Breaking News

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ ಬೃಹತ್‌ ಸಮಾವೇಶಕ್ಕೆ ಸಿದ್ಧತೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಕೊಡವಿಕೊಂಡು ಸಿದ್ದತೆ ನಡೆಸಲು ಈಗ ರಾಜ್ಯ ಬಿಜೆಪಿ ಘಟಕ ಮುಂದಾಗಿದ್ದು,ಘಟಾನುಘಟಿ ನಾಯಕರುಗಳನ್ನು ಆಹ್ವಾನಿಸಿ ಸಮಾವೇಶ ನಡೆಸಲು ಮುಂದಾಗಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್, ಕೇಂದ್ರ ಸಚಿವರು ಸೇರಿದಂತೆ ಹಲವು ನಾಯಕರನ್ನು ಮುಂಬರುವ ದಿನಗಳಲ್ಲಿ ರಾಜ್ಯಕ್ಕೆ ಆಹ್ವಾನಿಸಲಾಗುತ್ತಿದೆ.   ಒಂದು ಕಡೆ ಕಾಂಗ್ರೆಸ್ ತನ್ನ ಸಂಘಟನಾತ್ಮಕ …

Read More »

ಯಲ್ಲಮ್ಮ ದೇವಿ ದರ್ಶನಕ್ಕೆ ಭಕ್ತ ಸಾಗರ

ಸವದತ್ತಿ: ಜಗನ್ಮಾತೆ ನಿತ್ಯ ಪೂಜಿತೆ ಏಳುಕೊಳ್ಳದ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿಯ ಸಡಗರ ಅದ್ದೂರಿಯಿಂದ ವಿಜ್ರಂಭಿಸುತ್ತಿದೆ. 7 ನೇ ದಿನ ರವಿವಾರ ರಾಜ್ಯ ಸೇರಿ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ದೇವಿಯ ದರ್ಶನಾಶೀರ್ವಾದ ಪಡೆದು ಪುನೀತರಾದರು. ಏಳುಕೊಳ್ಳಗಳ ನಾಡಿನಲ್ಲಿ ನೆಲೆ ನಿಂತ ಯಲ್ಲಮ್ಮ ದೇವಿ ದರ್ಶನಕ್ಕೆ ನಿತ್ಯವೂ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಘಟಸ್ಥಾಪನೆಯ 5 ನೇ ದಿನ ಶುಕ್ರವಾರ ಭಕ್ತರ ಆಗಮನ ಗಣನೀಯವಾಗಿ ಏರಿಕೆ ಕಂಡಿತ್ತು. 7 ನೇ ದಿನ ರವಿವಾರ …

Read More »

ಬೋನಸ್ ನೀಡದ್ದಕ್ಕೆ ಗ್ರಾಮ ಪಂಚಾಯಿತಿಗೆ ಚಪ್ಪಲಿ ಹಾರ

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮ ಪಂಚಾಯಿತಿಗೆ ಗಾಂಧಿ ಜಯಂತಿಯಂದೇ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಗಾಂಧಿ ಜಯಂತಿ ಆಚರಣೆ ಮಾಡಿ ಕಚೇರಿಗೆ ಬಾಗಿಲು ಹಾಕಿ ಹೋಗಲಾಗಿತ್ತು. ಸಿಬ್ಬಂದಿ ಮನೆಗೆ ಹೋದ ನಂತರ ಈ ಕೃತ್ಯ ಎಸಗಲಾಗಿದೆ. ಈ ಬಗ್ಗೆ ದೇವನಹಳ್ಳಿ ತಾಲೂಕು ಪಂಚಾಯಿತಿ ಇಒ ವಸಂತ್ ಕುಮಾರ್ ಸೂಚನೆ ಮೇರೆಗೆ ಪಿಡಿಒ ಶಿವರಾಜ್ ವಿಜಯಪುರ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ. ಪ್ರತಿ ವರ್ಷ ದಸರಾ …

Read More »

