Breaking News

ರಾಜ್ಯ

ಬೀದಿ ನಾಯಿಗಳ ದಾಳಿ – ಮಹಿಳೆಗೆ ಗಂಭೀರ ಗಾಯ ಅಂಬೇಡ್ಕರ್ ನಗರದಲ್ಲಿ ಘಟನೆ

    ಗೋಕಾಕ ಅ 5 : ಮನೆಯಿಂದ ಶೌಚಾಲಯಕ್ಕೆ ತೆರಳುತ್ತಿರುವ ಮಹಿಳೆಯ ಮೇಲೆ ಬೀದಿ ನಾಯಿ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ನಗರದ 21 ನೇ ವಾರ್ಡ್‍ನ ಅಂಬೇಡ್ಕರ್ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಅಬೇದಾ ಮುಸ್ತಫಾ ಕಲ್ಲೋಳಿ ಎಂಬ ಮಹಿಳೆ ಮಧ್ಯಾಹ್ನ ಶೌಚಾಲಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಬೀದಿ ನಾಯಿಯು ಮಹಿಳೆಯ ಕಾಲಿಗೆ ಕಚ್ಚಿ ಗಂಭೀರವಾಗಿ ಗಾಯಗೋಳಿಸಿದ್ದು, ಮಹಿಳೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅಂಬೇಡ್ಕರ್ …

Read More »

ಇನ್ನೊಂದು ನೇಮಕ‌ ಹಗರಣ ಬಯಲು: ಬಿಜೆಪಿ ಸರಕಾರಕ್ಕೆ ಮತ್ತೆ ಮುಜುಗರ

ಬೆಂಗಳೂರು: ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ ಸಂಬಂಧ ಸಚಿವ ಪ್ರಭು ಚೌಹಾಣ್ ಅವರ ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್​ ಎಂಬುವರನ್ನು ಸಂಜಯನಗರ ಪೊಲೀಸರು ಬಂಧಿಸಿರುವುದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ. ಪಶುಸಂಗೋಪನೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಸಚಿವ ಚೌಹಾಣ್ ಹೆಸರಿನಲ್ಲಿ ಈತ ನಕಲಿ ಅಧಿಸೂಚನೆ ಹೊರಡಿಸಿ ವಂಚನೆ ಮಾಡಿದ್ದ ಎಂಬ ಆರೋಪ ವ್ಯಕ್ತವಾಗಿದೆ. 2019ರಿಂದ‌ ಈತನನ್ನು ಕನ್ನಡ ಶಿಕ್ಷಕರಾಗಿ ಪ್ರಭು ಚೌಹಾಣ್ ನೇಮಿಸಿಕೊಂಡಿದ್ದರು. ಸಚಿವರು ನನಗೆ ಆಪ್ತರೆಂದು …

Read More »

ಲಾಲ್​ಬಾಗ್​ನಲ್ಲಿ ಅಪ್ಪು ಪುತ್ಥಳಿ ಅನಾವರಣ- ಕರ್ನಾಟಕ ರತ್ನ ಪ್ರಶಸ್ತಿ ಡೇಟ್​ ಫಿಕ್ಸ್

ಬೆಂಗಳೂರು: ಪವರ್​ ಸ್ಟಾರ್​ ಪುನೀತ್ ರಾಜ್ ಕುಮಾರ್ ಒಂಬತ್ತು ತಿಂಗಳುಗಳೇ ಕಳೆದುಹೋಗಿವೆ. ಅವರ ನಿಧನದ ನಂತರ ಅವರಿಗೆ ಕರ್ನಾಟಕ ರತ್ನ ಘೋಷಣೆ ಮಾಡಬೇಕು ಎಂಬ ಕೂಗು ಬಹಳವಾಗಿ ಕೇಳಿ ಬಂದಿತ್ತು. ಖುದ್ದು ಅಪ್ಪು ಕುಟುಂಬದ ಆತ್ಮೀಯರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದರು.   ಪ್ರಶಸ್ತಿ ಘೋಷಣೆಯಾಗಿ ಕೆಲ ತಿಂಗಳು ಕಳೆದಿದ್ದರೂ ಪ್ರಶಸ್ತಿ ಪ್ರದಾನವಾಗಿರಲಿಲ್ಲ. ಅದರ ದಿನಾಂಕವೂ ಘೋಷಣೆಯಾಗಿರಲಿಲ್ಲ. ಆದ್ದರಿಂದ ಅಪ್ಪು ಅಭಿಮಾನಿಗಳು ಈ ದಿನಕ್ಕಾಗಿ …

Read More »

