ಬೆಳಗಾವಿ: ಲಾರಿ ಮಹಿಳೆ ಮೇಲೆ ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ನಿವಾಸಿ ರಮೇಜಾ ನದಾಫ್ (40) ಮೃತ ಮಹಿಳೆ. ಡಾಬಾದಲ್ಲಿ ಕೆಲಸ ಮಾಡಿ ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ದಾಟುವಾಗ ವೇಗವಾಗಿ ಬಂದ ಲಾರಿ ಮಹಿಳೆ ಮೇಲೆ ಹರಿದಿದೆ.
Read More »ಕೆಆರ್ಎಸ್ ಸುತ್ತ ಕಲ್ಲು ಗಣಿಗಾರಿಕೆ: ಸೂಕ್ತ ನಿರ್ಧಾರ ಕೈಗೊಳ್ಳಲು ಹೈಕೋಟ್ ಸೂಚನೆ
ಬೆಂಗಳೂರು: ಮಂಡ್ಯ ಜಿಲ್ಲೆಯ ಬೇಬಿಬೆಟ್ಟ ಹಾಗೂ ಚಿನಕುರಳಿ ಗ್ರಾಮಗಳಲ್ಲಿನ ಕಲ್ಲು ಗಣಿಗಾರಿಕೆ ಘಟಕಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಗಣಿ ಮಾಲೀಕರ ಮನವಿಯನ್ನು ಮೂರು ವಾರದಲ್ಲಿ ಪರಿಗಣಿಸಿ ಕಾನೂನು ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಈ ಕುರಿತು ಶ್ರೀಕೃಷ್ಣ ಸ್ಟೋನ್ ಕ್ರಷಿಂಗ್ ಇಂಡಸ್ಟ್ರೀಸ್ ಸೇರಿದಂತೆ 17 ಗಣಿ ಕಂಪನಿಗಳ ಮಾಲೀಕರು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ …
Read More »ಡಿಕೆ ಶಿವಕುಮಾರ್ ರಾಜಕೀಯ ಗುರುವಿನಿಂದ ಪಾದಯಾತ್ರೆ ಕೈಬಿಡಲು ಸಲಹೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜಕೀಯ ಗುರು ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಕೋವಿಡ್ ಹೆಚ್ಚುತ್ತಿರುವ ಸಂದರ್ಭದಲ್ಲಿ ಮೇಕೆದಾಟು ಪಾದಯಾತ್ರೆಯಿಂದ ಜನರ ಜೀವಕ್ಕೆ ಹಾನಿ ಉಂಟಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪಾದಯಾತ್ರೆಯನ್ನು ಕೈಬಿಡಲು ಕೋರಿದ್ದಾರೆ. ತಮ್ಮ ನೇತೃತ್ವದಲ್ಲಿ ಮೇಕದಾಟು ಸಂಗಮದಿಂದ ಬೆಂಗಳೂರಿನವರೆಗೆ ಬೆಂಗಳೂರಿನ ಭವಿಷ್ಯ ಹಾಗೂ ಸಾರ್ವಜನಿಕ ಕುಡಿಯುವ ನೀರಿನ ಬವಣಿಯನ್ನು ಶಾಶ್ವತವಾಗಿ ನಿವಾರಿಸಲು ರಾಜ್ಯದ ಬಹುದಿನಗಳ ಬೇಡಿಕೆಯಾದ ಮೇಕೆದಾಟು ಅಣಿಕಟ್ಟು ನಿರ್ಮಾಣ ಸಂಬಂಧ ಸರ್ಕಾರಗಳ …
Read More »ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಕಾರ್ಯದರ್ಶಿ ಸಿ.ಎಸ್ ರವಿಕುಮಾರ್ ಆದೇಶ ಹೊರಡಿಸಿದ್ದು, ಈ ಕೂಡಲೇ ಪಾದಯಾತ್ರೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ. ಪಾದಯಾತ್ರೆಯ ವಾಹನ ಸಂಚಾರ,ಜನಸಂಚಾರ ನಿಷೇಧಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಉಲ್ಲಂಘಿಸಿ ಪಾದಯಾತ್ರೆ ಮುಂದುವರೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ. ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ಪಿಐಎಲ್ …
Read More »ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಸರ್ಕಾರ ಬದ್ಧ: ಬೊಮ್ಮಾಯಿ ಭರವಸೆ
ಬೆಂಗಳೂರು: ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅವರು ಹೇಳಿಕೆ ನೀಡಿದ್ದು, ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ. ನೆಲ, ಜಲ, ಜನರ ಹಿತರಕ್ಷಣೆಗೆ ಎಲ್ಲಾ ಪಕ್ಷಗಳು ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡೋಣ. ಮೇಕೆದಾಟು ಯೋಜನೆ ವಿಚಾರದಲ್ಲಿ ಎಲ್ಲಾ ಪಕ್ಷಗಳು ಒಂದಾಗಿ ಕೆಲಸ ಮಾಡೋಣ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೋನಾ …
Read More »ಸಂಕ್ರಾಂತಿ ಬಳಿಕ ದೇವೇಗೌಡರ ದತ್ತು ಪುತ್ರ ದತ್ತ ಕಾಂಗ್ರೆಸ್‌ನತ್ತ?
