Breaking News

ರಾಜ್ಯ

ಯುವ ದಸರಾದಲ್ಲಿ ಅಪ್ಪು ನಮನ.. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ರಾಜರತ್ನನ ಪತ್ನಿ ಅಶ್ವಿನಿ

ಮೈಸೂರು: ಮೈಸೂರು ದಸರಾ 2022 ಹಿನ್ನೆಲೆ ನಾಳೆಯಿಂದ ನಡೆಯಲಿರುವ ಯುವ ದಸರಾ ಅಂಗವಾಗಿ ನಾಳೆ ಅಪ್ಪು ನಮನ ಕಾರ್ಯಕ್ರಮ ಅನ್ನು ದಿವಂಗತ ಪುನೀತ್ ರಾಜ್​ಕುಮಾರ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​​​ಕುಮಾರ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು. ಇಂದು ಯುವ ದಸರಾ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಸಚಿವರು, ಸೆ.28ಕ್ಕೆ (ನಾಳೆ) “ಅಪ್ಪು ನಮನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದಸರಾಗೆ ಸಾಕಷ್ಟು …

Read More »

ಬಿಜೆಪಿಗೆ 2024ರವರೆಗೂ ಜೆ.ಪಿ.ನಡ್ಡಾ ಅಧ್ಯಕ್ಷ?

ನವದೆಹಲಿ: 2020ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಜೆ.ಪಿ.ನಡ್ಡಾ ಅವರು ಇನ್ನೂ 2 ವರ್ಷಗಳ ಕಾಲ ಅದೇ ಹುದ್ದೆಯಲ್ಲಿ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ. ನಿಗದಿಯಂತೆ 2023ರ ಜ.20ರಂದು ನಡ್ಡಾ ಅವರ 3 ವರ್ಷಗಳ ಅಧಿಕಾರಾವಧಿ ಪೂರ್ಣಗೊಳ್ಳಲಿದೆ. ಆದರೆ, ಮುಂದಿನ ಲೋಕಸಭೆ ಚುನಾವಣೆಗೆ ಇನ್ನು ಎರಡೇ ವರ್ಷಗಳು ಬಾಕಿ ಇವೆ. ಅಲ್ಲದೇ, ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳೂ ನಡೆಯಲಿವೆ. ಹೀಗಾಗಿ, ನಡ್ಡಾ ಅವರ ಅಧಿಕಾರಾವಧಿಯನ್ನು 2024ರ ಲೋಕಸಭೆ ಚುನಾವಣೆಯವರೆಗೆ ವಿಸ್ತರಿಸಲು ಬಿಜೆಪಿ …

Read More »

ವಿಜಯಪುರ ಪಿಎಫ್‌ಐ ಜಿಲ್ಲಾಧ್ಯಕ್ಷ ಅಶ್ಫಾಕ್ ಪೊಲೀಶ ವಶಕ್ಕೆ

ವಿಜಯಪುರ: ವಿಜಯಪುರ ಪಿಎಫ್‌ಐ ಸಂಘಟನೆ ಜಿಲ್ಲಾಧ್ಯಕ್ಷ ಅಶ್ಫಾಕ್ ಜಮಖಂಡಿ ಎಂಬವನನ್ನು ಪೊಲೀಸರು ಮಂಗಳವಾರ ಬೆಳಂಬೆಳಿಗ್ಗೆ ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ. ನಗರದ ಜಾಮಿಯಾ ಮಜೀದ್ ರಸ್ತೆಯಲ್ಲಿರೋ ಅಶ್ಪಾಕ್ ಜಮಖಂಡಿ ಮನೆಯಲ್ಲಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.   ಪಿಎಫ್‌ಐ ಸಂಘಟನೆ ಹೋರಾಟ, ಹಣಕಾಸಿನ ವ್ಯವಹಾರ ಸೇರಿದಂತೆ ಇತರೆ ವಿಷಯಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು, ಸ್ಥಳೀಯ ವಿಚಾರಣೆ ಬಳಿಕ, ಅಗತ್ಯ ಎನಿಸಿದರೆ ಅಶ್ಫಾಕ್ ನನ್ನು ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ …

Read More »

ಕಳೆದ ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಜಾಮೀನು

ಕಲಬುರಗಿ: ಇದೇ ಮೊದಲ ಬಾರಿಗೆ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ರಾಜೇಶ ಹಾಗರಗಿಗೆ ಜಾಮೀನು ಮಂಜೂರಾಗಿದೆ. ಕಲಬುರಗಿ ಹೈ ಕೋರ್ಟ್ ನಿಂದ ರಾಜೇಶ್ ಹಾಗರಗಿಗೆ ಜಾಮೀನು ಮಂಜೂರಾಗಿದೆ. ರಾಜೇಶ್ ಹಾಗರಗಿ ಅವರು ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯ ಪತಿ ಮತ್ತು ಜ್ಞಾನ ಜ್ಯೋತಿ ಆಂಗ್ಲ ಮಾಧ್ಯಮ ಅಧ್ಯಕ್ಷರಾಗಿದ್ದಾರೆ.   ಕಳೆದ ಐದೂವರೆ ತಿಂಗಳಿನಿಂದ ಜೈಲಿನಲ್ಲಿದ್ದ ರಾಜೇಶ್ ಹಾಗರಗಿಗೆ ಜಾಮೀನು ದೊರೆತಿದೆ.

