ಲಿಂಗಾಯತ ಮಹಿಳಾ ಸಮಾಜದಿಂದ ಅರಿಶಿಣ ಕುಂಕುಮ ಕಾರ್ಯಕ್ರಮ ಅರಿಶಿಣ ಕುಂಕುಮ ನಮ್ಮ ಸಂಸ್ಕೃತಿ ಯ ಪ್ರತೀಕ: ಬಸವಾನಂದ ಶ್ರೀ ಬೆಳಗಾವಿ: ಅರಿಶಿಣ ಕುಂಕುಮ ನಮ್ಮ ಸಂಸ್ಕೃತಿ ಯ ಪ್ರತೀಕ ಇಂತಹ ಕಾರ್ಯಕ್ರಮ ಮೂಲಕ ನಮ್ಮ ಸಂಸ್ಕೃತಿಯ ಸಕಾರಾತ್ಮಕ ಮೌಲ್ಯವನ್ನು ಪಸರಿಸುವ ಕಾರ್ಯವಾಗುತ್ತಿದೆ ಎಂದು ಧಾರವಾಡದ ಮನಗುಂಡಿಯ ಚನ್ನಯ್ಯಗಿರಿಯ ಶ್ರೀ ಗುರುಬಸವ ಮಹಾಮನೆಯ ಶ್ರೀ ಬಸವಾನಂದ ಮಹಾಸ್ವಾಮಿಗಳು ಹೇಳಿದರು. ಇಲ್ಲಿನ ಲಿಂಗಾಯತ ಭವನದಲ್ಲಿ ಬುಧವಾರ 20 ರಂದು ಲಿಂಗಾಯತ ಮಹಿಳಾ ಸಮಾಜದ …
Read More »ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ
ನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ ಮೀಟರ್ ಉದ್ದದ ಒಟ್ಟು 93 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಇಂದು (ಆಗಸ್ಟ್ 20) ನಾರಾಯಣಸಾ ಕೆ. ಭಾಂಡ್ಗೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ಯೋಜನೆಯ ಅವಶ್ಯಕತೆಗಳ ಆಧಾರದ ಮೇಲೆ ಹಣವನ್ನು ಹಂಚಿಕೆ ಮಾಡಲಾಗುತ್ತದೆ …
Read More »ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!!
ಪಾಂಗುಳ ಗಲ್ಲಿಯ ರಸ್ತೆಯಲ್ಲಿ ಸ್ಟಾಲ್ ವಾಹನಗಳ ದ್ವಿಮುಖ ಪಾರ್ಕಿಂಗ್‌ನಿಂದಾಗಿ ಸಂಚಾರ ಸಮಸ್ಯೆ!! ಗಣೇಶೋತ್ಸವ ಕೇವಲ ಎಂಟು ದಿನಗಳಲ್ಲಿ ಬರಲಿದ್ದು, ಬೆಳಗಾವಿ ನಗರದ ಪಂಗುಲ್ ಗಲ್ಲಿ ಪ್ರದೇಶದಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವ್ಯಾಪಾರಿಗಳು ಇಲ್ಲಿ ರಸ್ತೆಯಲ್ಲಿ ಅಂಗಡಿಗಳನ್ನು ಇಟ್ಟಿದರಿಂದ್ದ, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಹರ ಸಾಹಸ ಪಡುತ್ತಿದ್ದಾರೆ. ನಾಲ್ಕು ದಿನಗಳ ಮಳೆಯ ನಂತರ ಇಂದು, ಸಾರ್ವಜನಿಕರು ಖರೀದಿ ಮಾಡಲು ಮಾರುಕಟ್ಟೆಗಳತ್ತ ಮುಖ ಮಾಡಿದ್ದಾರೆ. ಬೆಳಗಾವಿ ಮಹಾನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಒಂದಾದ …
Read More »ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹ ತಡೆದ ಬಾಲಕಿ: ವಿದ್ಯಾಭ್ಯಾಸಕ್ಕೆ ಬೆಳಕಾದ ತಹಶೀಲ್ದಾರ್
ವಿಜಯನಗರ: ಬಾಲಕಿಯೊಬ್ಬಳು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ತನ್ನ ಬಾಲ್ಯ ವಿವಾಹವನ್ನು ತಾನೇ ತಡೆದ ಘಟನೆ ಜಿಲ್ಲೆಯ ಹಗರಿಬೊಮ್ಮನ ತಾಲೂಕಿನಲ್ಲಿ ನಡೆದಿದೆ. ಆ ಒಂದು ಪೋನ್ ಕರೆ ಮೂಲಕ ಇಡೀ ತಾಲೂಕಿನ ಆಡಳಿತವನ್ನು ಆ ಬಾಲಕಿ ಮನೆಗೆ ಬರುವಂತೆ ಮಾಡಿದೆ. ಧೈರ್ಯ ಮಾಡಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ ಹಿನ್ನೆಲೆ ಮದುವೆ ನಿಂತಿದ್ದಲ್ಲದೇ, ಉನ್ನತ ವ್ಯಾಸಂಗಕ್ಕೆ ಅಧಿಕಾರಿಗಳು ಸಹಾಯ ಮಾಡಿದ್ದಾರೆ. ಸಿನಿಮೀಯ ರೀತಿಯಲ್ಲಿ ನಡೆದ ಬಾಲ್ಯ ವಿವಾಹದ ಕತೆ ಇಲ್ಲಿದೆ ನೋಡಿ. …
Read More »ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು
ಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯ ಪ್ರವಾಸಿ ಮಂದಿರದ ವೃತ್ತದ ಬಳಿ ಬುಧವಾರ (ಇಂದು) ಬೆಳಗಿನ ಜಾವ ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ವಿದ್ಯಾರ್ಥಿಗಳಾದ ಆದಿತ್ಯ (21) ಮತ್ತು ಸಂದೀಪ್ (21) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತರು ದಾವಣಗೆರೆ ಜಿಲ್ಲೆ ಸುರಹೊನ್ನೆ ಹಾಗೂ ಉಡುಪಿ ಜಿಲ್ಲೆಯ ಮೂಲದವರಾಗಿದ್ದರು. ಸಿಮ್ಸ್ ಮೆಡಿಕಲ್ …