ಹಬ್ಬದಂದೇ ದೇಶದ ಜನತೆಗೆ ‘ಬಿಗ್‌ ಶಾಕ್‌’:ರೆಪೊ ದರ 4.90% ರಿಂದ 5.40% ಕ್ಕೆ ಹೆಚ್ಚಳ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್ಬಿಐ ಎಂಪಿಸಿ) ಹಣಕಾಸು ನೀತಿ ಸಮಿತಿಯ ಆಗಸ್ಟ್ 2022 ರ ಸಭೆ ಶುಕ್ರವಾರ ಮುಕ್ತಾಯಗೊಂಡಿದೆ. ಬುಧವಾರದಿಂದ ಮೂರು ದಿನಗಳ ಸಭೆಯ ನಂತರ, ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಇಂದು ಬೆಳಿಗ್ಗೆ 10 ಗಂಟೆಗೆ ರೆಪೊ ದರ ಏರಿಕೆಯನ್ನು ಈ ಬಾರಿ ಶೇಕಡಾ 0.50 ರಷ್ಟು ಹೆಚ್ಚಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು. ಇದರೊಂದಿಗೆ, ಕಳೆದ ನಾಲ್ಕು ತಿಂಗಳಲ್ಲಿ ರೆಪೊ ದರವು ಶೇಕಡಾ …

Read More »

ಜಪಾನ್‌ ದೇಶದಲ್ಲೂ ಕನ್ನಡಿಗ ಕಿಚ್ಚ ಸುದೀಪ್‌ ‘ವಿಕ್ರಾಂತ್‌ ರೋಣ’ ಹವಾ ಜೋರು..!

ಕನ್ನಡ ಸಿನಿಮಾಗಳ ತಾಕತ್ತು ಇಡೀ ಜಗತ್ತಿಗೇ ಗೊತ್ತಾಗಿದೆ. ಹೀಗಾಗಿ ಕನ್ನಡದ ಸಿನಿಮಾಗಳು ಸಪ್ತಸಾಗರ ದಾಟಿವೆ, ಎಲ್ಲೆಲ್ಲೂ ಕನ್ನಡದ ಕಂಪು ಹರಿಸುತ್ತಿವೆ ಸ್ಯಾಂಡಲ್‌ವುಡ್‌ ಸಿನಿಮಾಗಳು. ಇದೇ ರೀತಿ ಕನ್ನಡಿಗ ಕಿಚ್ಚ ಸುದೀಪ್‌ ಅವರ ಸಿನಿಮಾ ‘ವಿಕ್ರಾಂತ್‌ ರೋಣ’ ಕೂಡ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಅದ್ರಲ್ಲೂ ಜಪಾನ್‌ ದೇಶದಲ್ಲಿ ‘ವಿಕ್ರಾಂತ್‌ ರೋಣ’ ಹವಾ ಜೋರಾಗಿದ್ದು, ಸದ್ಯದಲ್ಲೇ ಜಪಾನ್‌ ಭಾಷೆಗೂ ಡಬ್‌ ಆಗಿ ‘ವಿಕ್ರಾಂತ್‌ ರೋಣ’ ರಿಲೀಸ್‌ ಆಗಲಿದೆ. ಈಗಾಗಲೇ ₹150 ಕೋಟಿ ಗಡಿ ದಾಟಿ …

Read More »

ಬಿಜೆಪಿ, ಕಾಂಗ್ರೆಸ್​​ಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಲು ಹವಣಿಸುತ್ತಿರುವ ಜೆಡಿಎಸ್‍!

ಬೆಂಗಳೂರು: ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ ಹತ್ತು ತಿಂಗಳು ಬಾಕಿ ಇರುವಾಗಲೇ ರಾಜ್ಯ ರಾಜಕಾರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮುಂಬರುವ ಚುನಾವಣೆಯಲ್ಲಿ ಬಹುಮತದೊಂದಿಗೆ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಬಿಜೆಪಿ ಮುಂದಾಗಿದ್ದರೆ, ಕಾಂಗ್ರೆಸ್ ಸಹ ರಾಜ್ಯದ ಗದ್ದುಗೆಗೆ ಏರಲು ತಂತ್ರಗಾರಿಕೆ ಮಾಡುತ್ತಿದೆ. ನಾವೇನು ಕಡಿಮೆ ಎಂಬಂತೆ ಜೆಡಿಎಸ್‍ ಕೂಡ ಬಿಜೆಪಿ ಮತ್ತು ಕಾಂಗ್ರೆಸ್​​ಗೆ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಲು ಹವಣಿಸುತ್ತಿದೆ. ಆಂತರಿಕ ಕಚ್ಚಾಟ : ದಕ್ಷಿಣ ಭಾರತದ ರಾಜ್ಯಗಳ ಅಧಿಕಾರಕ್ಕಾಗಿ ದಂಡಯಾತ್ರೆ ಶುರು …

Read More »

