Breaking News

ರಾಜ್ಯ

ಮಠದ ಸಿಬ್ಬಂದಿ ವೇತನ ಚೆಕ್​ಗೆ​ ಸಹಿ ಹಾಕಲು ಮುರುಘಾ ಶರಣರಿಗೆ ಹೈಕೋರ್ಟ್ ಅವಕಾಶ

ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠ ಮತ್ತು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ವೇತನ ಪಡೆಯಲಾಗದೇ ತೊಂದರೆಗೆ ಸಿಲುಕಬಾರದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘರಾಜೇಂದ್ರ ಶರಣರಿಂದ ವೇತನ ಪಾವತಿಸುವ ಚೆಕ್​ಗಳಿಗೆ ಸಹಿ ಹಾಕಲು ಅನುಮತಿ ನೀಡಿದೆ. ನ್ಯಾಯಾಂಗ ಬಂಧನದಲ್ಲಿರುವ ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರು ಮಠದ ಬ್ಯಾಂಕ್‌ ಖಾತೆಗಳ ಚೆಕ್‌ಗಳಿಗೆ ಸಹಿ ಹಾಕುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ …

Read More »

ಬೆಳ್ಳಂ ಬೆಳಿಗ್ಗೆ ಆರ್.ಟಿ.ಓ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹುಮನಾಬಾದ: ಬೀದರ ಜಿಲ್ಲೆಯ ಹುಮನಾಬಾದ ಪಟ್ಟಣದ ಹೊರವಲಯದ ಆರ್.ಟಿ.ಓ. ಕಚೇರಿ ಮೇಲೆ ಸೆ.30ರ ಶುಕ್ರವಾರ ಬೆಳ್ಳಂ ಬೆಳಿಗ್ಗೆ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆದಿದೆ. ಚೆಕ್ ಪೋಸ್ಟ್ ನಲ್ಲಿ ವಾಹನಗಳಿಂದ ಹಣ ವಸೂಲಿ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 65ರ ಮೋಳಕೆರಾ ಗ್ರಾಮದ ಹತ್ತಿರದ ಚೆಕ್ ಪೋಸ್ಟ್ ನಲ್ಲಿ ದಾಳಿ ನಡೆದಿದೆ. ವಾಹನಗಳಿಂದ ಸಂಗ್ರಹಿಸುವ ತೆರಿಗೆ ಹಣಕ್ಕೂ ಕಚೇರಿಯಲ್ಲಿ ಸಂಗ್ರಹವಾದ ಹಣಕ್ಕೂ ವ್ಯತ್ಯಾಸ ಇರುವುದು …

Read More »

ಹಬ್ಬದ ಸಂದರ್ಭವೆಂದು ದರ ಏರಿಸಿದರೆ ಪರ್ಮಿಟ್ ರದ್ದು; ಸಾರಿಗೆ ಸಂಸ್ಥೆಗಳಿಗೆ ರಾಮುಲು ಎಚ್ಚರಿಕೆ

ಬೆಂಗಳೂರು: ದಸರಾ ಸಂದರ್ಭದಲ್ಲಿ ಬೆಂಗಳೂರಿನಿಂದ‌ ಬೇರೆ ಬೇರೆ ಊರುಗಳಿಗೆ ಪ್ರಯಾಣ ಬೆಳೆಸುವ ಪ್ರಯಾಣಿಕರಿಗೆ ಅಧಿಕ ದರ ವಿಧಿಸುವ ಖಾಸಗಿ ಸಾರಿಗೆ ಸಂಸ್ಥೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಈಗ ಸಾರಿಗೆ ಇಲಾಖೆ ಮುಂದಾಗಿದೆ. ಈ ಬಗ್ಗೆ ಅಧಿಕೃತ ಟ್ವೀಟ್ ಮಾಡಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, ನಿಗದಿತ ದರಕ್ಕಿಂತ ಹೆಚ್ಚಿನ ಹಣ ಕೀಳುವ ಸಾರಿಗೆ ಸಂಸ್ಥೆಗಳ‌ ಪರ್ಮಿಟ್ ರದ್ದು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.   ಖಾಸಗಿ ಬಸ್ ಮಾಲೀಕರು ಪ್ರಯಾಣಿಕರಿಗೆ ತೊಂದರೆ …

Read More »

ನಾಗರ ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ಉರಗ ರಕ್ಷಕ!