Read More »ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು
ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ ಪಟ್ಟಣದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸಿದ್ದು, 200 ಕುಟುಂಬಗಳು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿವೆ. ಈ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಕಾಲಿಗೆ ಬಿದ್ದು ಓರ್ವ ಮಹಿಳೆ ಅಳಲು ತೋಡಿಕೊಂಡರು. ಉಕ್ಕಿ ಹರಿಯುತ್ತಿರುವ ನದಿಗಳು: ಸತತ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಆ ಕಡೆ ಕೃಷ್ಣೆ ಆರ್ಭಟಿಸುತ್ತಿದ್ದರೆ, ಇತ್ತ ಘಟಪ್ರಭೆ …
Read More »ಸರ್ಕಾರಿ ವೈದ್ಯರು, ನರ್ಸ್ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ
ಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ವಿಧಾನಪರಿಷತ್ನಲ್ಲಿ ಅಂಗೀಕಾರಗೊಂಡಿತು. ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ನರ್ಸ್ಗಳು, ಡಿ …
Read More »ನಿರಂತರ ಮಳೆಗೆ ಧಾರವಾಡದಲ್ಲಿ ಮೊಳಕೆಯೊಡೆಯುತ್ತಿವೆ ಹೆಸರು ಬೆಳೆ.. ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಮಾಡಿದ ವರುಣರಾಯ.
ನಿರಂತರ ಮಳೆಗೆ ಧಾರವಾಡದಲ್ಲಿ ಮೊಳಕೆಯೊಡೆಯುತ್ತಿವೆ ಹೆಸರು ಬೆಳೆ.. ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಮಾಡಿದ ವರುಣರಾಯ. : ಧಾರವಾಡ ಜಿಲ್ಲೆಯಲ್ಲಿ ಸದ್ಯ ಭಾಗಶಃ ಹೆಸರು ಬೆಳೆ ಈಗ ಕಟಾವಿಗೆ ಬಂದಿದೆ. ಆದರೆ, ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಅನ್ನದಾತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು! ಧಾರವಾಡ ಜಿಲ್ಲೆಯಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗೆ ಬಂದ ಹೆಸರು ಬೆಳೆ …
Read More »ನಗರದಲ್ಲಿ ಧಾರಾಕಾರ ಮಳೆ ಹಾಗೂ ಗಾಳಿಗೆ ಬೃಹತ್ ಆಕಾರದ ಮರ ಉರುಳಿದೆ.
ಬೆಳಗಾವಿ :ನಗರದಲ್ಲಿ ಧಾರಾಕಾರ ಮಳೆ ಹಾಗೂ ಗಾಳಿಗೆ ಬೃಹತ್ ಆಕಾರದ ಮರ ಮತ್ತು ಕೊಂಬೆಗಳು ಉರುಳಿ ಬಿದ್ದ ಘಟನೆ ಬುಧವಾರ ಇಲ್ಲಿನ ಕ್ಲಬ್ ರಸ್ತೆಯ ಆದಾಯ ತೆರಿಗೆ ಕಚೇರಿ ಬಳಿ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಇತ್ತ ಕ್ಲಬ್ ರಸ್ತೆಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಹನುಮಾನ ನಗರ ಹಾಗೂ ಚನ್ನಮ್ಮ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಂದಾಗಿದ್ದು ಸಂಚಾರ …
Read More »ಧರ್ಮಸ್ಥಳದಲ್ಲಿ ಬಹು ಕೊಲೆ ಆರೋಪ ಆಧಾರರಹಿತ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
ಬೆಂಗಳೂರು: “ಧರ್ಮಸ್ಥಳದಲ್ಲಿ ನಡೆದಿದೆ ಎಂದು ಆರೋಪಿಸಲಾಗುತ್ತಿರುವ ನೂರಾರು ಕೊಲೆಗಳು, ಅತ್ಯಾಚಾರಗಳು ಆಧಾರರಹಿತ ಮತ್ತು ಸುಳ್ಳು” ಎಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಮಂಗಳವಾರ ಸ್ಪಷ್ಟಪಡಿಸಿದರು. ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಾದ್ಯಂತ ನಡೆದಿವೆ ಎನ್ನಲಾದ ಬಹು ಕೊಲೆಗಳು, ಅತ್ಯಾಚಾರ ಆರೋಪಗಳನ್ನು ತಳ್ಳಿ ಹಾಕಿರುವ ಅವರು, ಸತ್ಯ ಬೆಳಕಿಗೆ ಬರಲು ಎಸ್‌ಐಟಿ ತನಿಖೆಯನ್ನು ಸ್ವಾಗತಿಸಿದರು. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ ಆರೋಪಗಳ ಕುರಿತು ಎಸ್‌ಐಟಿ ತನಿಖೆ …
Read More »
Laxmi News 24×7