ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆ; ಕೈ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಪರ ಚುನಾವಣಾ ಪ್ರಚಾರ ಆರಂಭ ಯಮಕನಮರಡಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಪಾತ್ರ ಪ್ರಮುಖವಾಗಿದ್ದು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. …
Read More »ಬೆಳಗಾವಿ ಸ್ಥಳೀಯ ಸಂಸ್ಥೆ ಚುನಾವಣೆ: ಲಖನ್ ಜಾರಕಿಹೊಳಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ
ಬೆಳಗಾವಿ: ಬೆಳಗಾವಿ ಸ್ಥಳೀಯ ಸಂಸ್ಥೆಗಳ ಉಭಯ ಸದಸ್ಯ ಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುವುದು ಬಹುತೇಕ ಖಚಿತವಾಗಿದೆ. ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸಹೋದರ ಚೆನ್ನರಾಜ್ ಹಟ್ಟಿಹೊಳಿ ಅವರನ್ನು ರಾಜ್ಯ ಕಾಂಗ್ರೆಸ್ ನಾಯಕತ್ವ ಅಭ್ಯರ್ಥಿಯಾಗಿ ಅನಧಿಕೃತವಾಗಿ ಘೋಷಿಸಿದ ಬೆನ್ನಲ್ಲೇ ಜಾರಕಿಹೊಳಿ ಸಹೋದರರಾದ ರಮೇಶ್ ಮತ್ತು ಬಾಲಚಂದ್ರ ಅವರು ತಮ್ಮ ಕಿರಿಯ ಸಹೋದರ ಲಖನ್ ಅವರನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು …
Read More »ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧಹೊಂದಿದ್ದ ಕಂಟ್ರಾಕ್ಟರ್ ನನ್ನ ಬರ್ಬರವಾಗಿ ಕತ್ತು ಸೀಳಿ ಕೊಂದ ಗಂಡ
ತನ್ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಶಂಕಿಸಿ ವ್ಯಕ್ತಿಯೊಬ್ಬನನ್ನು ಕೊಂದ 29 ವರ್ಷದ ಯುವಕನನ್ನು ಕನೋಟಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆರೋಪಿಯನ್ನು ಕನೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಯಪುರ ಸಮೀಪದ ಸೂರಜ್ ನಗರದ ನಿವಾಸಿ ಸೋನು ರಾಯ್ಗರ್ ಅಲಿಯಾಸ್ ಸುನಿಲ್ ರಾಯ್ಗರ್ ಎಂದು ಪೊಲೀಸರು ಗುರುತಿಸಿದ್ದಾರೆ. ಪೊಲೀಸರ ಪ್ರಕಾರ, ಸಂತ್ರಸ್ತ ರಾಜು ಬೈರ್ವಾ (40) ಭಾನುವಾರ ವಿಜಾಪುರ ಪ್ರದೇಶದ ಬಳಿ ಕುತ್ತಿಗೆ ಸೀಳಿರುವ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಾಜು …
Read More »ಶಿಶುಪಾಲನಾ ರಜೆ: ಮನಸ್ಸಿಗೆ ಬಂದಂತೆ ಪಡೆಯುವಂತಿಲ್ಲ; ಇಲ್ಲಿದೆ ಸ್ಪಷ್ಟೀಕರಣ
ಬೆಂಗಳೂರು – ರಾಜ್ಯ ಸರಕಾರಿ ಮಹಿಳಾ ನೌಕರರಿಗಾಗಿ ಸರಕಾರ ಈ ವರ್ಷದಿಂದ ಜಾರಿಗೊಳಿಸಿರುವ ಶಿಶುಪಾಲನಾ ರಜೆ ಕುರಿತು ಉಂಟಾಗಿದ್ದ ಹಲವು ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಸರಕಾರ ಮಾಡಿದೆ. ವಿಶೇಷವಾಗಿ ಪ್ರಾಥಮಿಕ ಶಾಲೆಗಳಲ್ಲಿ ಈ ರಜೆಯಿಂದಾಗಿ ಆಗುತ್ತಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ ಕೆಲವರು ಸ್ಪಷ್ಟೀಕರಣ ಕೋರಿ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಸರಕಾರ ಸುತ್ತೋಲೆ ಹೊರಡಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರಿಗೂ ಶಿಶುಪಾಲನಾ ರಜೆ ಅನ್ವಯವಾಗಲಿದೆ. ಆದರೆ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ರಜೆ ಪಡೆಯಬೇಕು ಎಂದು …
Read More »ಬೆಳಗಾವಿ ಜಿಲ್ಲೆ ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಗೋಲ್ ಮಾಲ್
ಬೆಳಗಾವಿ: ಬೆಳಗಾವಿ ಜಿಲ್ಲೆ ಆರೋಗ್ಯ ಇಲಾಖೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಭಾರೀ ಗೋಲ್ ಮಾಲ್ ನಡೆದ ಆರೋಪ ಕೇಳಿಬಂದಿದೆ. ಕಮ್ಯೂನಿಟಿ ಹೆಲ್ತ್ ಆಫಿಸರ್ಸ್ ಹುದ್ದೆಗಳ ನೇಮಕಾತಿ ವೇಳೆ ವಂಚನೆ ನಡೆದಿರುವ ಆರೋಪವಿದೆ. ಬೆಳಗಾವಿ ಜಿಲ್ಲೆಯಲ್ಲಿ 476 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. 1600 ಅಭ್ಯರ್ಥಿಗಳು ಪರೀಕ್ಷೆ ಬರೆದು 1267 ಮಂದಿ ಪಾಸ್ ಆಗಿದ್ದರು. ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ದಾಖಲೆ ಪರಿಶೀಲನೆ ನಡೆಸಿದ್ದ ಸದರಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಒಂದು ಪಟ್ಟಿ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಿದ್ದರು. …
Read More »ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಪಟ್ಟಿಯನ್ನು ಕೇಂದ್ರಕ್ಕೆ ರವಾನಿಸಲಾಗಿದೆ ಎಂದರು.
