Breaking News

ರಾಜ್ಯ

ಪ್ರಶ್ನೆಪತ್ರಿಕೆ ಸೋರಿಕೆ ಮಾಡದೇ ಒಎಂಆರ್ ಶೀಟ್ ತಿದ್ದಲು ಸಂಚು!; ಪಿಎಸ್​​ಐ ನೇಮಕಾತಿ ಅಕ್ರಮ ಪ್ರಕರಣ

ಬೆಂಗಳೂರು :ಪೊಲೀಸ್ ಸಬ್​ಇನ್​ಸ್ಪೆಕ್ಟರ್ 545 ಹುದ್ದೆಗಳ ನೇಮಕಾತಿ ವೇಳೆ ಕೇಂದ್ರ ಸ್ಥಾನದಿಂದಲೇ ಪ್ರಶ್ನೆಪತ್ರಿಕೆ ಲೀಕ್ ಮಾಡಲು ಪ್ಲಾಯನ್ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಭಯದಿಂದ ಪ್ಲಾಯನ್-ಬಿ ಒಎಂಆರ್ ಶೀಟ್ ತಿದ್ದುವುದನ್ನು ಫೈನಲ್ ಮಾಡಲಾಗಿತ್ತು.   ಪೊಲೀಸ್ ನೇಮಕಾತಿ ವಿಭಾಗದ ಹಿಂದಿನ ಎಡಿಜಿಪಿ ಅಮೃತ್ ಪೌಲ್ ಮತ್ತು ಡಿವೈಎಸ್​ಪಿ ಶಾಂತಕುಮಾರ್ ನಡುವೆಯೇ ಪ್ಲ್ಯಾನ್​-ಎ ಮತ್ತು ಬಿ ಬಗ್ಗೆ ರಹಸ್ಯ ಚರ್ಚೆ ನಡೆದಿತ್ತು. ಆನಂತರ ಉಳಿದವರನ್ನು ಅವರ ಕೆಲಸಕ್ಕೆ ತಕ್ಕಂತೆ ಕಮಿಷನ್ …

Read More »

2024ರ ಲೋಕಸಭಾ ಚುನಾವಣೆ: ನರೇಂದ್ರ ಮೋದಿ Vs ಯಾರು?

2024ರ ಲೋಕಸಭಾ ಚುನಾವಣೆಗೆ 2 ವರ್ಷಗಳಷ್ಟೇ ಬಾಕಿ ಇದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಸ್ಪರ್ಧಿ ಯಾರಾಗಲಿದ್ದಾರೆ ಎಂಬ ಪ್ರಶ್ನೆ ಹಾಗೆಯೇ ಉಳಿದಿದೆ. ಬಿಹಾರದಲ್ಲಿ ಎನ್‌ಡಿಎ ಮೈತ್ರಿ ಕಡಿದುಕೊಂಡ ಬಳಿಕ ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಹೆಸರೇ ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ. ಇದನ್ನು ಆರ್‌ಜೆಡಿಯ ತೇಜಸ್ವಿ ಯಾದವ್‌ ಈಚೆಗೆ ಅನುಮೋದಿಸಿದ್ದರು. ಇನ್ನು, ದೆಹಲಿ ಸಿಎಂ ಕೇಜ್ರಿವಾಲ್‌ ಮುಂದಿನ ಪಿಎಂಬ ಅಭ್ಯರ್ಥಿ ಎಂದು ಅಲ್ಲಿನ ಉಪಮುಖ್ಯಮಂತ್ರಿ ಸಿಸೊಡಿಯಾ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. …

Read More »

