ಗೋಕಾಕ್ ಫಾಲ್ಸ್ ನಲ್ಲಿ ಮಧ್ಯರಾತ್ರಿ ಅಚ್ಚರಿಯ ಘಟನೆ ನಡೆದಿದೆ. 140_ಅಡಿ ಆಳಕ್ಕೆ ಬಿದ್ದ ಯುವಕನೊಬ್ಬ ಬದುಕುಳಿದಿದ್ದು ಅಗ್ನಿ ಶಾಮಕ ದಳದ ಸಿಬ್ಬಂಧಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. https://youtu.be/GAPJHEFf7mM ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಈ ಯುವಕ ಸೆಲ್ಫೀ ತೆಗೆಯಲು ಹೋಗಿ ಗೋಕಾಕ್ ಫಾಲ್ಸ್ ನಲ್ಲಿ ಜಾರಿ ಬಿದ್ದಿದ್ದ,ರಾತ್ರಿಹೊತ್ತು ಅಗ್ನಿ ಶಾಮಕದಳದ ಸಿಬ್ಬಂಧಿ ಮತ್ತು ಪೋಲೀಸರು ಯುವಕನ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆ ಆಗಿರಲಿಲ್ಲ, ಮದ್ಯರಾತ್ರಿ 3 …
Read More »ದೀದಿ ಭವಿಷ್ಯ ಇಂದೇ ನಿರ್ಧಾರ : ಭವಾನಿಪುರ ಉಪಚುನಾವಣೆ ಮತ ಎಣಿಕೆ ಆರಂಭ
ಕೋಲ್ಕತ್ತಾ: ಭವಾನಿಪುರದಲ್ಲಿ ದೀದಿ ಭವಿಷ್ಯ ಇಂದು ನಿರ್ಧಾರವಾಗಲಿದೆ. ಭವಾನಿಪುರ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ಭಾನುವಾರ ಬೆಳಗ್ಗೆಯಿಂದ ಆರಂಭವಾಗಿದೆ. ಕಳೆದ ಗುರುವಾರ ಮತದಾನ ನಡೆದಿದ್ದು, ಮತದಾನ ಶೇ 57ರಷ್ಟು ಮಾತ್ರ ನಡೆದಿದೆ. ಬೆಳಗ್ಗೆ 8 ಗಂಟೆಗೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಬಿಜೆಪಿಯಿಂದ ವಕೀಲೆ, ಬಿಜೆಪಿ ಯೂತ್ ವಿಂಗ್ ಅಧ್ಯಕ್ಷೆಯಾಗಿದ್ದ ಪ್ರಿಯಾಂಕಾ ತಿಬ್ರೆವಾಲಾ ಕಣದಲ್ಲಿದ್ದಾರೆ. …
Read More »ಪೊಲೀಸರೆಂದು ಹೆದರಿಸಿ ಹಣ ವಸೂಲಿ! ಕೊಪ್ಪಳದಲ್ಲಿ ಇಬ್ಬರು ಬಂಧನ
ಕೊಪ್ಪಳ: ಪೊಲೀಸರ ಸೋಗಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಮೂಲದ ಸಂಜಯ ಕೊಪ್ಪದ ಮತ್ತು ನರಗುಂದ ಮೂಲದ ಸಂಜು ಛಲವಾದಿ ಬಂಧಿತ ಆರೋಪಿಗಳು. ಬಂಧಿತರು ಆಗಸ್ಟ್ 15ರಂದು ಭೀಮೇಶ್ ಎಂಬುವವರ ಬೈಕ್ ತಡೆದು 1,000 ರೂ. ವಸೂಲಿ ಮಾಡಿದ್ದರು. ಈ ಘಟನೆ ಕೊಪ್ಪಳ ಹೊರವಲಯದಲ್ಲಿ ನಡೆದಿತ್ತು. ಭೀಮೇಶ್ ಬೈಕ್ನಲ್ಲಿ ಮುನಿರಾಬಾದ್ಗೆ ಹೊರಟಾಗ ಹಣ ವಸೂಲಿ ಮಾಡಿದ್ದರು. ಜೊತೆಗೆ ಎಟಿಎಂ ಪಿನ್ ಪಡೆದು 1,500 ರೂ. ಡ್ರಾ …
Read More »ಸ್ವಿಗ್ಗಿ ಡೆಲಿವರಿ ಹೆಸರಿನಲ್ಲಿ ಗಾಂಜಾ ಪೂರೈಕೆ: ಸಿನಿಮೀಯ ರೀತಿಯಲ್ಲಿ ಏಳು ಮಂದಿಯ ಬಂಧನ
ಬೆಂಗಳೂರು: ಸ್ವಿಗ್ಗಿ ಫುಡ್ ಡೆಲಿವರಿ ಮತ್ತು ಕೊರಿಯರ್ ಮೂಲಕ ಉನ್ನತ ಮಟ್ಟದ ಗಾಂಜಾವನ್ನು ಮನೆ ಬಾಗಿಲಿಗೆ ಪೂರೈಸುತ್ತಿದ್ದ ಸ್ವಿಗ್ಗಿ ಡೆಲಿವರಿ ಬಾಯ್ ಸೇರಿ ಏಳು ಮಂದಿಯನ್ನು ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಹಿಂಬಾಲಿಸಿ ಮಾದಕ ವಸ್ತು ನಿಯಂತ್ರಣ ಘಟಕ (ಎನ್‌ಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಕಿಂಗ್‌ಪಿನ್ ಸೇರಿ ಆರು ಮಂದಿ ಮತ್ತು ಹೈದರಾಬಾದ್‌ನ ಒಬ್ಬ ಪೂರೈಕೆದಾರ ಸೇರಿ 7 ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳಿಂದ 140 ಕೆ.ಜಿ. ಉನ್ನತ ಮಟ್ಟದ ಗಾಂಜಾ, 5.20 …
