Breaking News

ರಾಜ್ಯ

ಹಾವೇರಿ ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಕಾಲೇಜಿಗಿಲ್ಲ ಉದ್ಘಾಟನೆ ಭಾಗ್ಯ

ಹಾವೇರಿ: ಹೊಸ ಕಟ್ಟಡಕ್ಕೆ ಸ್ಥಳಾಂತರವಾಗಿ ವರ್ಷ ಕಳೆಯುತ್ತಿದ್ದರೂ ಎಸ್ಸಿ ಎಸ್ಟಿ ವಿದ್ಯಾರ್ಥಿಗಳ ಕಾಲೇಜು ಇನ್ನೂ ಉದ್ಘಾಟನೆಯಾಗಿಲ್ಲ. ಕಾಲೇಜಿಗೆ ತೆರಳಲು ರಸ್ತೆಯೂ ಇಲ್ಲದೆ ವಿದ್ಯಾರ್ಥಿಗಳು ಕೊನೇಪಕ್ಷ ಬಸ್​ ಆದರೂ ಬಿಡಿ ಎಂದು ಆಗ್ರಹಿಸಿದ್ದಾರೆ. 2017ರಲ್ಲಿ ಸಿಎಂ ಸಿದ್ದರಾಮಯ್ಯ ಎಸ್ಸಿಎಸ್ಟಿ ವಿದ್ಯಾರ್ಥಿಗಳಿಗಾಗಿ ರಾಜ್ಯದಲ್ಲಿ ಸುಮಾರು 10 ಜಿಲ್ಲೆಗಳಲ್ಲಿ ಪ್ರಥಮ ದರ್ಜೆ ಕಾಲೇಜು ಆರಂಭಿಸಿದ್ದರು. ನಂತರ ಈ ಕಾಲೇಜುಗಳನ್ನು ಅವುಗಳದೇ ಆದ ಕಟ್ಟಡಗಳಿಗೆ ಸ್ಥಳಾಂತರಿಸಲಾಯಿತು. ಈ ರೀತಿ ಸ್ಥಳಾಂತರವಾದ ಕಾಲೇಜುಗಳಲ್ಲಿ ಒಂದು ಹಾವೇರಿ ಸರ್ಕಾರಿ ಪ್ರಥಮ …

Read More »

ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ SITಗೆ ರಾಜಕೀಯ ಒತ್ತಡ: ಬೊಮ್ಮಾಯಿ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ ಎಸ್​ಐಟಿಗೆ ರಾಜಕೀಯ ಒತ್ತಡವಿದೆ. ನಿರೀಕ್ಷೆಗೆ ತಕ್ಕಂತೆ, ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಅಸಮಾಧಾನ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಾಸ್ಕ್ ಮ್ಯಾನ್​ನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗುತ್ತಿವೆ. ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿ ಇದೆ. ಎಸ್ಐಟಿಯವರು ಷಡ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನೇ ಇನ್ನೂ ಮುಟ್ಟಿಲ್ಲ. ಎಸ್ಐಟಿಯವರು ನಮ್ಮನ್ನು …

Read More »

ಪ್ರಮೋದಾದೇವಿ ಒಡೆಯರ್‌ಗೆ ದಸರಾದ ಅಧಿಕೃತ ಆಹ್ವಾನ ನೀಡಿದ ಸಚಿವ ಮಹದೇವಪ್ಪ

ಮೈಸೂರು: ವಿಶ್ವವಿಖ್ಯಾತ ದಸರಾ ಹಿನ್ನೆಲೆಯಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್‌.ಸಿ ಮಹದೇವಪ್ಪ ಅವರು ಇಂದು ಅಧಿಕೃತ ಆಹ್ವಾನ ನೀಡಿದರು. ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ನೇತೃತ್ವದ ಅಧಿಕಾರಿಗಳ ತಂಡ ಅರಮನೆ ಆವರಣದಲ್ಲಿರುವ ಪ್ರಮೋದಾದೇವಿ ಒಡೆಯರ್​ ಅವರ ನಿವಾಸಕ್ಕೆ ಭೇಟಿ ನೀಡಿ, ಸಾಂಪ್ರದಾಯಿಕವಾಗಿ ಫಲ ತಾಂಬೂಲ ನೀಡಿ ದಸರಾಗೆ ಆಹ್ವಾನಿಸಿದರು.ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, “ಸಾಂಪ್ರದಾಯಿಕವಾಗಿ ರಾಜವಂಶಸ್ಥರನ್ನು ದಸರಾಗೆ ಆಹ್ವಾನಿಸಿದ್ದೇವೆ. ನಮ್ಮ ಆಹ್ವಾನವನ್ನು ಸಂತೋಷದಿಂದ ಸ್ವೀಕರಿಸಿದ್ದಾರೆ. …