ಹೆಚ್ಚು ಸಾಲ’ದಲ್ಲಿ ಅದಾನಿ ಸಮೂಹ: ಕ್ರೆಡಿಟ್‌ಸೈಟ್ಸ್‌ ಎಚ್ಚರಿಕೆ

ನವದೆಹಲಿ: ದೇಶದ ಅತ್ಯಂತ ಶ್ರೀಮಂತ, ಉದ್ಯಮಿ ಗೌತಮ್ ಅದಾನಿ ಅವರ ಅದಾನಿ ಸಮೂಹವು ‘ಹೆಚ್ಚು ಸಾಲದಲ್ಲಿದೆ’ ಎಂದು ಫಿಚ್ ಸಮೂಹದ ಅಂಗಸಂಸ್ಥೆ ಕ್ರೆಡಿಟ್‌ಸೈಟ್ಸ್‌ ವರದಿ ಹೇಳಿದೆ. ಸಮೂಹವು ಹಾಲಿ ಹಾಗೂ ಹೊಸ ವಹಿವಾಟುಗಳಿಗೆ ಹೂಡಿಕೆ ಮಾಡಲು ಸಾಲವನ್ನು ಮುಖ್ಯವಾಗಿ ಬಳಸುತ್ತಿದೆ ಎಂದು ಕೂಡ ವರದಿಯಲ್ಲಿ ಹೇಳಲಾಗಿದೆ.   ‘ಹೆಚ್ಚು ಮಹತ್ವಾಕಾಂಕ್ಷೆಯ, ಸಾಲದ ಹಣದಲ್ಲಿ ನಡೆಯುವ ಬೆಳವಣಿಗೆ ಯೋಜನೆಗಳು ಕಾಲಕ್ರಮೇಣ ಭಾರಿ ಸಾಲದ ಸುಳಿಗೆ ಸಿಲುಕಬಹುದು. ಅತ್ಯಂತ ನಕಾರಾತ್ಮಕ ಸಂದರ್ಭದಲ್ಲಿ ಮಾತ್ರ …

Read More »

ರಾಜ್ಯದ ವಿವಿಧೆಡೆ ಎರಡು ದಿನ ಮಳೆ

ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಬುಧವಾರ ಹಾಗೂ ಗುರುವಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗ ಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಎರಡು ದಿನಗಳು ಭಾರಿ ಮಳೆಯಾ ಗಲಿದೆ. ಕರಾವಳಿ ತೀರದಲ್ಲಿ ಬಿರು ಗಾಳಿಯ …

Read More »

ರಾತ್ರಿ ಇದ್ದಕ್ಕಿದ್ದಂತೆ ಬೆಚ್ಚಿ ಬಿದ್ದಅನಾಮದೇಯ ಪತ್ರ; FIR ದಾಖಲಿಸಿದ ಪೊಲೀಸರು

ಶಿವಮೊಗ್ಗ – ಈಚೆಗಷ್ಟೆ ಕೋಮುಗಲಭೆಯಿಂದ ತತ್ತರಿಸಿರುವ ಶಿವಮೊಗ್ಗ ನಗರ ಮಂಗಳವಾರ ರಾತ್ರಿ ಇದ್ದಕ್ಕಿದ್ದಂತೆ ಬೆಚ್ಚಿ ಬಿದ್ದಿದೆ. ದೇವಸ್ಥಾನವೊಂದರ ಕಟ್ಟೆಯ ಮೇಲೆ ಸಿಕ್ಕಿರುವ ಅನಾಮದೇಯ ಪತ್ರವೊಂದು ಜನರನ್ನು ಮಲಗದಂತೆ ಮಾಡಿದೆ. ಗಣೇಶ ಹಬ್ಬದ ಸಂದರ್ಭದಲ್ಲಿ ಮುವರನ್ನು ಕೊಲೆಗೈಯಲು ಸಂಚು ರೂಪಿಸಲಾಗಿದೆ ಎನ್ನುವ ಆಘಾತಕಾರಿ ಅಂಶವನ್ನು ಹೊತ್ತ ಪತ್ರವೊದು ಪೊಲೀಸರ ಕೈ ಸೇರಿದ್ದು, ಎಫ್ಐಆರ್ ದಾಖಲಾಗಿದೆ.   ಗಾಂಧಿ ಬಜಾರದ ಗಂಗಾ ಪರಮೇಶ್ವರಿ ದೇವಸ್ಥಾನದ ಪಕ್ಕದಲ್ಲಿದ್ದ ಅಂಗಡಿ ಮಾಲೀಕರೊಬ್ಬರು  ಅಂಗಡಿ ಬಂದ್ ಮಾಡುವ ವೇಳೆ  …

Read More »

24 ಗಂಟೆಯಲ್ಲಿಯೇ ಅನುಕಂಪ ಆಧಾರದ ನೌಕರಿ; ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ‌ಪ್ರಥಮ ದರ್ಜೆ ಸಹಾಯಕರೊಬ್ಬರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ್ದರಿಂದ ಅವರ ಅವಲಂಬಿತ ಕಿರಿಯ ಸಹೋದರನಿಗೆ ಕೇವಲ 24 ಗಂಟೆಯಲ್ಲಿ ಅನುಕಂಪ ಆಧಾರಿತ ನೇರ ನೇಮಕಾತಿ ಆದೇಶ ನೀಡುವ ಮೂಲಕ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಳಕಳಿಯನ್ನು ಮೆರೆದಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಸಚಿನ್ ಮಹಾದೇವ ಬಾದುಲೆ ಅವರು ದಿನಾಂಕ ಆಗಸ್ಟ್ 22 ರಂದು ಅನಾರೋಗ್ಯದಿಂದ ನಿಧನ ಹೊಂದಿದ್ದರು. …