Read More »ಮದುವೆಗಿಂತಲೂ ಡಿವೋರ್ಸ್ಗಳನ್ನು ಹೆಚ್ಚು ಸಂಭ್ರಮಿಸಬೇಕು ಎಂದ ರಾಮ್ಗೋಪಾಲ್ ವರ್ಮಾ
ತೆಲುಗಿನ ಚಿತ್ರರಂಗದ ಸ್ಟಾರ್ ಜೋಡಿ ಸಮಂತಾ ಮತ್ತು ನಾಗಚೈತನ್ಯ ತಮ್ಮ 4 ವರ್ಷಗಳ ದಾಂಪತ್ಯ ಜೀವನಕ್ಕೆ ಡಿವೋರ್ಸ್ ಮೂಲಕ ವಿದಾಯ ಹೇಳಿದ್ದಾರೆ. ಈ ವಿಚಾರವಾಗಿ ಇದೀಗ ಟಾಲಿವುಡ್ನಿಂದ ಬಾಲಿವುಡ್ವರೆಗೂ ಚರ್ಚೆಯಾಗುತ್ತಿದೆ. ಸಮಂತಾ-ನಾಗ ಚೈತನ್ಯ ಅಭಿಮಾನಿಗಳಲ್ಲಿ ಇದರಿಂದ ಬೇಸರವೂ ಆಗಿದೆ. ಈ ಮಧ್ಯೆ ಟಾಲಿವುಡ್ನ ಸ್ಟಾರ್ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಟ್ವೀಟ್ ಒಂದನ್ನು ಮಾಡಿದ್ದಾರೆ. ತಮ್ಮ ಟ್ವೀಟ್ನಲ್ಲಿ ಮದುವೆಗಿಂತಲೂ ವಿಚ್ಛೇದನ ಕಾರ್ಯಕ್ರಮಗಳನ್ನು ಹೆಚ್ಚಾಗಿ ಸಂಭ್ರಮಿಸಬೇಕಿದೆ ಎಂದಿದ್ದಾರೆ. ಸಂಭ್ರಮದಿಂದ ಮಾಡಿದ ಬಹುತೇಕ …
Read More »ರಾಜಕೀಯವಾಗಿ ಮಹತ್ವವಿಲ್ಲದಿದ್ದರೂ ಬಂದಿರುವೆ: ಜೋಶಿ
ಬೆಳಗಾವಿ: ‘ಅಂಗವಿಕಲರು, ಹಿರಿಯ ನಾಗರಿಕರಿಗೆ ಸಂಬಂಧಿಸಿದವು ರಾಜಕೀಯವಾಗಿ ಬಹಳ ಮಹತ್ವದ ಕಾರ್ಯಕ್ರಮವೇನಲ್ಲ. ಬಹಳ ಜನರು ಸೇರುವುದಿಲ್ಲ ಎನ್ನುವುದೂ ಗೊತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಹಿರಿಯ ನಾಗರಿಕರಿಗೆ ತೋರುತ್ತಿರುವ ಗೌರವದಿಂದಾಗಿ ಬಂದಿದ್ದೇನೆ’. – ಹೀಗೆಂದು ಹೇಳಿದವರು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ. ಕೇಂದ್ರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ ಸಹಯೋಗದಲ್ಲಿ ನಗರದ ವಿದ್ಯಾಧಿರಾಜ ಸಭಾಭವನದಲ್ಲಿ ಶನಿವಾರ ನಡೆದ ‘ವಯೋಶ್ರೀ’ ಕಾರ್ಯಕ್ರಮದಲ್ಲಿ …
Read More »ಬಿಜೆಪಿಯಿಂದ 40 ಜನ ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ..- ಹೊಸ ಬಾಂಬ್ ಸಿಡಿಸಿದ ರಾಜು ಕಾಗೆ
ಬೆಳಗಾವಿ: ಬಿಜೆಪಿಯಿಂದ ಶೀಘ್ರವೇ 40 ಜನ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ ಎಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮದಭಾವಿ ಗ್ರಾಮದಲ್ಲಿ ಮಾಜಿ ಶಾಸಕ ರಾಜು ಕಾಗೆ ಹೇಳಿಕೆ ನೀಡಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರದಲ್ಲಿ ವೈಮನಸ್ಸು ಉಂಟಾಗಿದೆ ಒಬ್ಬರೊಬ್ಬರಲ್ಲಿ ಹೊಂದಾಣಿಕೆ ಇಲ್ಲದ್ದರಿಂದ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇವರಿಗೆ ಭೇಟಿಯಾಗಿ ಬಂದಿದ್ದೇನೆ. ಬರುವ 2023 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ …
Read More »ಜೈಲಿನಿಂದ ಬಂದವರಿಗೆ ಅದ್ಧೂರಿ ಸನ್ಮಾನ, ಇದು ಪರಿಸ್ಥಿತಿ’ -ಸಂತೋಷ್ ಹೆಗ್ಡೆ ಅಸಮಾಧಾನ
ಮೈಸೂರು: ಇತ್ತೀಚಿನ ದಿನಗಳಲ್ಲಿ ಭ್ರಷ್ಟರನ್ನು ದೂರುವುದು ಕಡಿಮೆ ಆಗುತ್ತಿದೆ ಅಂತ ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ. ಮೈಸೂರಿನಲ್ಲಿ ಕೋಳಿ ಸಾಂಬರ್ ಎಂಬ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಿ ಬಂದವರಿಗೆ ಹಾರ ತುರಾಯಿ ಹಾಕಿ ಸನ್ಮಾನಿಸಿ, ಗೌರವಿಸಲಾಗುತ್ತಿದೆ. ಆಡಳಿತ ವ್ಯವಸ್ಥೆಯಿಂದಲೇ ಜನರಿಗೆ ಅನ್ಯಾಯವಾಗುತ್ತಿದೆ. ಇದು ಸಮಾಜದ ತಪ್ಪಲ್ಲ, ಈ ಬಗ್ಗೆ ಪ್ರಶ್ನೆ ಮಾಡದ ವ್ಯಕ್ತಿಗಳದ್ದೇ ತಪ್ಪು ಅಂತ ಅಸಮಾಧಾನ ಹೊರಹಾಕಿದ್ರು. ಮೊದಲೆಲ್ಲಾ ರಾಷ್ಟ್ರದ ಮಹಾನ್ …
Read More »IOCL ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ವಿವರ
ದಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ ನಿಗಮವು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 71 ಹುದ್ದೆಗಳಿಗೆ ಐಒಸಿಎಲ್ನಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 1ರಿಂದಲೇ ಅರ್ಜಿ ಸ್ವೀಕಾರ ಪ್ರಕ್ರಿಯೆಯು ಆರಂಭಗೊಂಡಿದ್ದು ಅರ್ಜಿ ಸಲ್ಲಿಸಲು ಅಕ್ಟೋಬರ್ 22 ಕೊನೆಯ ದಿನಾಂಕವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು iocl.com ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು ಹುದ್ದೆ : 71 ಕಾಯ್ದಿರಿಸದ ವರ್ಗ : 28 ಹುದ್ದೆಗಳು ಎಸ್ಸಿ ವರ್ಗ : 10 ಹುದ್ದೆಗಳು …
Read More »ಅಂತ್ಯೋದಯ ಕಾರ್ಯಾಗಾರ : ಸಚಿವ ಕೋಟಾ ರಿಂದ ವ್ಯವಸ್ಥೆಯ ಪರಿಶೀಲನೆ
ಬಂಟ್ವಾಳ: ದ.ಕ.ಜಿಲ್ಲಾಡಳಿತ,ದ.ಕ.ಜಿ.ಪಂ.,ಸಮಾಜ ಕಲ್ಯಾಣ,ಹಿ.ವರ್ಗಗಳ ಕಲ್ಯಾಣ ಹಾಗೂ ಪ.ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ. 4 ರಂದು ಬ್ರಹ್ಮರಕೊಟ್ಲುವಿನಲ್ಲಿರುವ ಬಂಟವಾಳದ ಬಂಟರಭವನದಲ್ಲಿ ನಡೆಯಲಿರುವ “ಅಂತ್ಯೋದಯ” ಇಲಾಖೆಗಳ ವಿವಿಧ ಯೋಜನೆಗಳ ರಾಜ್ಯಮಟ್ಟದ ಮಾಹಿತಿ ಕಾರ್ಯಾಗಾರದ ವ್ಯವಸ್ಥೆಯ ಹಿನ್ನಲೆಯಲ್ಲಿ ಸಮಾಜಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಶನಿವಾರ ಪೂರ್ವಸಿದ್ದತೆಯನ್ನು ಪರಿಶೀಲಿಸಿದರು. ಬಳಿಕ ವಿವಿಧ ಇಲಾಖೆಯ ಅಧಿಕಾರಗಳೊಂದಿಗೆ ಕಾರ್ಯಕ್ರಮದ ಕುರಿತಂತೆ ಸಮಾಲೋಚನೆ ನಡೆಸಿದ ಸಚಿವರು ಕೆಲವೊಂದು ಸಲಹೆ,ಸೂಚನೆಗಳನ್ನಿತ್ತರು. ನಮ್ಮ ಇಲಾಖೆಯ ಯೋಜನೆಗಳನ್ನು ಸಾರ್ವಜನಿಕವಾಗಿ ಸದಸ್ಯರಿಗೆ …
Read More »
Laxmi News 24×7