ಕೊಳ್ಳೇಗಾಲ: ಪತ್ನಿಯ ಕತ್ತು ಹಿಸುಕಿ ಪತಿಯೇ ಕೊಲೆ ಮಾಡಿರುವ ಘಟನೆ ಪಟ್ಟಣದ ಕೊಳ್ಳೇಗಾಲದ ಮುಡಿಗುಂಡ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಚಿನ್ನಮ್ಮ (30) ಮೃತ ದುರ್ದೈವಿ. 10 ವರ್ಷ ಹಿಂದೆ ಕುಮಾರ್ (35) ಹಾಗೂ ಚಿನ್ನಮ್ಮ ಮುದುವೆಯಾಗಿದ್ದರು. ಇವರಿಬ್ಬರ ನಡುವೆ ಮನಸ್ತಾಪವಿದ್ದ ಹಿನ್ನೆಲೆ, ಪತಿ ಮುನಿಸಿಕೊಂಡು ತವರು ಮನೆಗೆ ಹೋಗಿದ್ದಳು. ಗುರುವಾರ ಮುಳ್ಳೂರು ಗ್ರಾಮಸ್ಥರ ಸಮ್ಮಖದಲ್ಲಿ ನ್ಯಾಯ ಪಂಚಾಯಿತಿ ಮಾಡಿ, ಗಂಡನೊಂದಿಗೆ ಕಳುಹಿಸಲಾಗಿತ್ತು. ಮತ್ತೆ ಜಗಳ ಮುಂಜಾನೆ ಆರಂಭವಾಗುತ್ತಿದಂತೆ ಪತಿ, ಪತ್ನಿಯನ್ನು ಕೊಲೆ …
Read More »ಎಳೆನೀರು ಮಾರುತ್ತಿದ್ದ ಮಹಿಳೆಯ ಮಾಂಗಲ್ಯ ಸರ ದೋಚಿ ಪರಾರಿ
ಗಂಗಾವತಿ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಗೆ ಆಗಮಿಸುವ ಪ್ರವಾಸಿಗರಿಗೆ ಎಳೆನೀರು, ತೆಂಗಿನಕಾಯಿ ಮಾರಾಟ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಕಳ್ಳರು ದೋಚಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ. ಹನುಮನಹಳ್ಳಿ ಗ್ರಾಮದ ಖಾಜಾಬಿ ಹತ್ತಿರ ಬೈಕ್ ನಲ್ಲಿಆಗಮಿಸಿದ ಮೂವರು ತೆಂಗಿನ ಕಾಯಿ ಖರೀದಿಸುವ ನೆಪದಲ್ಲಿ ಮಹಿಳೆಯ ಕತ್ತಿನಲ್ಲಿದ್ದ 2ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.ಶುಕ್ರವಾರ ಅಮವಾಸ್ಯೆಯಾಗಿದ್ದರಿಂದ ಹೆಚ್ಚಿನ ಭಕ್ತರು ಅಂಜನಾದ್ರಿ ಬೆಟ್ಟಕ್ಕೆ ಆಗಮಿಸುತ್ತಿದ್ದು, ಶನಿವಾರ, ಮಂಗಳವಾರ ಅಮಾವಾಸ್ಯೆ ಮತ್ತು ಹುಣ್ಣಿಮೆಯಂದು …
Read More »ಸಹಕಾರ ಸಮ್ಮೇಳನ: ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಉದ್ಘಾಟನೆ
ಬೆಂಗಳೂರು: ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಸಹಕಾರ ಸಮ್ಮೇಳನದಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ “ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್” ಉದ್ಘಾಟಿಸಲಾಯಿತು. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ನಂದಿನಿ ಕ್ಷೀರ ಸಮೃದ್ದಿ ಸಹಕಾರ ಬ್ಯಾಂಕ್ ಲಾಂಛನ ಬಿಡುಗಡೆ ಮಾಡಿದರು. ಸಮಾರಂಭದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಕರ್ನಾಕಟದಲ್ಲಿ ಸಹಕಾರಿ ರಂಗ ಮಹತ್ವದ ಪಾತ್ರ ವಹಿಸಿದೆ. ಸಹಕಾರ ಗ್ರಾಮೀಣ ಆರ್ಥಿಕ ಚಟುವಟಿಕೆಗೆ ದೊಡ್ಡ …