ಶಿವಮೊಗ್ಗ: ನಾಗರ ಹಾವೊಂದಕ್ಕೆ ಮುತ್ತಿಡಲು ಹೋಗಿ ಉರಗ ರಕ್ಷಕನೊಬ್ಬ ತುಟಿಗೆ ಕಚ್ಚಿಸಿಕೊಂಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಅಲೆಕ್ಸ್‌ ಎಂಬವರೇ ನಾಗರಹಾವಿನಿಂದ ಕಚ್ಚಿಸಿಕೊಂಡವರು. ಹಾವನ್ನು ಹಿಡಿದು ಅದಕ್ಕೆ ಮುತ್ತಿಡಲು ಮುಂದಾಗಿದ್ದ ತಕ್ಷಣ ಹಾವು ತಿರುಗಿ ತುಟಿಗೆ ಕಚ್ಚಿದೆ.   ಭದ್ರಾವತಿಯ ಅಲೆಕ್ಸ್‌ ಹಾಗೂ ರೋನಿ ಎಂಬುವರು ಉರಗ ರಕ್ಷಣೆಯಲ್ಲಿ ತೊಡಗಿಕೊಂಡಿದ್ದು, ಇತ್ತೀಚೆಗೆ ಭದ್ರಾವತಿಯ ಬೊಮ್ಮನಕಟ್ಟೆ ಮದುವೆ ಮನೆಯಲ್ಲಿ ಎರಡು ನಾಗರ ಹಾವುಗಳು ಒಟ್ಟಿಗೆ ಕಾಣಿಸಿಕೊಂಡಿವೆ. ಈ ವೇಳೆ ಹಾವು ಹಿಡಿದು …

Read More »

ಪೊಲೀಸರೇ. 6 ತಿಂಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತದೆ; ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

ಚಾಮರಾಜನಗರ: ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ನಡೆಸಲು ಉದ್ದೇಶಿಸಿರುವ ಭಾರತ್ ಜೋಡೋ ಯಾತ್ರೆ ಶುರುವಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಲ್ಲಿ ಬೃಹತ್‌ ಸಮಾವೇಶ ನಡೆಯುತ್ತಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.     ಕಾಂಗ್ರೆಸ್‌ ಭಾರತ್‌ ಜೋಡೋ ಯಾತ್ರೆ ಕಿಡಿಗೇಡಿಗಳು ಪೋಸ್ಟರ್‌ ಅನ್ನು ಹರಿದು ಹಾಕಿದ ವಿಚಾರವಾಗಿ ಮಾತನಾಡಿ, ನಮ್ಮ ಪೋಸ್ಟರ್‌ಗಳನ್ನು ಹರಿದು ಹಾಕುತ್ತಿದ್ದಾರೆ. ಇದೇ ರೀತಿ ಮಾಡಿದ್ರೆ ಬಿಜೆಪಿಯವರು ಓಡಾಡದ ರೀತಿ ಮಾಡುತ್ತೇವೆ ಎಂದು ಎಚ್ಚರಿಕೆ …

Read More »

ಬಂಡೀಪುರ ಮೂಲಕ ರಾಜ್ಯಕ್ಕೆ ರಾಹುಲ್ ಗಾಂಧಿಎಂಟ್ರಿ

ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬಂಡೀಪುರ ಅರಣ್ಯ ಪ್ರದೇಶದ ಮೂಲಕ ರಾಜ್ಯಕ್ಕೆ ಎಂಟ್ರಿ ಕೊಟ್ಟಿದೆ. ರಾಹುಲ್ ಗಾಂಧಿ ಅವರನ್ನು ರಾಜ್ಯ ಕಾಂಗ್ರೆಸ್​​ ನಾಯಕರು ಕೆಕ್ಕನಹಳ್ಳ ಚೆಕ್ ಪೋಸ್ಟ್ ಬಳಿ ತೆರಳಿ ಸ್ವಾಗತಿಸಿದ್ದಾರೆ‌‌. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಂ.ಬಿ‌. ಪಾಟೀಲ್, ಆರ್.ವಿ. ದೇಶಪಾಂಡೆ, ವೀರಪ್ಪ ಮೊಯಿಲಿ, ಕೆ‌.ಜೆ. ಜಾರ್ಜ್ ಸೇರಿದಂತೆ ಹತ್ತು ಹಲವು ನಾಯಕರುಗಳು ಭಾಗಿಯಾಗಿದ್ದಾರೆ. ಗುಂಡ್ಲುಪೇಟೆಯ ಹಂಗಳ ಗ್ರಾಮದ …

Read More »

ಬೆಳಗಾವಿಯ VTUಗೆ ನೂತನ ಕುಲಪತಿ: VC ಆಗಿ ವಿದ್ಯಾಶಂಕರ ನೇಮಕ

ಬೆಳಗಾವಿ: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ನೂತನ ಕುಲಪತಿ ಆಗಿ ಡಾ. ವಿದ್ಯಾಶಂಕರ ಎಸ್ ನೇಮಕಗೊಂಡಿದ್ದಾರೆ. ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಆದೇಶದ ಮೇರೆಗೆ ಡಾ. ವಿದ್ಯಾಶಂಕರ ಅವರು ಮೂರು ವರ್ಷಗಳ ಅವಧಿಗೆ ವಿಟಿಯು ಕುಲಪತಿ ಆಗಿ ನೇಮಕಗೊಂಡಿದ್ದಾರೆ.

