Breaking News

ರಾಜ್ಯ

ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆಯಲ್ಲಿ ಬೆಂಗಳೂರಿಗೆ 43ನೇ ಸ್ಥಾನ: ಸಾರ್ವಜನಿಕರಿಂದ ಟೀಕೆ

ಬೆಂಗಳೂರು: ಕೇಂದ್ರದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ 2022ರ ಪ್ರಕಾರ 45 ನಗರಗಳ ಪಟ್ಟಿಯಲ್ಲಿ ಸಿಲಿಕಾನ್​​ ಸಿಟಿ 43ನೇ ಸ್ಥಾನ ಪಡೆದುಕೊಂಡಿದೆ. ಈ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರು ರ‍್ಯಾಂಕಿಂಗ್​ನಲ್ಲಿ 15ರಷ್ಟು ಕುಸಿತ ಕಂಡಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ವಿವಿಧ ಅಂಕಿ ಅಂಶಗಳನ್ನು ಆಧರಿಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 10 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿರುವ 45 ನಗರಗಳಲ್ಲಿ ಬೆಂಗಳೂರು 43ನೇ …

Read More »

ಅ.28 ರಂದು 252 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಹಾಗೂ ಗಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. 2022ರ ಆಗಸ್ಟ್​​ನಿಂದ ನವೆಂಬರ್​​ವರೆಗೆ ಅವಧಿ ಮುಕ್ತಾಯವಾಗಲಿರುವ 252 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 187 ಖಾಲಿ ಇರುವ ಗ್ರಾಮ ಪಂಚಾಯತ್​​ ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯ ದಿನಾಂಕ ಪ್ರಕಟಿಸಿದೆ. ಅದರಂತೆ ಅಕ್ಟೋಬರ್ 28ರಂದು ಮತದಾನ ನಡೆಯಲಿದೆ. ಅ.18 ನಾಮಪತ್ರ ಸಲ್ಲಿಸಲು …

Read More »

ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ

ಚಿಕ್ಕೋಡಿ: ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರು, ಬೈಕ್ ಹಾಗೂ ಲಾರಿ ನಡುವೆ ಭೀಕರ ಸರಣಿ ಅಪಘಾತವಾಗಿದ್ದು, ಓರ್ವ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ಎರಡು ಕಾರು, ಟ್ರಕ್ ಹಾಗೂ 4ಕ್ಕೂ ಹೆಚ್ಚು ಬೈಕ್​ಗಳ ನಡುವೆ ಸರಣಿ ಅಪಘಾತವಾಗಿದೆ. ಇದಕ್ಕೂ ಮೊದಲು ಮೊಲ್ಯಾಸೀಸ್ ತುಂಬಿದ್ದ ಟ್ಯಾಂಕರ್ ನಿಂದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಮೊಲ್ಯಾಸೀಸ್ ಸೋರಿಕೆಯಾಗಿದೆ. ಈ …

Read More »

ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ರೇ ಅದು ವಿಜಯೇಂದ್ರನಿಂದ

ಬಿಜೆಪಿ ಪಕ್ಷಕ್ಕೆ ಡ್ಯಾಮೇಜ್ ಆಗಿದ್ರೇ ಅದು ವಿಜಯೇಂದ್ರನಿಂದ ಎಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗುಡುಗಿದರು. ಬಿವೈ ವಿಜಯೇಂದ್ರ ವಿರುದ್ಧ ಶಾಸಕ ಯತ್ನಾಳ ವಾಗ್ದಾಳಿ ನಡೆಸಿ, ವಿಜಯೇಂದ್ರದಿಂದ ಬಿಎಸ್ವೈ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ. ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ವಿಜಯೇಂದ್ರ ಭ್ರಷ್ಟಾಚಾರದಿಂದ ಬಿಎಸ್ವೈ ಸಿಎಂ ಸ್ಥಾನ ಕಳೆದುಕೊಂಡಿದ್ದಾರೆ. ಪಾಪ ಬಿಎಸ್ವೈ ಅಧಿಕಾರಿ ಕಳೆದುಕೊಂಡ್ರೂ, ಇಲ್ಲದೇ ಹೋದ್ರೇ ಅವರೇ ಸಿಎಂ ಇರ್ತಾ ಇದ್ರೂ, ವಿಜಯೇಂದ್ರ ಯಾವಾಗ …

Read More »

ಹಸುಗೂಸಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಬಸ್​ ನಿಲ್ದಾಣದಲ್ಲಿ ಕುಟುಂಬಸ್ಥರ ಗೋಳಾಟ.

