Breaking News

ರಾಜ್ಯ

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಉಡುಪಿ, ಸೆ.15: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೋಲೀಸರು ಎಸಗಿರುವ ದೌರ್ಜನ್ಯವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳ ಮೇಲಿನ ಪ್ರಕರಣವನ್ನ್ನು ಹಿಂಪಡೆಯುವಂತೆ ಆಗ್ರಹಿಸಿ ಸಿಎಫ್‌ಐ ನೇತೃತ್ವದಲ್ಲಿ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು. ಕುಂದಾಪುರದಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಎಫ್‌ಐ ಉಡುಪಿ ಜಿಲ್ಲಾ ಮುಖಂಡ ನವಾಝ್ ಶೇಖ್, ಲಾಠಿ ಏಟಿನ ಮೂಲಕ ವಿದ್ಯಾರ್ಥಿ ಹೋರಾಟವನ್ನು ಹತ್ತಿಕ್ಕುವ ಫ್ಯಾಶಿಸ್ಟ್ ಸರಕಾರದ …

Read More »

ಸಾರಿಗೆ ಸಚಿವರ ತವರೂರಲ್ಲಿಯೇ ಬಸ್​ಗಾಗಿ ವಿದ್ಯಾರ್ಥಿಗಳ ಪರದಾಟ

ಬಳ್ಳಾರಿ: ಸಾರಿಗೆ ಸಚಿವ ಶ್ರೀರಾಮುಲು ತವರೂರಲ್ಲಿಯೇ ವಿದ್ಯಾರ್ಥಿಗಳು ಬಸ್​ಗಳಿಗಾಗಿ ಪರದಾಟ ನಡೆಸಿದ ಘಟನೆ ನಡೆದಿದೆ. ಸಮಯಕ್ಕೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ, ಒಂದೇ ಬಸ್‌ನಲ್ಲಿ ನೂರಾರು ವಿದ್ಯಾರ್ಥಿಗಳು ಪ್ರಯಾಣ ಮಾಡಲು ಹರಸಾಹಸ ಪಡುತ್ತಿದ್ದಾರೆ. ಬಸ್​ ಅವ್ಯವಸ್ಥೆಯಿಂದ ವಿದ್ಯಾರ್ಥಿಗಳು ನರಕ ದರ್ಶನ ಅನುಭವಿಸುತ್ತಿದ್ದು ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ಬಳ್ಳಾರಿಯಿಂದ ಹಡ್ಲಿಗಿ ಮಾರ್ಗವಾಗಿ ಸಂಚಾರ ಮಾಡುವ ಬಸ್​ನಲ್ಲಿ ಸಾಮಾಜಿಕ ಅಂತರವಿಲ್ಲದೆ ಪ್ರಯಾಣ ಮಾಡುತ್ತಿರುವ ವಿದ್ಯಾರ್ಥಿಗಳು ಬಸ್​ ಬಾಗಿಲಲ್ಲಿ ನೇತಾಡುತ್ತ ಸಂಚಾರ …

Read More »

ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸಾವಿರಾರು ಟನ್ ಕಬ್ಬು ಬೆಳೆ ನಾಶ

ಚಿಕ್ಕೋಡಿ: ಕಬ್ಬಿನ ಗದ್ದೆಗೆ ಬೆಂಕಿ ಬಿದ್ದು ಸಾವಿರಾರು ಟನ್ ಕಬ್ಬು ಬೆಳೆ ನಾಶವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದಲ್ಲಿ ನಡೆದಿದೆ. ಯಡೂರವಾಡಿ ಮತ್ತು ಮಾಂಜರಿವಾಡಿ ಗ್ರಾಮಕ್ಕೆ ಸೇರಿದ 15 ಕ್ಕೂ ಹೆಚ್ಚು ರೈತರ ಜಮೀನುಗಳ ಕಬ್ಬಿನ ಬೆಳೆಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ನಂದಿಸಲು ಸ್ಥಳೀಯರ ಹರಸಾಹಸ ಪಡುತ್ತಿದ್ದಾರೆ.. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಲಕ್ಷಾಂತರ ರೂಪಾಯಿ ಬೆಳೆ ಹಾನಿಯಿಂದ 15 …

