ಬೈಲಹೊಂಗಲ ಭಾಗದ ಆರಾಧ್ಯ ದೈವ ಶ್ರೀ ಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಇಲಾಖೆಯಿಂದ ಸುಮಾರು 1.ಕೋಟಿ75 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆಗೊಂಡಿದ್ದು ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಇಂದು ಶ್ರೀ ಕ್ಷೇತ್ರದಲ್ಲಿ ಸಭೆಯನ್ನು ಮಾಡಲಾಯಿತು ಈ ಸಂದರ್ಭದಲ್ಲಿ ದೇವಸ್ಥಾನ ಕಮಿಟಿಯ ಸರ್ವ ಸದಸ್ಯರು , ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಸದಾಶಿವ ಬಡಿಗೆರ, ಸವದತ್ತಿ ತಹಸೀಲ್ದಾರಾದ ಮಲ್ಲಿಕಾರ್ಜುನ ಹೆಗ್ಗಣ್ಣವರ,ಅರಣ್ಯ ಇಲಾಖೆಯ ಅಧಿಕಾರಿಗಳು, ಸವದತ್ತಿಯ ಎಡಿಎಲ್ಆರ್, ಉಪಸ್ಥಿತರಿದ್ದರು.
Read More »ಅಯ್ಯೋ ವಿಧಿಯೇ! ಒಂದೇ ದಿನ ಹೃದಯಾಘಾತದಿಂದ ಅಣ್ಣ- ತಮ್ಮ ಸಾವು!
ಯಾದಗಿರಿ, (ಸೆಪ್ಟೆಂಬರ್ 02): ಒಂದೇ ಕುಟುಂಬದ ಇಬ್ಬರು ಸಹೋದರರು (Br0thers) ಹೃದಯಾಘಾತಕ್ಕೆ (heart attack) ಬಲಿಯಾಗಿದ್ದು, ಅಣ್ಣ ತಮ್ಮಸಾವಿನಲ್ಲೂ ಒಂದಾಗಿದ್ದಾರೆ. ಈ ಘಟನೆ ಯಾದಗಿರಿ (Yadgir) ಜಿಲ್ಲೆಯ ಸುರಪುರ ತಾಲೂಕಿಮ ಕೆಂಭಾವಿಯಲ್ಲಿ (kembhavi) ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತ ದುರ್ವೈವಿಗಳು. ಮೊದಲಿಗೆ ಅಣ್ಣ ಸಂಶುದ್ದೀನ್ ಹೃದಯಾಘಾತದಿಂದ ಮೃತಪಟ್ಟಿರುವ ಸುದ್ದಿ ಕೇಳಿ ತಮ್ಮ ಇರ್ಫಾನ್ ಗೂ ಸಹ ಹೃದಯಾಘಾತವಾಗಿದೆ. ಒಂದೇ ದಿನ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಎದೆ ನೋವು ಕಾಣಿಸಿಕೊಳ್ಳುತ್ತಿದ್ದಂತೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. …
Read More »ಮೃತದೇಹ ಸ್ವೀಕರಿಸಲೊಪ್ಪದ ಸಹೋದರ; ಅಂತ್ಯಕ್ರಿಯೆ ನೆರವೇರಿಸಿ ಮಾನವೀಯತೆ ಮೆರೆದ ಸಮಾಜಸೇವಕ
ಉಡುಪಿ : ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟ ವ್ಯಕ್ತಿಯ ಸಹೋದರ ಅಂತ್ಯಕ್ರಿಯೆಗೆ ಮೃತದೇಹ ಸ್ವೀಕರಿಸಲು ಒಪ್ಪದ ಕಾರಣ ಸಮಾಜ ಸೇವಕ ವಿಶು ಶೆಟ್ಟಿ ಅವರೇ ಮುಂದೆ ನಿಂತು ಮೃತನ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ರುದ್ರ ಭೂಮಿಯಲ್ಲಿ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಮೃತನ ಸಹೋದರನನ್ನು ಕರೆಯಿಸಿ ಕಾನೂನು ಪ್ರಕ್ರಿಯೆ ನಡೆಸಿದರು. ಕೊನೆಗೆ ಅಂತ್ಯಸಂಸ್ಕಾರ ನಡೆಸಲು ಮೃತ ದೇಹವನ್ನು ಪಡೆಯಲು ಸಹೋದರ ನಿರಾಕರಿಸಿದರು. …
Read More »ಬಿಜೆಪಿಯವರದ್ದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆ: ಸಿಎಂ
ಮೈಸೂರು: “ಧರ್ಮಸ್ಥಳಕ್ಕೆ ಬಿಜೆಪಿ ಕೈಗೊಂಡಿರುವುದು ಧರ್ಮ ಯಾತ್ರೆಯಲ್ಲ ರಾಜಕೀಯ ಯಾತ್ರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ SIT ತನಿಖೆ ನಡೆಯುತ್ತಿದೆ. ಬಿಜೆಪಿ ಈಗ ಎನ್.ಐ.ಎ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಹಾಗಾದರೆ ನಮ್ಮ ಪೊಲೀಸರ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ?” ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. “SIT ರಚನೆಯಾದ ಪ್ರಾರಂಭದಲ್ಲಿ ಎನ್ಐಎ ತನಿಖೆ ಮಾಡಿ ಎನ್ನಲಿಲ್ಲ. ನಂತರ ದೇಹಗಳು ಸಿಗದೇ ಹೋದಾಗ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳದ …
Read More »ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ.
