ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ತಮಗೆ ಬೇಕಾದವರಿಗೆ, ಪರಿಚಿತರಿಗೆ, ಹಾಗೂ ಹಣವಂತರಿಗೆ ಮಾತ್ರ ಟಿಕೆಟ್ ನೀಡಿದ್ದಾರೆ. ಇದನ್ನು ಜನತೆ ತಿರಸ್ಕಾರ ಮಾಡುತ್ತಾರೆಂದು ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆಎಸ್ ಈಶ್ವರಪ್ಪನವರು, ಬಿಜೆಪಿ ಡಿಸೆಂಬರ್೧೨ ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಗಳಿಂದ ತಲಾ ೧೦ ಹಿಂದುಳಿದ ವರ್ಗಗಳ ನಾಯಕರ ಜಾಗೃತಿ ಸಮಾವೇಶ ನಡೆಯಲಿದೆ. ಅದರ ಪ್ರಯುಕ್ತ ಬೆಳಗಾವಿ …
Read More »ಉಗಾರದ ಮಾಜಿ ಶಾಸಕ ರಾಜು ಕಾಗೆ ಸೇರಿ ೩೦ ರೈತರ ೧೦ ಲಕ್ಷ ರೂ ಮೌಲ್ಯದ ಪಂಪ ಸೆಟ್ ಗಳ ಕೇಬಲ್ ಕಳ್ಳತನ
ಕಾಗವಾಡ ತಾಲೂಕಿನ ಹಳ್ಳಿಗಳಲ್ಲಿ ಮನೆಗಳ ಕಳ್ಳತನ ಹಾವಳಿ ಹೆಚ್ಚಾಗಿದ್ದು, ಈಗ ಕಳ್ಳರು ನದಿಯಿಂದ ಗದ್ದೆಗಳಿಗೆ ನೀರು ಸೆಳೆಯಲು ಭಳಸಿರುವ ವಿದ್ಯೂತ್ ಪಂಪ ಸೆಟ್ ಗಳ ಕೇಬಲ್ ಕಳ್ಳತನ ಪ್ರಾರಂಭಿಸಿದ್ದಾರೆ. ಉಗಾರದ ಮಾಜಿ ಶಾಸಕ ರಾಜು ಕಾಗೆ ಸೇರಿ ೩೦ ರೈತರ ಪಂಪ ಸೆಟ್ ಗಳ ಕೇಬಲ ಕಳ್ಳತನ ಮಾಡಿದ್ದಾರೆ. ಸುಮಾರು ೧೦ ಲಕ್ಷ ರೂ ಮೌಲ್ಯದ ಕೇಬಲ್ ಕಳ್ಳತನವಾಗಿರುವದರಿಂದ ರೈತರು ಆತಂಕದಲ್ಲಿದ್ದಾರೆ. ಉಗಾರ ಬುದ್ರುಕ್ ಗ್ರಾಮದ ರೈತರು ಒಂದುಗೂಡಿ ಗ್ರಾಮದ …
Read More »#MeToo ಪ್ರಕರಣ ‘ಕ್ಲೋಸ್’ – ನಟಿ ಶೃತಿ ಹರಿಹರನ್‌ಗೆ ಪೊಲೀಸರಿಂದ ನೋಟಿಸ್, ಠಾಣೆಗೆ ಬರುವಂತೆ ಬುಲಾವ್
ಬೆಂಗಳೂರು: ಮೀಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ನಟಿ ಶೃತಿ ಹರಿಹರನ್‌ಗೆ ಪೊಲೀಸರಿಂದ ನೋಟಿಸ್ ನೀಡಲಾಗಿದೆಯಂತೆ. 2018ರಲ್ಲಿ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸು ದಾಖಲು ಮಾಡಿದ್ದ ಶ್ರುತಿ ಅವರ ದೂರಿನ್ವಯ ಅರ್ಜುನ್ ಸರ್ಜಾ ವಿರುದ್ಧ ಭಾರತೀಯ ದಂಡ ಸಂಹಿತೆ 354, 354 ಎ ಮತ್ತು 506 ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಈಗ ಶೃತಿ ಅವರು ಸಲ್ಲಿಸಿದ್ದ ದೂರಿಗೆ ಸಾಕ್ಷಿ ಸಿಗದ ಹಿನ್ನೆಲೆಯಲ್ಲಿ ಪೊಲೀಸರು …
Read More »ಬೆಳಗಾವಿಯಲ್ಲಿಂದು ನಡೆದ ಬಿಡಿಸಿಸಿ ಬ್ಯಾಂಕ್, ಜಿಲ್ಲಾ ಹಾಲು ಒಕ್ಕೂಟ, ಜಿಲ್ಲಾ ಸಹಕಾರಿ ಯೂನಿಯನ್ ದಿಗ್ಧರ್ಶಕರ ಸಭೆಯಲ್ಲಿ ಈ ಹೇಳಿಕೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್‍ನಲ್ಲಿ ಜರುಗಿದ ಜಿಲ್ಲಾ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ಕೋರಿಕೊಂಡರು. ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ …
