ಬೆಂಗಳೂರು: ನಗರದಲ್ಲಿ ಶಂಕರ್ ಎಂಬವರ ಕುಟುಂಬದ ಐವರ ಸಾವು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ತನಿಖೆ ಚುರುಕುಗೊಂಡಿದೆ. ಈ ವೇಳೆ, ಪ್ರತ್ಯೇಕವಾಗಿ ಬರೆದಿದ್ದ 27 ಪುಟಗಳ ಡೆತ್ನೋಟ್ ಪತ್ತೆಯಾಗಿದೆ. ಈ ಮೊದಲು ಮನೆಯಲ್ಲಿ 3 ಪ್ರತ್ಯೇಕ ಡೆತ್ನೋಟ್ ಪತ್ತೆಯಾಗಿತ್ತು. ಸಿಂಚನಾ ಎಂಬವರ ಕೊಠಡಿಯಲ್ಲಿ 4 ಪುಟಗಳ ಡೆತ್ನೋಟ್ ಸಿಕ್ಕಿತ್ತು. ಸಿಂಧೂರಾಣಿ ಕೊಠಡಿಯಲ್ಲಿ 4 ಪುಟದ ಡೆತ್ನೋಟ್ ಸಿಕ್ಕಿತ್ತು. ಇಬ್ಬರೂ ತಮ್ಮ ಗಂಡನ ಮನೆ ಮತ್ತು ತಂದೆ ವಿರುದ್ಧ ಆರೋಪ ಮಾಡಿದ್ದರು. ಬಳಿಕ …
Read More »ರೋಡ್ ಹಂಪ್‌ಗಳ ಬಗ್ಗೆ ಸದನದಲ್ಲಿ ವ್ಯಗ್ರರಾದ ಶಾಸಕ ರಮೇಶ್ ಕುಮಾರ್; ಬೇಜವಾಬ್ದಾರಿ ಅಧಿಕಾರಿಗಳ ಸಸ್ಪೆಂಡ್ ಮಾಡಿ ಅಂದರು
ಬೆಂಗಳೂರು: ಅವೈಜ್ಞಾನಿಕ ರೋಡ್ ಹಂಪ್‌ಗಳು ಹಾಕಿರುವ ವಿಚಾರಕ್ಕೆ ಸಂಬಂಧಿಸಿ ಸದನದಲ್ಲಿ ಶಾಸಕ ರಮೇಶ್ ಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ. ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಹೋಗುವುದಿಲ್ಲ. ಒಬ್ಬ ಜೆಇ, ಇಇ ಯಾರೂ ಸ್ಥಳ ಪರಿಶೀಲನೆ ಮಾಡಲ್ಲ. ಬೇಕಾಬಿಟ್ಟಿಯಾಗಿ ರೋಡ್ ಹಂಪ್‌ಗಳನ್ನ ಹಾಕಿದ್ದಾರೆ. ಇದಕ್ಕೆಲ್ಲಾ ಯಾರು ಹೊಣೆ ಎಂದು ಇಂದು ನಡೆದ ಸದನದಲ್ಲಿ ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತ ಅವರು, ಹಳ್ಳಿ ರಸ್ತೆಯಿಂದ ಮುಖ್ಯ ರಸ್ತೆಗೆ ಬರಬೇಕಾದ್ರೆ ಹಂಪ್ …
Read More »,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ ಮಾರ್ಕಂಡೆಯ ನದಿಯವರೆಗೆ ಎರಡೂಬದಿ ಚರಂಡಿ ಮತ್ತು ರಸ್ತೆ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.
ಗೋಕಾಕದಲ್ಲಿರುವ ಶಾಸಕರ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಭಾಗ್ಯ ಲಕ್ಷ್ಮಿ ಯೋಜನೆಯ 2020-21 ನೇ ಸಾಲಿನ ಅಂಚೆ ಇಲಾಖೆಯ ವತಿಯಿಂದ ಅನುಷ್ಠಾನ ಗೊಳಿಸಿದ್ದ ಸುಕನ್ಯಾ ಸಮೃದ್ದಿ ಯೋಜನೆಯನ್ನು ಬೆಳಗಾವಿ ಜಿಲ್ಲೆಯಲ್ಲಿ ಗೋಕಾಕದಲ್ಲಿ ಪ್ರಥಮವಾಗಿ ಶಾಸಕರಾದ ಶ್ರೀ ರಮೇಶ ಜಾರಕಿಹೋಳಿಯವರು ಪಲಾನುಭವಿಗಳಿಗೆ ಅಂಚೆ ಇಲಾಖೆಯ ಪಾಸಬುಕ್ ನೀಡುವ ಮೂಲಕ ಚಾಲನೆ ನೀಡಿದರು. ನಂತರ ನಗರೋತ್ಥಾನ ಹಂತ -3ರ ಪ್ರೋತ್ಸಾಹ ಧನದಲ್ಲಿ ರೂ,16.85 ಕೋಟಿ ಅನುದಾನದಲ್ಲಿ ನಾಕಾ ನಂ,1ರಿಂದ …
Read More »ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಕೊಹ್ಲಿಯ ಮಾಸ್ಟರ್ ಪ್ಲಾನ್: ಇಲ್ಲಿದೆ ನೋಡಿ ಸಂಭಾವ್ಯ ಪ್ಲೇಯಿಂಗ್ XI
