Breaking News

ರಾಜ್ಯ

ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು

ಬೆಳಗಾವಿ: ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ, ಕಾರಂಜಿ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿ ನಗರದ ಡಿಸಿ ಕಚೇರಿಯಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಎಸ್‍ಡಿಪಿಐ ಕಾರ್ಯಕರ್ತರು, ವಾರಾಣಸಿಯ ಜ್ಞಾನವಾಪಿ ಮಸೀದಿ ಐತಿಹಾಸಿಕ ಮಸೀದಿಗಳಲ್ಲಿ ಒಂದಾಗಿದೆ. ಜ್ಞಾನವಾಪಿ ಮಸೀದಿ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದ್ದು ಮಸೀದಿಯಲ್ಲಿ ದೊರೆತಿರುವುದು ಶಿವಲಿಂಗವಲ್ಲ. ಅದೊಂದು ಕಾರಂಜಿ. …

Read More »

ಅಧಿಕೃತವಾಗಿ ಬಿಜೆಪಿ ಸೇರಿದ ಬಸವರಾಜ್ ಹೊರಟ್ಟಿ

ಬೆಂಗಳೂರು: ವಿಧಾನ ಪರಿಷತ್‌ನ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಆರ್‌ಟಿನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಬಸವರಾಜ್ ಹೊರಟ್ಟಿ ಬಿಜೆಪಿಗೆ ಸೇರಿದ್ದಾರೆ. ಸಿಎಂ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಗೋವಿಂದ್ ಕಾರಜೋಳ, ಸಿ.ಸಿ.ಪಾಟೀಲ್, ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

Read More »

ಕರ್ನಾಟಕ ಬಿಜೆಪಿಗೆ ಯಡಿಯೂರಪ್ಪ ಅವರೇ ಅನಿವಾರ್ಯ ,B.S.Y.ಗೆ ಶರಣಾದ B.J.P.

ಕರ್ನಾಟಕ ಬಿಜೆಪಿಗೆ ಯಡಿಯೂರಪ್ಪ ಅವರೇ ಅನಿವಾರ್ಯ ಅಂತ ವರಿಷ್ಠರಿಗೆ ಮನವರಿಕೆಯಾಗಿದೆ. ಅವರ ಬೇಡಿಕೆಯಂತೆ ಪುತ್ರನಿಗೆ ಸೂಕ್ತ ಸ್ಥಾನಮಾನ ನೀಡಲು ಹೈಕಮಾಂಡ್ ಒಲವು ತೋರಿದೆ. ಈ ಮೂಲಕ ಹಲವು ದಶಕಗಳಿಂದ ಬಿಎಸ್‌ವೈ ಹಿಡಿತದಲ್ಲಿದ್ದು ಕೈ ತಪ್ಪಿ ಹೋಗಲಿದೆ ಎನ್ನುವಷ್ಟರಲ್ಲೇ ಮತ್ತೆ ರಾಜ್ಯ ಬಿಜೆಪಿ ಅವರ ತೆಕ್ಕೆಗೆ ಜಾರತೊಡಗಿದೆ. ಹೌದು. ವಿಜಯೇಂದ್ರ ಅವರ ಹೆಸರನ್ನು ರಾಜ್ಯ ಕೋರ್ ಕಮಿಟಿ ಪರಿಷತ್‌ಗೆ ಶಿಫಾರಸ್ಸು ಮಾಡುವುದರೊಂದಿಗೆ ಪಕ್ಷ ಯಡಿಯೂರಪ್ಪ ಅವರಿಗೆ ಶರಣಾಗಿದೆ. ವರಿಷ್ಠರು ಒಲವು ತೋರಿದ …

Read More »

ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ 14 ಕುರಿಗಳು ಸಾವು

ವಿಜಯಪುರ :  ಜಿಲ್ಲೆಯ  ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಇದೇ ವೇಳೆ ಸಿಡಿಲು ಬಡಿದು 14 ಕುರಿಗಳು ಮೃತಪಟ್ಟಿವೆ. ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮದ ಹೊರ ಭಾಗದಲ್ಲಿ ಕುರಿಗಳನ್ನು ಮೇಯಿಸುವಾಗ ಈ ದುರ್ಘಟನೆ ನಡೆದಿದೆ.   ಇವು ವಿಜಯಪುರ ತಾಲೂಕಿನ ಅಲಿಯಾ ಬಾದ ಗ್ರಾಮದ ದೊಂಡಿಬಾ ಸಂಡಗೆ ಎಂಬವರಿಗೆ ಸೇರಿದ ಕುರಿಗಳು. ಕುರಿ ಮೇಯಿಸಲು ಮಸೂತಿ ಗ್ರಾಮದ ಬಳಿ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ.  ಕುರಿಗಾಹಿ …