Read More »

ಬಳ್ಳಾರಿ: ಒಂದೂವರೆ ತಿಂಗಳ ಮಗು ಕದ್ದು ಮಾರಾಟ; 24 ಗಂಟೆಯೊಳಗೆ ರಕ್ಷಣೆ, ಆರೋಪಿಗಳ ಬಂಧನ

ಬಳ್ಳಾರಿ: ಜನನ ಪ್ರಮಾಣಪತ್ರ ಕೊಡಿಸುವುದಾಗಿ ಒಂದೂವರೆ ತಿಂಗಳ ಮಗುವನ್ನೇ ಮಹಿಳೆ ಕಿಡ್ನಾಪ್​ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದ್ದು, ಪೊಲೀಸರು ಒಂದೇ ದಿನದಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಶಮೀಮ್, ಇಸ್ಮಾಯಿಲ್, ಬಾಷಾ ಹಾಗು ಬಸವರಾಜ್ ಬಂಧಿತ ಆರೋಪಿಗಳು. ಘಟನೆಯ ವಿವರ: ತನ್ನ ಮಗುವಿನ ಜನನ ಪ್ರಮಾಣಪತ್ರಕ್ಕಾಗಿ ತಾಯಿ ಜಿಲ್ಲಾಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯಲ್ಲಿ ಜನನ ಪ್ರಮಾಣಪತ್ರ ಕೊಡಿಸುವುದಾಗಿ ಹೇಳಿದ ಮಹಿಳೆಯೊಬ್ಬಳು, ಆಕೆಯನ್ನು ಪಾಲಿಕೆ ಕಚೇರಿಗೆ ಕರೆದುಕೊಂಡು ಬಂದು ಮಗುವನ್ನು ಕಿಡ್ನಾಪ್ ಮಾಡಿದ್ದಾಳೆ. ಸಿನಿಮೀಯ ರೀತಿಯಲ್ಲಿ ಕಿಡ್ನಾಪ್ …

Read More »

ಕೃಷ್ಣನಗರಿಯಲ್ಲಿ ಅಷ್ಟಮಿ ಸಡಗರ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿಂದು ಶ್ರೀ ಕೃಷ್ಣ ಜನ್ಮಾಷ್ಟಮಿ ಸಡಗರ. ಪೊಡವಿಗೊಡೆಯನ ಜನ್ಮದಿನವನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕ ವೈಭವದಿಂದ ನೆರವೇರಿಸಲಾಗುತ್ತಿದೆ. ಬೆಳಗ್ಗಿನಿಂದಲೇ ಭಕ್ತರು ಮಠಕ್ಕೆ ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶರು ವಿಶೇಷ ಪೂಜೆ ನೆರವೇರಿಸಿದ್ದಾರೆ. ಲಕ್ಷಾಂತರ ಸಂಖ್ಯೆಯಲ್ಲಿ ಉಂಡೆ ಚಕ್ಕುಲಿಗಳು ಸಿದ್ಧಗೊಂಡಿದ್ದು, ಭಕ್ತರಿಗೆ ಹಂಚಲಾಗುತ್ತದೆ. ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿ ನಡೆದರೆ, ಸೆ.15ರಂದು ಕೃಷ್ಣ ಲೀಲೋತ್ಸವ (ವಿಟ್ಲಪಿಂಡಿ) ಸಂಪನ್ನಗೊಳ್ಳಲಿದೆ. ಮೊಸರು ಕುಡಿಕೆ ಉತ್ಸವಕ್ಕೆ ರಥಬೀದಿಯ ಸುತ್ತಲೂ ತ್ರಿಕೋನಾಕೃತಿಯ …

