Breaking News

ರಾಜ್ಯ

ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಸಂಕಷ್ಟಕ್ಕೆ ಸಿಲುಕಿದ ಮಾಜಿ ಸಿಎಂ ಸಿದ್ದರಾಮಯ್ಯ?

ಮೈಸೂರು: ಒಂದು ಕುಟುಂಬಕ್ಕೆ ಒಂದೇ ಟಿಕೆಟ್​ ಎಂಬ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ವಿರುದ್ಧ ಮೇಲುಗೈ ಸಾಧಿಸಲೂ ಹೈಕಮಾಂಡ್​ ತೀರ್ಮಾನ ಸಿದ್ದರಾಮಯ್ಯಗೆ ತೊಡಕಾಗಿದೆ.   ಮೈಸೂರು ಜಿಲ್ಲೆಯಲ್ಲೇ ಮೂರು ಕುಟುಂಬಗಳು ಕಾಂಗ್ರೆಸ್​ನಿಂದ ಜೋಡಿ ಟಿಕೆಟ್‌ಗೆ ಟವೆಲ್ ಹಾಕಿವೆ. 11 ರಲ್ಲಿ 6 ಕ್ಷೇತ್ರಗಳು ಅಪ್ಪ-ಮಕ್ಕಳಿಗೆ ದಕ್ಕುತ್ತವಾ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಸ್ವತಃ ಸಿದ್ದರಾಮಯ್ಯ ಮನೆಯಲ್ಲೇ …

Read More »

ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ; ಹಾಲಿ ಸಂಸದರಿಗೆ ಇಲ್ಲ ಟಿಕೆಟ್; 8 ಕ್ಷೇತ್ರಗಳಲ್ಲಿ ಭಾರಿ ಬದಲಾವಣೆಗೆ ಪ್ಲಾನ್

ಬೆಂಗಳೂರು: ವಿಧಾನಸಭಾ ಚುನಾವಣೆ ಬೆನ್ನಲ್ಲೇ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಹಲವು ಮಹತ್ವದ ಬದಲಾವಣೆ ಮಾಡಲು ಯೋಜನೆ ರೂಪಿಸಿದೆ. 2024ರ ಲೋಕಸಭಾ ಚುನಾವಣೆಗೆ ಹೊಸಬರಿಗೆ ಆದ್ಯತೆ ನೀಡಲು ಪ್ಲಾನ್ ಮಾಡಿರುವ ಬಿಜೆಪಿ ಹಿರಿಯ ಸಂಸದರಿಗೆ ಟಿಕೆಟ್ ನೀಡದಿರಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ರಾಜ್ಯದ 8 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಬದಲಾವಣೆಗೆ ಚಿಂತನೆ ನಡೆಸಿರುವ ಬಿಜೆಪಿ ವರಿಷ್ಠರು, ಹಾಲಿ ಸಂಸದರಿಗೆ ಟಿಕೆಟ್ ಕೊಡದಿರಲು ನಿರ್ಧರಿಸಿದೆ. ಬೆಳಗಾವಿ ಕ್ಷೇತ್ರದ ಹಾಲಿ ಸಂಸದೆ ಮಂಗಲಾ …

Read More »

ಮೇ. 20 ರಂದು ಗ್ರಾಮ ಪಂಚಾಯಿತಿ ಚುನಾವಣೆ : ನೌಕರರಿಗೆ ವೇತನ ಸಹಿತ ರಜೆ ಘೋಷಿಸಿ ಚುನಾವಣಾ ಆಯೋಗ ಆದೇಶ

ಬೆಂಗಳೂರು : 2022 ರ ಏಪ್ರಿಲ್ ನಿಂದ 2022 ರ ಜುಲೈವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದಾಗಿ ಖಾಲಿಇರುವ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ. ಮೇ. 20 ರಂದು ಈ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಚುನಾವಣೆ ನಡೆಯುವ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, …

Read More »

ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

  ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ …

Read More »

ವಿವಿಧ ಗ್ರಾಮ ಪಂಚಾಯಿತಿಗಳ 314 ಸ್ಥಾನಗಳಿಗೆ ಚುನಾವಣೆ: ಮೇ 20 ರಂದು ಮತದಾನ

ಬೆಂಗಳೂರು: ಇದೇ ಜುಲೈ ಒಳಗೆ ಅವಧಿ ಮುಕ್ತಾಯವಾಗುವ ನಾಲ್ಕು ಗ್ರಾಮ ಪಂಚಾಯಿತಿಗಳ 105 ಸ್ಥಾನಗಳು ಮತ್ತು ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಗೆ ತೆರವಾಗಿರುವ 209 ಸದಸ್ಯ ಸ್ಥಾನಗಳಿಗೆ ಮೇ 20 ರಂದು ಚುನಾವಣೆ ನಡೆಯಲಿದ್ದು, ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ.   ಧಾರವಾಡ ಜಿಲ್ಲೆಯ ಚಾಕಲಬ್ಬಿ, ಬೆಂಗಳೂರು ನಗರ ಜಿಲ್ಲೆಯ ಕಗ್ಗಲೀಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು, ಬಾಗಲಕೋಟೆ ಜಿಲ್ಲೆ ಸಾವಳಗಿ ಗ್ರಾಮ ಪಂಚಾಯಿತಿಗಳ 105 ಸ್ಥಾನಗಳಿಗೆ ಚುನಾವಣೆ …

Read More »

