ಸೋಮನಾಥ ಮಂದಿರ ಉತ್ತರ ಕರ್ನಾಟಕದ ವಿಶೇಷ ಮಂದಿರವಾಗಲಿದೆ… ಇಂದು ಅಥಣಿ ತಾಲೂಕಿನ ಯಲಿಹಡಲಗಿ ಗ್ರಾಮದ 50 ಲಕ್ಷ ರೂಪಾಯಿ ಮೊತ್ತದಲ್ಲಿ ನೂತನ ಸೋಮನಾಥ ಮಂದಿರವು ವಿಶೇಷ ಮಂದಿರವಾಗಿ,ನೆಲ ಮಹಡಿಯಲ್ಲಿ ಸ್ವಯಂಭು ಪಾದರಸದ ಶಿವಲಿಂಗ ಹಾಗೂ ಮೇಲಿನ ಅಂತಸ್ತಿನಲ್ಲಿ ಮಹಾದೇವ ಮಂದಿರವಾಗುತ್ತಿದ್ದು ಗರ್ಭಗುಡಿಯ ಕಟ್ಟಡದ ಪ್ರಾರಂಭ ನಿರ್ಮಾಣ ಕಾಮಗಾರಿಗೆ ಸವದತ್ತಿ ಓಂಕಾರ ಮಠದ ಪ.ಪೂ.ಶ್ರೀ ಶಿವಶಕ್ತಿ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸ್ವಯಂಭು ಪಾದರಸದಿಂದ ಮಾಡಿದ ಶಿವಲಿಂಗ …
Read More »ಇಂಥ ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ, ಮನಸ್ಸಿಗೆ ಬಹಳ ನೋವಾಗಿದೆ’: ಧ್ರುವ ಸರ್ಜಾ
ಬೆಂಗಳೂರು ಹೊರವಲಯದ ಅಭಿಮಾನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಸ್ಯಾಂಡಲ್ವುಡ್ನ ಸಾಹಸಿಂಹ ಖ್ಯಾತಿಯ ವಿಷ್ಣುವರ್ಧನ್ ಸ್ಮಾರಕವನ್ನು ತೆರವು ಮಾಡಿರುವ ಕ್ರಮಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಕನ್ನಡದ ಖ್ಯಾತ ನಟ ಧ್ರುವ ಸರ್ಜಾ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಅಭಿಮಾನಿಗಳು ಕಳೆದ ದಿನದಿಂದ ಅಭಿಮಾನ್ ಸ್ಟುಡಿಯೋ ಬಳಿ ಸೇರಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಮೆಚ್ಚಿನ ತಾರೆ ನೆನೆದು ಕಣ್ಣೀರಿಟ್ಟಿದ್ದಾರೆ. ಈ ನಡುವೆ ನಟ ಧ್ರುವ ಸರ್ಜಾ ಅವರು ಈ ಶ್ರೇಷ್ಠ ಸಾಧಕನಿಗೆ ಈ …
Read More »ಮಹಾರಾಷ್ಟ್ರ ಚುನಾವಣೆಯಲ್ಲಿ ‘ಗೆಲುವಿನ ಗ್ಯಾರಂಟಿ’ ನೀಡಿದ್ದ ಅನಾಮಿಕರು: ಶರದ್ ಪವಾರ್
ನಾಗ್ಪುರ (ಮಹಾರಾಷ್ಟ್ರ) : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡುತ್ತಿರುವ ನಡುವೆ, I.N.D.I.A ಕೂಟದ ಭಾಗವಾದ ನ್ಯಾಷನಲ್ ಕಾಂಗ್ರೆಸ್ ಪಕ್ಷದ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರು ಮತ್ತೊಂದು ಅಚ್ಚರಿಯ ಅಂಶವನ್ನು ಬಹಿರಂಗಪಡಿಸಿದ್ದಾರೆ. 2024 ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೂ ಮೊದಲು ದೆಹಲಿಯಲ್ಲಿ ಇಬ್ಬರು ವ್ಯಕ್ತಿಗಳು ತಮ್ಮನ್ನು ಭೇಟಿಯಾಗಿ, 288 ಕ್ಷೇತ್ರಗಳ ಪೈಕಿ 160 ಸ್ಥಾನ ಗೆಲ್ಲಿಸಿಕೊಡುವುದಾಗಿ ‘ಗ್ಯಾರಂಟಿ’ ನೀಡಿದ್ದರು ಎಂದು ಹೇಳಿದ್ದಾರೆ. ಇದು ರಾಜಕೀಯ ವಲಯದಲ್ಲಿ ಮತ್ತೊಂದು …
