Breaking News

ರಾಜ್ಯ

ಬೆಳಗಾವಿಗೆ ಇಂದು ಹಲವು ಸಚಿವರು ನಿಪ್ಪಾಣಿಯಲ್ಲಿ ಜ್ಯೋತಿ ಪ್ರಸಾದ ಜೊಲ್ಲೆ ವಿವಾಹ ಸಮಾರಂಭ

ಬೆಳಗಾವಿ: ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಇಂದು ಸಚಿವರ ದಂಡೆ ಆಗಮಿಸಲಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ. ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ಪುತ್ರ ಜ್ಯೊತಿ ಪ್ರಾಸಾದ್ ಜೊಲ್ಲೆ ಅವರ ವಿವಾಹ ಸಮಾರಂಭದ ಆರತಕ್ಷತೆ ಕಾರ್ಯಕ್ರಮ ಇಂದು ನಿಪ್ಪಾಣಿಯಲ್ಲಿ ನಡೆಯಲಿದ್ದು, ರಾಜ್ಯ ಸರ್ಕಾರದ ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು-ವರರಿಗೆ ಶುಭ ಹಾರೈಸಲಿದ್ದಾರೆ. …

Read More »

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!     ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.

Read More »

ಭಾರೀ ಮಳೆ ಹಿನ್ನಲೆ: ನಾಳೆ ಶಿವಮೊಗ್ಗ ಜಿಲ್ಲೆಯ ಈ ತಾಲ್ಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವಂತ ಭಾರಿ ಮಳೆಯಿಂದಾಗಿ ( Heavy Rain ), ಜನರು ಜಿಲ್ಲೆಯ ಅನೇಕ ತಾಲೂಕುಗಳಲ್ಲಿ ಮನೆಯಿಂದ ಹೊರ ಬರದಂತ ಪರಿಸ್ಥಿತಿ ಇದೆ. ಈ ಹಿನ್ನಲೆಯಲ್ಲಿಯೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹಾಗೂ ಹೊಸನಗರ ತಾಲೂಕಿನ ಶಾಲೆಗಳಿಗೆ ರಜೆ ( School Holiday ) ಘೋಷಣೆ ಮಾಡಲಾಗಿದೆ.   ಈ ಬಗ್ಗೆ ಶಿವಮೊಗ್ಗದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ …

Read More »

ಮಹಾರಾಷ್ಟ್ರ ವ್ಯವಸ್ಥೆ ಬಗ್ಗೆ ತೀವ್ರ ಬೇಸರಗೊಂಡು ಐಎಎಸ್ ಹುದ್ದೆ ತ್ಯಜಿಸಿದ ಅಧಿಕಾರಿ!

ಪುಣೆ: ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಮತ್ತು ಔಷಧ ಇಲಾಖೆ(ಎಂಇಡಿಡಿ) ಜಂಟಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ 2008ರ ಬ್ಯಾಚ್‌ನ ಐಎಎಸ್ ಅಧಿಕಾರಿ ದೌಲತ್ ದೇಸಾಯಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಸುದೀರ್ಘ ಪೋಸ್ಟ್ ಹಾಕಿದ್ದು, ವ್ಯವಸ್ಥೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.   MEDDಗೆ ವರ್ಗಾವಣೆಯಾಗುವ ಮೊದಲು ಅವರು ಕೊಲ್ಲಾಪುರದ ಕಲೆಕ್ಟರ್ ಆಗಿದ್ದರು ಮತ್ತು ಪಶ್ಚಿಮ ಮಹಾರಾಷ್ಟ್ರ ಜಿಲ್ಲೆಯನ್ನು ಕಾಡಿದ್ದ 2019 ರ ಪ್ರವಾಹ ಸ್ಥಿತಿಯನ್ನು ನಿಭಾಯಿಸಿದ್ದರು.   …

Read More »