ಐಪಿಎಲ್ 2021 (IPL 2021) ರಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಎರಡನೇ ಚರಣದಲ್ಲಿ ಇಂದು ತನ್ನ ಅಭಿಯಾನ ಆರಂಭಿಸಲಿದೆ. ಅಬುಧಾಬಿಯ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ ವಿರಾಟ್ ಕೊಹ್ಲಿ (Virat Kohli) ಪಡೆ ಕಣಕ್ಕಿಳಿಯಲಿದ್ದು ಮತ್ತೊಂದು ಗೆಲುವನ್ನು ಎದುರು ನೋಡುತ್ತಿದೆ. ಇದಕ್ಕಾಗಿ ಆರ್ಸಿಬಿ ಬಲಿಷ್ಠ ತಂಡವನ್ನೇ ಕಣಕ್ಕಿಳಿಸುವ ಪ್ಲಾನ್ …
Read More »ಇಂದು ಕೆಸಿಇಟಿ ಫಲಿತಾಂಶ ಪ್ರಕಟ; ಈ ವೆಬ್ಸೈಟ್ನಲ್ಲಿ ರಿಸಲ್ಟ್ ವೀಕ್ಷಿಸಿ
ಬೆಂಗಳೂರು: ಇಂದು (ಸೆ.20) 2020-21ನೇ ಸಾಲಿನ ಕೆಸಿಇಟಿ ಫಲಿತಾಂಶ (KCET Result 2021) ಪ್ರಕಟವಾಗಲಿದೆ. ಆಗಸ್ಟ್ 28, 29, 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಇಂದು ಮಧ್ಯಾಹ್ನ 2:30ಕ್ಕೆ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ (Ashwath Narayan) ಸುದ್ದಿಗೋಷ್ಠಿ ನಡೆಸುತ್ತಾರೆ. ಮಲ್ಲೇಶ್ವರಂನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಆ ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೆಬ್ಸೈಟ್ನಲ್ಲಿ ಫಲಿತಾಂಶ ನೋಡಬಹುದು. kea.kar.nic.in ವೆಬ್ಸೈಟ್ನಲ್ಲಿ …
Read More »ಪಂಜಾಬ್ ಸಿಎಂ ಆಗಿ ಆಯ್ಕೆಯಾದ ಚನ್ನಿಗೆ ರಾಹುಲ್ ಅಭಿನಂದನೆ
ನವದೆಹಲಿ : ಚರಣ್ಜಿತ್ ಸಿಂಗ್ ಚನ್ನಿಯನ್ನು ಮುಂದಿನ ಪಂಜಾಬ್ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಅಭಿನಂದಿಸಿದರು ಮತ್ತು ಪಕ್ಷವು ರಾಜ್ಯದ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವುದನ್ನು ಮುಂದುವರಿಸಬೇಕು ಎಂದು ಹೇಳಿದರು. ಭಾನುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಚನ್ನಿ, ಸೋಮವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ, ಅಮರೀಂದರ್ ಸಿಂಗ್ ಉತ್ತರಾಧಿಕಾರಿಯಾಗಿದ್ದು, ಪಕ್ಷದಿಂದ ಅವಮಾನ ಮಾಡಲಾಗಿದೆ ಎಂದು ಶನಿವಾರ ರಾಜೀನಾಮೆ ನೀಡಿದರು. “ಹೊಸ ಜವಾಬ್ದಾರಿಗಾಗಿ ಶ್ರೀ …
Read More »ಖಾಸಗಿ ರೆಸಾರ್ಟ್‌ನಲ್ಲಿ ರೇವ್ ಪಾರ್ಟಿ: 11ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದ ಖಾಕಿ
ಬೆಂಗಳೂರು: ಡ್ರಗ್ ಪಾರ್ಟಿ ನಡೆಯುತ್ತಿದ್ದ ಆನೇಕಲ್‌ನ ರೆಸಾರ್ಟ್‌ನಲ್ಲಿ ದಾಳಿ ನಡೆಸಿದ ಪೊಲೀಸರು 4 ಮಲಯಾಳಿ ಮಹಿಳೆಯರು ಸೇರಿದಂತೆ 28 ಜನರನ್ನು ಬಂಧಿಸಿದ್ದಾರೆ.ನಿಷೇಧಿತ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಆನೇಕಲ್ ನ ಗ್ರೀನ್ ವ್ಯಾಲಿ ರೆಸಾರ್ಟ್ ನಲ್ಲಿ ನಡೆದ ಡ್ರಗ್ ಪಾರ್ಟಿಯಲ್ಲಿ ಬೆಂಗಳೂರಿನ ಹಲವು ಐಟಿ ಕಂಪನಿ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಮಲಯಾಳಿ ಸೇರಿದಂತೆ ಮೂವರನ್ನು ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.
