ಮಂಗಳೂರು : ಕರಾವಳಿಯಲ್ಲಿ ಪ್ರಮೋದ್ ಮುತಾಲಿಕ್ 2023 ಚುನಾವಣೆಗೆ ಸ್ಪರ್ಧೆ ಮಾಡುವಂತೆ ಕಾರ್ಯಕರ್ತರಿಂದ ಬೇಡಿಕೆ ಹೆಚ್ಚಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರೀ ಚರ್ಚೆಗೆ ಗ್ರಾಸವಾಗಿದೆ. BIGG NEWS: ಆರನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ; ಡಿಕೆ ಬ್ರದರ್ಸ್ ಗೆ ಭಾಗವಹಿಸಲಾಗದ ಸಂಕಷ್ಟ ಪ್ರಮೋದ್ ಮುತಾಲಿಕ್ 2023 ಚುನಾವಣೆಗೆ ಸ್ಪರ್ಧೆ ಬಗ್ಗೆ ಈಗಾಗಲೇ ಭಾರೀ ಚರ್ಚೆಯಾಗುತ್ತಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ 15 ವಿಧಾನಸಭಾ ಕ್ಷೇತ್ರವಿದೆ. ಇದರಲ್ಲಿ 12 …
Read More »ರೈತರಿಗೆ ಗುಡ್ ನ್ಯೂಸ್: ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ನ. 1 ರಿಂದ ‘ಯಶಸ್ವಿನಿ ಯೋಜನೆ’ ಪುನಾರಂಭ
ಬೆಂಗಳೂರು: ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಪುನರಾರಂಭವಾಗಲಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ಉಪ ಕೇಂದ್ರ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ ಮಕ್ಕಳ ಐಸಿಯು ಉಪ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಹಕಾರಿ ಸಂಸ್ಥೆಗಳ ಸದಸ್ಯ ರೈತರಿಗೆ ಮತ್ತು ಅವರ ಕುಟುಂಬದವರಿಗೆ ಆರೋಗ್ಯ ಕಲ್ಪಿಸಲು ಯಶಸ್ವಿನಿ ಯೋಜನೆಯಿಂದ ಅನುಕೂಲವಾಗಿತ್ತು. ರೈತರ ಹಿತ ದೃಷ್ಟಿಯಿಂದ ನವೆಂಬರ್ …
Read More »ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗ್ಬೇಕು: ಕಲಾವಿದರ ವಿರುದ್ಧ ಗುಡುಗಿದ ನಟ ಜಗ್ಗೇಶ್
ಬೆಂಗಳೂರು: ಕನ್ನಡ ಚಿತ್ರರಂಗದ ಒಗ್ಗಟ್ಟಿನ ಬಗ್ಗೆ ಆಗಾಗ ಅಸಮಾಧಾನ ಹೊರಹಾಕುವ ನವರಸನಾಯಕ ಜಗ್ಗೇಶ್, ಮತ್ತೊಮ್ಮೆ ಕನ್ನಡ ಕಲಾವಿದರ ವಿರುದ್ಧ ಗರಂ ಆಗಿದ್ದಾರೆ. ಕಳೆದ ವಾರ ಬಿಡುಗಡೆಯಾದ ಜಗ್ಗೇಶ್ ಅವರ ತೋತಾಪುರಿ ಸಿನಿಮಾದ ಸಕ್ಸಸ್ ಮೀಟ್ನಲ್ಲಿ ಭಾಗಿಯಾಗಿ ಮಾತನಾಡಿದ ಜಗ್ಗೇಶ್, ನಮ್ಮ ಕನ್ನಡ ಸಿನಿಮಾ ಮಂದಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ಹೊರಹಾಕಿದರು. ಯಾವುದೋ ತಮಿಳು ಚಿತ್ರ ಅದ್ಭುತವಾಗಿ ಕಲೆಕ್ಷನ್ ಮಾಡುತ್ತಿದೆ. ರಜನಿಕಾಂತ್ರಂತಹ ಹಿರಿಯ ನಟರು ಅದ್ಭುತವಾಗಿ ಪ್ರಮೋಷನ್ ಮಾಡಿಕೊಟ್ಟಿದ್ದಾರೆ. ಆದರೆ …
Read More »SC, ST ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಬಂಪರ್ ಗಿಫ್ಟ್ : ಎಸ್.ಸಿ ಮೀಸಲಾತಿ ಶೇ 15-17, ಎಸ್.ಟಿ ಮೀಸಲಾತಿ ಶೇ.3-7 ಹೆಚ್ಚಳ
ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಗಿಫ್ಟ್ ನೀಡಿದ್ದು, ಮೀಸಲಾತಿ ಹೆಚ್ಚಿಸಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಇಂದು ನಡೆದ ಸರ್ವಪಕ್ಷಗಳ ಸಭೆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದು, ಎಸ್ ಸಿ ಮೀಸಲಾತಿ ಶೇ 15 ರಿಂದ 17, ಎಸ್ ಟಿ ಮೀಸಲಾತಿ ಶೇ 3 ರಿಂದ 7 ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದಾರೆ. ಮೀಸಲಾತಿ ಹೆಚ್ಚಳದ …
Read More »ಸಿದ್ದರಾಮಯ್ಯ ಅವಧಿಯ ಸೋಲಾರ್ ಹಗರಣದ ತನಿಖೆಗೆ ಮುಂದಾದ ಬಿಜೆಪಿ ಸರ್ಕಾರ
ಬೆಂಗಳೂರು: ಕಾಂಗ್ರೆಸ್ ಅವಧಿಯಲ್ಲಿ ನಡೆದ ಸೋಲಾರ್ ಹಂಚಿಕೆ ಹಗರಣದ ತನಿಖೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿರುವ ಬಗ್ಗೆ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ಈ ಸಂಬಂಧ ಯಾವುದೇ ಕ್ಷಣದಲ್ಲಿ ಸರ್ಕಾರ ತನಿಖೆಗೆ ಆದೇಶ ನೀಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಸೋಲಾರ್ ಉತ್ಪಾದನೆಗಾಗಿ ಕರೆದ ಆನ್ ಲೈನ್ ಅರ್ಜಿ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿತ್ತು ಎಂಬ ಆರೋಪ ವ್ಯಕ್ತವಾಗಿತ್ತು. 2100 ಕೋಟಿ ರೂ. ಮೊತ್ತದ 300 ಮೆಗಾ ವ್ಯಾಟ್ ಸೋಲಾರ್ …
Read More »ಗದಗ ಜಿಲ್ಲೆಯಲ್ಲಿ ‘ಚುನಾವಣಾ ದೇವರು’: ಹನುಮಂತನ ಬಳಿ ಮೊದಲು ಬಂದು ಪೂಜೆ ಸಲ್ಲಿಸಿದವರಿಗೆ ಗೆಲುವು ನಿಶ್ಚಿತ ಎಂಬ ನಂಬಿಕೆ!
ಗದಗ ಜಿಲ್ಲೆಯ ಮೈಕಲಜೇರಿ ಗ್ರಾಮದ ಹನುಮಂತ ದೇವರನ್ನು ಪೂಜಿಸಿದರೆ ಚುನಾವಣೆಯಲ್ಲಿ ರಾಜಕೀಯ ನಾಯಕರು ಗೆಲ್ಲುತ್ತಾರೆ ಎಂಬ ನಂಬಿಕೆ ಹಲವಾರು ವರ್ಷಗಳಿಂದ ಇದೆ. 2023ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಇಲ್ಲಿನ ಪ್ರಸಿದ್ಧ ‘ಚುನಾವಣಾ ದೇವರ’ ದರ್ಶನಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಲಾರಂಭಿಸಿದ್ದಾರೆ. ಗದಗ: ಗದಗ ಜಿಲ್ಲೆಯ ಮೈಕಲಜೇರಿ ಗ್ರಾಮದ ಹನುಮಂತ ದೇವರನ್ನು ಪೂಜಿಸಿದರೆ ಚುನಾವಣೆಯಲ್ಲಿ ರಾಜಕೀಯ ನಾಯಕರು ಗೆಲ್ಲುತ್ತಾರೆ ಎಂಬ ನಂಬಿಕೆ ಹಲವಾರು ವರ್ಷಗಳಿಂದ ಇದೆ. …
Read More »ಬೆಳಗಾವಿಯ ಓಲ್ಡ್ ಪಿಬಿ ರಸ್ತೆಯಲ್ಲಿ ಯಮರೂಪಿ ತಗ್ಗು-ಗುಂಡಿಗಳು
ಬೆಳಗಾವಿಯ ಓಲ್ಡ್ ಪಿಬಿ ರಸ್ತೆಯ ಶಿವಾಜಿ ಮಹಾರಾಜ ಓವರ್ ಬ್ರಿಡ್ಜ್ ಮೇಲಿನ ರಸ್ತೆಯ ಮೇಲೆ ಸಾಕಷ್ಟು ತಗ್ಗು ಗುಂಡಿಗಳು ಬಿದ್ದಿದ್ದು, ವಾಹನ ಸವಾರರು ಸಾಕಷ್ಟು ತೊಂದರೆ ಅನಿಭವಿಸುತ್ತಿದ್ದಾರೆ. ಇದನ್ನು ಲಕ್ಷಿಸದ ಅಧಿಕಾರಿಗಳ ವಿರುದ್ಧ ಸ್ಥಳೀಯರು ರಸ್ತೆಯ ಗುಂಡಿಗಳಲ್ಲಿ ತೆಂಗಿನ ಸಸಿಯನ್ನು ನೆಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಬೆಳಗಾವಿ ನಗರ ಸ್ಮಾರ್ಟ್ ಸಿಟಿ ಯೋಜನೆಯಡಿ ಸಾಕಷ್ಟು ಅಭಿವೃದ್ಧಿಯಾಗುತ್ತಿದೆ ಎಂದು ರಾಜ್ಯ ಸರಕಾರ ಹೇಳುತ್ತಲೇ ಬಂದಿದೆ. ಆದರೆ ಬೆಳಗಾವಿ ನಗರದ …