Read More »ಬಾಗಲಕೋಟೆ ಸಹಪಾಠಿಗಳಿಂದ ರ್ಯಾಗಿಂಗ್ ಆರೋಪ: ಯುವತಿ ಆತ್ಮಹತ್ಯೆ
ಬಾಗಲಕೋಟೆ: ಸಹಪಾಠಿಗಳ ರ್ಯಾಗಿಂಗ್ಗೆ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದಲ್ಲಿ ನಡೆದಿದೆ. ಅಂಜಲಿ ಮುಂಡಾಸ (21) ಮೃತ ವಿದ್ಯಾರ್ಥಿನಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ತಾನು ಸಹಪಾಠಿಗಳು ನೀಡುತ್ತಿದ್ದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಯುವತಿ ಡೆತ್ನೋಟ್ನಲ್ಲಿ ಬರೆದಿದ್ದಾರೆ. ಜೊತೆಗೆ ತನಗೆ ರ್ಯಾಗಿಂಗ್ ಮಾಡಿದ ತನ್ನಿಬ್ಬರು ಸಹಪಾಠಿಗಳ ಹೆಸರು, ಅವರ ವಿಳಾಸವನ್ನು ಅದರಲ್ಲಿ ನಮೂದಿಸಿದ್ದಾರೆ. ಇವರ ವಿರುದ್ಧ ಕ್ರಮ ಜರುಗಿಸಿ ಎಂದೂ …
Read More »ಬಾದಾಮಿಯಲ್ಲಿ ಸಿದ್ದರಾಮಯ್ಯ ಗೆಲ್ಲಿಸಲು ಮತ ಖರೀದಿಸಲಾಗಿತ್ತು: ಸಿ.ಎಂ. ಇಬ್ರಾಹಿಂ
ಮೈಸೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದರೆ, ಇತ್ತ ಮಾಜಿ ಸಚಿವ ಸಿ. ಎಂ. ಇಬ್ರಾಹಿಂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೇ ಮತ ಖರೀದಿ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸೋಲುತ್ತಾರೆ ಎಂದು ತಿಳಿದು ನಾನೇ ಅವರನ್ನು ಬಾದಾಮಿಗೆ ಕರೆದುಕೊಂಡು ಬಂದು ಅಲ್ಲಿ ಶಾಸಕ ಬಿ.ಬಿ. ಚಿಮ್ಮನಕಟ್ಟಿ ಅವರನ್ನು ಒಪ್ಪಿಸಿ ಚುನಾವಣೆಗೆ ನಿಲ್ಲಿಸಿದೆವು. ಅಲ್ಲಿ ಚಿಮ್ಮನಕಟ್ಟಿ ಅವರ ಸಹಾಯದಿಂದ ಸಾಲದ ಹಣದಲ್ಲಿ ಮತ …
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳವರೆಗೆ ಭಾರಿ ಮಳೆ
ಬೆಂಗಳೂರು: ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಇಂದಿನಿಂದ ಮತ್ತೆ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ. ಹಾಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೀದರ್, ಬೆಳಗಾವಿ, ಧಾರವಾಡ, …
Read More »ತಾಲೂಕು ಕೇಂದ್ರಗಳಲ್ಲಿ ಶೀಘ್ರದಲ್ಲಿ ವೈದ್ಯರ ನೇಮಕ – ಆರೋಗ್ಯ ಸಚಿವ ದಿನೇಶ ಗುಂಡೂರಾವ.