Read More »

ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಶೀಘ್ರ 8650 ಕೋಟಿ ರೂ. ಬಿಡುಗಡೆ: ಬೊಮ್ಮಾಯಿ

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಜ್ಜುಗೊಳಿಸುವ ಜತೆಗೆ ಸರ್ಕಾರದ ವರ್ಚಸ್ಸು ವೃದ್ಧಿಗೆ ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಎಲ್ಲ 224 ಕ್ಷೇತ್ರಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿದ್ದಾರೆ.   ರಾಜ್ಯದಲ್ಲಿ ಸರ್ಕಾರ ಇದೆ ಎಂಬ ಭಾವನೆಯೇ ಕಾಣುತ್ತಿಲ್ಲವೆಂದು ಬಿಜೆಪಿ ವರಿಷ್ಠರು, ಸಂಘ ಪರಿವಾರದ ಮುಖಂಡರೇ ಆಂತರಿಕವಾಗಿ ವ್ಯಕ್ತಪಡಿಸುತ್ತಿದ್ದ ಅಭಿಪ್ರಾಯಗಳನ್ನು ಬದಲಾಯಿಸುವ ಉದ್ದೇಶದಿಂದ ಬೊಮ್ಮಾಯಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ಆಡಳಿತ ಪಕ್ಷದ ಶಾಸಕರು ಈ ಬಗ್ಗೆ …

Read More »

ಸಚಿವಾಲಯದಲ್ಲಿ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು, ಮೇ 17: ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾತೃ ವೃಂದದಡಿ ವರದಿಗಾರರು-2, ಕಂಪ್ಯೂಟರ್ ಆಪರೇಟರ್-4, ಕಿರಿಯ ಸಹಾಯಕ-10, ಬೆರಳಚ್ಚುಗಾರರು-1, ದಲಾಯತ್-23 ಹೀಗೆ ಒಟ್ಟು 43 ಹುದ್ದೆಗಳು ಹಾಗೂ ಸ್ಥಳೀಯ ವೃಂದದಡಿ ವರದಿಗಾರರು-3, ಶೀಘ್ರಲಿಫಿಗಾರರು-2, ಕಿರಿಯ ಸಹಾಯಕರು-3, ಸ್ವಾಗತಕಾರರು-1, ಬೆರಳಚ್ಚುಗಾರರು-3, ಬಡಗಿ-1, ವಾಹನಚಾಲಕರು-8, ದಲಾಯತ್-11, ಸ್ವೀಪರ್-2 ಹೀಗೆ ಒಟ್ಟು 34 …

Read More »

ವಿದ್ಯುತ್ ಕಂಬ ಏರಿ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡ 21ರ ಯುವತಿ

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಪುರುಷರಿಗೆ ಸರಿಸಮಾನವಾಗಿ ಸಾಧನೆ ಮಾಡುತ್ತಿದ್ದಾರೆ. ಮನೆ ಜವಾಬ್ದಾರಿಯಿಂದ ಹಿಡಿದು ದೇಶವನ್ನು ಮುನ್ನೆಡೆಸುವ ಮಹತ್ತರ ಜವಾಬ್ದಾರಿವರೆಗೂ ಮಹಿಳೆಯರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪುರುಷರಿಗೆಂದೇ ಮೀಸಲಾಗಿರುವ ವೃತ್ತಿಗಳಲ್ಲಿಯೂ ಈಗ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ಈ ಮೂಲಕ ತಾವು ಯಾರಿಗೂ ಕಡಿಮೆ ಇಲ್ಲವೆಂಬುದನ್ನು ಸಾಧಿಸಿ ತೋರಿಸುತ್ತಿದ್ದಾರೆ. ಇದಕ್ಕೆ ಸ್ಪಷ್ಟ ನಿದರ್ಶನವೇ ತೆಲಂಗಾಣದ ಈ 21 ವರ್ಷದ ಯುವತಿ. ತೆಲಂಗಾಣದ ಈ ಯುವತಿ ಯಶಸ್ವಿಯಾಗಿ ಲೈಟ್ ಕಂಬ ಹತ್ತುವ …

Read More »

