ಬೆಂಗಳೂರು: ಬಿಡುಗಡೆಗೂ ಮುನ್ನವೇ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ಪೈರಸಿ ಕಾಟ ಶುರುವಾಗಿದೆ. ಸಿನಿಮಾವನ್ನು ಬಿಡುಗಡೆಗೂ ಮುನ್ನ ಪೈರಸಿ ಮಾಡೋದಾಗಿ ಕೋಟಿಗೊಬ್ಬ 3 ಸಿನಿಮಾ ನಿರ್ಮಾಪಕ ಸೂರಪ್ಪಬಾಬುಗೆ ಟೆಲಿಗ್ರಾಂನಲ್ಲಿ ಬೆದರಿಕೆಗಳು ಬಂದಿವೆಯಂತೆ. ಈ ಹಿನ್ನೆಲೆ ಸೂರಪ್ಪ ಬಾಬು ಗೃಹ ಸಚಿವ ಆರಗ ಜ್ಞಾನೇಂದ್ರಗೆ ಪತ್ರ ಬರೆದಿದ್ದಾರೆ. ಕೋಟಿಗೊಬ್ಬ 3 ಸಿನಿಮಾ ಅಕ್ಟೋಬರ್ 1 ರಂದು ರಿಲೀಸ್ ಆಗಲಿದೆ. ಆದ್ರೆ ಅದಕ್ಕೂ ಮುನ್ನ ಇದೀಗ ಪೈರಸಿಯ ಬೆದರಿಕೆ ಬಂದಿದ್ದು ಮುನ್ನೆಚ್ಚರಿಕೆ …
Read More »ಹಾನಗಲ್ ಬೈಎಲೆಕ್ಷನ್: ಬಿಜೆಪಿಯಿಂದ BSY-ಬೊಮ್ಮಾಯಿ; ಕಾಂಗ್ರೆಸ್ನ ಜೋಡೆತ್ತು ಯಾರು ?
ಹಾವೇರಿ: ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳಿಗೆ ನಡೆಯಬೇಕಾಗಿದ್ದ ಉಪಚುನಾವಣೆಯನ್ನ ಅಕ್ಟೋಬರ್ 30 ರಂದು ನಡೆಸಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ತಂತ್ರ-ಪ್ರತಿತಂತ್ರದ ಬಗ್ಗೆ ಚರ್ಚೆಗಳು ಶುರುವಾಗಿದೆ. ಜೋಡೆತ್ತುಗಳ ಹೋರಾಟ ಮೂಲಗಳ ಪ್ರಕಾರ ಹಾನಗಲ್ನಲ್ಲಿ ಜೋಡೆತ್ತುಗಳ ಪಾಲಿಟಿಕ್ಸ್ ಜೋರಾಗಲಿದ್ಯಂತೆ. ಚುನಾವಣಾ ಅಖಾಡದಲ್ಲಿ ತೊಡೆತಟ್ಟಲು ಘಟಾನುಘಟಿ ನಾಯಕರು ಸಜ್ಜಾಗಿದ್ದಾರೆ ಎನ್ನಲಾಗಿದೆ. ಅದರಂತೆ ಬಿಜೆಪಿಯಿಂದ ಬಿಎಸ್ವೈ ಮತ್ತು ಬಸವರಾಜ್ ಬೊಮ್ಮಾಯಿ ಹಾಗೂ ಕಾಂಗ್ರೆಸ್ನಿಂದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ …
Read More »ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪತಿ
ಬೆಳಗಾವಿ: ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ (35) ಪತ್ನಿ ಜಯಮಾಲಾ (33) ಮೇಲೆ ಹಲ್ಲೆ ಮಾಡಿದ್ದು, ಮಾರಕಾಸ್ತ್ರದಿಂದ ಪತ್ನಿಯ ತಲೆ ಹಾಗೂ ಕಾಲಿಗೆ ಕೊಚ್ಚಿದ ಕೊಲೆ ಮಾಡಲು ಯತ್ನಿಸಿದ್ದಾನೆ. ಪತಿ-ಪತ್ನಿಯ ಕೌಟುಂಬಿಕ ಕಲಹದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. …
Read More »ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಮಧುಮೇಹ ತಪಾಸಣಾ ಕಾರ್ಯಕ್ರವiಕ್ಕೆ ತಹಶೀಲ್ದಾರ ಅವರು ಚಾಲನೆ ನೀಡುತ್ತಿರುವುದು.
