ವಾಯವ್ಯ ಪದವೀಧರ, ಶಿಕ್ಷಕ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯುತ್ತಿರುವ ವೇಳೆ ಚುನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ಮತಗಟ್ಟೆಗೆ ಭೇಟಿ ನೀಡುತ್ತಿದ್ದಂತೆ ವಿವಿಧ ಪಕ್ಷಗಳ ಟೇಬಲ್ ಏಜೆಂಟ್‍ಗಳು ಓಡಿ ಹೋಗಿರುವ ಘಟನೆ ನಡೆದಿದೆ. ಹೌದು ಬೆಳಗಾವಿಯ ವಿಶ್ವೇಶ್ವರಯ್ಯ ಸರ್ಕಾರಿ ಶಾಲೆಯ ಮತಗಟ್ಟೆಗೆ ಚುನಾವಣಾಧಿಕಾರಿ, ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯಾ ಬಿಸ್ವಾಸ್ ಅವರು ಭೇಟಿ ನೀಡಿದರು. ಈ ವೇಳೆ ಶಾಲಾ ಆವರಣದ ಎದುರು ಟೇಬಲ್ ಹಾಕಿ ಏಜೆಂಟ್‍ಗಳು ಕುಳಿತಿದ್ದರು. ಅನುಮತಿ ಇಲ್ಲದೇ ಇಲ್ಲೇಕೆ …
Read More »ವಾಯವ್ಯ ಶಿಕ್ಷಕರ ಕ್ಷೇತ್ರ: ಕಾಂಗ್ರೆಸ್‌ಗೆ ಬಂಡಾಯ, ಬಿಜೆಪಿಗೆ ಒಳ ಏಟಿನ ಭೀತಿ
ಬಾಗಲಕೋಟೆ: ಪಕ್ಷ ಸಂಘಟನೆ, ಹೆಚ್ಚಿನ ಸಂಖ್ಯೆಯಲ್ಲಿರುವ ಶಾಸಕರ ಬಲ (33ರಲ್ಲಿ 22) ನೆಚ್ಚಿಕೊಂಡು ಬಿಜೆಪಿಯು ಮೂರನೇ ಬಾರಿಗೆ ಅರುಣ ಶಹಾಪುರ ಅವರನ್ನು ಕಣಕ್ಕಿಳಿಸಿದೆ. ಆದರೆ, ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ ಅವರಿಗೆ ಮಗ್ಗಲು ಮುಳ್ಳಾಗಿದೆ. ಬಿಜೆಪಿಯಲ್ಲಿನ ಮುಸುಕಿನ ಗುದ್ದಾಟದ ಲಾಭ ಪಡೆಯಲು ಕಾಂಗ್ರೆಸ್ ಅನುಭವಿ ರಾಜಕಾರಣಿ ಪ್ರಕಾಶ ಹುಕ್ಕೇರಿ ಅವರನ್ನು ಕಣಕ್ಕಿಳಿಸಿದೆ. ಆದರೆ, ಬಂಡಾಯ ಅವರ ಓಟಕ್ಕೆ ಬ್ರೇಕ್ ಹಾಕುತ್ತಿದೆ. 12 ವರ್ಷಗಳ ಕಾಲ ಶಿಕ್ಷಕರ ಪರವಾಗಿ ಧ್ವನಿ ಎತ್ತಿದ್ದು, ಕೇಂದ್ರ ಹಾಗೂ …
Read More »ಸೋನಿಯಾ ರಾಹುಲ್, ಡಿ.ಕೆ ಶಿವಕುಮಾರ್ ರನ್ನು ಕಿತ್ತುಹಾಕಬೇಕು ಎಂದ : ಸಿಎಂ ಇಬ್ರಾಹಿಂ
ಬೆಂಗಳೂರು: 2023ಕ್ಕೆ ಕುಮಾರಸ್ವಾಮಿ ಸಿಎಂ ಆಗೋದಕ್ಕೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿ ಫೌಂಡೇಶನ್ ಹಾಕಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇವತ್ತಿನ ಮುಹೂರ್ತ ಬರೆದಿಟ್ಟುಕೊಳ್ಳಿ.. ಬಿಜೆಪಿಯವರಿಗೆ ಜೆಡಿಎಸ್ ನಂಬರ್ 1 ಆಗಿ ಬರತ್ತೆ ಎನ್ನೋದು ಗೊತ್ತಾಗಿದೆ. ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಹೋಗೋದು ಗೊತ್ತಾಗಿದೆ. ನಮ್ಮವರು 10 ಜನ ಜೆಡಿಎಸ್ ಗೆ ಬರ್ತಾರೆ ಎಂದು ಬಿಜೆಪಿ, ಕಾಂಗ್ರೆಸ್ ನಾಯಕರಿಗೆ ಇಬ್ರಾಹಿಂ ತಿರುಗೇಟು ನೀಡಿದರು. …
Read More »ಯುವಕನ ಜತೆ ಟೀಚರ್ ಕಾಮದಾಟಕ್ಕೆ ಬಲಿಯಾದ ಗಂಡ! ವಿಜಯಪುರದ ಕೊಲೆ ರಹಸ್ಯ ಭೇದಿಸಿದ ಪೊಲೀಸರು