Read More »ಮಾಜಿ ಕೇಂದ್ರ ಸಚಿವರಿಗೆ ‘ವಿಡಿಯೋ’ ಸಂಕಷ್ಟ : ಪೊಲೀಸ್ ಆಯುಕ್ತರಿಗೆ ದೂರು ನೀಡಿದ ‘ಡಿ.ವಿ ಸದಾನಂದಗೌಡ’
ಬೆಂಗಳೂರು : ಕೇಂದ್ರದ ಮಾಜಿ ಸಚಿವ ಡಿ ವಿ ಸದಾನಂದಗೌಡರ ವಿರುದ್ಧ ವಿಡಿಯೋವೊಂದನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಡಿ ವಿ ಸದಾನಂದಗೌಡರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಪ್ ಪಂತ್ ಗೆ ದೂರು ನೀಡಿದ ಸದಾನಂದಗೌಡರು ‘ನನ್ನ ವಿರುದ್ಧ ಫ್ಯಾಬ್ರಿಕೇಟಡ್, ಫೇಕ್, ಮಿಶ್ರಿತ ವಿಡಿಯೋ ಒಂದನ್ನು ಮಾಡಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದೆ, …
Read More »ಎಣ್ಣೆ ಮತ್ತಲ್ಲಿ ಅಡ್ಡಾದಿಡ್ಡಿ ಚಾಲನೆ; ಲಾರಿ ಡ್ರೈವರ್ನ ತಡೆದು ನಿಲ್ಲಿಸಿದ್ದೇ ದೊಡ್ಡ ಚಾಲೆಂಜ್
ಉಡುಪಿ: ಕುಡಿದ ಮತ್ತಲ್ಲಿ ಚಾಲಕನೋರ್ವ ಬೃಹತ್ ಕಂಟೈನರ್ ವಾಹನವನ್ನು ಅಡ್ಡಾದಿಡ್ಡಿ ಚಲಾಯಿಸಿ ಆತಂಕ ಉಂಟು ಮಾಡಿದ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ನಡೆದಿದೆ. ಏಣ್ಣೆ ಏಟಲ್ಲಿ ಗಾಡಿ ಹತ್ತಿದ ಚಾಲಕ ಯದ್ವಾತದ್ವ ಗಾಡಿ ಚಲಾಯಸಿದ್ದಾನೆ. ಅಷ್ಟೇ ಅಲ್ಲದೆ ಹೆದ್ದಾರಿಯಲ್ಲಿ ವೇಗ ತಡೆಗಾಗಿ ಅಳವಡಿಸಿದ ಬ್ಯಾರಿಕೇಡ್ ಎಳೆದೊಯ್ದ ಬಹು ದೂರ ಸಾಗಿದ್ದಾನೆ. ವಾಹನವನ್ನು ತಡೆಯಲು ಮುಳ್ಳಿಕಟ್ಟೆ ರಿಕ್ಷಾ ಚಾಲಕರು ಹರಸಾಹಸ ಪಟ್ಟಿದ್ದು, ಕೊನೆಗೆ ಹೆಮ್ಮಾಡಿ ಬಳಿ ಕಂಟೈನರ್ …
Read More »ಡಾ.ರಾಜ್ ಕುಮಾರ್ ವೃತ್ತಿ ಜೀವನ ಆರಂಭಿಸಿದ ದೇವಸ್ಥಾನ ಇದೆ ನೋಡಿ
ಈಶ್ವರ ದೇವಸ್ಥಾನ ವಾಣಿಜ್ಯ ನಗರಿ ಹುಬ್ಬಳ್ಳಿಯ ಸ್ಟೇಷನ್ ರಸ್ತೆಯಲ್ಲಿದೆ. ಸ್ಟೇಷನ್ ರೋಡ್ನಲ್ಲಿರುವ ಈಶ್ವರ ದೇವಸ್ಥಾನಕ್ಕೆ ಒಂದು ವಿಶೇಷವಾದ ಶಕ್ತಿ ಇದೆ. ಹುಬ್ಬಳ್ಳಿ: ಜಿಲ್ಲೆಯಲ್ಲಿರುವ ಈಶ್ವರ ದೇವಸ್ಥಾನ (Ishwara Temple) ಒಂದು ಸಾವಿರ ವರ್ಷಗಳ ಇತಿಹಾಸ ಹೊಂದಿದೆ. ಪ್ರಸಿದ್ಧ ಆರೂಢ ಸಂಪ್ರದಾಯದ ಸಿದ್ದರೋಡ ಮಹಾಸ್ವಾಮಿಗಳು ತಪ್ಪಸ್ಸು ಮಾಡಿರುವ ದೇವಸ್ಥಾನ. ಚಾಲುಕ್ಯರ ಕಾಲದಲ್ಲಿ ಸ್ಥಾಪಿತವಾದ ದೇವಸ್ಥಾನ ಬಹಳ ಪ್ರಸಿದ್ಧಿಯನ್ನ ಪಡೆದಿದ್ದು, ಈ ದೇವಸ್ಥಾನಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತರು ಬಂದು ದೇವರ ದರ್ಶನ ಪಡೆದು …
Read More »
Laxmi News 24×7