Read More »

ವೆಂಟಿಲೇಟರ್ ಬೆಡ್ ಸಿಗದೆ ಸಂಬಂಧಿಕರನ್ನು ಕಳೆದುಕೊಂಡೆ: ಬಿಜೆಪಿ ಶಾಸಕ ಹರತಾಳು ಹಾಲಪ್ಪ

ಬೆಂಗಳೂರು: ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಯ ಅವ್ಯವಸ್ಥೆ ಬಗ್ಗೆ ಪಕ್ಷಾತೀತವಾಗಿ ಶಾಸಕರು ಆಕ್ರೋಶ ತೋಡಿಕೊಂಡ ಘಟನೆಗೆ ಬುಧವಾರ ವಿಧಾನಸಭೆ ಸಾಕ್ಷಿಯಾಯಿತು. ಶೂನ್ಯ ವೇಳೆ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಅವರಿಗೆ ಬೆಲೆ ಏರಿಕೆ ಚರ್ಚೆಗೆ ಸ್ಪೀಕರ್‌ ಕಾಗೇರಿ ಸಿದ್ದರಾಮಯ್ಯ ಅವರನ್ನು ಕರೆದರು. ಆಗ ಎದ್ದು ನಿಂತ ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ, ನನ್ನ ವಿಷಯವೊಂದಿತ್ತು ಎಂದು ನೆನಪಿಸಿದರು. ಆಗ ಹೌದೌದು ಎನ್ನುತ್ತ ಅವಕಾಶ ನೀಡಿದರು. ಬಳಿಕ ಮಾತನಾಡಿದ ಹಾಲಪ್ಪ ಅವರು, ಪಾರ್ಶ್ವವಾಯು ರೋಗಿಗೆ …

Read More »

ಹುಬ್ಬಳ್ಳಿ: ಗಾಯತ್ರಿ ತಪೋವನ ಬಳಿ ತಾಯಿ-ಮಗು ಉದ್ಯಾನ

ಹುಬ್ಬಳ್ಳಿ: ತಡಸ ಗಾಯಿತ್ರಿ ತಪೋವನದ ಬಳಿ ಸುಮಾರು 20 ಎಕರೆ ಜಾಗದಲ್ಲಿ ತಾಯಿ-ಮಗುವಿನ ಕಲಾಕೃತಿ ಉದ್ಯಾನವನ ನಿರ್ಮಾಣಗೊಳ್ಳಲಿದ್ದು, ಗೊಟಗೋಡಿ ರಾಕ್‌ ಗಾರ್ಡನ್‌ ನಿರ್ಮಾತೃ ದಾಸನೂರು ಕುಟುಂಬದಿಂದ ಮತ್ತೂಂದು ಮೈಲುಗಲ್ಲಾಗಲಿದೆ. ಈಗಾಗಲೇ ರಾಕ್‌ ಗಾರ್ಡನ್‌ನಲ್ಲಿ ನಮ್ಮ ಹಳ್ಳಿ ಸೊಗಡು ಸೇರಿದಂತೆ ಮಗುವಿನ ಜನನದಿಂದ ಹಿಡಿದು ಅವನ ಅಂತ್ಯದವರೆಗೂ ತೋರಿಸಿದ್ದಾರೆ. ವರನಟ ಡಾ| ರಾಜಕುಮಾರ ಕಲಾಕೃತಿ, ರೈತನ ಸೊಬಗು ತೋರಿಸುವ ಕಲಾಕೃತಿ ರಾಕ್‌ ಗಾರ್ಡನ್‌ನಲ್ಲಿ ಇಡಲಾಗಿದ್ದು ಎಲ್ಲರ ಮನಸೆಳೆದಿರುವುದು ಇತಿಹಾಸ. ಅಂತಹ ಮತ್ತೂಂದು …

Read More »