ವಿಜಯಪುರ: ವಿಜಯಪುರದಲ್ಲಿ ಇದೇ 8ರಂದು ನಡೆದಿದ್ದ ಕೊಲೆ ಪ್ರಕರಣವೊಂದನ್ನು ಪೊಲೀಸರು ಭೇದಿಸಿದ್ದಾರೆ. ಏಕ್ತಾ ನಗರ ನಿವಾಸಿ ಪ್ರಕಾಶ ಹಳ್ಳಿ(40)ಮನೆಯಲ್ಲೇ ಕೊಲೆಯಾಗಿತ್ತು. ತನ್ನ ಪತಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಪತ್ನಿ, ಅಂಗನವಾಡಿ ಟೀಚರ್ ರಾಜೇಶ್ವರಿ ಹೊಸಮನಿ ಗೋಳೋ ಎಂದು ಅತ್ತಿದ್ದಳು. ಆದರೆ ಇದು ಸಹಜ ಸಾವಲ್ಲ, ಬದಲಿಗೆ ಪತ್ನಿಯೇ ಕೊಲೆ ಮಾಡಿರುವುದು ಎಂದು ತಿಳಿದುಬಂದಿದೆ. 30 ವರ್ಷದ ರಾಜೇಶ್ವರಿ ಅಂಗನವಾಡಿಯಲ್ಲಿ ಟೀಚರ್ ಆಗಿದ್ದಾಳೆ. ಈಕೆ 24 ವರ್ಷದ ರವಿ ತಳವಾರ ಎಂಬಾತನನ್ನು ಪ್ರೀತಿಸುತ್ತಿದ್ದಳು. ಇವರ …
Read More »ಇಂದು ವಿಧಾನ ಪರಿಷತ್‌ನ 4 ಸ್ಥಾನಗಳಿಗೆ ಚುನಾವಣೆ :
ಇಂದು ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಶನಿವಾರ ಸಂಝೆ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದ್ದು, ಇಂದು ಮತದಾನದ ನಡೆಯಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಜೂನ್ 15 ರ ಬುಧವಾರ ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ವಾಯುವ್ಯ ಪದವೀಧರ ಕ್ಷೇತ್ರ, ಪಶ್ಚಿಮ …
Read More »ಸೋಲಿನ ಹತಾಶೆಯಲ್ಲಿ ಹಣ ಹಂಚುವ ಕೆಲಸ ಮಾಡ್ತಿದ್ದಾರೆ ಹುಕ್ಕೇರಿ: ಅರುಣ ಶಾಹಪುರ ಗಂಭೀರ ಆರೋಪ
ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಸೋಲಿನ ಭೀತಿ ಎದುರಿಸುತ್ತಿದ್ದಾರೆ. ಹೀಗಾಗಿ ಸೋಲಿನ ಹತಾಶೆಯಲ್ಲಿ ಹಣ ಹಂಚುವ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಅರುಣ ಶಾಹಪುರ ಗಂಭೀರ ಆರೋಪ ಮಾಡಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ವಿಜಯಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಮಹಾರಾಷ್ಟ್ರ ಪಾಸಿಂಗ್ ಇರುವ ಕಾರಿನಲ್ಲಿ ಹತ್ತು ಸಾವಿರದಂತೆ ಪ್ಯಾಕೇಟ್‍ನಲ್ಲಿ ಹಣವಿಟ್ಟು ಹಂಚಲಾಗುತ್ತಿತ್ತು. ಇದೊಂದೆ ವಾಹನ ಅಲ್ಲದೆ ಇನ್ನೂ ಹದಿನಾಲ್ಕು ಕಾರುಗಳು ಹೀಗೆ ಓಡಾಡುತ್ತಿವೆ. …
Read More »ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ ಪ್ರಕರಣ – ಮೂವರು ದುಷ್ಕರ್ಮಿಗಳು ವಶಕ್ಕೆ
ಬೆಳಗಾವಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ನೂಪುರ್ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ಗಲ್ಲಿಗೇರಿಸಿದ್ದ ಪ್ರಕರಣ ಸಂಬಂಧ ಬೆಳಗಾವಿ ಪೊಲೀಸರು ಮೂವರು ದುಷ್ಕರ್ಮಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೇಶಪಾಂಡೆ ಗಲ್ಲಿಯ ಮೊಹ್ಮದ್ ಶೋಯೆಬ್ ಅಬ್ದುಲ್ ಗಫರ್ ಹಕೀಮ್, ಅಮನ್ ಮೊಕಾಶಿ ಹಾಗೂ ಅರ್ಬಾಜ್ ಮೊಕಾಶಿ ವಶಕ್ಕೆ ಪಡೆಯಲಾದ ಆರೋಪಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ದೇಶಪಾಂಡೆ ಗಲ್ಲಿಯ ಕಾಂಪ್ಲೆಕ್ಸ್‌ಗೆ ನುಗ್ಗಿ ಹಗ್ಗ ಕಟ್ಟಿ ನೂಪುರ್ ಶರ್ಮಾ ಪ್ರತಿಕೃತಿ ನೇತು …