Read More »

ವಿರಸ ಮರೆತ ಜೋಡಿ, ಹಾರ ಬದಲಾಯಿಸಿಕೊಂಡು ಮತ್ತೆ ಒಂದಾದ ದಂಪತಿ

ಹಾಸನ/ಗಂಗಾವತಿ: ವಿಚ್ಛೇದನಕ್ಕೆ ಮುಂದಾಗಿದ್ದ ಮೂರು ಜೋಡಿಗಳು ಶನಿವಾರ ನಡೆದ ಲೋಕ್ ಅದಾಲತ್​ನಲ್ಲಿ ರಾಜಿ ಸಂಧಾನದ ಮೂಲಕ ಮತ್ತೆ ಒಂದಾಗಿದ್ದಾರೆ. ಜಿಲ್ಲೆಯಲ್ಲಿ 5,83,545 ಇತರೆ ಪ್ರಕರಣಗಳಲ್ಲಿ ಉಭಯ ಕಕ್ಷಿದಾರರು ಫಲಾನುಭವಿಗಳಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಹೇಮಾವತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಷ್ಟೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಜಿಲ್ಲೆಯ ಒಟ್ಟು 42 ನ್ಯಾಯಾಲಯಗಳಲ್ಲಿ ಸಂಧಾನ ಪ್ರಕ್ರಿಯೆ ಜರುಗಿದ್ದು, ಉತ್ತಮ ಫಲಿತಾಂಶ ಹೊರಬಿದ್ದಿದೆ. ನ್ಯಾಯಾಲಯಗಳಲ್ಲಿ …

Read More »

ರಾಜ್ಯದಲ್ಲಿ ಸೆ.22ರಿಂದ ಜಾತಿ ಗಣತಿ; ನಿಮ್ಮ ಸಮೀಕ್ಷೆಯ ಕಾರ್ಯವಿಧಾನ ಹೀಗಿರಲಿದೆ

ರಾಜ್ಯದಲ್ಲಿ ಸೆ.22ರಿಂದ ಜಾತಿ ಗಣತಿ; ನಿಮ್ಮ ಸಮೀಕ್ಷೆಯ ಕಾರ್ಯವಿಧಾನ ಹೀಗಿರಲಿದೆ ಬೆಂಗಳೂರು: ರಾಜ್ಯದಲ್ಲಿ ಸೆಪ್ಟಂಬರ್​ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ) ಆರಂಭವಾಗಲಿದೆ. 16 ದಿನಗಳ ಕಾಲ ನಡೆಯಲಿರುವ ಈ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮಾಡಲು ಎಲ್ಲಾ ಸಿದ್ಧತೆ ನಡೆದಿದೆ.‌ ಈ ಬಾರಿ ಕ್ಷಿಪ್ರ ಸಮಯದಲ್ಲಿ ಜಾತಿ ಗಣತಿ ನಡೆಸಲು ತಂತ್ರಜ್ಞಾನ ಬಳಕೆ ಮಾಡಲಾಗಿದೆ. ಸಮೀಕ್ಷೆಯ ಕಾರ್ಯವಿಧಾನ ಹೇಗಿರಲಿದೆ ಎಂಬ ಸಮಗ್ರ ವರದಿ ಇಲ್ಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22ರಿಂದ ಅ.7ರ …

Read More »

ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ,ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ‌ ರಾಹುಲ‌ ಶಿಂಧೆ ಭೇಟಿ

ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ,ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ‌ ರಾಹುಲ‌ ಶಿಂಧೆ ಭೇಟಿ ಚಿಕ್ಕೋಡಿ:ಹಾಸ್ಟೆಲ್ ನಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣ ಹಿನ್ನಲೆಯಲ್ಲಿ ಚಿಕ್ಕೋಡಿ ತಾಲೂಕಾ ಆಸ್ಪತ್ರೆಗೆ ಸಿಇಓ‌ ರಾಹುಲ‌ ಶಿಂಧೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು ಮುರಾರ್ಜಿ ದೇಸಾಯಿ ಹಾಸ್ಟೇಲ್ ನ ಪ್ರಿನ್ಸಿಪಾಲ್ ಹಾಗೂ ವಾರ್ಡನ್ ಅಮಾನತ್ತು ಮಾಡಲಾಗಿದೆ.ರಾತ್ರಿ ಊಟ ಮಾಡಿದ ಮಕ್ಕಳಲ್ಲಿ ತೊಂದರೆ …