Read More »ಕಾವಿ ತೊಟ್ಟು ಜನರನ್ನು ವಂಚಿಸುತ್ತಿದ್ದ ಇಬ್ಬರಿಗೆ ಗ್ರಾಮಸ್ಥರಿಂದ ಧರ್ಮದೇಟು
ಹಾವೇರಿ: ಕಾವಿ ತೊಟ್ಟು ಜನರನ್ನು ವಂಚಿಸುತ್ತಿದ್ದ ಇಬ್ಬರಿಗೆ ಧರ್ಮದೇಟು ನೀಡಿದ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಾರಡಗಿ ಗ್ರಾಮದ ಬಳಿಯ ಜೇಕಿನಕಟ್ಟಿ ರಸ್ತೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆ ಮೂಲದ ಇಬ್ಬರು ವ್ಯಕ್ತಿಗಳು ಕಾವಿ ತೊಟ್ಟು ಮನೆಮನೆಗೆ ತೆರಳಿ ಜನರಿಂದ ಹಣ ಸಂಗ್ರಹಿಸುತ್ತಿದ್ದರು. ಬಳಿಕ ಗ್ರಾಮದ ಹೊರವಲಯಕ್ಕೆ ಬಂದು ಕಾವಿ ಕಳಚಿ ಬೇರೆ ಬಟ್ಟೆ ತೊಟ್ಟು ಓಡಾಡುತ್ತಿದ್ದರು ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ವಿಚಾರವನ್ನು ಗಮನಿಸಿದ ಗ್ರಾಮಸ್ಥರು ಇಬ್ಬರನ್ನು ಬೆನ್ನಟ್ಟಿ ಹಿಡಿದು …
Read More »ಶಾಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿ 20 ಮಕ್ಕಳು ಅಸ್ವಸ್ಥ
ಪಾಟ್ನಾ: ಶಾಲೆಯಲ್ಲಿ ಮಧ್ಯಾಹ್ನ ವೇಳೆ ನೀಡಲಾಗಿದ್ದ ಉಪಹಾರ ಸೇವಿಸಿ 20 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಬಿಹಾರದ ಮಾಧೇಪುರ ಜಿಲ್ಲೆಯ ಕಾಶಿಪುರದಲ್ಲಿ ಬೆಳಕಿಗೆ ಬಂದಿದೆ. ಮಕ್ಕಳು ಸೇವಿಸಿದ ಆಹಾರ ಕಲುಷಿತಗೊಂಡಿದ್ದರಿಂದ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಹುತೇಕ ಮಕ್ಕಳು ಸಹಜ ಸ್ಥಿತಿಗೆ ಮರಳಿದ್ದು, ಇಬ್ಬರು ಮಕ್ಕಳಿಗೆ ಇನ್ನೂ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರಾದ ಡಾ.ಮುಖೇಶ್‌ಕುಮಾರ್ ತಿಳಿಸಿದ್ದಾರೆ. ಘಟನೆ ಸಂಬಂಧ ಶಾಲಾ ಶಿಕ್ಷಕಿ ಬಬಿತಾ ಕುಮಾರಿ ಅವರಿಂದ ಮಾಹಿತಿ ಪಡೆದ ಬ್ಲಾಕ್ ಶಿಕ್ಷಣಾಧಿಕಾರಿ …
Read More »ಇಲಿ ಕಚ್ಚಿದ್ದಕ್ಕೆ ವ್ಯಕ್ತಿಗೆ ಐಸಿಯುವಿನಲ್ಲಿ ಚಿಕಿತ್ಸೆ