ಸಭಾಪತಿ ಸ್ಥಾನ ಮತ್ತು ಜೆಡಿಎಸ್‌ಗೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನ ಮತ್ತು ಜೆಡಿಎಸ್‌ ಪಕ್ಷಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಮಂಗಳವಾರ ಅವರು ಬಿಜೆಪಿ ಸೇರಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ನನ್ನ ಹುದ್ದೆಗೆ, ಪರಿಷತ್‌ ಸದಸ್ಯ ಸ್ಥಾನಕ್ಕೆ ಮತ್ತು ಜೆಡಿಎಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಮಂಗಳವಾರ ಬಿಜೆಪಿಯನ್ನು ಸೇರ್ಪಡೆ ಆಗುತ್ತೇನೆ’ ಎಂದು ತಿಳಿಸಿದರು. ‘ನನ್ನ ಜತೆಗಿರುವ ಕೆಲವು ಕಾರ್ಯಕರ್ತರು ಪಕ್ಷ ಬದಲಿಸುವಂತೆ ಒತ್ತಡ ಹೇರಿದ್ದರು. ಅನಿವಾರ್ಯವಾಗಿ ಬಿಜೆಪಿ ಸೇರುತ್ತಿದ್ದೇನೆ. ಅಮಿತ್‌ ಶಾ …

Read More »

ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲು

ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರು ಪಾಲಾಗಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. ಸುನಿತಾ ಲಕ್ಷ್ಮಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), ಸುನಿತಾ ಲೋಕೆಶ್ ಲಮಾಣಿ(10) ಮೃತ ದುರ್ದೈವಿಗಳಾಗಿದ್ದಾರೆ. ಕೃಷಿ ಹೊಂಡದಲ್ಲಿ ನೀರು ಕುಡಿಯುವಾಗ ಓರ್ವ ಬಾಲಕಿ ನೀರು ಪಾಲಾಗಿದ್ದಾಳೆ. ಆಕೆಯನ್ನು ಉಳಿಸಲು ಹೋಗಿ ಮತ್ತಿಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿದ್ದಾರೆ. ಘಟನಾ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಬಾಲಕಿಯರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ

Read More »

ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ

ಶಿವಮೊಗ್ಗ: 2023ರ ಚುನಾವಣೆ ಶಿವಮೊಗ್ಗ ಜಿಲ್ಲೆ ಪಾಲಿಗಷ್ಟೇ ಅಲ್ಲದೆ ರಾಜ್ಯ ರಾಜಕಾರಣದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡುವುದು ನಿಶ್ಚಿತ. ಬಿ.ಎಸ್‌.ಯಡಿಯೂರಪ್ಪ, ಕೆ.ಎಸ್‌.ಈಶ್ವರಪ್ಪ ನಿರ್ಗಮನದಿಂದ ತೆರವಾಗುವ ಕ್ಷೇತ್ರಗಳಿಗೆ ಮುಂದ್ಯಾರು? ಬಣ ರಾಜಕಾರಣದಿಂದ ಕಂಗೆಟ್ಟಿರುವ ಕಾಂಗ್ರೆಸ್‌ ವರಿಷ್ಠರು ಇದಕ್ಕೆ ಮದ್ದು ಅರೆಯುವರೆ? ಜೆಡಿಎಸ್‌ ತನ್ನ ಅಭ್ಯರ್ಥಿಗಳನ್ನು ಉಳಿಸಿಕೊಳ್ಳುವುದೇ? ಎಂಬುದೆಲ್ಲ ಚುನಾವಣೆಗೆ ವರ್ಷವಿರುವಾಗಲೇ ಚರ್ಚೆಗೆ ಗ್ರಾಸವಾಗಿದೆ. ಉತ್ತರಾಧಿಕಾರಿ ಯಾರು?: ಶಿಕಾರಿಪುರದಿಂದ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸ್ಪರ್ಧಿಸುವುದಿಲ್ಲ ಎಂಬ ಮಾತು ಪಕ್ಷದೊಳಗೆ ಕೇಳಿ ಬರುತ್ತಿದೆ. ಹಾಗಾದರೆ ಅವರ …

Read More »

ಬಂಗಾಳ ಕೊಲ್ಲಿಯಲ್ಲಿವಾಯುಭಾರ ಕುಸಿತ, ನಾಳೆಯಿಂದ ರಾಜ್ಯಾದ್ಯಂತ ಭಾರೀ ಮಳೆ:

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18(ನಾಳೆ)ರಿಂದ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.   ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದು ಮತ್ತು ನಾಳೆ ಗುಡುಗು-ಮಿಂಚುಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದ್ದು, ಯೆಲ್ಲೋ …

Read More »

ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು: ಸಿದ್ದಣ್ಣ ಮೇಟಿ

ಬೆಳಗಾವಿ/ಪಣಜಿ: ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು ಎಂದು ಗೋವಾ ಕನ್ನಡ ಮಹಾಸಂಘದ ಗೌರವಾಧ್ಯಕ್ಷ ಸಿದ್ದಣ್ಣ ಮೇಟಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಗೋವಾ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಗೋವಾದ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದಣ್ಣ ಮೇಟಿ, ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು. ಗೋವಾಗೆ ಹರಿಯುವ ಮಹದಾಯಿ ನೀರನ್ನು ಕರ್ನಾಟಕ ಸರ್ಕಾರ ನಿಲ್ಲಿಸಬಾರದು. ನಮ್ಮ ಕರ್ಮಭೂಮಿ ಗೋವಾ, ಜನ್ಮಭೂಮಿ ಕರ್ನಾಟಕ. ಗೋವಾ ನಮಗೆ ಅನ್ನ …

Read More »