Read More »ಬಿಜೆಪಿಯವರು ಎಲ್ಲಿ ಸೋಲುತ್ತೀರಿ ಅದನ್ನೂ ಹೇಳಿ: ಡಿ.ಕೆ.ಶಿವಕುಮಾರ್
ರಾಮನಗರ: ‘ವಿಧಾನ ಪರಿಷತ್ ಚುನಾವಣೆಯಲ್ಲಿ ಕನಿಷ್ಠ 15 ಸ್ಥಾನ ಗೆಲ್ಲುತ್ತೇವೆ ಎನ್ನುವ ಬಿಜೆಪಿಯವರು, ಸೋಲುವ ಉಳಿದ 10 ಕ್ಷೇತ್ರಗಳು ಯಾವುವು ಎಂಬುದನ್ನೂ ಬಹಿರಂಗಪಡಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರದಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಬಿಜೆಪಿ 25 ಕ್ಷೇತ್ರಗಳನ್ನೂ ಗೆಲ್ಲಬಹುದು. ಅವರು ಮತ್ತು ಜೆಡಿಎಸ್‌ನವರು ಯಾವಾಗ ಕಿತ್ತಾಡುತ್ತಾರೋ ಯಾವಾಗ ಒಂದಾಗುತ್ತಾರೋ ಅವರಿಗೇ ಗೊತ್ತು’ ಎಂದು ಅವರು ಲೇವಡಿ ಮಾಡಿದರು.
Read More »ಬೆಂಗಳೂರು: 28 ಮನೆ, 5 ಕಾರು, ಚಿನ್ನ, ಬೆಳ್ಳಿ; ಎಸಿಬಿ ದಾಳಿ ವೇಳೆ ವಾಸುದೇವ್ ಮನೆಯಲ್ಲಿ ಪತ್ತೆಯಾದ ಆಸ್ತಿ ವಿವರ ಇದು
ಬೆಂಗಳೂರು: ಇಲ್ಲಿನ ಗ್ರಾಮೀಣ ನಿರ್ಮಿತಿ ಕೇಂದ್ರದ ಮಾಜಿ ನಿರ್ದೇಶಕ ಆರ್.ಎನ್.ವಾಸುದೇವ್ ಮನೆ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಲಭ್ಯವಾಗಿದೆ. ಆದಾಯಕ್ಕಿಂತ ಶೇ.1408ರಷ್ಟು ಆಸ್ತಿ ಗಳಿಸಿರುವ ವಾಸುದೇವ್, ತನ್ನ, ಕುಟುಂಬಸ್ಥರ ಹೆಸರಿನಲ್ಲಿ ಆಸ್ತಿ ಗಳಿಸಿರುವ ಬಗ್ಗೆ ತಿಳಿದುಬಂದಿದೆ. ಬಾಡಿಗೆಗೆ ನೀಡುವ ಉದ್ದೇಶದಿಂದ 5 ಕಡೆ ಮನೆಗಳ ನಿರ್ಮಾಣ ಮಾಡಿದ್ದರು. ವಾಸುದೇವ್ ಕುಟುಂಬ ಸದಸ್ಯರ ಹೆಸರಲ್ಲಿ 28 ಮನೆಗಳು ಪತ್ತೆ ಆಗಿದೆ. ಕೆಂಗೇರಿಯ ಶಾಂತಿ ವಿಲಾಸ ಲೇಔಟ್ನ ಚರ್ಚ್ …
Read More »ಹಾಸನ: 9 ವರ್ಷ ಸಂಸಾರ ಮಾಡಿ ಪತ್ನಿಗೆ ಕೈಕೊಟ್ಟ ಪತಿ; ಬೇರೊಂದು ಯುವತಿ ಜತೆ ಎಂಗೇಜ್ಮೆಂಟ್
ಹಾಸನ: ಪ್ರೀತಿಸಿ ಮದುವೆಯಾಗಿ 9 ವರ್ಷಗಳ ಕಾಲ ಸಂಸಾರ ಮಾಡಿ, ಪತ್ನಿಗೆ ಮೋಸ ಮಾಡಿದ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ. ಮೊದಲ ಮದುವೆ ಮುಚ್ಚಿಟ್ಟು ಮತ್ತೊಂದು ಮದುವೆ ಆಗಲು ಪತಿ ಮುಂದಾಗಿದ್ದು, ಈಗಾಗಲೇ ನಿಶ್ಚಿತಾರ್ಥ (engagement) ಕೂಡ ಮಾಡಿಕೊಂಡಿದ್ದಾನೆ. ಹೀಗಾಗಿ ನೊಂದ ಪತ್ನಿ, ಪತಿ ಹಾಗೂ ಆತನ ಕುಟುಂಬದ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಲೇಜಿನಲ್ಲಿ ಪರಿಚಯವಾಗಿ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಅಕ್ಷತಾ …
Read More »ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.
