಳಲಾಗುತ್ತಿದೆ. ಹಲವು ಜನರಿಂದ ಬೆದರಿಕೆ ಕರೆ ಕೂಡ ಬಂದಿರುವುದಾಗಿ ಡೆತ್‌ನೋಟ್‌ನಲ್ಲಿ ಬರೆದುಕೊಂಡಿದ್ದಾರೆ ಎನ್ನಲಾಗಿದೆ.

Read More »

ಹೂಡಿಕೆದಾರರ ಸಮಾವೇಶದ 5 ನಿಮಿಷದ ಕಿರುಚಿತ್ರಕ್ಕೆ ₹ 4.5 ಕೋಟಿ!

ಬೆಂಗಳೂರು: ನವೆಂಬರ್‌ 2ರಿಂದ 4ರವರೆಗೆ ನಡೆಯುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ (ಜಿಮ್‌) ಪ್ರದರ್ಶಿಸಲು ₹ 4.5 ಕೋಟಿ ವೆಚ್ಚದಲ್ಲಿ ಕಿರುಚಿತ್ರವೊಂದನ್ನು ನಿರ್ಮಿಸುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಯತ್ನಕ್ಕೆ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಡೆಯೊಡ್ಡಿದ್ದಾರೆ.   ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳು, ಕೈಗಾರಿಕಾ ಮೂಲಸೌಕರ್ಯದ ಲಭ್ಯತೆ ಮತ್ತಿತರ ಅಂಶಗಳನ್ನು ವಿವರಿಸುವ ಐದು ನಿಮಿಷಗಳ ಕಿರುಚಿತ್ರ ನಿರ್ಮಿಸಿ, ಜಿಮ್‌ನಲ್ಲಿ ಪ್ರದರ್ಶಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ನಿರ್ಧರಿಸಿತ್ತು. ₹ 4.5 ಕೋಟಿ …

Read More »

ಬಿಜೆಪಿಗೆ ಶಕ್ತಿ ತುಂಬಿದ್ದ ಉಪಸಭಾಪತಿ ಆನಂದ್ ಮಾಮನಿ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ಶೆಟ್ಟರ್

ಬಿಜೆಪಿಗೆ ಶಕ್ತಿ ತುಂಬಿದ್ದ ಉಪಸಭಾಪತಿ ಆನಂದ್ ಮಾಮನಿ ಅವರ ಅಗಲಿಕೆಯಿಂದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ಆನಂದ್ ಮಾಮನಿ ಅವರು ಅನಾರೋಗ್ಯ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಇದ್ದ ಸಂದರ್ಭದಲ್ಲಿ ನಾನು ಆಸ್ಪತ್ರೆಗೆ ಹೋಗಿ ಭೇಟಿ ಮಾಡಿ ನಾನು ಹಾರೈಸಿ ಬಂದಿದ್ದೆ, ಆನಂದ್ ಮಾಮನಿ ಅವರು ಬಹಳ ಕ್ರೀಯಾಶೀಲ ವ್ಯಕ್ತಿಯಾಗಿದ್ದರು ಸವದತ್ತಿ ಕ್ಷೇತ್ರದಲ್ಲಿ …

Read More »

ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ನಿಧನಕ್ಕೆ ಕಂಬನಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಂತಾಪ

ವಿಧಾನಸಭೆ ಉಪಾಧ್ಯಕ್ಷ ಆನಂದ ಮಾಮನಿ ನಿಧನಕ್ಕೆ ಕಂಬನಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸಂತಾಪ ಸೂಚಿಸಿದ್ದಾರೆ. ಸವದತ್ತಿ ತಾಲೂಕು ಕ್ರೀಡಾಂಗಣದಲ್ಲಿ ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆನಂದ ಮಾಮನಿ ಅವರ ಅಗಲಿಕೆಯಿಂದ ನಾವೆಲ್ಲರೂ ಬಡವರಾಗಿದ್ದೇವೆ. ಸಹಕಾರ ಕ್ಷೇತ್ರದಲ್ಲೂ ಸಾಧನೆ ಮಾಡಿದ್ದಾರೆ. ಆನಂದ ಮಾಮನಿ ಅವರನ್ನ ಪ್ರೀತಿಯಿಂದ ಸವದತ್ತಿ ಮೋದಿ ಅಂತಾ ಜನರು ಕರೆಯುತ್ತಿದ್ದರು. ಆನಂದ …

Read More »

ಆನಂದ ಮಾಮನಿ ನಿಧನಕ್ಕೆ ಹುಕ್ಕೇರಿಶ್ರೀ ಸಂತಾಪ…

ಆನಂದ ಮಾಮನಿ ಅವರ ನಿಧನಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಕೂಡ ಸಂತಾಪ ಸೂಚಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಶಾಸಕರು, ರಾಜ್ಯ ವಿಧಾನಸಭೆಯ ಮಾನ್ಯ ಉಪ ಸಭಾಧ್ಯಕ್ಷರು ಹುಕ್ಕೇರಿ ಹಿರೇಮಠದ ಜೊತೆಗೆ ಅಭಿನಾಭಾವ ಸಂಬAಧವನ್ನಿಟ್ಟುಕೊAಡಿದ್ದ ಶ್ರೀ ಆನಂದ ಚಂದ್ರಶೇಖರ ಮಾಮನಿ ಅವರು ನಿಧನರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗಕ್ಕೆ …

