ನಿವೃತ್ತ ಸರ್ಕಾರಿ ನೌಕರರೋರ್ವರ ಬಳಿಯಿದ್ದ ೪ ಲಕ್ಷ ರೂಪಾಯಿಯನ್ನು ದೋಚಿ ಅವರನ್ನು ಅಪಹರಿಸಿ ಮತ್ತೆ ೨೦ ಲಕ್ಷ ಬೇಡಿಕೆಯಿಟ್ಟಿದ್ದ ಐವರನ್ನು ಬೆಳಗಾವಿ ಹಿರೇಬಾಗೇವಾಡಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಇದೇ ಆಗಸ್ಟ್ ೨೧ ರಂದು ಬೆಳಗಾವಿಯ ಮುತ್ನಾಳ ಗ್ರಾಮದ ರಾಷ್ಟಿçÃಯ ಹೆದ್ದಾರಿ ೦೪ ರಲ್ಲಿ ಸಂಚರಿಸುತ್ತಿದ್ದ ಅರಣ್ಯ ಇಲಾಖೆಯ ನಿವೃತ್ತ ಅಧೀಕ್ಷಕಯೋರ್ವರನ್ನು ಅಡ್ಡಗಟ್ಟಿ ಅವರ ಬಳಿಯಿದ್ದ ೪ ಲಕ್ಷ ರೂಪಾಯಿಯನ್ನು ದೋಚಲಾಗಿತ್ತು. ಅಲ್ಲದೇ ಅವರನ್ನು ಅಪಹರಿಸಿ ಇನ್ನು ೨೦ ಲಕ್ಷ ರೂಪಾಯಿಯ …
Read More »ಬಿಎಸ್ವೈ ಬೆಂಗಾವಲು ವಾಹನಗಳ ಹಿಂದೆ ಬರ್ತಿದ್ದ ಕಾರುಗಳ ಮಧ್ಯೆ ಭೀಕರ ಅಪಘಾತ
ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಾವಲು ವಾಹನಗಳ ಹಿಂದೆ ಬರುತ್ತಿದ್ದ ಕಾರುಗಳು ಅಪಘಾತಕ್ಕೆ ಒಳಗಾಗಿರುವ ಘಟನೆ ಕೊಲಂಬಿಯಾ ಏಷ್ಯಾ ವೃತ್ತದ ಬಳಿ ನಡೆದಿದೆ. ಯಡಿಯೂರಪ್ಪ ಮೈಸೂರಿಗೆ ಆಗಮಿಸಿದ್ದ ವೇಳೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಿಎಸ್ವೈ ಹಿಂದೆ ಸಾಗುವ ಬರದಲ್ಲಿ KSIIDC ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಸಂದೇಶ್ ಇರುವ ಕಾರುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅಪಘಾತದ ಬಳಿಕ ಬಿಜೆಪಿ ಮುಂಖಂಡ ಹಾಗೂ KSIIDC ನಿರ್ದೇಶಕ ಮಹದೇವಸ್ವಾಮಿ ಮಧ್ಯೆ ವಾಗ್ವಾದ ನಡೆದಿದೆ.
Read More »ಭ್ರಷ್ಟರ ವಿರುದ್ಧ ಸಮರಕ್ಕೆ ಲೋಕಾಯುಕ್ತ ಅಣಿ
ಬೆಂಗಳೂರು : ಸರ್ಕಾರದಲ್ಲಿನ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಧಿಕಾರ ದುರ್ಬಳಕೆ ವಿರುದ್ಧ ‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ’ಯ ಅಸ್ತ್ರ ಝಳಪಿಸಲು ಲೋಕಾಯುಕ್ತ ಮತ್ತೆ ಸಜ್ಜಾಗಿದೆ. ದೂರು ಬಂದರೆ ತಕ್ಷಣದಲ್ಲೇ ಪ್ರಕರಣ ದಾಖಲಿಸಲು ಲೋಕಾ ಯುಕ್ತ ಪೊಲೀಸ್ ಘಟಕವು ಸನ್ನದ್ಧವಾಗಿದೆ. ಹೈಕೋರ್ಟ್ ತೀರ್ಪಿನ ಕುರಿತು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ, ಸಂಸ್ಥೆಯ ಪೊಲೀಸ್ ಘಟಕ ಹಾಗೂ ನ್ಯಾಯಾಂಗ ವಿಭಾಗದ ಅಧಿಕಾರಿಗಳ ಜತೆಗೂ ಸರಣಿ ಸಭೆಗಳನ್ನು ನಡೆಸಿದ್ದಾರೆ. ಭ್ರಷ್ಟಾಚಾರ, ಅಧಿಕಾರ …
Read More »ಮೀಸಲಾತಿ ಘೋಷಿಸದಿದ್ದರೆ ಸಿಎಂ ಮನೆ ಮುಂದೆ ಧರಣಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ
