ಮುಗಳಖೋಡ: ಯಾವ ವ್ಯಕ್ತಿ ಸಿಹಿ ಮನಸ್ಸಿನಿಂದ ತುಂಬು ಹೃದಯದ ಪ್ರೀತಿ ಮತ್ತು ಭಕ್ತಿ ಭಾವದಿಂದ ಬೇರೆ ವ್ಯಕ್ತಿಗಳನ್ನು ಗೌರವಿಸುವರವು ದೇವರಿಗೆ ಹತ್ತಿರ ಇರುವರು. ಮತ್ತು ತಂದೆ ತಾಯಿ, ಹಿರಿಯರು , ಶರಣರಿಗೆ ಪೂಜ್ಯ ಭಾವದಿಂದ ನೋಡಿ ಧಾರ್ಮಿಕತೆ ಬೇಳೆಸುವ ಜನರೆ ಭಾರತೀಯರು ಎಂದು ವಿಜಯಪೂರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮಿಜಿ ಹೇಳಿದರು. ಅವರು ಮುಗಳಖೋಡ ಪಟ್ಟಣದ ಚವಿವ ಸಂಘದ ಆವರಣದಲ್ಲಿರುವ ಸಾಯಿ ಪ್ರತಿಷ್ಠಾಪನೆಯ ದಶಮಾನೋತ್ಸವ ಹಾಗೂ …
Read More »ವಿಧಾನಸೌಧದ ಮೂರನೇ ಮಹಡಿಯಲ್ಲಿ ಅಗ್ನಿ ಅವಘಡ
ಬೆಂಗಳೂರು: ಈ ಹಿಂದೆ ಹಲವು ಭಾರಿ ವಿಧಾನಸೌಧದ ಕೊಠಡಿಗಳಲ್ಲಿ ವಿವಿಧ ಕಾರಣಗಳಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಇಂದು ಕೂಡ ವಿಧಾನಸೌಧದ ಮೂರನೇ ಮಹಡಿಯಲ್ಲಿನ ಕೊಠಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊತ್ತಿ ಉರಿದಿದೆ. ವಿಧಾನಸೌಧದ ಮೂರನೇ ಮಹಡಿಯಲ್ಲಿರುವಂತ ರೂಂ ನಂ.334ರಲ್ಲಿ ಎಸಿ ಬ್ಲಾಸ್ ಗೊಂಡ ಪರಿಣಾಮದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಬೆಂಕಿ ಹೊಂತಿಕೊಂಡಂತ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು, ಸಿಬ್ಬಂದಿ ಇರದ ಕಾರಣ ಹೆಚ್ಚಿನ ಅನಾಹುತವಾಗಿಲ್ಲ.
Read More »ಕಾಂಗ್ರೆಸ್ ಅಭಿವೃದ್ಧಿ ಕೆಲಸಗಳೇ ಮುಂದಿನ ಚುನಾವಣೆಯಲ್ಲಿ ವರದಾನ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ
ಕುಡಚಿ: ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಜೊತೆಗೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ, ಈ ಅಭಿವೃದ್ಧಿ ಕೆಲಸಗಳೇ ಮುಂಬರಲಿರುವ ವಿಧಾನಸಭಾ ಚುನಾವಣೆಗೆ ವರದಾನವಾಗಲಿವೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಅವರು ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ್ತು ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ 6 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸೈಕಲ್ ಜಾಥಾದ ಕೊನೆಯ …
Read More »ರಾಜ್ಯದ ಕೈದಿಗಳ ದಿನಗೂಲಿ 200 ರೂ.ನಿಂದ 525 ರೂ.ಗೆ ಏರಿಕೆ : ಗೃಹ ಸಚಿವ ಅರಗ ಜ್ಞಾನೇಂದ್ರ
ಬೆಂಗಳೂರು : ರಾಜ್ಯದಲ್ಲಿನ ಎಲ್ಲಾ ಕಾರಾಗೃಹಗಳಲ್ಲಿ ದುಡಿಯುತ್ತಿರುವ ಕೈದಿಗಳಿಗೆ ರಾಜ್ಯ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ಕೂಲಿ ದರವನ್ನು ನೀಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಕೈದಿಗಳಿಗೆ ದಿನಗೂಲಿ 200 ರೂ. ನೀಡಲಾಗುತ್ತಿದ್ದು, ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಟ ಕೂಲಿ 525 ರೂ. ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ 7 ಕೋಟಿ ರೂ. ವಿಶೇಷ ಅನುದಾನ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಸ್ವಾತಂತ್ರ್ಯ …
Read More »ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಜರುಗಿದ ಮೆರವಣಿಗೆ ಜಾಥಾಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಮೂಡಲಗಿ : ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಡಪದ ಅಪ್ಪಣ್ಣನವರು …
Read More »ರಕ್ಕಸಕೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಭರ್ತಿಗೆ ನಾಲ್ಕೇ ಅಡಿ ಬಾಕಿ
ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿದ್ದು, ತಾಲ್ಲೂಕಿನ ರಕ್ಕಸಕೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಭರ್ತಿಗೆ ಕೇವಲ ನಾಲ್ಕೇ ಅಡಿ ಬಾಕಿ ಇದೆ. 2,475 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಶುಕ್ರವಾರದ ಬೆಳಿಗ್ಗೆವರೆಗೆ 2,471 ಅಡಿ ನೀರು ಸಂಗ್ರಹವಾಗಿದೆ. ‘ಪ್ರತಿವರ್ಷ ಜುಲೈ ಅಂತ್ಯಕ್ಕೆ ಭರ್ತಿಯಾಗುತ್ತಿತ್ತು. ಆದರೆ, ಖಾನಾಪುರ, ಬೆಳಗಾವಿ ತಾಲ್ಲೂಕು ಹಾಗೂ ಮಹಾರಾಷ್ಟ್ರದಲ್ಲಿ ಬಿಟ್ಟುಬಿಡದೆ ಮಳೆಯಾಗುತ್ತಿರುವುದರಿಂದ …
Read More »ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ
ಮಹಾಮಳೆಯಿಂದ ಕುಸಿದು ಬಿದ್ದಿರುವ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ ಚಾಚಿದೆ. ಹೌದು ಬೆಳಗಾವಿ ನಗರ ಹಾಗೂ ತಾಲೂಕಿನಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಸಾಕಷ್ಟು ಮನೆಗಳು ಧರೆಗೆ ಉರುಳಿದ್ರೆ, ಹೊಲದಲ್ಲಿ ಬೆಳೆದಿದ್ದ ಬೆಳೆಗಳು ಜಲಾವೃತವಾಗಿ ಹಾನಿಯಾಗಿವೆ. ಹೀಗೆ ಬೆಳಗಾವಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮದಲ್ಲಿ ಪ್ರಕಾಶ ರಾಮಚಂದ್ರ, ಶಾಂತಾ ಯಲ್ಲಪ್ಪ ವರ್ಗೆ, ರೇಖಾ ಬಾಳು ರಾಜಾಯಿ, …
Read More »ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಫಲನುಭವಿಗಳಿಗೆ ಭಾಗ್ಯಲಕ್ಷಿ ಬಾಂಡಗಳನ್ನು ವಿತರಣೆ ಮಾಡಿದ ಶಾಸಕ ಅನಿಲ ಬೆನಕೆ :
ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಶನಿವಾರದಂದು ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃಧ್ದಿ ಯೋಜನೆಯಡಿ ಬೆಳಗಾವಿ ನಗರದ ಬಡಕಲ ಗಲ್ಲಿಯ ಬನಶಂಕರಿ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪಾ ರವರ ಮಹತ್ವದ ಯೋಜನೆಯಾದ ಭಾಗ್ಯಲಕ್ಷಿö್ಮÃ ಬಾಂಡಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದರು. ಹೆಣ್ಣು ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು, ಹೆಣ್ಣು ಮಕ್ಕಳ ಭದ್ರತೆ ಹಾಗೂ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯುವ …
Read More »ಜೈಲಿನಲ್ಲಿದ್ದ ಸ್ನೇಹಿತರಿಗೆ ಮಾದಕ ವಸ್ತು ಪೂರೈಕೆ
ಬೆಂಗಳೂರು: ಜೈಲಿನಲ್ಲಿರುವ ಸ್ನೇಹಿತರಿಗೆ ಮಾದಕ ವಸ್ತು ಸರಬರಾಜು ಮಾಡಲು ಯತ್ನಿಸಿದ ಇಬ್ಬರು ಯುವತಿಯರನ್ನ ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚಾಮರಾಜಪೇಟೆ ಮೂಲದ ಸಂಗೀತಾ ಅಲ್ಫೋನ್ಸ್ ಮತ್ತು ಛಾಯಾ ಎಂದು ಗುರುತಿಸಲಾಗಿದೆ. ಜೈಲಿನಲ್ಲಿರುವ ಸ್ನೇಹಿತರಾದ ಲೋಹಿತ್ ಹಾಗೂ ಕಾಳಪ್ಪ ಎಂಬುವವರನ್ನು ಜುಲೈ 12ರಂದು ಭೇಟಿಯಾಗಲು ಬಂದಿದ್ದರು. ಸಂಗೀತಾ ಹಾಗೂ ಛಾಯಾರನ್ನ ಭದ್ರತಾ ಸಿಬ್ಬಂದಿ ಪರಿಶೀಲಿಸಿದಾಗ ಇಬ್ಬರೂ ಸಹ ಗುಪ್ತಾಂಗದಲ್ಲಿ ಏನನ್ನೋ ಅಡಗಿಸಿಟ್ಟಿರುವುದು ಪತ್ತೆಯಾಗಿದೆ.
Read More »ಗೋಕಾಕ ತಾಲೂಕಿನ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ
ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಮೂಡಲಗಿ ತಾಲೂಕಿನ ನಾಲ್ಕು ಸೇತುವೆಗಳು ಜಲಾವೃತವಾಗಿದೆ. ಕೆಲ ಬೈಕ್ ಸವಾರರು ಅಪಾಯ ಲೆಕ್ಕಿಸದೇ ಜಲಾವೃತವಾದ ಸೇತುವೆ ಮೇಲೆಯೇ ಸಂಚರಿಸಿದ್ದಾರೆ. ಪ್ರಮುಖವಾಗಿ ಅವರಾದಿ – ಮಹಾಲಿಂಗಾಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ಸುಣಧೋಳ -ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸೇತುವೆ, ವಡೇರಹಟ್ಟಿ-ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಮೂಡಲಗಿ-ಭೈರನಹಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿವೆ. ಪರಿಣಾಮ ಈ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗಿದೆ. ಸದ್ಯ ಬಳ್ಳಾರಿ ನಾಲಾ, …
Read More »
Laxmi News 24×7