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ

ಕಾರವಾರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗೆ ಕಾರವಾರದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ತ್ವರಿತ ವಿಚಾರಣೆಯ ವಿಶೇಷ ನ್ಯಾಯಾಲಯ 20 ವರ್ಷ ಜೈಲು ಹಾಗೂ 1. 20 ಲಕ್ಷ ರೂ ದಂಡ ವಿಧಿಸಿದೆ. ಮುಂಡಗೋಡದ ಓರಲಗಿಯ ಶಿವಾನಂದ ಗೌಳೇರ (60 ವರ್ಷ) ಶಿಕ್ಷೆಗೊಳಗಾದ ಅಪರಾಧಿ. ಈತ ಬಾಲಕಿಯನ್ನು ಮನೆೆ ಹಾಗೂ ಹೊಲಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಗ್ಗೆ ಸೆ. 16- 2021ರಲ್ಲಿ ಪೋಕ್ಸೊ ಪ್ರಕರಣ …

Read More »

116 ಕೆ.ಜಿ ಗೋಧಿ ಮೂಟೆ ಹೊತ್ತು 9 ಕಿ.ಮೀ ದೂರ ನಡೆದು ಸಾಹಸ ಮೆರೆದಿದ್ದಾನೆ.

ವಿಜಯಪುರ: ಇತ ರೀಲ್ ಬಾಹುಬಲಿ ಅಲ್ಲ, ರಿಯಲ್ ಬಾಹುಬಲಿ. 116 ಕೆ.ಜಿ ಗೋಧಿ ಮೂಟೆ ಹೊತ್ತು 9 ಕಿ.ಮೀ ನಡೆದುಕೊಂಡು ಹೋಗಿ ಸಾಹಸ ಮೆರೆದಿದ್ದಾನೆ.‌ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿ ಚಿಕ್ಕರೋಗಿ ಗ್ರಾಮದ ಪ್ರಕಾಶ ಬೈರವಾಡಗಿ ಈ ಸಾಧನೆ ಮಾಡಿದ ಯುವಕ. ದೇವರಹಿಪ್ಪರಗಿ ತಾಲೂಕಿನ ಮುಳ ಸಾವಳಗಿ ಕ್ರಾಸ್​​ನಿಂದ ಚಿಕ್ಕರೂಗಿ ಗ್ರಾಮದವರೆಗೆ ಗೋಧಿ ಮೂಟೆ ಹೊತ್ತು ನಡೆದ ಯುವಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ. ಇವರ ಸಾಧನೆಗೆ ಸ್ನೇಹಿತರು ದಾರಿ ಉದ್ಧಕ್ಕೂ ಟವೆಲ್​​ನಿಂದ ಗಾಳಿ …

Read More »

ಕಿಸಾನ್​ ಸಮ್ಮಾನ್​ ನಿಧಿ ಫಲಾನುಭವಿ ಪಟ್ಟಿಯಲ್ಲಿ ಸಂಸದರ ಹೆಸರು: 9 ಕಂತು ಹಣ ಬಿಡುಗಡೆ

ಮಿರ್ಜಾಪುರ(ಉತ್ತರ ಪ್ರದೇಶ): ಸೋನಭದ್ರ ಸಂಸದ ಪಕೋರಿ ಲಾಲ್ ಕೋಲ್ ಹಾಗೂ ಪತ್ನಿ ಮತ್ತು ಅವರ ಮಗ ಛನ್ಬೆ ಶಾಸಕರಾಗಿರುವ ರಾಹುಲ್ ಪ್ರಕಾಶ್ ಕೋಲ್ (ರಾಹುಲ್ ಕೋಲ್) ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಲಾಭವನ್ನು ಪಡೆಯುತ್ತಿದ್ದು, ಯೋಜನೆಯ ಲಾಭ ಪಡೆಯಲು ಗುರುತನ್ನು ಮರೆಮಾಚಿರುವುದು ಕೇಂದ್ರ ಸರ್ಕಾರದ ಪರಿಶೀಲನಾ ವರದಿಯಲ್ಲಿ ಬಹಿರಂಗವಾಗಿದೆ. ಆದರೆ ಈ ಪ್ರಕರಣದ ಬಗ್ಗೆ ಪಕೋರಿ ಲಾಲ್ ಕೋಲ್ ತಮಗೇನೂ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಡಿಹಾನ್ ತೆಹಸಿಲ್‌ನ ಪತೇರಾ ಕಾಲಾ …

Read More »

ನಿಮ್ಮದೇ ಕ್ಷೇತ್ರದಲ್ಲಿ ಸರಣಿ ಹತ್ಯೆ; ಪಕ್ಷವನ್ನು ಅಧಿಕಾರಕ್ಕೆ ತರಲು ನಿಮ್ಮ ಶ್ರಮವಾದರೂ ಏನು..? BJP ರಾಜ್ಯಾಧ್ಯಕ್ಷರಿಗೆ ಅಮಿತ್ ಶಾ ಖಡಕ್ ಕ್ಲಾಸ್

ಬೆಂಗಳೂರು: ಕರಾವಳಿಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೂ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.   ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿಯಾಗಿದ್ದು, ಈ ವೇಳೆ ಮಂಗಳೂರಿನಲ್ಲಿ …

Read More »