Read More »

ಜಾತಿ ಗಣತಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಸಪ್ಟೆಂಬರ್ 14 ಪಂಚಮಸಾಲಿ ಸಮಾಜ ಬಾಂಧವರ ಸಭೆ-ಜಯಮೃತ್ಯಂಜಯ ಸ್ವಾಮೀಜಿ

ಜಾತಿ ಗಣತಿ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಸಪ್ಟೆಂಬರ್ 14 ಪಂಚಮಸಾಲಿ ಸಮಾಜ ಬಾಂಧವರ ಸಭೆ-ಜಯಮೃತ್ಯಂಜಯ ಸ್ವಾಮೀಜಿ ಚಿಕ್ಕೋಡಿ:ಲಿಂಗಾಯತ ಪಂಚಮಸಾಲಿಗಳು ಜಾತಿ ಗಣತಿಯಲ್ಲಿ ಏನನ್ನ ಬರೆಸಬೇಕು ಎನ್ನುವ ಕುರಿತು ಸೆಪ್ಟೆಂಬರ್ 14 ರಂದು ಮಧ್ಯಾಹ್ನ 3 ಗಂಟೆಗೆ ಚಿಕ್ಕೋಡಿ ಪಟ್ಟಣದ ಕೇಶವ ಕಲಾ ಭವನದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಕೂಡಲ ಸಂಗಮದ ಬಸವ ಜಯಜಯಮೃತ್ಯಂಜಯ ಸ್ವಾಮೀಜಿ ಹೇಳಿದರು. ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ರಾಜ್ಯ ಸರಕಾರದಿಂದ ಜಾತಿ …

Read More »

ಅಪಾರ್ಟ್ಮೆಂಟ್ ನಿವಾಸಿಗಳೇ ಹುಷಾರ್..! ಹೆಚ್ಚಾಯ್ತು ಶೂಸ್ ಕಳ್ಳರು

ಅಪಾರ್ಟ್ಮೆಂಟ್ ನಿವಾಸಿಗಳೇ ಹುಷಾರ್..! ಹೆಚ್ಚಾಯ್ತು ಶೂಸ್ ಕಳ್ಳರು ಹುಬ್ಬಳ್ಳಿ ಅಪಾರ್ಟ್ಮೆಂಟ್ ನಿವಾಸಿಗಳೇ ಹುಷಾರ್ ಆಗಿರಿ. ಮನೆ ಹೊರಗೆ ಇಟ್ಟಿದ್ದ ಶೂಸ್‌ಗಳ್ಳರು ಬರುತ್ತಿದ್ದು. ಗೋಪನಕೊಪ್ಪ ರೋಟ್ಸನ್ ಪಾರ್ಕ್ ಅಪಾರ್ಟ್ಮೆಂಟ್‌ದಲ್ಲಿ ಹೊರಗೆ ಇಟ್ಟಿದ್ದ ಶೂಸ್‌ಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿರುವ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳರ ಗ್ಯಾಂಗ್‌ವೊಂದು ಅಪಾರ್ಟ್ಮೆಂಟ್‌ಗಳನ್ನೇ ಟಾರ್ಗೆಟ್ ಮಾಡಿ, ಹೆಚ್ಚಿನ ಬೆಲೆ ಬಾಳುವ ಶೂಸ್‌ಗಳನ್ನು ಕಳ್ಳತನ ಮಾಡುತ್ತಿದ್ದಾರೆ. ಆ ದೃಶ್ಯಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೇ ರೊಟ್ಸನ್ ಅಪಾರ್ಟ್ಮೆಂಟ್‌ದಲ್ಲಿ ಸುಮಾರು …

Read More »