ಬೆಳಗಾವಿ, -ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ವಸತಿ, ಊಟೋಪಹಾರ ಹಾಗೂ ಸಾರಿಗೆ ಮತ್ತಿತರ ವ್ಯವಸ್ಥೆಯನ್ನು ನಿಗದಿತ ಸಮಯದಲ್ಲಿ ಸಮರ್ಪಕವಾಗಿ ಮಾಡಿಕೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಲ್.ಕೆ.ಅತೀಕ್ ಸೂಚನೆ ನೀಡಿದರು. ಅಧಿವೇಶನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ನ.27) ನಡೆದ ಪೂರ್ವಸಿದ್ಧತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ …
Read More »ಡಿ.ಕೆ ಶಿವಕುಮಾರ್ ಭಾನುವಾರ ಬೆಳಗಾವಿಗೆ
ಬೆಳಗಾವಿ- ವಿಧಾನ ಪರಿಷತ್ತಿನ ಚುನಾವಣೆಯ ಪ್ರಚಾರಾರ್ಥ ಕೆಪಿಸಿಸಿ ಅದ್ಯಕ್ಷ ಡಿ.ಕೆ ಶಿವಕುಮಾರ್ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಭಾನುವಾರ ರಾತ್ರಿ 10 ಗಂಟೆಗೆ ಬೆಳಗಾವಿಗೆ ಆಗಮಿಸುವ ಅವರು,ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದು ಸೋಮವಾರ ದಿನಾಂಕ 29 ರಂದು ಬೆಳಗಾವಿಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರ ಸಭೆ ನಡೆಸಿ ವಿಧಾನ ಪರಿಷತ್ತಿನ ಚುನಾವಣೆಯ ಕುರಿತು ಚರ್ಚಿಸಲಿದ್ದಾರೆ. ಉಸ್ತುವಾರಿಗಳ ನೇಮಕ ವಿಧಾನ ಪರಿಷತ್ತಿನ ಚುನಾವಣೆಯ ಹಿನ್ನಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿಗೆ ಇಬ್ಬರು ವೀಕ್ಷಕರನ್ನು ಕೆಪಿಸಿಸಿ ನೇಮಿಸಿದೆ. ಬೆಳಗಾವಿ …
Read More »ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿನೀಡದಿದ್ದರೆ ಬಸವರಾಜ ಬೊಮ್ಮಾಯಿಸಹ ಅಧಿಕಾರ ಕಳೆದುಕೊಳ್ಳುತ್ತಾರೆ:ವಿಜಯಾನಂದ ಕಾಶಪ್ಪನವರ
ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿನೀಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸಹ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರಭವಿಷ್ಯ ನುಡಿದಿದ್ದಾರೆ. ಅವರು ಇಲ್ಲಿನ ಕಳ್ಳಿಗುಡ್ಡ ಗ್ರಾಮದಲ್ಲಿ ಮಾತನಾಡಿ, ಮೀಸಲಾತಿ ನೀಡದ್ದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಂಡರು. ಮೀಸಲಾತಿ ನೀಡದೇ ಹೋದರೆ ಈಗ ಬೊಮ್ಮಾಯಿ ಸಹ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಗುಡುಗಿದ್ದಾರೆ. ಸಮುದಾಯದಿಂದ ಒಗ್ಗಟ್ಟಿನ ಹೋರಾಟ ನಡೆದಿದ್ದರೆ ಇಷ್ಟೊತ್ತಿಗಾಗಲೇ ನಮ್ಮ ಮಕ್ಕಳ ಕೈಯಲ್ಲಿ ಸಟಿ೯ಫಿಕೆಟ್ ಇರಬೇಕಾಗಿತ್ತು. ಸಮಾಜವನ್ನು …
Read More »
Laxmi News 24×7