Read More »ಪೋಷಕರ ವಿರೋಧದ ಮಧ್ಯೆ ಮದುವೆಯಾದ ನವಜೋಡಿ: ಕಣ್ಣೀರಿಡುತ್ತಾ ಅಪ್ಪನಿಗೆ ಮನವಿ ಮಾಡ್ತಿರುವ ಮಗಳು
ಬಳ್ಳಾರಿ : ಒಂದೇ ಕಾಲೇಜು, ಒಂದೇ ತರಗತಿ, ನಿತ್ಯ ಜೊತೆಗೆ ಓಡಾಟ ಹೀಗಾಗಿ ಈ ಇಬ್ಬರ ಮಧ್ಯೆ ಗೊತ್ತಿಲ್ಲದಯೇ ಪ್ರೀತಿ ಶುರುವಾ ಗಿತ್ತು. ಮೂರು ವರ್ಷಗಳ ಕಾಲ ಪರಸ್ಥರ ಪ್ರೀತಿಸಿದ ಆ ಜೋಡಿ ಪೋಷಕರ ವಿರೋಧದ ಮಧ್ಯೆ ಮನೆ ಬಿಟ್ಟು ಬಂದು ಸಪ್ತಪದಿ ತುಳಿದಿದ್ದಾರೆ. ಆದ್ರೇ ಯುವತಿಯ ಪೋಷಕರ ಭಯದಿಂದ ಇದೀಗ ಆ ಜೋಡಿ ರಕ್ಷಣೆಗಾಗಿ ಪೊಲೀಸ್ ಠಾಣೆ ಹಾಗೂ ನ್ಯಾಯಾಲಯದ ಮೇಟ್ಟಿಲೇರಿದ್ದಾರೆ. ಪ್ರತಿ ಸ್ಟೋರಿಯಲ್ಲಿದ್ದಂತೆ ಇಲ್ಲಿಯೂ ಕೂಡ ಯುವತಿಯ ಪೋಷಕರೇ ವಿಲನ್‌ಗಳಾಗಿದ್ದು, …
Read More »ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿ ತರುವ ಮೂಲಕ ಮಹಿಳೆಯರ ಪ್ರಗತಿಗಾಗಿ ಅನೇಕ ಕಾನೂನುಗಳನ್ನು ತಂದರು: ಸತೀಶ್ ಜಾರಕಿಹೊಳಿ
ಬಸವಣ್ಣನವರ ಕ್ರಾಂತಿಯಿಂದ 12ನೇ ಶತಮಾನದಲ್ಲೇ ಮಹಿಳೆಯರ ಜೀವನದಲ್ಲಿ ಕೆಲ ಬದಲಾವಣೆಗಳಾದವು, ನಂತರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ಜಾರಿ ತರುವ ಮೂಲಕ ಮಹಿಳೆಯರ ಪ್ರಗತಿಗಾಗಿ ಅನೇಕ ಕಾನೂನುಗಳನ್ನು ತಂದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಪಾಚ್ಛಾಪೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮಹಾದೇವಿ ಮೆಮೋರಿಯಲ್ ನೂತನ ಆಸ್ಪತ್ರೆಯ ಉದ್ಘಾಟನಾ ಸಮಾರಂಭ ನೆರವೇರಿಸಿ ಅವರು ಮಾತನಾಡಿದರು. ಭಾರತ ದೇಶದಲ್ಲಿ ಎಲ್ಲಾ ರಂಗಗಳಲ್ಲಿಯೂ …
Read More »ವಾಯುವ್ಯ ಶಿಕ್ಷಕರ ಚುನಾವಣೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಛೇರಿ ಆವರಣದಲ್ಲಿ ಭರ್ಜರಿ ಎಣ್ಣೆ ಪಾರ್ಟಿ
ವಾಯುವ್ಯ ಶಿಕ್ಷಕರ ಚುನಾವಣೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿರುವ ಬ್ಲಾಕ್ ಕಾಂಗ್ರೆಸ್ ಕಛೇರಿ ಆವರಣದಲ್ಲಿ ಭರ್ಜರಿ ಎಣ್ಣೆ ಪಾರ್ಟಿ ಮಾಡಿರುವ ಘಟನೆ ನಡೆದಿದೆ. ಚಿಕ್ಕೋಡಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಪಾರ್ಟಿ ಕೊಟ್ಟಿದ್ದಾರೆ. ಕಛೇರಿ ಬೋರ್ಡ್‍ಗೆ ಬಟ್ಟೆ ಕಟ್ಟಿ ಬೋರ್ಡ್ ಮುಚ್ಚಿ ಪಾರ್ಟಿ ಆಯೋಜನೆ ಮಾಡಲಾಗಿದೆ. ನೂರಾರು ಶಿಕ್ಷಕರನ್ನ ಕಛೇರಿಗೆ ಕರೆಸಿ ಪ್ರಕಾಶ ಹುಕ್ಕೇರಿ ಎಣ್ಣೆ ಪಾರ್ಟಿ ಕೊಡುವ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ. ತಾಲೂಕಾಡಳಿತ …
Read More »
Laxmi News 24×7