Read More »

ತನ್ನ ಸ್ವಂತ ಕ್ಷೇತ್ರದ ಕಾರ್ಯಕ್ರಮದಲ್ಲೇ ಜಾಗ ಸಿಗದೆ ಅನಾಥರಾದ ಶೆಟ್ಟರ್ ಅವರ ಸ್ಥಿತಿ ಯಾರಿಗೂ ಬರಬಾರದು: ಕಾಂಗ್ರೆಸ್

ಬೆಂಗಳೂರು : ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಹೆಸರು ಕೈಬಿಟ್ಟಿದ್ದರು ಎನ್ನಲಾದ ವಿಚಾರ ಮತ್ತು ಬಿಡಿಎ ಭ್ರಷ್ಟಾಚಾರ ಪ್ರಕರಣದಲ್ಲಿ ಯಡಿಯೂರಪ್ಪ ಮತ್ತಿತರರ ವಿರುದ್ಧದ ಎಫ್‌ಐಆರ್ ಕುರಿತಂತೆ ವಿಜಯೇಂದ್ರ ಹೇಳಿಕೆ ವಿಚಾರವನ್ನು ಪ್ರಸ್ತಾಪಿಸಿರುವ ರಾಜ್ಯ ಕಾಂಗ್ರೆಸ್, ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ತುಳಿಯುವ ಯತ್ನ ನಡೆದಿದೆ ಎಂದು ಆರೋಪಿಸಿ ಸರಣಿ ಟ್ವೀಟ್ ಮಾಡಿದೆ. ಸಿಎಂ ಹುದ್ದೆಯೂ ಕೊಡಲಿಲ್ಲ, ಸಚಿವ ಸ್ಥಾನವೂ ಸಿಗಲಿಲ್ಲ. ಈಗ ರಾಷ್ಟ್ರಪತಿ ಕಾರ್ಯಕ್ರಮದಲ್ಲೂ ಹೆಸರಿಲ್ಲ. ಬಿಎಸ್‌ವೈ ನಂತರ ಮತ್ತೊಬ್ಬ ಲಿಂಗಾಯತ ನಾಯಕನನ್ನು …

Read More »

ಗುಂಪು ಘರ್ಷಣೆ; ಬಾಲಕನಿಗೆ ಚೂರಿ ಇರಿತ

ಬೆಳಗಾವಿ: ಇಲ್ಲಿನ ಅನಂತಶಯನ ಗಲ್ಲಿಯಲ್ಲಿ ಸೋಮವಾರ ರಾತ್ರಿ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಚೂರಿ ಇರಿತದಿಂದ ಒಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಕ್ಯಾಂಪ್‌ ಪ್ರದೇಶದ ನಿವಾಸಿ ಫರಾನ್‌ ಧಾರವಾಡಕರ (15) ಚೂರಿ ಇರಿತಕ್ಕೆ ಒಳಗಾದವ. ಈತ ಇಸ್ಲಾಮಿಯಾ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದಾನೆ. ‌ಗಾಯಗೊಂಡ ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಫರಾನ್‌ ಹಾಗೂ ಇಬ್ಬರು ಸ್ನೇಹಿತರು ಬೈಕ್‌ ಮೇಲೆ ಹೊರಟಿದ್ದರು. ನಗರದ ಅಂಬಾ ಭವಾನಿ ಮಂದಿರದ ಹತ್ತಿರ 10 ಯುವಕರ …

Read More »