ತುಮಕೂರು: ಸ್ವಗ್ರಾಮಕ್ಕೆ ಮಗುವಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಾಣಂತಿ ಸೇರಿದಂತೆ ಕುಟುಂಬಸ್ಥರು ಕಣ್ಣೀರಿಡುತ್ತಿದ್ದಾರೆ. ದಾವಣಗೆರೆ ಜಿಲ್ಲೆ ಗೋಪನಾಳ್ ಗ್ರಾಮದ ಮಂಜುನಾಥ್ ಮತ್ತು ಗೌರಮ್ಮ ದಂಪತಿ ತುಮಕೂರು ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ನಾಲ್ಕು ದಿನದ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಗೌರಮ್ಮ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ, ಇಂದು(ಸೋಮವಾರ) ಮುಂಜಾನೆ 4 ಗಂಟೆಯಲ್ಲಿ ಆಸ್ಪತ್ರೆಯಲ್ಲೇ ಮಗು ಮೃತಪಟ್ಟಿದೆ. ಮಗುವಿನ ಶವ ತೆಗೆದುಕೊಂಡು ಹೋಗುವಂತೆ ವೈದ್ಯರು ತಿಳಿಸಿದ್ದಾರೆ. ಆದರೆ, …

Read More »

ಈ ವರ್ಷವೇ ಸುವರ್ಣಸೌಧದಲ್ಲಿ ಚನ್ನಮ್ಮ, ರಾಯಣ್ಣ ಪ್ರತಿಮೆ ಸ್ಥಾಪನೆ: ಬೊಮ್ಮಾಯಿ

  ಬೆಂಗಳೂರು: ‘ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ₹ 50 ಕೋಟಿ ಅನುದಾನ ಒದಗಿಸಲಾಗಿದ್ದು, ಇದೇ ವರ್ಷ ಬೆಳಗಾವಿಯ ಸುವರ್ಣಸೌಧದಲ್ಲಿ ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಪ್ರತಿಷ್ಠಾಪಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿಯಾಗಿ ನಗರದಲ್ಲಿ ಭಾನುವಾರ ಹಮ್ಮಿಕೊಂಡ ‘ಕಿತ್ತೂರು ಚನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆ’ಗೆ ಚಾಲನೆ ನೀಡಿ, ಮಾತನಾಡಿದರು. ‘ಕಿತ್ತೂರು ಉತ್ಸವ …

Read More »

ಸೋನಿಯಾ ಗಾಂಧಿ ರಾಜ್ಯ ಭೇಟಿ: ‘ಭಾರತ್‌ ಜೋಡೋ’ ಪಾದಯಾತ್ರೆಯಲ್ಲಿ ಭಾಗಿ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ರಾಜ್ಯಕ್ಕೆ ಬರಲಿದ್ದು, ‘ಭಾರತ್‌ ಜೋಡೋ’ ಪಾದಯಾತ್ರೆಯಲ್ಲಿ ಗುರುವಾರ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.   ‘ಸೋಮವಾರ ರಾಜ್ಯಕ್ಕೆ ಬರಲಿರುವ ಸೋನಿಯಾ, ಎರಡು ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ತಂಗುವರು. ಗುರುವಾರ ಒಂದು ದಿನ ಮಾತ್ರ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು’ ಎಂದು ಕೆಪಿಸಿಸಿ ಮೂಲಗಳು ಮಾಹಿತಿ ನೀಡಿವೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ಗುರುವಾರವೇ ಪಾದಯಾತ್ರೆಯನ್ನು ಸೇರಿಕೊಳ್ಳಲಿದ್ದಾರೆ ಎಂದು …

Read More »