ಗೋಕಾಕ ;- ದೇಶದಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸಲು ಜನತೆಯಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ ಹೇಳಿದರು. ಬುಧವಾರದಂದು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ, ಆರ್ಟ ಆಫ್ ಲಿವಿಂಗ್, ಟೊರೊಂಟೋ ಫಾರ್ಮ ಹಾಗೂ ರಿಸರ್ಚಸೊಸೈಟಿ ಫಾರ್ ಸ್ಟಡಿ ಆಫ್ ಡಯಾಬಿಟಿಸ್ ಇಂಡಿಯಾದವರು ಸಂಯುಕ್ತವಾಗಿ ಆಯೋಜಿಸಿದ್ದ ಭಾರತದಾಧ್ಯಂತ ಒಂದೇ ದಿನದಲ್ಲಿ 10 ಲಕ್ಷ ಮಧುಮೇಹಿಗಳ ತಪಾಸಣಾ ಶಿಭಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ದೇಶದಲ್ಲಿ ಅತೀ ಹೆಚ್ಚು …
Read More »ಗುತ್ತಿಗೆದಾರನ ನಿರ್ಲಕ್ಷ್ಯ.. ರಸ್ತೆ ಗುಂಡಿಗೆ ಬಿದ್ದು ವ್ಯಕ್ತಿ ಸಾವು: ಗ್ರಾಮಸ್ಥರಿಂದ ಪ್ರತಿಭಟನೆ
ರಸ್ತೆ ಗುಂಡಿಗೆ ಬಿದ್ದು ವ್ಯಕ್ತಿ ಸಾವಿಗೀಡಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್-ಹೊಸೂರು ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಬ್ ಮಂಗಲ ನಿವಾಸಿ ಮಾದೇಶ್ ಮೃತ ವ್ಯಕ್ತಿಯಾಗಿದ್ದಾನೆ. ರಸ್ತೆ ಕಾಮಗಾರಿಗೆ ಗುತ್ತಿಗೆ ಪಡೆದಿದ್ದ ಗುತ್ತಿಗೆದಾರ ರಸ್ತೆಯಲ್ಲಿನ ಮರ ತೆರವು ಮಾಡಲು ಹೋಗಿ ಗುಂಡಿ ತೆಗೆದು ಹಾಗೆ ಬಿಟ್ಟಿದ್ದ. ಇದೀಗ ರಸ್ತೆಯಲ್ಲಿರುವ ಅದೇ ಹೊಂಡಕ್ಕೆ ಬಿದ್ದು ಮಾದೇಶ್ ಮೃತಪಟ್ಟಿದ್ದಾರೆ. ಕಳೆದ ರಾತ್ರಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ. ಗ್ರಾಮಸ್ಥರು ರಸ್ತೆ ತಡೆದು …
Read More »ರಸ್ತೆ ಗುಂಡಿಯಲ್ಲಿ ಬಿದ್ದು ಬೈಕ್ ಓಡಿಸುತ್ತಿದ್ದ ಬಿಜೆಪಿ ಮುಖಂಡ ಸಾವು
ಆನೇಕಲ್: ಬೈಕ್ ಓಡಿಸುವಾಗ ರಸ್ತೆ ಕಾಮಗಾರಿಗೆಂದು ತೋಡಿದ್ದ ಗುಂಡಿಯಲ್ಲಿ ಬಿದ್ದು ಬಿಜೆಪಿ ಮುಖಂಡ ಸಬ್‌ಮಂಗಲ ನಿವಾಸಿ ಮಾದೇಶ್(50) ಸಾವನ್ನಪ್ಪಿದ್ದಾರೆ. ಆನೇಕಲ್‌ನ ಹೊಸೂರು ಮುಖ್ಯರಸ್ತೆಯಲ್ಲಿ ದುರ್ಘಟನೆ ನಡೆದಿದ್ದು, ಗುತ್ತಿಗೆದಾರ ರಸ್ತೆ ಕಾಮಗಾರಿಗೆ ಹೊಂಡ ತೋಡಿದ್ದರು. ಆದರೆ ಕೆಲಸ ಪೂರ್ಣಗೊಳಿಸದೆ ಗುಂಡಿಯನ್ನು ಹಾಗೆಯೇ ಬಿಟ್ಟುಹೋಗಿದ್ದರು ಎನ್ನಲಾಗಿದೆ. ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸ್ಥಳೀಯರು ಧರಣಿ ನಡೆಸಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ದಿನೇಶ್ ಭೇಟಿ ನೀಡಿ ಧರಣಿ ನಡೆಸುತ್ತಿದ್ದವರ ಮನವೊಲಿಕೆಗೆ ಯತ್ನಿಸಿದ್ದಾರೆ. ಈ ರಸ್ತೆಯಲ್ಲಿ ಕಾಮಗಾರಿ ಪ್ರಾರಂಭ …
Read More »ಮೋದಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ನಡೆದ ಗಲಾಟೆ; ಶಾಸಕ ಯತ್ನಾಳ್ ಸೇರಿ ಎಲ್ಲ 134 ಜನರು ಖುಲಾಸೆ