ಹುಟ್ಟುಹಬ್ಬದ ದಿನದಂದೇ ವಿದ್ಯುತ್‌ ಸ್ಪರ್ಶಿಸಿ ಮಗು ಸಾವು

ಚಾಮರಾಜನಗರ: ತಾಲ್ಲೂಕಿನ ಕೆಂಗಾಕಿ ಗ್ರಾಮದಲ್ಲಿ ಮೂರು ವರ್ಷ ಹೆಣ್ಣು ಮಗುವೊಂದು ಹುಟ್ಟುಹಬ್ಬದ ದಿನವಾದ ಬುಧವಾರ ವಿದ್ಯುತ್‌ ಸ್ಪರ್ಶದಿಂದಾಗಿ ಮೃತಪಟ್ಟಿದೆ. ಗ್ರಾಮದ ಸಿದ್ಧಲಿಂಗಸ್ವಾಮಿ ಎಂಬುವವರ ಮಗಳು ನಿವೇದಿತಾ ಮೃತಪಟ್ಟ ದುರ್ದೈವಿ. ಬುಧವಾರವೇ ಆಕೆಯ ಹುಟ್ಟುಹಬ್ಬ ಇತ್ತು. ‘ಸಿದ್ಧಲಿಂಗಸ್ವಾಮಿ ಅವರ ಜಮೀನಿನಲ್ಲಿ ಮಧ್ಯಾಹ್ನ 3.30ರ ಸುಮಾರಿಗೆ ಘಟನೆ ನಡೆದಿದೆ. ಆಟವಾಡುತ್ತಿದ್ದ ಮಗು ಜಮೀನಿನಲ್ಲಿದ್ದ ಪಂಪ್‌ ಸ್ಟಾರ್ಟರ್‌ ಹತ್ತಿರ ಹೋಗಿದೆ. ಹೇಗೆ ವಿದ್ಯುತ್‌ ಸ್ಪರ್ಶ ಆಯಿತು ಎಂಬುದು ಪೋಷಕರಿಗೂ ಗೊತ್ತಿಲ್ಲ. ಅಸ್ವಸ್ಥಗೊಂಡಿದ್ದ ಮಗುವನ್ನು ಕಬ್ಬಳ್ಳಿಯ …

Read More »

ಗಂಡು ಮಗು ಮಾರಾಟ

ವಿಜಯಪುರ : ಸಾಕಲು ಆಗದ ಕಾರಣಕ್ಕೆ ಗಂಡು ಮಗುವಿನ ಮಾರಾಟ ಮಾಡಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ರಾಜ್ಯ ಮಟ್ಟದ ಕಾಯಕಲ್ಪಪ್ರಶಸ್ತಿ ಪಡೆದ ಜಿಲ್ಲಾಸ್ಪತ್ರೆಯಲ್ಲಿ ಆ.26ರಂದು ಈ ಘಟನೆ ನಡೆದಿರುವುದಾಗಿ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ತಿಳಿಸಿದ್ದಾರೆ. ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೇಣುಕಾ ಸದಾಶಿವ ಕಾಂಬಳೆ ಎಂಬ ಮಹಿಳೆ ಆ.19ರಂದು ಜಿಲ್ಲಾಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಕಸ್ತೂರಿ ಎಂಬ ನರ್ಸ್ ಪರಿಚಯವಾಗಿ ಮಗು ಕೊಡುತ್ತೀಯಾ ಎಂದು ಕೇಳಿದ್ದಾರೆ. ಮನೆಯಲ್ಲಿ …

Read More »