ದುರ್ಗಾಮಾತಾ ದೌಡ್ ಸ್ವಾಗತಿಸಿ, ಭಾವೈಕ್ಯ ಮೆರೆದ ಮುಸ್ಲಿಮರು

ಬೆಳಗಾವಿ: ನವರಾತ್ರಿ ಅಂಗವಾಗಿ ಶಿವ ಪ್ರತಿಷ್ಠಾನ ಹಿಂದೂಸ್ಥಾನ ವತಿಯಿಂದ 8ನೇ ದಿನವಾದ ಸೋಮವಾರ ದುರ್ಗಾಮಾತಾ ದೌಡ್‌ ನಡೆಯಿತು. ಇಲ್ಲಿನ ಕ್ಯಾಂಪ್‌ ಪ್ರದೇಶದಲ್ಲಿ ಮುಸ್ಲಿಮರು ಇದಕ್ಕೆ ಸ್ವಾಗತ ಕೋರಿ, ಭಾವೈಕ್ಯ ಸಂದೇಶ ಸಾರಿದರು. ದುರ್ಗಾಮಾತಾ ದೌಡ್‌ ಅಂಗವಾಗಿ ಕ್ಯಾಂಪ್‍ನ ಮಾರ್ಗಗಳಲ್ಲಿ ರಂಗೋಲಿ ಚಿತ್ತಾರ ಅರಳಿತ್ತು. ಯುವಕ-ಯುವತಿಯರು, ಮಕ್ಕಳು ಸಾಂಪ್ರದಾಯಿಕ ದಿರಿಸಿನಲ್ಲಿ ಗಮನ ಸೆಳೆದರು. ಬಾಲಕಿಯೊಬ್ಬಳು ಜೀಜಾಮಾತಾ ವೇಷ ಧರಿಸಿ, ಶಿವಾಜಿ ಮಹಾರಾಜರನ್ನು ಸ್ತುತಿಸಿದಳು. ದಂಡು ಮಂಡಳಿ ಮಾಜಿ ಉಪಾಧ್ಯಕ್ಷ ಸಾಜೀದ್ ಶೇಖ್ …

Read More »

ಬಳ್ಳಾರಿ ಕೊಲೆ ಪ್ರಕರಣ : 7 ಜನರ ಬಂಧನ, ಮೂವರಿಗಾಗಿ ಶೋಧ

ಬಳ್ಳಾರಿ : ಸೆ.28ರಂದು ಮಧ್ಯರಾತ್ರಿ ರೇಡಿಯೋ ಪಾರ್ಕ್ ಬಳಿ ಹತ್ಯೆಗೀಡಾಗಿದ್ದ ಕುಂಟ ಮಂಜು ಕೊಲೆ ಪ್ರಕರಣದ ಆರೋಪಿಗಳನ್ನು ಕೌಲ್‍ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಡಿ ಏಳು ಆರೋಪಿಗಳ ಬಂಧನವಾಗಿದ್ದು, ಉಳಿದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಇಲಿಯಾಸ್, ಹುಸೇನ್ ಅಲಿಯಾಸ್ ಲಕ್ಷ್ಮಣ, ಭಾಸ್ಕರ್, ಸಂತೋಷ ಸರ್ವರ್, ಪ್ರಭಾಕರ್, ರಘು ಎಂಬುವರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. …

Read More »

ಗಾಂಧಿ ಜಯಂತಿಯಂದು 2 ಟನ್ ಗೋಮಾಂಸ ಸಾಗಣೆ: ಐವರು ಆರೋಪಿಗಳ ಬಂಧನ

ಕಾರವಾರ(ಉತ್ತರ ಕನ್ನಡ): ಹುಬ್ಬಳ್ಳಿಯಿಂದ ಗೋವಾಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಮೂರು ವಾಹನಗಳ ಸಮೇತ ಬಂಧಿಸಿರುವ ಘಟನೆ ಜೊಯಿಡಾದ ಅನಮೋಡ ಅಬಕಾರಿ ಚೆಕ್‌ಪೋಸ್ಟ್​ನಲ್ಲಿ ಭಾನುವಾರ ನಡೆದಿದೆ. ಹುಬ್ಬಳ್ಳಿಯಿಂದ ಗೋವಾ ಕಡೆಗೆ ಹಸುಗಳನ್ನು ವಧೆ ಮಾಡಿ ಮಾಂಸವನ್ನು ಎರಡು ಮಹೀಂದ್ರ ಬುಲೆರೋ ಪಿಕಪ್ ಹಾಗೂ ಒಂದು ಟಾಟಾ 407 ವಾಹನದಲ್ಲಿ ಗೋವಾಕ್ಕೆ ಸಾಗಿಸುತ್ತಿದ್ದ ಬಗ್ಗೆ ಉತ್ತರಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನಾ ಪನ್ನೇಕರ್ ಅವರಿಗೆ ಖಚಿತ ಮಾಹಿತಿ ಸಿಕ್ಕಿತ್ತು.‌ …

Read More »