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಅರ್ಜಿ ವಿಚಾರಣೆ ನಡೆಸಿದ 57ನೇ ಸೆಷನ್ಸ್ ನ್ಯಾಯಾಲಯ ಪವಿತ್ರಾ ಗೌಡ ಅರ್ಜಿಯನ್ನು ವಜಾಗೊಳಿಸಿದೆ. ಮಹಿಳೆ ಹಾಗೂ ಸಿಂಗಲ್ ಪೇರೆಂಟ್ ಆಗಿರುವುದರಿಂದ ಮಗಳ ಆರೈಕೆ ಮಾಡಬೇಕಿದೆ ಎಂಬ ಕಾರಣ ನೀಡಿ ಪವಿತ್ರಾ ಗೌಡ ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಪವಿತ್ರಾ ಗೌಡ ಅವರ ಮನವಿಯನ್ನ ಪರಿಗಣಿಸದ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾ …
Read More »ಗಣೇಶೋತ್ಸವಕ್ಕೆ ‘ಆಪರೇಷನ್ ಸಿಂಧೂರ’ ಟಚ್: ಗಣೇಶನೊಂದಿಗೆ ಭಾರತೀಯ ಸೈನಿಕರಿಗೂ ಪೂಜೆ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಿರುವ ಸಾರ್ವಜನಿಕ ಗಣೇಶ ಮೂರ್ತಿಗಳು ಒಂದಕ್ಕಿಂತ ಒಂದು ವಿಶಿಷ್ಟವಾಗಿವೆ. ಆಕರ್ಷಕ ಅಲಂಕಾರ, ಮಂಟಪಗಳು ಗಮನ ಸೆಳೆಯುತ್ತಿವೆ. ಇಲ್ಲೊಂದು ಮಂಡಳಿ ‘ಆಪರೇಷನ್ ಸಿಂಧೂರ’ ಟಚ್ ನೀಡಿದ್ದು, ಗಣೇಶನ ಜೊತೆಗೆ ಭಾರತೀಯ ಸೈನಿಕರಿಗೂ ಪೂಜೆ ಸಲ್ಲಿಸುವ ಮೂಲಕ ದೇಶಭಕ್ತಿ ಮೆರೆಯುತ್ತಿದೆ. ಒಂದೆಡೆ ಮಂಟಪದ ಹೊರಗೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಮನೆ ಮಾತಾಗಿದ್ದ ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಭಾವಚಿತ್ರಗಳು. ಮತ್ತೊಂದೆಡೆ, ಮಂಟಪದೊಳಗೆ ಕಾಲಿಡುತ್ತಿದ್ದಂತೆ …
Read More »ವಿಜಯಪುರ–ಮಂಗಳೂರು ನಡುವೆ ವಿಶೇಷ ರೈಲು ಇಂದಿನಿಂದ ಖಾಯಂ: ಟಿಕೆಟ್ ವಿವರ ಇಲ್ಲಿದೆ
ಸುಬ್ರಹ್ಮಣ್ಯ(ದಕ್ಷಿಣ ಕನ್ನಡ): ರೈಲು ಸಂಖ್ಯೆ 07377 ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಇಂದಿನಿಂದ ಅಂದರೆ ಸೆಪ್ಟೆಂಬರ್ 1ರಿಂದ ಹಾಗೂ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಸೆಪ್ಟೆಂಬರ್ 2ರಿಂದ ಖಾಯಂ ಸಂಚಾರ ಮಾಡಲಿದೆ. ಹೊಸ ದರ ಪಟ್ಟಿಯನ್ನು ರೈಲ್ವೇ ಇಲಾಖೆ ಬಿಡುಗಡೆ ಮಾಡಿದೆ. ಈಗಾಗಲೇ ರೈಲು ಸಂಖ್ಯೆ ಬದಲಾವಣೆಯೊಂದಿಗೆ ರೈಲು ಸಂಖ್ಯೆ 17377/78 ವಿಜಯಪುರ–ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನ ಟಿಕೆಟ್ ಬುಕ್ಕಿಂಗ್ ಆರಂಭಗೊಂಡಿದೆ. ಕಾಯ್ದಿರಿಸಿದ ದರ್ಜೆಯ …
Read More »ಮಹಿಳೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಮಾಜಿ ಪ್ರಿಯಕರ
ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ಹಾಡಹಗಲೇ ತನ್ನ ಮಾಜಿ ಪ್ರೇಯಸಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೈದ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಹೊಮ್ಮದೇವನಹಳ್ಳಿಯಲ್ಲಿ ಇಂದು ನಡೆಯಿತು. ಸುಮಾರು ಶೇ 80ರಷ್ಟು ದೇಹ ಸುಟ್ಟು ಹೋಗಿದ್ದರಿಂದ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಂಬತ್ತಳ್ಳಿಯ ನಿವಾಸಿ ವನಜಾಕ್ಷಿ (28) ಮೃತರು. ಹಂತಕ ಮೆಳೆನಲ್ಲಸಂದ್ರದ ಕ್ಯಾಬ್ ಚಾಲಕ ವಿಠ್ಠಲ್ (52) ಎಂಬಾತನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ವನಜಾಕ್ಷಿ ಅವರನ್ನು ದಾಖಲಿಸಲಾಗಿತ್ತು. ಆದರೆ …
Read More »ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಬಂಧಿತನಾದ ಶಾಸಕ ವೀರೇಂದ್ರ ಪ್ರಕರಣದ ದಾಖಲೆ ಕೇಳಿ ಇಡಿ ಸಮನ್ಸ್: ಅನಿಲ್ ಗೌಡ ಸಲ್ಲಿಸಿದ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು : ಅಕ್ರಮ ಬೆಟ್ಟಿಂಗ್ ಆರೋಪದಲ್ಲಿ ಶಾಸಕ ವೀರೇಂದ್ರ ಪಪ್ಪಿ ಬಂಧನ ಪ್ರಕರಣದಲ್ಲಿ ಕೆಲ ದಾಖಲೆ ಒದಗಿಸುವಂತೆ ಇ.ಡಿ (ಜಾರಿ ನಿರ್ದೇಶನಾಲಯ) ನೀಡಿರುವ ಸಮನ್ಸ್ ಪ್ರಶ್ನಿಸಿ ಆರ್.ಆರ್ ನಗರದ ಹನುಮಂತರಾಯಪ್ಪ ಪುತ್ರ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ಆದೇಶವನ್ನು ಮುಂದಿನ ಸೋಮವಾರ ಪ್ರಕಟಿಸುವುದಾಗಿ ಹೇಳಿದೆ. ತನಗೆ ಜಾರಿ ಮಾಡಿರುವ ಸಮನ್ಸ್ ಪ್ರಶ್ನಿಸಿ ಅನಿಲ್ ಗೌಡ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚ್ಚಿನ್ ಶಂಕರ್ …
Read More »ಹುಕ್ಕೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಭೆ
ಹುಕ್ಕೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರ ಸಭೆಯನ್ನು ಇಂದು ಹಮ್ಮಿಕೊಂಡು, ಮುಂಬರುವ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ಚುನಾವಣೆಯ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಹುಕ್ಕೇರಿ ತಾಲೂಕಿನ ಹರಗಾಪುರ ಗ್ರಾಮದವರು ಹಾಗೂ ಸಂಗಮ ಶುಗರ್ಸ್ ಅಧ್ಯಕ್ಷರಾದ ಶ್ರೀ ರಾಜೇಂದ್ರ ಪಾಟೀಲ ಅವರನ್ನು, ಬೆಳಗಾವಿ ಡಿಸಿಸಿ ಚುನಾವಣೆಯಲ್ಲಿ ಹುಕ್ಕೇರಿ ತಾಲೂಕಿನ ಅಭ್ಯರ್ಥಿಯಾಗಿ ಸರ್ವಾನುಮತದಿಂದ ಘೋಷಿಸಲಾಯಿತು. ಈ …
Read More »
Laxmi News 24×7