Read More »

ಸಂತೋಷ್ ಸಾವಿನ ಪ್ರಕರಣ: ಈಶ್ವರಪ್ಪ ವಿರುದ್ಧ ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಗೆ ತಕರಾರು ಅರ್ಜಿ

ಬೆಂಗಳೂರು, ಆ.23: ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ (K. S. Eshwarappa) ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪ್ರಶ್ನಿಸಿ ಸಂತೋಷ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.   ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ …

Read More »

35 ಸಾವಿರಕ್ಕೂ ಅಧಿಕ ಉರಗಗಳ ರಕ್ಷಣೆ ಮಾಡಿದ್ದ ‘ಸ್ನೇಕ್​ ಲೋಕೇಶ್​’ ಇನ್ನಿಲ್ಲ: ಹಾವಿನಿಂದಲೇ ದಾರುಣ ಅಂತ್ಯ

ಬೆಂಗಳೂರು: ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ 35 ಸಾವಿರಕ್ಕೂ ಅಧಿಕ ಹಾವುಗಳನ್ನು ರಕ್ಷಣೆ ಮಾಡಿ, ಸ್ನೇಕ್​ ಲೋಕೇಶ್​ ಎಂದೇ ಪ್ರಸಿದ್ಧಿ ಪಡೆದಿದ್ದ ನೆಲಮಂಗಲದ ಸ್ನೇಕ್​ ಲೋಕೇಶ್​ ಮೃತಪಟ್ಟಿದ್ದಾರೆ. ಹಾವು ಕಡಿತದಿಂದಲೇ ಅವರು ದಾರುಣ ಅಂತ್ಯ ಕಂಡಿದ್ದಾರೆ! ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಕಳೆದ ಜುಲೈ 17ರಂದು ಸ್ನೇಕ್ ಲೋಕೇಶ್ ಬಲಗೈ ಬೆರಳಿಗೆ ವಿಷಪೂರಿತ ನಾಗರಹಾವು ಕಚ್ಚಿತ್ತು. ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ತುರ್ತು ಚಿಕಿತ್ಸೆ ಕೊಡಿಸಿ …

Read More »

NDTV ಖರೀದಿಸಿದ ಗೌತಮ್ ಅದಾನಿ

ನವದೆಹಲಿ, ಆಗಸ್ಟ್ 23: ನ್ಯೂ ಡೆಲ್ಲಿ ಟೆಲಿವಿಷನ್(NDTV) ಮಾಧ್ಯಮ ಸಂಸ್ಥೆಯಲ್ಲಿ ಹೂಡಿಕೆ ಮಾಡುವ ಮೂಲಕ ಮಾಧ್ಯಮ ಕ್ಷೇತ್ರಕ್ಕೆ ಉದ್ಯಮಿ ಗೌತಮ್ ಅದಾನಿ ಎಂಟ್ರಿ ಕೊಟ್ಟಿದ್ದಾರೆ. ಸರಿ ಸುಮಾರು 29.18 ರಷ್ಟು ಪಾಲನ್ನು ಅದಾನಿ ಎಂಟರ್ ಪ್ರೈಸಸ್ ಖರೀದಿಸಿದ್ದು, ಈ ಮೂಲಕ NDTV ಅದಾನಿ ಸಂಸ್ಥೆ ಪಾಲಾಗಿದೆ ಎನ್ನಬಹುದು.   ಅದಾನಿ ಎಂಟರ್‌ಪ್ರೈಸಸ್ ಮಂಗಳವಾರ ತನ್ನ ಮಾಧ್ಯಮ ಘಟಕವು ನವದೆಹಲಿ ಟೆಲಿವಿಷನ್ ಲಿಮಿಟೆಡ್‌ನಲ್ಲಿ ಪರೋಕ್ಷವಾಗಿ ಶೇಕಡಾ 29.18 ಪಾಲನ್ನು ಖರೀದಿಸಲಿದೆ ಮತ್ತು …

Read More »

ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.   ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 …

Read More »