ಬೆಂಗಳೂರು: ವಿಜಯಪುರ ನಗರದಲ್ಲಿ 2014 ಮೇ 26 ರಂದು ನಡೆದಿದ್ದ ಗಲಾಟೆ ಪ್ರಕರಣದ ತೀರ್ಪು ಪ್ರಕಟಗೊಂಡಿದ್ದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಎಲ್ಲ 134 ಜನರು ಖುಲಾಸೆಗೊಂಡಿದ್ದಾರೆ. ಪ್ರಚೋದನಕಾರಿ ಭಾಷಣ ಮತ್ತು ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮೇಲಿತ್ತು. ನಗರದ ಗಾಂಧಿಚೌಕ್ ಪೊಲೀಸರು ದಾಖಲಿಸಿದ್ದ ಎರಡು ಪ್ರಕರಣಗಳಲ್ಲಿ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಎಲ್ಲರೂ ನಿರಪರಾಧಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು …
Read More »ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ಅ.3 ರಿಂದ ಕ್ಲಬ್ ಪಬ್ ಓಪನ್
ಬೆಂಗಳೂರು: ಕೊರೊನಾ ಹಾವಳಿ ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೇರಲಾಗಿದ್ದ ಲಾಕ್ಡೌನ್ ಸಡಿಲಗೊಳಿಸಿ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಅದರಲ್ಲೂ ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ನೀಡಲಾಗಿದೆ. ಹೌದು, ಅಕ್ಟೋಬರ್ 3ನೇ ತಾರೀಕಿನಿಂದಲೇ ಕ್ಲಬ್, ಪಬ್ ತೆರೆಯಲು ಅನುಮತಿ ನೀಡಲಾಗಿದೆ. ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತಾಡಿದ ಸಿಎಂ ಬೊಮ್ಮಾಯಿ, ‘ರಾಜ್ಯದಲ್ಲಿ ಸರಾಸರಿ 0.66 ಕೋವಿಡ್ ಪ್ರಮಾಣ ಇದೆ. ಸದ್ಯ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗಿದೆ. ಆದ್ದರಿಂದ ಪಾಸಿಟಿವಿ ರೇಟ್ ಶೇ.1 ಕ್ಕಿಂತ …
Read More »ಇಂಜಿನಿಯರಿಂಗ್ ಕೋರ್ಸ್ ಶುಲ್ಕ ಹೆಚ್ಚಳ ಇಲ್ಲ: ಸಚಿವ ಅಶ್ವತ್ಥನಾರಾಯಣ
ಬೆಂಗಳೂರು, ಸೆಪ್ಟಂಬರ್ 29: ಈ ಬಾರಿ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶುಲ್ಕ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳು ಶೇ.15ರಿಂದ ಶೇ.20 ರಷ್ಟು ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿವೆ. ಆದರೆ, ಕೊರೋನಾ ಮತ್ತು ಲಾಕ್‌ಡೌನ್‌ಗಳಿಂದಾಗಿ ಪೋಷಕರು ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಈ ಸಂದರ್ಭದಲ್ಲಿ ಶುಲ್ಕ ಹೆಚ್ಚಳ ಮಾಡುವ ನಿರ್ಧಾರ ಸರಿಯಲ್ಲ. ಈ ಸಂಬಂಧ ಖಾಸಗಿ …
Read More »ಶಿರೂರು ಮಠಕ್ಕೆ ಬಾಲ ಪೀಠಾಧಿಪತಿ ನೇಮಕ ವಿವಾದ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು, ಸೆ.26: ಉಡುಪಿ ಶಿರೂರು ಮಠಕ್ಕೆ ಪೀಠಾಧಿಪತಿಯಾಗಿ ಅಪ್ರಾಪ್ತರ ವಯಸ್ಸಿನ ಬಾಲಕನನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಯಾಗಿ ನೇಮಿಸಿರುವ ಕ್ರಮ ಪ್ರಶ್ನಿಸಿ ಮಠದ ಭಕ್ತ ಸಮಿತಿಯ ಕಾರ್ಯದರ್ಶಿ ಪಿ.ಲಾತವ್ಯ ಆಚಾರ್ಯ ಹಾಗೂ ಇತರ 4 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ಬುಧವಾರ ಪ್ರಕಟಿಸಿದ್ದಾರೆ. ಪೀಠಾಧಿಪತಿ ನೇಮಕ ವಿಚಾರದಲ್ಲಿ …
Read More »
Laxmi News 24×7