ಇಂದಿನಿಂದ ತಿರುಪತಿಯಲ್ಲಿ ಬ್ರಹ್ಮೋತ್ಸವ ಶುರು

ತಿರುಪತಿ:ದೇಶಾದ್ಯಂತ ಸಂಭ್ರಮದ ನವರಾತ್ರಿ ಹಬ್ಬ ಕಳೆಕಟ್ಟುತ್ತಿರುವಂತೆಯೇ ಜಗತ್ತಿನ ಶ್ರೀಮಂತ ತಿರುಪತಿ ವೆಂಕಟೇಶ್ವರ ದೇಗುಲದಲ್ಲಿ ಮಂಗಳವಾರದಿಂದ 9 ದಿನಗಳ ಕಾಲ ಬ್ರಹ್ಮೋತ್ಸವ ನಡೆಯಲಿದೆ. ಸಂಪ್ರದಾಯ ಪ್ರಕಾರ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಅವರು ಹೊಸ ವಸ್ತ್ರಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.   ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ 2 ವರ್ಷಗಳಿಂದ ಬ್ರಹ್ಮೋತ್ಸವ ಅದ್ಧೂರಿಯಾಗಿ ಆಚರಿಸಲು ಅವಕಾಶ ಸಿಗಲಿಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಅದ್ಧೂರಿಯಾಗಿ ಬ್ರಹ್ಮೋತ್ಸವ ಆಚರಿಸಲಾಗುತ್ತದೆ. ಹೀಗಾಗಿ, ದೇಶದ …

Read More »

ಐಐಐಟಿ ಧಾರವಾಡ ಘಟಕ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಧಾರವಾಡ: ಇಲ್ಲಿನ ತಡಸಿನಕೊಪ್ಪದಲ್ಲಿ ನಿರ್ಮಾಣಗೊಂಡಿರುವ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (ಐಐಐಟಿ) ಯನ್ನು ಹಾಗೂ ನೂತನ‌ ಕ್ಯಾಂಪಸನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದರು. ಸಂಸ್ಥೆಯ ಅಧ್ಯಕ್ಷೆ ಹಾಗೂ ಇನ್ಪೊಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಸುಧಾ ಮೂರ್ತಿ ರಾಷ್ಟಪತಿ ಅವರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಇದ್ದರು. ರಾಷ್ಟ್ರಪತಿ ಅವರಿಗೆ ಐಐಐಟಿ …

Read More »

ಕೇವಲ 10 ಸೆಕೆಂಡ್ ನಲ್ಲಿ ನಿಮ್ಮನ್ನು ಮುಗಿಸ್ತೀವಿ; RSS ಪ್ರಮುಖರಿಗೆ SDPI ಮುಖಂಡನ ಧಮ್ಕಿ

ತಿರುವನಂತಪುರಂ: ಪಿಎಫ್‌ಐ ಹಾಗೂ ಎಸ್ ಡಿ ಪಿ ಐ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ಎನ್‌ಐಎ ದಾಳಿ ನಡೆಸಿ ಹಲವರನ್ನು ಬಂಧಿಸಿರುವ ಬೆನ್ನಲ್ಲೇ ಕೇರಳದಲ್ಲಿ ಎಸ್ ಡಿ ಪಿ ಐ ಹಾಗೂ ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಅಲ್ಲದೇ ಆರ್ ಎಸ್ ಎಸ್ ಮುಖಂಡರಿಗೆ ಬೆದರಿಕೆ ಹಾಕಿದ್ದಾರೆ. ಎನ್ ಐಎ ದಾಳಿ ಖಂಡಿಸಿ ಎರ್ನಾಕುಲಂನಲ್ಲಿ ಪ್ರತಿಭಟನೆ ನಡೆಸಿರುವ ಎಸ್ ಡಿ ಪಿ ಐ ಸಂಘಟನೆ, ಕೇಂದ್ರ ಸರ್ಕಾರ ಹಾಗೂ …

Read More »

ಒಂಬತ್ತು ತಿಂಗಳ ಹಿಂದೆ ಬಿದ್ದು ಹೋಗಿದೆ. ಆದರೆ ಇಲ್ಲಿಯ ತನಕ ಅವರಿಗೆ ಯಾವುದೇ ಪರಿಹಾರ ನೀಡಿಲ್ಲ. ಹಾಗಾಗಿಆತ್ಮಹತ್ಯೆ ಬೆದರಿಕೆ ಹಾಕಿದ ನೆರೆ ಸಂತ್ರಸ್ತ

ಬೆಳಗಾವಿ: ಅತಿವೃಷ್ಟಿಯಿಂದ ಮನೆ ಬಿದ್ದು 9 ತಿಂಗಳು‌ ಕಳೆದರೂ, ಪರಿಹಾರ ನೀಡದ ಹಿನ್ನೆಲೆ ಮನೆ ನಿರ್ಮಿಸಿ ಕೊಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಸದ್ಯ ನೆರೆ ಸಂತ್ರಸ್ತ ವ್ಯಕ್ತಿಯ ಈ ವಿಡಿಯೋ ವೈರಲ್​ ಆಗುತ್ತಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಈರಪ್ಪ ನಾಡಗೌಡ್ರ ಎಂಬುವರು ಮೊಬೈಲ್ ಸೆಲ್ಫಿ ವಿಡಿಯೋ ಮಾಡಿದ್ದಾರೆ. ಅಲ್ಲದೇ ಶಾಸಕಿ ಅಂಜಲಿ‌‌‌ ನಿಂಬಾಳ್ಕರ್ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ …

Read More »