Read More »

ಕೋಣೆಯಲ್ಲಿ ಕೂಡಿ ಹಾಕಿ ಬಾಲಕಿ ಮೇಲೆ ಗ್ಯಾಂಗ್​ರೇಪ್​: ಮೂವರು ಆರೋಪಿಗಳು ಅಂದರ್

ಸಿಮ್ಡೆಗಾ (ಜಾರ್ಖಂಡ್): ಜೂನ್ 5 ರಂದು 14 ವರ್ಷದ ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜಾರ್ಖಂಡ್‌ನ ಕೊಲೆಬಿರಾ ಪೊಲೀಸರು ಮಂಗಳವಾರ ಮೂವರನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಹೊಟ್ಟೆನೋವು ಎಂದು ಸದರ್ ಆಸ್ಪತ್ರೆಗೆ ಕರೆದೊಯ್ದ ನಂತರ ಅತ್ಯಾಚಾರ ಎಸೆಗಿರುವುದು ಗೊತ್ತಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೂನ್ 5 ರಂದು ಆಕಾಶ್ ಟೆಟೆ, ಅಮನ್ ಡುಂಗ್‌ಡಂಗ್ ಮತ್ತು ಬನ್ಸ್ ಬಹಲ್ ಎಂಬುವರು ಸ್ನೇಹಿತರೊಂದಿಗೆ ಕೋಣೆಗೆ ಬೀಗ ಹಾಕಿ …

Read More »

ಇಲ್ಲಿದೆ ನೋಡಿ ಕೆರೆಗಳನ್ನು ನುಂಗಿ ನೀರುಕುಡಿದು ನಿವೇಶನ ಪಡೆದ ರಾಜಕಾರಣಿಗಳ ಪಟ್ಟಿ

ಕೆರೆ ಮುಚ್ಚಿ ಬಡಾವಣೆ ನಿರ್ಮಿಸಿದ ಬಿಡಿಎನಲ್ಲಿ ನಿವೇಶನ ಪಡೆದಿರುವ, ಬಂಗಲೆ ಕಟ್ಟಿರುವವರ ಪಟ್ಟಿ ನಗರದಲ್ಲಿದ್ದ 23ಕ್ಕೂ ಹೆಚ್ಚು ಕೆರೆಗಳನ್ನು ನುಂಗಿ ನೀರು ಕುಡಿದು ಬಿಡಿಎ ನಿರ್ಮಿಸಿರುವ ಬಡಾವಣೆಗಳಲ್ಲಿ ಜಿ ಕೆಟಗರಿ ಕೋಟಾದಲ್ಲಿ ನಿವೇಶನ ಪಡೆದು ಬಂಗಲೆ ನಿರ್ಮಿಸಿಕೊಂಡು ವಾಸಿಸುತ್ತಿರುವ ರಾಜಕಾರಣಿಗಳ ಪಟ್ಟಿ ಈ ಸಂಜೆಗೆ ಲಭ್ಯವಾಗಿದೆ.   ಲಭ್ಯವಿರುವ ಮಾಹಿತಿಗಳ ಪ್ರಕಾರ ಪ್ರಮುಖ ಮೂರು ಪಕ್ಷಗಳ ಪ್ರಭಾವಿ ರಾಜಕಾರಣಿಗಳಿರುವುದು ವಿಶೇಷವಾಗಿದೆ. ಅದರಲ್ಲೂ ಕೆರೆ ಒತ್ತುವರಿ ತೆರವುಗೊಳಿಸಿ ಎಂದು ಬೊಬ್ಬೆ ಹೊಡೆಯುತ್ತಿರುವ …

Read More »

ಮತ್ತೆ ಪಿಎಸ್‌ಐ ಪರೀಕ್ಷಾ ಅಕ್ರಮದ ಸದ್ದು; ಬ್ಲೂಟೂತ್ ನಲ್ಲಿ ಉತ್ತರ ಹೇಳಿದ್ದಾತನ ಬಂಧನ

ಕಲಬುರಗಿ: ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಸಹಚರ, ಹಾಸ್ಟೆಲ್ ವಾರ್ಡನ್ ರಾವುತಪ್ಪ‌ ಬಸವಂತ್ರಾಯ ವಾಲೀಕಾರ (35) ಎಂಬಾತನನ್ನು ಗುರುವಾರ ಬಂಧಿಸಿದೆ.   ನಗರದ ಜ್ಞಾನಜ್ಯೋತಿ ಇಂಗ್ಲಿಷ್ ‌ಮಾಧ್ಯಮ ಶಾಲೆಯ ಪಿಎಸ್‌ಐ ‌ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ರಾವುತಪ್ಪ ಬ್ಲೂಟೂತ್ ಬಳಸಿ ಉತ್ತರ ಹೇಳುವ ಮೂಲಕ ಅಭ್ಯರ್ಥಿಗಳು ಪಾಸ್ ಆಗಲು ಸಹಕರಿಸಿದ್ದ. ಜೊತೆಗೆ ಆರ್.ಡಿ. ಪಾಟೀಲಗೆ ಗಿರಾಕಿಗಳನ್ನು ಹುಡುಕಿ …

Read More »