Read More »

ಪಾಪದ ಪಿಂಡಗಳ ಬಗ್ಗೆ ಕಾಂಗ್ರೆಸ್ ನವರು ಮೊದಲು ಪಶ್ಚಾತ್ತಾಪ ಮಾಡಿಕೊಳ್ಳಲಿ. ಆ ಬಳಿಕ ಭಾರತ ಜೋಡೋ ಮಾಡಲಿ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಪಾಪದ ಪಿಂಡಗಳ ಬಗ್ಗೆ ಕಾಂಗ್ರೆಸ್ ನವರು ಮೊದಲು ಪಶ್ಚಾತ್ತಾಪ ಮಾಡಿಕೊಳ್ಳಲಿ. ಆ ಬಳಿಕ ಭಾರತ ಜೋಡೋ ಮಾಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವ್ಯಂಗ್ಯವಾಡಿದರು. ರಾಣಿ ಚೆನ್ನಮ್ಮ ಜಯಂತಿ ನಿಮ್ಮಿತ್ತ ನಗರದ ಚೆನ್ನಮ್ಮ ವೃತ್ತದಲ್ಲಿ ಚೆನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದ ಅವರು, ಭಾರತ ಜೋಡೋ ಕಾಂಗ್ರೆಸ್ ತೋಡೋ ಯಾತ್ರೆ ಆಗತ್ತಿದೆ. ಹಲವರು ಕಾಂಗ್ರೆಸ್ ಚೋಡೋ ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಮಾಡಬೇಕಿರೋದು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟು ಕೊಟ್ಟಿದ್ದಕ್ಕೆ …

Read More »

ಡೆಪ್ಯುಟಿ ಸ್ಪೀಕರ್ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

    ಗೋಕಾಕ್- ವಿಧಾನಸಭೆಯ ಉಪ ಸಭಾಪತಿ ಹಾಗೂ ಸವದತ್ತಿ ಶಾಸಕ ಆನಂದ ಮಾಮನಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ಅವಧಿಯಿಂದ ಸವದತ್ತಿ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಮನಿ ಅವರು ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದರು. ಸವದತ್ತಿ ಯಲ್ಲಮ್ಮ ದೇವಸ್ಥಾನದ ಪ್ರಗತಿಗಾಗಿಯೂ ಸಾಕಷ್ಟು ಕೊಡುಗೆ ನೀಡಿದ್ದರು. ಇವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ಹಾನಿಯಾಗಿದೆ. ಮೃತರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮಾಮನಿ …

Read More »

ರಾಜ್ಯದಲ್ಲಿ ಜನವರಿ ಬಳಿಕ ಕಾಂಗ್ರೆಸ್ ಮಾತ್ರವಲ್ಲ ಎಲ್ಲ ಪಕ್ಷಗಳಲ್ಲೂ ಪಕ್ಷಾಂತರ ಮಾಡುವ ನಾಯಕರಿದ್ದಾರೆ: ಸತೀಶ್ ಜಾರಕಿಹೊಳಿ

ರಾಯಚೂರು: ರಾಜ್ಯದಲ್ಲಿ ಜನವರಿ ಬಳಿಕ ಕಾಂಗ್ರೆಸ್ ಮಾತ್ರವಲ್ಲ ಎಲ್ಲ ಪಕ್ಷಗಳಲ್ಲೂ ಪಕ್ಷಾಂತರ ಮಾಡುವ ನಾಯಕರಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶನಿವಾರ ಭವಿಷ್ಯ ನುಡಿದಿದ್ದಾರೆ.   ನಗರದಲ್ಲಿ ‘ಭಾರತ್ ಜೋಡೋ’ ಕಾರ್ಯಕ್ರಮ ನಿಮಿತ್ತ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದವರು ಬೇರೆ ಕಡೆ ಹೋಗುತ್ತಾರೆ. ಆ ಪಕ್ಷದವರು ನಮ್ಮಲ್ಲಿಗೆ ಬರುತ್ತಾರೆ. ಚುನಾವಣೆ ಬಂದರೆ ಇದೊಂದು ಸಾಮಾನ್ಯ ಪ್ರಕ್ರಿಯೆ. ಆದರೆ, ಯಾರು ಹೋಗುತ್ತಾರೆ, ಬರುತ್ತಾರೆ ಎಂಬದು ಗೊತ್ತಾಗಬೇಕಾದರೆ ಜನವರಿವರೆಗೂ ಕಾಯಬೇಕು …

Read More »

ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವೀರರಾಣಿ ಚನ್ನಮ್ಮಾಜಿಯ ತವರೂರು ಕಾಕತಿಯಲ್ಲಿ ಅದ್ಧೂರಿಯಾಗಿ ಚಾಲನೆ

ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವೀರರಾಣಿ ಚನ್ನಮ್ಮಾಜಿಯ ತವರೂರು ಕಾಕತಿಯಲ್ಲಿ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಹೌದು ರವಿವಾರ ಚನ್ನಮ್ಮಾಜಿಯ ತವರೂರು ಕಾಕತಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಚನ್ನಮ್ಮ ಕಿತ್ತೂರು-ಉತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಕಾರ್ಯಕ್ರಮಕ್ಕೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಸಂಸದ ಅಣ್ಣಾಸಾಹೇಬ ಜೊಲ್ಲೆ, ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಚನ್ನಮ್ಮಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ …

Read More »