ಅಧಿಕ ವಿದ್ಯುತ್ ಬಿಲ್ ಜನತೆಗೆ ತಲೆನೋವಿನಂತಾಗಿದೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಮನೆಯ ವಿದ್ಯುತ್ ಬಿಲ್ ಕಡಿಮೆ ಬರಬೇಕೆಂದು ಬಯಸುತ್ತಾನೆ. ಆದರೆ ಮನೆಯಲ್ಲಿ ಹಲವಾರು ಸಾಧನಗಳ ನಿರಂತರ ಬಳಕೆಯಿಂದಾಗಿ ಇದು ಸಾಧ್ಯವಾಗುತ್ತಿಲ್ಲ. ಆದಾಗ್ಯೂ, ಕೆಲವು ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ, ವಿದ್ಯುತ್ ಬಿಲ್ ಅನ್ನು ನೀವು ಕಡಿತಗೊಳಿಸಬಹುದು. ನೀವು ಸಹ ವಿದ್ಯುತ್ ಬಿಲ್ನಿಂದ ತೊಂದರೆಗೀಡಾಗಿದ್ದರೆ ಮತ್ತು ಮನೆಯ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡಲು ಬಯಸಿದರೆ, ನಿಮ್ಮ ಮನೆಯಲ್ಲಿ ಹೆಚ್ಚು ವಿದ್ಯುತ್ ಬಳಸುವ …
Read More »ಎಸಿಬಿ ವಿಚಾರಣೆಗೆ ಹಾಜರಾದ ಜಮೀರ್ ಅಹಮದ್
ಬೆಂಗಳೂರು: ಶಾಸಕ ಜಮೀರ್ ಅಹಮದ್ ಖಾನ್ ಎಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. 10 ದಿನದ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಭ್ರಷ್ಟಾಚಾರ ನಿಗ್ರಹ ದಳ ಇಲಾಖೆ ನೋಟಿಸ್ ನೀಡಿದ್ದ, ಹಿನ್ನೆಲೆಯಲ್ಲಿ ತನಿಖಾಧಿಕಾರಿ ಎಸಿಬಿ ಡಿವೈಎಸ್ಪಿ ರವಿಶಂಕರ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ಜುಲೈ 5 ರಂದು ಶಾಸಕ ಜಮೀರ್ ಅಹಮದ್ ಖಾನ್ ಅವರ ಮನೆ, ನ್ಯಾಷನಲ್ ಟ್ರಾವೆಲ್ಸ್ ಕಚೇರಿ, ಫ್ಲ್ಯಾಟ್ಗಳ ಮೇಲೆ ಎಸಿಬಿ ದಾಳಿ ನಡೆಸಿತ್ತು. ದಾಳಿ ವೇಳೆ ಅಕ್ರಮ ಆಸ್ತಿ …
Read More »ಬ್ಯಾಂಕಿಂಗ್ ವ್ಯವಹಾರದಲ್ಲಿ ಗ್ರಾಹಕರಿಗೆ ತಿಳುವಳಿಕೆ ನೀಡುವುದು ಅತ್ಯವಶ್ಯ- ಕರ್ನಾಟಕ ಬ್ಯಾಂಕ್ ಎಂ.ಡಿ ಮಹಾಬಳೇಶ್ವರ್..!!