ಶಿವಮೊಗ: ಸರ್ಕಾರ ಕೊಟ್ಟ ಮಾತಿನಂತೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಿಸದಿದ್ದರೆ ಆ. 23ರ ಬೆಳಿಗ್ಗೆ 10ಕ್ಕೆ ಶಿಗ್ಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಿ ಬಳಿಕ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ‘ಲಿಂಗಾಯತ ಪಂಚಮಸಾಲಿ, ಮಲೆಗೌಡ ಲಿಂಗಾಯತ ಸಮಾಜವನ್ನು ಪ್ರವರ್ಗ ‘2ಎ’ ಮೀಸಲಾತಿಗೆ ಸೇರಿಸಲು ರಾಜ್ಯ ಸರ್ಕಾರಕ್ಕೆ ನೀಡಿದ್ದ ಗಡುವು ಸೋಮವಾರ ಮುಕ್ತಾಯ ವಾಗಲಿದೆ. ಮೀಸಲಾತಿ …
Read More »ಬಿಜೆಪಿ ಭ್ರಷ್ಟೋತ್ಸವ ಜಾತ್ರೆಯಲ್ಲಿ ನೂರಾರು ಹಗರಣಗಳ ಮೆರವಣಿಗೆ: ಕಾಂಗ್ರೆಸ್ ಲೇವಡಿ
ಬೆಂಗಳೂರು: ಸಚಿವ ಸಂಪುಟಕ್ಕೆ ಮಾತ್ರವಲ್ಲ ಇಡೀ ಸರ್ಕಾರಕ್ಕೆ ಸೂಕ್ತ ಸರ್ಜರಿ ನಡೆಯಬೇಕಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಗೆ ಜನಪರ ಆಡಳಿತ ನೀಡುವುದಕ್ಕಿಂತ ಚುನಾವಣೆ ದೃಷ್ಟಿಕೋನವೇ ಮುಖ್ಯ. ಸಂಪುಟಕ್ಕೆ ಮಾತ್ರವಲ್ಲ, ಐಸಿಯುನಲ್ಲಿರುವ ಇಡೀ ಸರ್ಕಾರಕ್ಕೇ ಸರ್ಜರಿ ಮಾಡಬೇಕಿದೆ. ಯಾವ ಸರ್ಜರಿ ಮಾಡಿದರೂ, ಎಷ್ಟೇ ಡಿಸಿಎಂ ಹುದ್ದೆ ಸೃಷ್ಟಿಸಿದರೂ ತಳ್ಳಿಕೊಂಡು ಹೋಗುತ್ತಿರುವ ಸರ್ಕಾರದ ಇಂಜಿನ್ ಸ್ಟಾರ್ಟ್ ಮಾಡಲಾಗದು. ಮ್ಯಾನೇಜ್ಮೆಂಟ್ ಸರ್ಕಾರ ಟೇಕಾಫ್ ಆಗಲಾರದು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ಶೇ. 40ರಷ್ಟು …
Read More »ಬಸ್, ಕ್ರೂಜರ್ ನಡುವೆ ಮುಖಾಮುಖಿ ಡಿಕ್ಕಿ: ಹುಬ್ಬಳ್ಳಿಗೆ ಮೃತದೇಹ ತರಲು ಹೋದ ಮೂವರ ದಾರುಣ ಸಾವು
ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಕ್ರೂಜರ್ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ. ಮೃತರೆಲ್ಲರೂ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದರು. ಆಸ್ಪತ್ರೆಯಲ್ಲಿ ಕ್ರೂಜರ್ ಚಾಲಕ ಮಾರುತಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿಯೇ ಮೃತಪಟ್ಟವರನ್ನು ಶಿವನಗೌಡ ಮತ್ತು ಅಮೃತ …
Read More »ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಸಂಪತ್‌ಗೆ ಅಭಿನಂದನೆ ಸಲ್ಲಿಸುತ್ತೇನೆ: ಯತ್ನಾಳ್
ವಿಜಯಪುರ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೂ ಧರ್ಮದ ಅಪಮಾನ ಮಾಡಿರುವುದಕ್ಕೆ ಆತನಿಗೆ ನೋವಾಗಿದೆ’ ಎಂದು ವಿಜಯಪುರ ನಗರ ಮತ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( Basangouda Patil Yatnal) ಹೇಳಿದ್ದಾರೆ. ನಗರದಲ್ಲಿ ಬಿಡಿಎ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ (Siddaramaiah) ಅವರ ಕಾರಿಗೆ ಮೊಟ್ಟೆ ಎಸೆದ …