ಉಸಿರುಗಟ್ಟಿ ‌ಜೋಡೆತ್ತು ಸಾವು: ಮುಗಿಲು ಮುಟ್ಟಿದ ಬಡ ರೈತ ಕುಟುಂಬಸ್ಥರ ಆಕ್ರಂದನ

ಬೆಳಗಾವಿ: ಜಿಲ್ಲೆಯ ‌ಬೈಲಹೊಂಗಲಪಟ್ಟಣದ ಪ್ರಭುನಗರ ನಾಲ್ಕನೇ ಅಡ್ಡ ರಸ್ತೆ ನಿವಾಸಿ, ರೈತ ಮಹಿಳೆ ಸಾಬವ್ವ ಹುಡೇದ ಕುಟುಂಬಸ್ಥರಿಗೆ ಸೇರಿದ ಜೋಡೆತ್ತುಗಳು ಉಸಿರುಗಟ್ಟಿ ಸಾವಿಗೀಡಾಗಿವೆ. ದನದ ಕೊಟ್ಟಿಗೆಯಲ್ಲಿ ಬೆಲಗ (ಕಂಬ) ಮುರಿದ ಪರಿಣಾಮ ಜೋಡೆತ್ತುಗಳ ಹಗ್ಗ ಒಂದಕ್ಕೊಂದು ಸಿಲುಕಿಕೊಂಡಿವೆ. ಪರಿಣಾಮ ಅವು ಉಸಿರುಗಟ್ಟಿ ಕೊನೆಯುಸಿರೆಳೆದಿವೆ. ಮಾಲೀಕರಿಗೆ ವಿಷಯ ತಿಳಿಯುವಷ್ಟರಲ್ಲಿ ಜೋಡೆತ್ತುಗಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸುಮಾರು ಆರು ಲಕ್ಷ ಮೌಲ್ಯದ …

Read More »

ಬೆಳಗಾವಿಯಲ್ಲಿ ಮಳೆಗೆ ಮನೆ ಕುಸಿತ.. ತಾಯಿ ಮಗು ಬಲಿಯಾದ ಕುಟುಂಬಕ್ಕೆ ಹತ್ತು ಲಕ್ಷ ಪರಿಹಾರ

ಬೆಳಗಾವಿ: ಧಾರಾಕಾರ ಮಳೆ ಹಿನ್ನೆಲೆ ಮಾಡಮಗೇರಿ ಗ್ರಾಮದಲ್ಲಿ ಮನೆ ಕುಸಿತ ಆಗಿ ತಾಯಿ ಮಗು ಮೃತಪಟ್ಟಿದ್ದ ಕುಟುಂಬಕ್ಕೆ ತಾಲೂಕು ಆಡಳಿತ ವತಿಯಿಂದ ತಹಶೀಲ್ದಾರ ಮಹಾಂತೇಶ ಮಠದ ಅವರು ಹತ್ತು ಲಕ್ಷ ರೂ. ಪರಿಹಾರ ವಿತರಿಸಿದರು. ಕಳೆದ ಶನಿವಾರ ಉಂಟಾದ ಭೀಕರ ಮಳೆಗೆ ಯರಗಟ್ಟಿ ತಾಲೂಕಿನ ಮಾಗಮಗೇರಿ ಗ್ರಾಮದ ಮಹಾದೇವ ಎಂಬುವವರ ಮನೆ ಕುಸಿದು ಮಗ ಪ್ರಜ್ವಲ್ ಮಹಾದೇವ ಬಾಗಿಲದ (5) ಹಾಗೂ ಪತ್ನಿ ಯಲ್ಲವ್ವ ಮಹಾದೇವ ಬಾಗಿಲದ (40) ಸ್ಥಳದಲ್ಲೇ …

Read More »

F,S,L, ಅಧಿಕಾರಿ ಆತ್ಮಹತ್ಯೆ; ಕ್ಷಮಿಸಿ ಎಂದು ವಿಚ್ಛೇದಿತ ಪತಿಗೆ ಡೆತ್​ನೋಟ್ ಮೂಲಕ ವಿನಂತಿ

ಬೆಂಗಳೂರು: ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಪಾರ್ಟ್​ಮೆಂಟ್​ವೊಂದರಲ್ಲಿ ಈ ಪ್ರಕರಣ ನಡೆದಿದ್ದು, ಸ್ಥಳದಲ್ಲಿ ಡೆತ್​ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ.   ಎಫ್‌ಎಸ್​ಎಲ್​ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಈಕೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್‌ಮೆಂಟ್​​ನಲ್ಲಿ ನೇಣು ಬಿಗಿದುಕೊಂಡಿದ್ದರು. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈಕೆ ಇತ್ತೀಚೆಗೆ ವಿಚ್ಛೇದನ ಪಡೆದು ಪತಿಯಿಂದ ದೂರವಿದ್ದರು. ಆದರೆ ತನ್ನನ್ನು …

Read More »

ಮನೆಯಲ್ಲಿಯೇ ಶವವಾಗಿ ಪತ್ತೆಯಾದ ಹಿರಿಯ ಪೊಲೀಸ್ ಅಧಿಕಾರಿ; ಕೆಲಸಗಾರನಿಂದಲೇ ಹತ್ಯೆಯಾಗಿರುವ ಶಂಕೆ

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ, ಕಾರಾಗೃಹಗಳ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನಲ್ಲಿರುವ ತಮ್ಮ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕುತ್ತಿಗೆ ಸೀಳಿದ ಹಾಗೂ ಸುಟ್ಟ ಗಾಯಗಳ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು, ಹೀಗಾಗಿ ಹತ್ಯೆಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.   ಈ ಘಟನೆ ನಡೆದ ಬಳಿಕ ಹೇಮಂತ್ ಕುಮಾರ್ ಅವರ ನಿವಾಸದಲ್ಲಿ ಕೆಲಸ ಮಾಡುತ್ತಿದ್ದ ಯಾಸಿರ್ ಎಂಬಾತ ನಾಪತ್ತೆಯಾಗಿದ್ದು, ಆತನೇ ಈ ಕೊಲೆ ಮಾಡಿರಬಹುದು ಎಂಬ ಅನುಮಾನದ ಮೇರೆಗೆ …