ಎಂಎಲ್‌ಎ ಆದರೂ ಸಹ ಟೋಲ್ ಬೂತ್​ಗಳಲ್ಲಿ ನಮಗೆ ಅವಮಾನ ಆಗುತ್ತಿದೆ

  ವಿಧಾನಸೌಧ: ಎಂಎಲ್‌ಎ ಆದರೂ ಸಹ ಟೋಲ್ ಬೂತ್​ಗಳಲ್ಲಿ ನಮಗೆ ಅವಮಾನ ಆಗುತ್ತಿದೆ. ಪಾಸ್ ಇದ್ದರೂ ಐಡಿ ಕಾರ್ಡ್ ಕೇಳುತ್ತಾರೆ ಎಂದು ಜೆಡಿಎಸ್ ಶಾಸಕ ಅನ್ನದಾನಿ ವಿಧಾನಸಭಾ ಕಲಾಪದಲ್ಲಿ‌ ಸರ್ಕಾರದ ಗಮನ ಸೆಳೆದರು. ಐಟಿ ಕಾರ್ಡನ್ನು ಟೋಲ್ಗಳಲ್ಲಿ ತೋರಿಸಿದರೆ ಸ್ಕ್ಯಾನ್ ಮಾಡಬೇಕು ಅಂತಾರೆ. ತುರ್ತು ಸಂದರ್ಭದಲ್ಲಿ ನಮಗೆ ಕೂಡಾ ಪ್ರಯಾಣಿಸಲಾಗುತ್ತಿಲ್ಲ. ನಮ್ಮ ಪಾಸ್‌ಅನ್ನು ಅನುಮಾನವಾಗಿ ನೋಡುತ್ತಾರೆ. ವಿಪಿಐ ಲೈನ್​ನಲ್ಲಿಯೂ ಅವಕಾಶ‌ ನೀಡುತ್ತಿಲ್ಲ ಎಂದು ಶಾಸಕ ಅನ್ನದಾನಿ ಆಕ್ಷೇಪ ವ್ಯಕ್ತಪಡಿಸಿದರು. ಶಾಸಕ …

Read More »

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ, ಸಾಕಾರಗೊಳಿಸಲು ರಾಜ್ಯ ಸರ್ಕಾರ ಬದ್ಧ: ಕಾರಜೋಳ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ, ಸಾಕಾರಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಅದೇರೀತಿ ಅಂತರ ರಾಜ್ಯ ನದೀ ನೀರಿನ ಹಂಚಿಕೆಯಲ್ಲಿ ಕರ್ನಾಟಕದ ಪಾಲಿನ ನೀರನ್ನು ಬಳಕೆ ಮಾಡಿಕೊಳ್ಳಲು ಎಲ್ಲಾ ಕ್ರಮಕೈಗೊಳ್ಳುವುದಾಗಿ ಮಾನ್ಯ ಜಲ ಸಂಪನ್ಮೂಲ ಸಚಿವ ಶ್ರೀ ಗೋವಿಂದ ಎಂ. ಕಾರಜೋಳರವರು ಇಂದು ವಿಧಾನ ಪರಿಷತ್ತಿನಲ್ಲಿ ಘೋಷಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಸಚಿವರು ವಿಧಾನಪರಿಷತ್ತಿನಲ್ಲಿ ಇಂದು ವಿರೋಧ ಪಕ್ಷದ ನಾಯಕ …

Read More »

ಫೋಟೋಗೆ ಪೋಸ್ ಕೊಡಲು ಹೋಗಿ ಸಮುದ್ರದ ಪಾಲಾದ ವ್ಯಕ್ತಿ

ಕಾರವಾರ: ಸಮುದ್ರದ ಅಲೆಗಳ ಮಧ್ಯೆ ಕಲ್ಲುಬಂಡೆಯ ಮೇಲೆ ಧ್ಯಾನದಲ್ಲಿ ಕುಳಿತಂತೆ ಫೋಟೊಗೆ ಪೋಸ್ ಕೊಡಲು ಹೋಗಿ ಪ್ರವಾಸಿಗನೋರ್ವ ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ವನ್ನಳ್ಳಿ ಕಡಲ ತೀರದಲ್ಲಿ ದುರಂತ ನಡೆದಿದೆ. ಶಿರಸಿಯ ನಿವಾಸಿ 42 ವರ್ಷದ ಸುಬ್ಬುಗೌಡ ಮೃತ ಪ್ರವಾಸಿಗ. ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಸುಬ್ಬುಗೌಡ, ಕಡಲ ತೀರದ ಬಂಡೆ ಮೇಲೆ ಕುಳಿತು ಫೋಟೋಗೆ ಪೋಸ್ ಕೊಡುತ್ತಿದ್ದರು. ಈ ವೇಳೆ ರಭಸವಾಗಿ ಬಂದ ಅಲೆಯಲ್ಲಿ ಕೊಚ್ಚಿ …

Read More »