ಹುಕ್ಕೇರಿ : ತಾಲೂಕು ಕೇಂದ್ರಗಳಲ್ಲಿ ಶೀಘ್ರದಲ್ಲಿ ವೈದ್ಯರ ನೇಮಕ – ಆರೋಗ್ಯ ಸಚಿವ ದಿನೇಶ ಗುಂಡೂರಾವ. ತಾಲೂಕು ಕೇಂದ್ರಗಳಲ್ಲಿ ಶೀಘ್ರದಲ್ಲೇ ತಜ್ಞ ವೈದ್ಯರನ್ನು ನೇಮಕ ಮಾಡಿ ಜನರ ಸೇವೆಗೆ ಸಹಕರಿಸಲಾಗುವದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ ಹೇಳಿದರು.ಅವರು ಇಂದು ಹುಕ್ಕೇರಿ ತಾಲೂಕಿನ ಸಂಕೇಶ್ವರ ಅಮ್ಮಣಗಿ ಮತ್ತು ಹುಕ್ಕೇರಿ ನಗರಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜರುಗಿದ ವಿವಿಧ ಕಾರ್ಯಕ್ರಮಗಳಲ್ಲಿ ಹುಕ್ಕೇರಿ ಶಾಸಕ …
Read More »ಅಗ್ನಿವೀರ್ ಯೋಧ ಕಿರಣರಾಜ ಕೇದಾರಿ ತೆಲಸಂಗ ಅವರ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಸ್ವಗ್ರಾಮಕ್ಕೆ ತರಲಾಯಿತು
ಚಿಕ್ಕೋಡಿ (ಬೆಳಗಾವಿ) : ಭಾರತೀಯ ಸೈನ್ಯದಲ್ಲಿ ಕರ್ತವ್ಯದಲ್ಲಿದ್ದಾಗ ಅಗ್ನಿವೀರ್ ಯೋಧ ಕಿರಣರಾಜ ಕೇದಾರಿ ತೆಲಸಂಗ (23) ಎಂಬವರು ತೀವ್ರ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ. ಇಂದು ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರಾದ ಐಗಳಿ ಗ್ರಾಮದಲ್ಲಿ ಲಿಂಗಾಯತ ಧರ್ಮದ ವಿಧಿ-ವಿಧಾನದಂತೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕಳೆದ 15 ತಿಂಗಳಿನಿಂದ ಅಗ್ನಿವೀರ್ ಮುಖಾಂತರ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಕಳೆದ ಮಂಗಳವಾರ ಬೆಳಿಗ್ಗೆ ಓಟದ ಸ್ಪರ್ಧೆಯ ನಂತರ ಹೃದಯಾಘಾತದಿಂದ ನಿಧನರಾಗಿದ್ದರು. ಇವತ್ತು …
Read More »ದಸರಾ ದೀಪಾಲಂಕಾರ 2025: ಆಕರ್ಷಕ ಹಾಗೂ ವಿನೂತನವಾಗಿರಲಿ – ಕೆ. ಎಂ. ಮುನಿಗೋಪಾಲ್ ರಾಜು
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿದ್ಯುತ್ ದೀಪಾಲಂಕಾರವನ್ನು ಈ ಬಾರಿ ಹೊಸ ವಿನ್ಯಾಸಗಳ ಜತೆಗೆ, ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ಆಕರ್ಷಣೀಯವಾಗಿಸಲು ಆಸಕ್ತಿ ವಹಿಸಿ, ಕೆಲಸ ಮಾಡಿ ಎಂದು ಅಧಿಕಾರಿಗಳು ಹಾಗೂ ದೀಪಾಲಂಕಾರ ಮಾಡುವ ವಿದ್ಯುತ್ ಗುತ್ತಿಗೆದಾರರಿಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ ಕೆ. ಎಂ. ಮುನಿಗೋಪಾಲ್ ರಾಜು ಅವರು ಸಲಹೆ ನೀಡಿದ್ದಾರೆ. ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿರುವ ನಿಗಮದ ಪ್ರಧಾನ …
Read More »ಧರ್ಮಸ್ಥಳ ಪ್ರಕರಣ: ಬೊಳಿಯಾರ್ನಲ್ಲಿ ಹೊಸ ಸ್ಥಳ ಗುರುತಿಸಿದ ದೂರುದಾರ, ಎಸ್ಐಟಿಯಿಂದ ಶೋಧ
ಧರ್ಮಸ್ಥಳ (ದಕ್ಷಿಣ ಕನ್ನಡ): ಧರ್ಮಸ್ಥಳ ಗ್ರಾಮದಲ್ಲಿ ಹಲವು ಮೃತದೇಹಗಳನ್ನು ಹೂತಿರುವುದಾಗಿ ಅನಾಮಧೇಯ ವ್ಯಕ್ತಿಯೊಬ್ಬ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಎಸ್ಐಟಿ ಶೋಧ ಕಾರ್ಯ ಮುಂದುವರಿಸಿದೆ. ಇಂದು ಬೋಳಿಯಾರ್ ಬಳಿ ದೂರುದಾರ ಗುರುತಿಸಿದ ಮತ್ತೊಂದು ಹೊಸ ಸ್ಥಳದಲ್ಲಿ ವಿಶೇಷ ತನಿಖಾ ಶೋಧ ಕಾರ್ಯಾಚರಣೆ ನಡೆಸಿತು. ಧರ್ಮಸ್ಥಳ ಗ್ರಾಮದ ಬೊಳಿಯಾರ್ ಬಳಿಯ ಗೋಂಕ್ರತಾರ್ ಸಮೀಪದ ಅರಣ್ಯ ಪ್ರದೇಶಕ್ಕೆ ದೂರುದಾರನೊಂದಿಗೆ ಅಧಿಕಾರಿಗಳ ತಂಡ 1:15 ರಿಂದ ಸಂಜೆ 5:30 ಗಂಟೆಯವರೆಗೆ ಮಿನಿ ಜೆಸಿಬಿ ಮತ್ತು ಕಾರ್ಮಿಕರೊಂದಿಗೆ ಶೋಧ …
Read More »
Laxmi News 24×7