ಹೈದರಾಬಾದ್: ತೆಲಂಗಾಣದ ವಾರಂಗಲ್‍ನ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಯೊಂದು ರೋಗಿಯೊಬ್ಬರಿಗೆ ಕಚ್ಚಿದ್ದರಿಂದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಆದರೀಗ ನಾಲ್ಕು ದಿನಗಳ ಹಿಂದೆ ವಾರಂಗಲ್‍ನ ಎಂಜಿಎಂ ಆಸ್ಪತ್ರೆಯ ಐಸಿಯುವಿನಲ್ಲಿ ದಾಖಲಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ರೋಗಿಯು ಇಲಿ ಕಚ್ಚಿದಾಗಿಲಿಂದಲೂ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಅವರಿಗೆ ಉಸಿರಾಡಲು ವೆಂಟಿಲೇಟರ್ ಅಳವಡಿಸಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆಯ ಬಳಿಕ ರಾಜ್ಯ ಸರ್ಕಾರವು ಇದೀಗ ಸರ್ಕಾರಿ ಆಸ್ಪತ್ರೆಯಲ್ಲಿದ್ದ ಐಸಿಯು …
Read More »ಕರಡಿವೇಷ ಹಾಕಿ ಓಡಾಡಿದ್ರೆ ತಿಂಗಳಿಗೆ 15 ಸಾವಿರ ವೇತನ: ಹೀಗೊಂದು ವಿಶಿಷ್ಟ ಉದ್ಯೋಗ
ತೆಲಂಗಾಣ: ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯ ರೈತರು ತಮ್ಮ ಬೆಳೆಯನ್ನು ಮಂಗಗಳು ಮತ್ತು ಕಾಡುಹಂದಿಗಳಿಂದ ರಕ್ಷಿಸಲು ವಿಶಿಷ್ಟ ಉಪಾಯವೊಂದನ್ನು ಮಾಡಿದ್ದಾರೆ. ವ್ಯಕ್ತಿಯೊಬ್ಬನಿಗೆ ಕರಡಿ ವೇಷ ಹಾಕಿ ತಮ್ಮ ಹೊಲದಲ್ಲಿ ನಿಲ್ಲಿಸುವ ಮೂಲಕ ಅವರು ಕೋತಿಗಳಿಂದ ಬೆಳೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ತೆಲಂಗಾಣದ ಸಿದ್ದಿಪೇಟೆಯ ಕೋಹೆಡದ ರೈತ ಭಾಸ್ಕರ್ ರೆಡ್ಡಿ ಕೋತಿಗಳು ಮತ್ತು ಕಾಡುಹಂದಿಗಳು ಬೆಳೆ ಹಾನಿ ಮಾಡುವುದನ್ನು ತಡೆಯಲು ಕರಡಿಯ ವೇಷ ಧರಿಸಿ ಹೊಲದಲ್ಲಿ ಓಡಾಡಲು ವ್ಯಕ್ತಿಯನ್ನು ನೇಮಿಸಿದ್ದಾರೆ. ಈ ಫೋಟೋ ಮತ್ತು ವಿಡಿಯೋಗಳು …
Read More »ಕಾಂಗ್ರೆಸ್‌ಗೆ 150 ಸ್ಥಾನಕ್ಕಿಂತ ಒಂದು ಸ್ಥಾನವೂ ಕಡಿಮೆ ಬರಬಾರದು: ರಾಹುಲ್ ಗಾಂಧಿ
ಬೆಂಗಳೂರು: ರಾಜ್ಯದಲ್ಲಿ ನಡೆಯುವ ಮುಂದಿನ ಚುನಾವಣೆಯಲ್ಲಿ 150 ಸ್ಥಾನಕ್ಕಿಂತ ಒಂದು ಸ್ಥಾನವೂ ಕಡಿಮೆ ಬರಬಾರದು. ಇದು ನಾನು ನಿಮಗೆ ಕೊಡುತ್ತಿರುವ ಟಾಸ್ಕ್ ಎಂದು ಕಾಂಗ್ರೆಸ್ ನಾಯಕರಿಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ. ರಾಜ್ಯ ಪ್ರವಾಸ ಕೈಗೊಂಡಿರುವ ರಾಹುಲ್ ಗಾಂಧಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಕುರಿತಾಗಿ ಮಾತನಾಡಿ, ಕರ್ನಾಟಕ ಸ್ಪಿರಿಟ್ ಅಫ್ ಕಾಂಗ್ರೆಸ್ ಪಾರ್ಟಿ. ದೇಶ, ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳಿವೆ. ಬಿಜೆಪಿ ಸರ್ಕಾರ ಹಣದ ಮೇಲೆ ಅಧಿಕಾರಕ್ಕೆ ಬಂದಿದೆ. …
Read More »130 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಶಂಕು ಸ್ಥಾಪನೆ
ಬೆಳಗಾವಿ: ನಗರದ ವಡಗಾವಿಯ ನಾಲ್ಕು ಎಕರೆ ಜಾಗದಲ್ಲಿ 130 ಕೋಟಿ ವೆಚ್ಚದಲ್ಲಿ ಕಿದ್ಚಾಯಿ ಕ್ಯಾನ್ಸರ್ ಸಂಸ್ಥೆ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಬೆಂಗಳೂರು ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕ ಡಾ.ಸಿ.ರಾಮಚಂದ್ರ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಮಕೂರು, ಶಿವಮೊಗ್ಗ, ಮೈಸೂರಿನಲ್ಲಿ ಕೇಂದ್ರ ಆರಂಭಿಸಲಾಗುತ್ತಿದೆ. ಅದೇ ರೀತಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಮುತುವರ್ಜಿಯಿಂದ ಮುಖ್ಯಮಂತ್ರಿಯವರು ಬೆಳಗಾವಿಗೆ ಕ್ಯಾನ್ಸರ್ ಸಂಸ್ಥೆ ಮಂಜೂರು ಮಾಡಲಾಗಿರುತ್ತದೆ. …
Read More »ಸಮ್ಮತಿಯ ಲೈಂಗಿಕ ಕ್ರಿಯೆ ನಡೆಸಿದರೂ ಸಹ ಅತ್ಯಾಚಾರ : ತೆಲಂಗಾಣ ಕೋರ್ಟ್ನಿಂದ ಮಹತ್ವದ ತೀರ್ಪು
ಹೈದರಾಬಾದ್ : ಅಪ್ರಾಪ್ತ ಬಾಲಕಿಯೊಂದಿಗೆ ಸಮ್ಮತಿಯ ಲೈಂಗಿಕ ಕ್ರಿಯೆ ನಡೆಸಿದರೂ ಸಹ ಅತ್ಯಾಚಾರ ಎಂದು ಪರಿಗಣಿಸಲಾಗುವುದು ಎಂದು ತೆಲಂಗಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 15 ವರ್ಷದ ಬಾಲಕಿ 26 ವರ್ಷದ ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾಗಿದ್ದಳು. ಈ ಸಂಬಂಧ ತನ್ನ ಮಗಳಿಗೆ ಗರ್ಭಪಾತ ಮಾಡಲು ಅವಕಾಶ ನೀಡುವಂತೆ ಮಹಿಳೆ ಮಾಡಿದ ಮನವಿಯನ್ನು ಆಲಿಸಿದ ನ್ಯಾಯಾಲಯವು ಈ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ. ಬಾಲಕಿಯ ಕುಟುಂಬಸ್ಥರು ಮಗುವಿಗೆ ಗರ್ಭಪಾತ ಮಾಡುವಂತೆ ನಿಲೋಫರ್ ಆಸ್ಪತ್ರೆಯನ್ನು ಸಂಪರ್ಕಿಸಿದ್ದರು. ಆದರೆ, …
Read More »
Laxmi News 24×7