Read More »

‘ಆದಿಪುರುಷ್’ ಟೀಸರ್‌ ನೋಡಿ ಓಂ ರಾವುತ್ ಮೇಲೆ ಪ್ರಭಾಸ್ ಗರಂ?

ಆದಿಪುರುಷ್’ ಟೀಸರ್ ನೋಡಿ ಸಾಕಷ್ಟು ಜನ ನಿರ್ದೇಶಕ ಓಂ ರಾವುತ್ ಮೇಲೆ ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ. ಟೀಸರ್ ರಿಲೀಸ್ ಈವೆಂಟ್ ನಂತರ ಸ್ವತಃ ಪ್ರಭಾಸ್ ಕೂಡ ನಿರ್ದೇಶಕರ ಮೇಲೆ ಗರಂ ಆಗಿದ್ದರು ಎನ್ನಲಾಗ್ತಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ.   ಭಾನುವಾರಷ್ಟೇ ಅಯೋಧ್ಯೆಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ‘ಆದಿಪುರುಷ್’ ಸಿನಿಮಾ ಟೀಸರ್ ಲಾಂಚ್ ಮಾಡಲಾಗಿತ್ತು. ರಾಮಾಯಣ ಕಾವ್ಯವನ್ನು ಆಧರಿಸಿ ಈ ಮೋಷನ್ ಕ್ಯಾಪ್ಚರ್ ಆನಿಮೇಷನ್ ಸಿನಿಮಾ ಕಟ್ಟಿಕೊಡಲಾಗ್ತಿದೆ. …

Read More »

ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು: ಸಿದ್ದರಾಮಯ್ಯಗೆ ಕಾನ್‌ಸ್ಟೆಬಲ್‌ ಸವಾಲು!

ವಿಜಯಪುರ: ‘ಭಾರತ ಜೋಡೊ’ ಪಾದಯಾತ್ರೆಗೆ ಅಡ್ಡಿ ಪಡಿಸುವ ಬಿಜೆಪಿ ಹುನ್ನಾರದಲ್ಲಿ ಪೊಲೀಸ್‌ನವರೇನಾದರೂ ಶಾಮೀಲಾದ್ರೆ…’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತಿಗೆ ವಿಜಯಪುರ ಗ್ರಾಮೀಣ ಠಾಣೆ ಕಾನ್‌ಸ್ಟೆಬಲ್‌ವೊಬ್ಬರು ವಿರೋಧ ವ್ಯಕ್ತಪಡಿಸಿ ಫೇಸ್‌ಬುಕ್‌ನಲ್ಲಿ ಕಾಮೆಂಟ್‌ ಹಾಕಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.   ‘ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ ಎಂದು ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾನ್‌ಸ್ಟೆಬಲ್‌ ರಾಜಶೇಖರ ಖಾನಾಪುರ ಸವಾಲು ಹಾಕಿದ್ದು, ಸಾಮಾಜಿಕ …

Read More »

ಕಾರ್ಮಿಕ ಇಲಾಖೆಯಲ್ಲಿ ನೇಮಕಾತಿ: ಪದವೀಧರರಿಂದ ಅರ್ಜಿ ಆಹ್ವಾನ- 62 ಸಾವಿರ ರೂ.ವರೆಗೆ ಸಂಬಳ

ಕಾರ್ಮಿಕ ಇಲಾಖೆಯಲ್ಲಿರುವ ಕಾರ್ಮಿಕ ನಿರೀಕ್ಷಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಉಳಿಕೆ ಮೂಲ ವೃಂದದ ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅ.29ರೊಳಗೆ ಅರ್ಜಿ ಸಲ್ಲಿಸತಕ್ಕದ್ದು.   ಕಾರ್ಮಿಕ ನಿರೀಕ್ಷಕ- ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಪರಿಶೀಲನೆ ನಡೆಸಿದ ಬಳಿಕ ಕನ್ನಡ ಭಾಷಾ ಪರೀಕ್ಷೆ , ಸ್ಪರ್ಧಾತ್ಮಕ ಪರೀಕ್ಷೆ ಯಲ್ಲಿ ಗಳಿಸಿದ ಅಂಕ, ಚಾಲ್ತಿಯಲ್ಲಿರುವ ಮೀಸಲಾತಿ ನಿಯಮದನ್ವಯ …

Read More »