Read More »ಸಕ್ಕರೆ ಕಾರ್ಖಾನೆ ಮಾಲೀಕರು ಸಭೆಗೆ ಬರದಿದ್ದರೆ ಅವರ ಕಾರ್ಖಾನೆಗೇ ಹೋಗಿ ಸಭೆ ಮಾಡುತ್ತೇವೆ: ನಿತೇಶ್ ಪಾಟೀಲ
ಬೆಳಗಾವಿ ಜಿಲ್ಲೆಯಲ್ಲಿ ೨೯ ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಆಡಳಿತ ಮಂಡಳಿಯವರನ್ನು ಸಭೆಗೆ ಕರೆದಿದ್ದೇವೆ ಆದರೆ ಈ ಕುರಿತಂತೆ ಆದೇಶ ಮಾಡಿಲ್ಲ. ಕೆಲ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಾರಣಾಂತರದಿAದ ಸಭೆಗೆ ಬರಲಾಗುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಹೇಳಿದರು. ನಗರದಲ್ಲಿ ಇಂದು ಶುಕ್ರವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ರೈತರ ಸಮಸ್ಯೆಗಳ ಕುರಿತು ವಿವಿಧ ರೈತ ಸಂಘನೆಯ ಮುಖಂಡರ ಜತೆಗೆ ಕರೆಯಲಾದ ಸಭೆಯನ್ನು ಉದ್ದೇಶಿಸಿ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ …
Read More »ಹೆಣ್ಣು ಆಡು ಹಾಲು ಕೊಡುವುದನ್ನು ನಾವು ನೀವೆಲ್ಲಾ ನೋಡಿದ್ದೇವೆ. ಆದರೆ ಗಂಡು ಮೇಕೆ ಕೊಡುತ್ತೆ ಹಾಲು
ಹೆಣ್ಣು ಆಡು ಹಾಲು ಕೊಡುವುದನ್ನು ನಾವು ನೀವೆಲ್ಲಾ ನೋಡಿದ್ದೇವೆ. ಆದರೆ ಗಂಡು ಆಡು ಕೂಡ ಹಾಲು ಕೊಡುತ್ತೆ ಎನ್ನುವುದಕ್ಕೆ ಇಲ್ಲೊಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹೌದು ಜಮಖಂಡಿನಗರದ ಟೀಚರ್ಸ್ ಕಾಲೋನಿಯಲ್ಲಿ ಗಂಡು ಆಡಿನ ಮರಿ ಹಾಲು ಕೊಡುತ್ತಿರುವುದು ಕಂಡು ಸಾರ್ವಜನಿಕರು ತೀವ್ರ ಅಚ್ಚರಿಗೊಂಡಿದ್ದಾರೆ. ಪರಶುರಾಮ ಭಜಂತ್ರಿ ಎನ್ನುವವರಿಗೆ ಸೇರಿದ ಮೂರು ವರ್ಷದ ಗಂಡು ಮೇಕೆ ಇದಾಗಿದ್ದು. ಪ್ರತಿ ನಿತ್ಯ ಒಂದು ಬಟ್ಟಲಿನಷ್ಟು ಹಾಲನ್ನು ಈ ಗಂಡು ಮೇಕೆ ಕೊಡುತ್ತಿದೆ. …
Read More »ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಯೋಧ ಹೃದಯಾಘಾತದಿಂದ ಸಾವು
ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಯೋಧ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಡಕುಂದ್ರಿ ಗ್ರಾಮದ 42 ವರ್ಷದ ಶಿವಾನಂದ ಬಾಬು ಸಿರಗಾಂವಿ ಮೃತ ಯೋಧ. ಶ್ರೀನಗರದ 55 ಆರ್‍ಆರ್ ಬಟಾಲಿಯನ್‍ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧ ಬಾಬು ಸಿರಗಾಂವಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಮೃತ ಯೋಧನಿಗೆ ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳಿದ್ದಾರೆ. ಯೋಧನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು. ಬಡಕುಂದ್ರಿ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಶುಕ್ರವಾರ …
Read More »
Laxmi News 24×7