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿ ಗೆದರಿದ್ದು, ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭವಾಗಿದೆ. ದಾವಣಗೆರೆಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. ಮೊನ್ನೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅಭ್ಯರ್ಥಿಗಳ ಪಟ್ಟಿಯನ್ನು ದೆಹಲಿಗೆ ಕಳುಹಿಸಿದ್ದಾರೆ. ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಪಟ್ಟಿಯನ್ನು …
Read More »ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ
ಶಿವಮೊಗ್ಗ: ಟಿಕೆಟ್ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಘೋಷಣೆ ಆಗುವ ಮುನ್ನವೇ ಕಾಂಗ್ರೆಸ್ ಅಭ್ಯರ್ಥಿ ಆರ್. ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿರುವಾಗಲೇ ಪ್ರಸನ್ನಕುಮಾರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಾಂಗ್ರೆಸ್ನಿಂದ ಆರ್. ಪ್ರಸನ್ನ ಕುಮಾರ್, ವೈ.ಹೆಚ್. ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಇದೀಗ ಶಿವಮೊಗ್ಗ ಜಿಲ್ಲೆಯ 1 ಸ್ಥಾನಕ್ಕೆ ಪ್ರಸನ್ನ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. …
Read More »ಕನಿಷ್ಠ ಬೆಂಬಲ ಬೆಲೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕನಿಷ್ಠ ಬೆಂಬಲ ಬೆಲೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ, ಸಚಿವರಾದ ಡಾ: ಕೆ.ಸುಧಾಕರ್, ಆನಂದ್ ಸಿಂಗ್, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Read More »ಹೌದು ನಾವು ತಲೆ ಕಟ್ ಮಾಡೋಕೆ ರೆಡಿ ಇದ್ದೇವೆ; ಇಮ್ರಾನ್ ಬೆನ್ನಲ್ಲೇ Nalapad ವಿವಾದಾತ್ಮಕ ಹೇಳಿಕೆ
ಮಂಡ್ಯ: ತಲೆ ಕಡಿತಿವಿ, ತಲೆ ತಗ್ಗಿಸಲ್ಲ ಎಂಬ ಕಾಂಗ್ರೆಸ್ ನಾಯಕರ (Congress Leaders) ಹೇಳಿಕೆ ಮುಂದುವರೆದಿದ್ದು, ಇದಕ್ಕೆ ಫುಲ್ಸ್ಟಾಪ್ ಬೀಳುವ ರೀತಿ ಕಾಣ್ತಿಲ್ಲ. ಇಂದು ಕೂಡ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಷ್ಟ್ರೀಯ ಅಧ್ಯಕ್ಷ ಇಮ್ರಾನ್ ಪ್ರತಾಪ್ ಗಡಿ (Imran Pratapgarhi) ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದು, ತಮ್ಮ ಹೇಳಿಕೆಯನ್ನ ತಿರುಚಲಾಗ್ತಿದೆ ಎಂದು ಆರೋಪಿಸಿದರು. ಈ ವೇಳೆ ನಾನೇನೂ ಕಡಿಮೆ ಇಲ್ಲ ಎಂಬಂತೆ ಕಾಂಗ್ರೆಸ್ ಯುವ ಮುಖಂಡ ಮಹಮ್ಮದ್ ಹ್ಯಾರಿಸ್ ನಲಪಾಡ್ …
Read More »ಲಖನ್ ಸದ್ಯ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದಾರೆ. ನಮ್ಮೊಂದಿಗೆ ಇಲ್ಲ. ಯಾರ‍್ಯಾರು ಸ್ಪರ್ಧಿಸುತ್ತಾರೆ ನ.23ರ ನಂತರ ಸ್ಪಷ್ಟ : ಸತೀಶ ಜಾರಕಿಹೊಳಿ
ಬೆಳಗಾವಿ: ‘ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಚನ್ನರಾಜ ಹಟ್ಟಿಹೊಳಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿಸಲು ವರಿಷ್ಠರು ಹಾಗೂ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದೇವೆ. ಅಧಿಕೃತವಾಗಿ ಪ್ರಕಟವಾದ ನಂತರ, ನ.22ರಂದು ಅವರು ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಜಿಲ್ಲೆಯ ಯಮಕನಮರಡಿಯ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಬುಧವಾರ ನಡೆದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ಪ್ರಚಾರಕ್ಕೆ ಚಾಲನೆ ನೀಡಿ …
Read More »
Laxmi News 24×7