ಜಮೀರ್ ಅಹ್ಮದ್ ಮನೆ ಮೇಲೆ ACB ರೇಡ್: ಹಾಲಿ ಸಚಿವರಿಗೆ ಶರುವಾಯ್ತು ನಡುಕ

ಬೆಂಗಳೂರು : ಎಸಿಬಿ ಸರ್ಚ್ ವಾರೆಂಟ್​ ಪಡೆದು ಮುಂಜಾನೆ 5.50ರ ಸುಮಾರಿಗೆ ಜಮೀರ್​ ಮೇಲೆ ದಾಳಿ ನಡೆಸುತ್ತಿದ್ದಾರೆ. ಎಸಿಬಿ ಅಧಿಕಾರಿಗಳು ಸದ್ಯ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ACB ಆದಾಯ ಮೀರಿದ ಆಸ್ತಿ ಪ್ರಕರಣದಲ್ಲಿ ಜಮೀರ್ ಅಹ್ಮದ್ ಮೇಲೆ ದಾಳಿ ನಡೆಸುತ್ತಿದ್ದಾರೆ. ಇದಲ್ಲದೆ ಜೊತೆಯಲ್ಲಿದ್ದ ಹಾಲಿ ಸಚಿವರಿಗೆ ನಡುಕ ಶುರುವಾಗಿದೆ.ಇಡಿ 20 ವರ್ಷಗಳ ಜಮೀರ್ ಆಸ್ತಿ ರಿಪೋರ್ಟ್ ರೆಡಿ ಮಾಡಿದ್ದು, ರಿಪೋರ್ಟ್​ ಆಧಾರದ ಮೇಲೆ ಎಸಿಬಿ ರೇಡ್ ಮಾಡಲಾಗಿದೆ. ​ ಇಡಿ ರಿಪೋರ್ಟ್​ ಆಧಾರದ …

Read More »

ಮಾನವ ಗುರು’ ಚಂದ್ರಶೇಖರ್ ಗುರೂಜಿ ಹತ್ಯೆ ಹಿಂದೆ ‘ಹೆಣ್ಣು – ಮಣ್ಣು” ಶಂಕೆ?

ಬೆಂಗಳೂರು: ಮಾನವ ಗುರು ಎಂದೇ ಟಿವಿ ವಾಹಿನಿಗಳಲ್ಲಿ ಹೆಸರು ಮಾಡಿರುವ ಸರಳ ವಾಸ್ತು ಮುಖ್ಯಸ್ಥ ಚಂದ್ರಶೇಖರ್ ಗುರೂಜಿ ಕೊಲೆ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದು, ಈಗ ಈ ವಾಸ್ತು ಗುರುವಿನ ಹಿನ್ನೆಲೆ ಬಗ್ಗೆ ಭಾರಿ ಚರ್ಚೆ ಶುರುವಾಗಿದೆ.   ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಚಂದ್ರಶೇಖರ್ ಗುರುಜಿ ಸೇನೆ ಸೇರಬೇಕೆಂಬ ಉದ್ದೇಶಕ್ಕೆ ಬೆಳಗಾವಿಗೆ ಬಂದು ಪ್ರಯತ್ನ ನಡೆಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ಸಿವಿಲ್ ಎಂಜಿನಿಯರಿಂಗ್ ಹಿನ್ನೆಲೆಯ ಚಂದ್ರಶೇಖರ ಗುರೂಜಿ ಆ ಬಳಿಕ ಮುಂಬಯಿಗೆ …

Read More »

ಯಲ್ಲಮ್ಮನಗುಡ್ಡಕ್ಕೆ ಹರಿದುಬರುತ್ತಿದೆ ಭಕ್ತರ ದಂಡು

ಉಗರಗೋಳ: ಸವದತ್ತಿ ತಾಲ್ಲೂಕಿನ ಉಗರಗೋಳದ ಯಲ್ಲಮ್ಮನ ಗುಡ್ಡಕ್ಕೆ ಭಕ್ತರ ದಂಡೇ ಹರಿದುಬರುತ್ತಿದ್ದು, ಮೂರು ತಿಂಗಳಲ್ಲಿ ₹ 2.15 ಕೋಟಿ ದೇಣಿಗೆ ಸಂಗ್ರಹವಾಗಿದೆ. ಯಲ್ಲಮ್ಮನ ಗುಡ್ಡದಲ್ಲಿ ಸೋಮವಾರ ಎರಡನೇ ಹಂತದ ಹುಂಡಿ ಎಣಿಕೆ ನಡೆಯಿತು. ₹ 33.44 ಲಕ್ಷ ನಗದು, ₹ 5.11 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ₹ 62,390 ಮೌಲ್ಯದ ಬೆಳ್ಳಿ ಆಭರಣಗಳು ಸಂಗ್ರಹವಾಗಿವೆ. ಕೊರೂನಾ ನಂತರ ಆದಾಯ ಉತ್ತಮ: ದಕ್ಷಿಣ ಭಾರತದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ …

Read More »

ಜಮೀರ್ ಫ್ಲ್ಯಾಟ್​ನಲ್ಲಿ 24 ಜೀವಂತ ಗುಂಡುಗಳು ಪತ್ತೆ;