ಕಡೂರು: ಮಾಜಿ ಶಾಸಕ ವೈ.ಎಸ್.ವಿ. ದತ್ತ ಕಾಂಗ್ರೆಸ್‌ಸೇರುವ ಊಹಾಪೋಹಕ್ಕೆ ಬಹುತೇಕ ತೆರೆ ಬಿದ್ದಿದ್ದುಸಂಕ್ರಾತಿ ಬಳಿಕ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ.ದತ್ತ ಜತೆಗೆ ಜೆಡಿಎಸ್‌ನ ಅನೇಕ ಶಾಸಕರಹೆಸರು ಮುಂಚೂಣಿಯಲ್ಲಿದ್ದು ಇವರೆಲ್ಲರೂಒಟ್ಟಾಗಿ ಕಾಂಗ್ರೆಸ್ ಸೇರುವ ಸಂಗತಿ ಬೆಂಗಳೂರುಸೇರಿದಂತೆ ಕ್ಷೇತ್ರದ ರಾಜಕೀಯ ಮೊಗಸಾಲೆಯಲ್ಲಿಗಂಭೀರವಾಗಿ ಚರ್ಚೆಯಾಗುತ್ತಿದೆ. 2018ರವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಬಳಿಕದತ್ತ ಕೆಲವು ಕಾಲ ನೇಪಥ್ಯಕ್ಕೆ ಸರಿದಿದ್ದರು. ಅಭಿವೃದ್ಧಿಕೆಲಸಗಳನ್ನು ಮಾಡಿಸಿಯೂ ಜನರ ಜತೆಗೆ ಉತ್ತಮಒಡನಾಟ ಇಟ್ಟುಕೊಂಡಿದ್ದರು. ಆದರೆ ಕ್ಷೇತ್ರದಜನ ತಮ್ಮನ್ನು ಸೋಲಿಸಿದರು ಎಂಬ ಕಾರಣಕ್ಕೆ …
Read More »ಐವರು ಐಎಎಸ್ ಅಧಿಕಾರಿಗಳ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕೆಳಕಂಡ ಸ್ಥಳಗಳಿಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮೋಹನ್ ರಾಜ್ ಕೆ.ಪಿ.- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು. ಶರತ್ ಬಿ- ವಿಶೇಷ ಆಯುಕ್ತರು (ಕಲ್ಯಾಣ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು. ಡಾ.ರವಿ ಎಂ.ಆರ್- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ, …
Read More »ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಪ್ರಯಾಣಿಸುವಾಗ ‘ಲಗೇಜ್ ಕಳೆದು ಹೋದರೆ’ ಚಿಂತಿಸ್ಬೇಡಿ, ಈ ‘ನೂತನ ಸೇವೆ’ ಬಳಸಿಕೊಳ್ಳಿ
ಮುಂಬೈ: ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ಮುಂದೆ ರೈಲಿನಲ್ಲಿ ಲಗೇಜ್ ಕಳೆದು ಹೋದ್ರೆ ಪ್ರಯಾಣಿಕರು ಚಿಂತಿಸಬೇಕಿಲ್ಲ. ಯಾಕಂದ್ರೆ, ಭಾರತೀಯ ರೈಲ್ವೆ ನೂತನ ಸೇವೆಯೊಂದನ್ನ ಪರಿಚಯಿಸಿದ್ದು, ಈ ಮೂಲಕ ಕಳೆದು ಹೋದ ಲಗೇಜ್ ಸುಲಭವಾಗಿ ಪತ್ತೆ ಮಾಡಬಹುದು. ಈ ಕುರಿತು ಪಶ್ಚಿಮ ರೈಲ್ವೆ ಮಾಹಿತಿ ನೀಡಿದ್ದು, ಪ್ರಯಾಣಿಕರು ತಮ್ಮ ಕಳೆದುಹೋದ ಸಾಮಾನುಗಳನ್ನ ಮರಳಿ ಪಡೆಯಲು ಸುಲಭವಾಗುವಂತೆ ಆರ್‌ಪಿಎಫ್ / ಡಬ್ಲ್ಯುಆರ್ ‘ಮಿಷನ್ ಅಮಾನತ್’ ಎಂಬ ವಿನೂತನ ಉಪಕ್ರಮವನ್ನ ಕೈಗೊಂಡಿದೆ. …
Read More »ಬೆಳಗಾವಿ ಎಪಿಎಂಸಿ ಬಾಜಿ ಮಾರ್ಕೆಟ್ ಅಂಗಡಿಗಳ ವಿರುದ್ಧ ಸೂಕ್ತ ತನಿಖೆ ಮಾಡಿ
ಬೆಳಗಾವಿಯ ಎರಡೂ ತರಕಾರಿ ಮಾರುಕಟ್ಟೆಯಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ನೇಗಿಲಯೋಗಿ ರೈತ ಸಂಘದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬುಧವಾರ ಬೆಳಗಾವಿ ಡಿಸಿ ಕಚೇರಿ ಮುಂಭಾಗದಲ್ಲಿ ನೇಗಿಲಯೋಗಿ ರೈತ ಸಂಘದ ರಾಜ್ಯಾಧ್ಯಕ್ಷ ರವಿ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾತನಾಡಿದ ರವಿ ಪಾಟೀಲ್ ಎಪಿಎಂಸ ಮಾರ್ಕೆಟ್‍ನ ಯಾರ್ಡನಲ್ಲಿ ಆಡಳಿತ ಮಂಡಳಿ ಹಾಗೂ ಅಲ್ಲಿ ನಿಜವಾದ ವ್ಯಾಪಾರಸ್ಥರು ಕಡಿಮೆ ಇದ್ದಾರೆ. ವ್ಯಾಪಾರಸ್ಥರು ಇಲ್ಲದೇ ಇರುವವರ ಅಂಗಡಿಗಳಿದ್ದು, ಕೇವಲ …
Read More »ಬೆಳಗಾವಿಯ ಸ್ವಾಮಿ ವಿವೇಕಾನಂದ ಟ್ರಸ್ಟ ವತಿಯಿಂದ ವಿವೇಕಾನಂದರ 160ನೇ ಜಯಂತಿ
ಬೆಳಗಾವಿಯ ಸ್ವಾಮಿ ವಿವೇಕಾನಂದ ಟ್ರಸ್ಟ ವತಿಯಿಂದ ವಿವೇಕಾನಂದರ 160ನೇ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸ್ವಾಮಿ ವಿವೇಕಾನಂದ ಇನ್ಸಿಟಿಟ್ಯೂಟ್ ಆಫ್ ಕಾಮರ್ಸ ಆಂಡ್ ಕಂಪ್ಯೂಟರ್ ಏಜುಕೇಶನ್ ವತಿಯಿಂದ 160ನೇ ವಿವೇಕಾನಂದ ಜಯಂತಿ ನಿಮಿತ್ಯ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಬುಧವಾರ ಬಹುಮಾತ ವಿತರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶಾಸಕ ಅನಿಲ್ ಬೆನಕೆ ಅವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಡಾ.ಮಾಧವಪ್ರಭು, ಶಿಕ್ಷಣ …
Read More »
Laxmi News 24×7