ಹಿರಿಯ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು‌ ಬೆಂಗಳೂರಿನಲ್ಲಿ ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2022-23 ನೇ ಸಾಲಿನ ಬಜೆಟ್ ಅನುಷ್ಠಾನ, ಆಡಳಿತಕ್ಕೆ ಚುರುಕು, ಕಡತ ವಿಲೇವಾರಿ ಹಾಗೂ ಇನ್ನಿತರೆ ವಿಷಯಗಳ ಕುರಿತು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ವಿ ಸೋಮಣ್ಣ, ಜೆ ಸಿ ಮಾಧುಸ್ವಾಮಿ, ಮುನಿರತ್ನ, ಎಂ ಟಿ ಬಿ ನಾಗರಾಜ, ಡಾ. ನಾರಾಯಣಗೌಡ, ಅರಗ ಜ್ಞಾನೇಂದ್ರ, ಬೈರತಿ ಬಸವರಾಜ ಸೇರಿದಂತೆ ಎಲ್ಲ …

Read More »

ಪರಿಷತ್ ಸ್ಥಾನದ ಮೇಲೆ ಕಣ್ಣಿಟ್ಟ ಸಿ.ಎಂ.ಇಬ್ರಾಹಿಂ; ಜೆಡಿಎಸ್ ನಾಯಕರಿಗೆ ಕಸಿವಿಸಿ

ಬೆಂಗಳೂರು: ಬೇಷರತ್ ಆಗಿ ಜೆಡಿಎಸ್ ಸೇರುತ್ತೇನೆ ಎಂದಿದ್ದ ಸಿ.ಎಂ.ಇಬ್ರಾಹಿಂ ಈಗ‌ ಪರಿಷತ್ ಸದಸ್ಯ ಸ್ಥಾನದ‌ ಮೇಲೆ ಕಣ್ಣಿಟ್ಟಿರುವ ವಿಚಾರ ಜೆಡಿಎಸ್ ನಾಯಕರಿಗೆ ಕಸಿವಿಸಿ ಸೃಷ್ಟಿಸಿದೆ. ಬದಲಾದ ಸನ್ನಿವೇಶದಲ್ಲಿ ಪರಿಷತ್ ಸ್ಥಾನಕ್ಕೆ ಒತ್ತಡ ಹಾಕುತ್ತಿರುವ ಇಬ್ರಾಹಿಂ, ನನಗೆ ಅವಕಾಶ ನೀಡಿದರೆ ಮುಸ್ಲಿಂ ಸಮುದಾಯಕ್ಕೆ ಒಳ್ಳೆಯ ಸಂದೇಶ ಕೊಟ್ಟಂತಾಗಲಿದೆ ಎಂಬ ದಾಳ ಉರುಳಿಸಿದ್ದಾರೆ. ಇಲ್ಲದೇ ಹೋದರೆ ಇಡೀ ಸಮುದಾಯ ಅನುಮಾನದಿಂದಲೇ ನೋಡುವಂತಾಗಲಿದೆ. ನನಗೆ ಪರಿಷತ್ ಸದಸ್ಯ ಸ್ಥಾನಕ್ಕೆ ಅವಕಾಶ ನೀಡಿ ಎಂದು ಇಬ್ರಾಹಿಂ …

Read More »

ಬೇರೆಯವರ ಕೈಯಿಂದ ಕೇಕ್‌ ತಿನ್ನಿಸಿದ ಪ್ರಿಯಾಂಕಾ; ಡಿಕೆಶಿ ಬಗ್ಗೆ ಬಿಜೆಪಿ ಲೇವಡಿ

ದೆಹಲಿ: ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹುಟ್ಟುಹಬ್ಬ. ಅವರು ದೆಹಲಿಯಲ್ಲಿದ್ದುದರಿಂದ ದೆಹಲಿಯಲ್ಲಿ ಕಾಂಗ್ರೆಸ್‌ ಕಚೇರಿಯಲ್ಲೇ ಹುಟ್ಟುಹಬ್ಬ ಆಚರಿಸಲಾಗಿದೆ. ಈ ವೇಳೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಕೂಡಾ ಹಾಜರಿದ್ದರು. ಡಿ.ಕೆ.ಶಿವಕುಮಾರ್‌ಗೆ ಕೇಕ್‌ ತಿನ್ನಿಸಲು ಕೇರ್‌ ಎತ್ತಿಕೊಂಡ ಪ್ರಿಯಾಂಕಾ ಗಾಂಧಿ, ಅದನ್ನು ಬೇರೆ ನಾಯಕರೊಬ್ಬರ ಕೈಗೆ ಕೊಟ್ಟು ಅವರಿಂದ ಡಿ.ಕೆ.ಶಿವಕುಮಾರ್‌ಗೆ ಕೇಕ್‌ ತಿನ್ನಿಸಿದರು.   ಈ ವಿಡಿಯೋವನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, ಡಿ.ಕೆ.ಶಿವಕುಮಾರ್‌ ಅವರನ್ನು ಲೇವಡಿ ಮಾಡಿದೆ. ಡಿ.ಕೆ.ಶಿವಕುಮಾರ್ ಅವರೇ, ಅವರ …

Read More »