ಬ್ಯಾಂಕಿನ ವ್ಯವಹಾರಗಳನ್ನು ಶಿಸ್ತಿನ ಇತಿ ಮಿತಿಯೊಳಗೆ ನಡೆಸುವುದು ಹೇಗೆ ಎಂಬುದು ಕೆಲವರಿಗೆ ಗೊತ್ತಿದೆ. ಇನ್ನೂ ಹಲವರಿಗೆ ಗೊತ್ತಿಲ್ಲ. ಹಾಗಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ಕುರಿತು ಗ್ರಾಹಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಬ್ಯಾಂಕ್ ಕಾರ್ಯಮಾಡುತ್ತಿದೆ ಎಂದು ಬ್ಯಾಂಕ್‍ನ ಎಂಡಿ ಮಹಾಬಳೇಶ್ವರ್ ರವರು ತಿಳಿಸಿದ್ದಾರೆ. : ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕಿನ ವ್ಯವಹಾರಗಳನ್ನು ಶಿಸ್ತಿನ ಇತಿ ಮಿತಿಯೊಳಗೆ ನಡೆಸುವುದು ಹೇಗೆ ಎಂಬುದು ಕೆಲವರಿಗೆ ಗೊತ್ತಿದೆ. ಇನ್ನೂ ಹಲವರಿಗೆ ಗೊತ್ತಿಲ್ಲ. …
Read More »ಮಗ ನಾಪತ್ತೆ ಎಂದು ದೂರು: ತನಿಖೆ ವೇಳೆ ಮಲತಾಯಿಯ ಅನೈತಿಕ ಸಂಬಂಧ, ಭಯಾನಕ ಸಂಚು ಬಯಲು
ಬಾಗಲಕೋಟೆ: ಮಗ ನಾಪತ್ತೆ ಎಂದು ತಾಯಿ ದೂರು ನೀಡಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ಪ್ರಕರಣದಲ್ಲಿ ತಾಯಿಯೇ ಖಳನಾಯಕಿ ಎಂಬುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದ್ದು, ಅನೈತಿಕ ಸಂಬಂಧ ಮತ್ತು ಆಸ್ತಿ ವಿಚಾರಕ್ಕೆ ಕೊಲೆಯಾಗಿರುವ ಸಂಗತಿ ಬಯಲಾಗಿದೆ. ವಸಂತ ಮಾಲಿಂಗಪ್ಪ ಕುರಬಳ್ಳಿ(24) ಕೊಲೆಯಾದವ. ಈತ ಆರೋಪಿ ಕಮಲವ್ವಳ ದತ್ತು ಮಗ. ಗೋಣಿ ಚೀಲದಲ್ಲಿ ಶವ ಪತ್ತೆಯಾದ ಪ್ರಕರಣವನ್ನು ಬೆನ್ನತ್ತಿ ಹೋದಾಗ ಕಮಲವ್ವ ಕರಾಳ ಮುಖದ ಅನಾವರಣ ಆಗಿದೆ. ತನ್ನ ಅನೈತಿಕ …
Read More »ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಕರೆ ನೀಡಿದ್ದು, ಇದಕ್ಕೆ ದೇಶದಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರ ಭಾಗವಾಗಿ ರಾಜ್ಯದ ಎಲ್ಲ ನ್ಯಾಯಾಲಯಗಳಲ್ಲಿ ಹಾಗೂ ನ್ಯಾಯಾಂಗ ಅಧಿಕಾರಿಗಳ ಮನೆಯಲ್ಲಿ ಆಗಸ್ಟ್ 13 ರಿಂದ 15 ರ ನಡುವೆ ರಾಷ್ಟ್ರಧ್ವಜ ಹಾರಿಸಲು ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ. ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ …
Read More »ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು (Corona virus)ದೃಢಪಟ್ಟಿದ್ದು, ಇಂದಿನ ದೆಹಲಿ ಪ್ರವಾಸ ರದ್ದುಪಡಿಸಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
Read More »ಮನೆ, ವಾಹನ, ಇತರೆ ಸಾಲಗಾರರಿಗೆ ಬಿಗ್ ಶಾಕ್: ಬಡ್ಡಿ ದರ 3 ತಿಂಗಳಲ್ಲಿ ಶೇ. 1.4 ರಷ್ಟು ಏರಿಕೆ: EMI ಹೆಚ್ಚಳ