Read More »ವೋಟರ್ ಐಡಿಗೆ ಆಧಾರ್ ನಂಬರ್ ಲಿಂಕ್ ಕಡ್ಡಾಯವಲ್ಲ: ಚುನಾವಣಾ ಆಯೋಗ
ಮತದಾರರು ವೋಟರ್ ಐಡಿಗೆ ಆಧಾರ್ ನಂಬರ್ ಲಿಂಕ್ ಮಾಡಿಸುವುದು ಕಡ್ಡಾಯವಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಚುನಾವಣೆ ಆಯೋಗವುಮತದಾರರ ಪಟ್ಟಿಯ ದತ್ತಾಂಶದೊಂದಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯವಲ್ಲ. ಮತದಾರರು ಸ್ವಯಂ ಪ್ರೇರಿತರಾಗಿ ಆಧಾರ್ ಅಥವಾ ಇತರೆ ನಿಗದಿತ ದಾಖಲೆಗಳ ಮೂಲಕವೂ ದೃಢೀಕರಿಸಿ ಜೋಡಣೆ ಮಾಡಬಹುದಾಗಿದೆ ಎಂದು ತಿಳಿಸಿದೆ. ಮಾಧ್ಯಮಗಳಲ್ಲಿ ವರದಿಯಾದ ವರದಿಗಳನ್ನು ಉಲ್ಲೇಖಿಸಿ, ಫಾರ್ಮ್ -6 ಬಿ ಯಲ್ಲಿ ಆಧಾರ್ ಸಲ್ಲಿಸುವುದು …
Read More »ದೇವರುಗಳು ಮೇಲ್ಜಾತಿಯವರಲ್ಲ, ಶಿವನೂ ಪರಿಶಿಷ್ಟನೇ: ಜೆಎನ್‌ಯು ಕುಲಪತಿ ಶಾಂತಿಶ್ರೀ
ನವದೆಹಲಿ: ಮಾನವಶಾಸ್ತ್ರದ ಪ್ರಕಾರ ದೇವರುಗಳು ಮೇಲ್ಜಾತಿಗೆ ಸೇರಿದವರಲ್ಲ. ಶಿವನೂ ಕೂಡ ಪರಿಶಿಷ್ಟ ಜಾತಿ ಅಥವಾ ಬುಡಕಟ್ಟಿನವನಾಗಿರಬಹುದು ಎಂದು ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು)ನ ಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಸೋಮವಾರ ಅಭಿಪ್ರಾಯಪಟ್ಟಿದ್ದಾರೆ. ಡಾ. ಬಿ ಆರ್ ಅಂಬೇಡ್ಕರ್ ಉಪನ್ಯಾಸ ಸರಣಿಯ ಅಂಗವಾಗಿ ಆಯೋಜಿಸಿದ್ದ ‘ಲಿಂಗ ನ್ಯಾಯದ ಕುರಿತು ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆಗಳು: ಏಕರೂಪ ನಾಗರಿಕ ಸಂಹಿತೆಯ ವಿಶ್ಲೇಷಣೆ’ ಎಂಬ ವಿಷಯದ ಕುರಿತು ಅವರು …
Read More »22 ಶಾಲೆಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ
ಬೆಳಗಾವಿ – ಚಿರತೆ ಆತಂಕದ ಹಿನ್ನೆಲೆಯಲ್ಲಿ ಬೆಳಗಾವಿಯ 22 ಶಾಲೆಗಳು ಕಳೆದ ಹಲವು ದಿನಗಳಿಂದ ಶೈಕ್ಷಿಣಿಕವಾಗಿ ತೀವ್ರ ಗೊಂದಲದಲ್ಲಿವೆ. ರಜೆ ಕೊಡದಿದ್ದರೆ ಚಿರತೆ ದಾಳಿಯಿಂದ ಮಕ್ಕಳಿಗೆ ತೊಂದರೆಯಾದರೆ ಎನ್ನುವ ಆತಂಕ, ರಜೆ ಕೊಟ್ಟರೆ ಪಾಠವಿಲ್ಲದೆ ಮಕ್ಕಳ ಭವಿಷ್ಯದ ಚಿಂತೆ. ಆರಂಭದಲ್ಲಿ ಒಂದು ವಾರ ರಜೆ ನೀಡಿದ್ದ ಶಿಕ್ಷಣ ಇಲಾಖೆ ನಂತರ ಎಲ್ಲ ಮುನ್ನೆಚ್ಚರಿಕೆ ವಹಿಸಿಕೊಂಡು ಶಾಲೆಗಳನ್ನು ನಡೆಸುವಂತೆ ಸೂಚನೆ ನೀಡಿತ್ತು. ಆದರೆ ಸೋಮವಾರ ಮತ್ತೆ ಚಿರತೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ. ಹಾಗಾಗಿ …
Read More »
Laxmi News 24×7