ಬೆಂಗಳೂರು (ಜು.07): ಎಸಿಬಿ ಅಧಿಕಾರಿಗಳು ಸಿಲ್ವರ್ ಓಕ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್ ಮೇಲೆ ದಾಳಿ ನಡೆಸಿದ್ಧಾರೆ. ಮಲ್ಯ ರಸ್ತೆಯ UB ಸಿಟಿ ಎದುರಿನ ಫ್ಲ್ಯಾಟ್ (Near UB City Flat) ಮೇಲೆ ರೇಡ್ ನಡೆಸಿದ್ದಾರೆ. ನಾಲ್ಕನೇ ಪ್ಲೋರ್​ನ 402ನೇ ಫ್ಲ್ಯಾಟ್​ನಲ್ಲಿ ಪರಿಶೀಲನೆ ನಡೆದಿದೆ. ಮನೆ, ಟ್ರಾವೆಲ್ಸ್​ ಕಚೇರಿ, ಫ್ಲ್ಯಾಟ್​ನಲ್ಲಿ ಅಧಿಕಾರಿಗಳ ಶೋಧ ನಡೆಸಿದ್ದಾರೆ. ಫ್ಲ್ಯಾಟ್​ನಲ್ಲಿ 24 ಜೀವಂತ ಗುಂಡು ಪತ್ತೆಯಾಗಿದೆ. ಜಮೀರ್ ಅಹಮ್ಮದ್ (Zameer Ahmed) ಪಿಸ್ತೂಲ್ ಪರವಾನಗಿ ಹೊಂದಿದ್ದಾರೆ. ಹಾಗಾಗಿ ಇದೇ …

Read More »

ವಿಡಿಯೋಗಳನ್ನು ಮಾಡಿದ್ದು ನಾನೇ; ತಪ್ಪೊಪ್ಪಿಕೊಂಡ ಕಾಮುಕ ಶಿಕ್ಷಕ

ಬಂಧಿತನಾಗಿರುವ ಕೊಪ್ಪಳ ಜಿಲ್ಲೆಯ ಕಾರಟಗಿಯ (Karatagi, koppala) ಕಾಮುಕ ಶಿಕ್ಷಕ (Teacher) ಮಹಮ್ಮದ್ ಅಜರುದ್ದೀನ್ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ವಿಡಿಯೋ ವೈರಲ್ (Viral Video) ಬೆನ್ನಲ್ಲೇ ಶಿಕ್ಷಕ ಮೊಬೈಲ್ ಸ್ವಿಚ್ಛ್ ಆಫ್ ಮಾಡಿಕೊಂಡು ಗೋವಾದಲ್ಲಿ ತಲೆಮರೆಸಿಕೊಂಡಿದ್ದನು. ಸದ್ಯ ಆರೋಪಿ ಶಿಕ್ಷಕ ನ್ಯಾಯಾಂಗ ಬಂಧನದಲ್ಲಿದ್ದಾನೆ (Judicial Cutody). ಗೊರೇಬಾಳ ವಲಯ ಶಿಕ್ಷಣ ಸಂಯೋಜಕರ ವಿಚಾರಣೆಯ ವೇಳೆ ಶಿಕ್ಷಕ ಮಹಮ್ಮದ್ ಅಜರುದ್ದೀನ್ ತಪ್ಪೊಪ್ಪಿಕೊಂಡಿದ್ದಾನೆ. ಮೂರು ವರ್ಷದ ಹಿಂದೆ ನನ್ನ ಮನೆಯಲ್ಲಿ ಮಹಿಳೆಯೊಂದಿಗಿನ ವಿಡಿಯೋ …

Read More »

ಗುಡ್ಡ ಕುಸಿತ- ಕರ್ನಾಟಕ, ಗೋವಾ ಸಂಪರ್ಕಿಸುವ ರಸ್ತೆ 5 ಗಂಟೆ ಬಂದ್

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆಯ ಅಬ್ಬರಕ್ಕೆ ಗೋವಾ ಸಮೀಪದ ಮಾಲಶೇಜ್ ಘಾಟ್‍ನಲ್ಲಿ ಗುಡ್ಡ ಕುಸಿದು, ಕರ್ನಾಟಕ ಸಂಪರ್ಕಿಸುವ ರಸ್ತೆ 5 ಘಂಟೆಗಳ ಕಾಲ ಬಂದ್ ಆಗಿತ್ತು. ಬಳಿಕ ಗೋವಾದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ 5 ಗಂಟೆಗಳ ಕಾರ್ಯಾಚರಣೆ ನಡೆಸಿ ರಸ್ತೆ ಸುಗಮಗೊಳಿಸಿದ್ದಾರೆ. ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ ಮಾಲಶೇಜ್ ಘಾಟ್ ಗೋವಾ ಸಮೀಪದಲ್ಲಿದೆ. ಪಶ್ಚಿಮ ಘಟ್ಟದಲ್ಲಿ ಮಳೆಯ ಆರ್ಭಟಕ್ಕೆ ಮಾಲಶೇಜ್ ಘಾಟ್‍ನಲ್ಲಿ ಗುಡ್ಡ ಕುಸಿತವಾಗಿತ್ತು. ಗುಡ್ಡ ಕುಸಿತದಿಂದ ಕರ್ನಾಟಕ-ಗೋವಾ ಸಂಪರ್ಕಿಸುವ ರಸ್ತೆಯಲ್ಲೂ …

Read More »