ಮುಂಬೈ: ಹಣದುಬ್ಬರ ಹಾಗೂ ರೂಪಾಯಿ ಅಪಮೌಲ್ಯ ತಡೆಯುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳು ತನ್ನಿಂದ ಪಡೆಯುವ ಸಾಲದ ಮೇಲಿನ ಬಡ್ಡಿ ದರವನ್ನು(ರೆಪೊ) 0.50 ರಷ್ಟು ಹೆಚ್ಚಳ ಮಾಡಿದೆ. ಮೂರು ತಿಂಗಳಲ್ಲಿ ರೆಪೊ ದರ ಶೇಕಡ 1.4 ರಷ್ಟು ಏರಿಕೆಯಾಗಿದ್ದು, ಇದರಿಂದಾಗಿ ಬ್ಯಾಂಕುಗಳಿಂದ ವೈಯಕ್ತಿಕ, ಗೃಹ, ವಾಹನ ಇನ್ನಿತರೆ ಸಾಲ ಪಡೆದ ಗ್ರಾಹಕರು ಹೆಚ್ಚಿನ ಬಡ್ಡಿ ಪಾವತಿಸುವುದು ಅನಿವಾರ್ಯವಾಗಿದೆ. ಶೇಕಡ 7ರ ಬಡ್ಡಿ ದರದಲ್ಲಿ ಗೃಹ ಸಾಲ ಪಡೆದವರು ಶೇಕಡ …
Read More »ರೈಲು ನಿಲ್ದಾಣದಲ್ಲಿ ವಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಕೊಲೆಗೆ ಪ್ರಯತ್ನ
ರೈಲು ನಿಲ್ದಾಣದಲ್ಲಿ ವಕ್ತಿಯೋರ್ವನಿಗೆ ಚಾಕುವಿನಿಂದ ಇರಿದು ಕೊಲೆಗೆ ಪ್ರಯತ್ನ ನಡೆಸಿದ ಓರ್ವ ವ್ಯಕ್ತಿಯನ್ನು ರೈಲ್ವೆ ಪೆÇಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ ಘಟನೆ ಖಾನಾಪುರದ ಲೋಂಡಾ ರೈಲು ನಿಲ್ದಾಣದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ನಾಸೀರ ಇಸ್ಮಾಯಿಲ್ ಪಠಾಣ (32) ಎಂಬುವರ ಮೇಲೆ ಬುಧವಾರ ರಾತ್ರಿ ಲೋಂಡಾ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ನಂ 1 ಹಾಗೂ 2 ರ ನಡುವಿನ ಓವರ್ ಬ್ರಿಡ್ಜ್ ಮೇಲೆ ನಡೆದಿದೆ. …
Read More »ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ ಅಂಬೇಡ್ಕರ್ ನಗರದಲ್ಲಿ ಘಟನೆ
ಗೋಕಾಕ ಅ 5 : ಮನೆಯಿಂದ ಶೌಚಾಲಯಕ್ಕೆ ತೆರಳುತ್ತಿರುವ ಮಹಿಳೆಯ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಗರದ 21 ನೇ ವಾರ್ಡ್‍ನ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಅಬೇದಾ ಮುಸ್ತಫಾ ಕಲ್ಲೋಳಿ ಎಂಬ ಮಹಿಳೆ ಮಧ್ಯಾಹ್ನ ಶೌಚಾಲಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಬೀದಿ ನಾಯಿಯು ಮಹಿಳೆಯ ಕಾಲಿಗೆ ಕಚ್ಚಿ ಗಂಭೀರವಾಗಿ ಗಾಯಗೋಳಿಸಿದ್ದು, ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂಬೇಡ್ಕರ್ …
Read More »ಇನ್ನೊಂದು ನೇಮಕ ಹಗರಣ ಬಯಲು: ಬಿಜೆಪಿ ಸರಕಾರಕ್ಕೆ ಮತ್ತೆ ಮುಜುಗರ
ಬೆಂಗಳೂರು: ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಚಿವ ಪ್ರಭು ಚೌಹಾಣ್ ಅವರ ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್ ಎಂಬುವರನ್ನು ಸಂಜಯನಗರ ಪೊಲೀಸರು ಬಂಧಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಚಿವ ಚೌಹಾಣ್ ಹೆಸರಿನಲ್ಲಿ ಈತ ನಕಲಿ ಅಧಿಸೂಚನೆ ಹೊರಡಿಸಿ ವಂಚನೆ ಮಾಡಿದ್ದ ಎಂಬ ಆರೋಪ ವ್ಯಕ್ತವಾಗಿದೆ. 2019ರಿಂದ ಈತನನ್ನು ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು. ಸಚಿವರು ನನಗೆ ಆಪ್ತರೆಂದು …
Read More »
Laxmi News 24×7