ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಇಂದು ಗಗನ ಮುಟ್ಟಿದೆ. ಬೆಲೆ ಏರಿಕೆಯಿಂದ ಜನ ಕಷ್ಟ ಪಡುವುದನ್ನೇ ಅಚ್ಚೇ ದಿನ್ ಅನ್ನೋದಾ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷದ ವಿರುದ್ಧವಾಗಿ ಕಿಡಿಕಾರಿದ್ದಾರೆ. ಗ್ಯಾಸ್, ಪೆಟ್ರೋಲ್, ಡೀಸೆಲ್, ದಿನಸಿ, ಔಷಧ, ಪ್ರಯಾಣ ದರ ಹೀಗೆ ಎಲ್ಲಾ ಜೀವನಾವಶ್ಯಕ ವಸ್ತುಗಳ, ಸೇವೆಗಳ ಬೆಲೆ ಮಿತಿಮೀರಿದೆ. ಇದರಿಂದ ಬಡ, ಮಧ್ಯಮ ವರ್ಗದ ಜನರು ಜೀವನ ಮಾಡಲು ಕಷ್ಟಪಡಬೇಕಾಗಿದೆ. ಇದನ್ನೇ ನೀವು ಅಚ್ಚೇದಿನ್ ಎಂದು …
Read More »ಸಿಸಿಟಿವಿ ಧ್ವಂಸಗೊಳಿಸಿ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ
ಬೀದರ್ : ಬ್ಯಾಂಕ್ ಎಟಿಎಂ ಹಾಗೂ ಸಿಸಿ ಟಿವಿ ಧ್ವಂಸ ಮಾಡಿ ದರೋಡೆಕೋರ ಕಳ್ಳತನಕ್ಕೆ ವಿಫಲ ಯತ್ನ ಮಾಡಿದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೋಹಿನೂರ್ ಗ್ರಾಮದಲ್ಲಿ ಎಸ್.ಬಿಐ ಬ್ಯಾಂಕ್ ನ ಎಟಿಎಂ ಕಳ್ಳತನಕ್ಕೆ ವಿಫಲ ಯತ್ನ ಮಾಡಿ ಹಣ ಸಿಗದೆ ದರೋಡೆಕೋರ ಬರಿಗೈಯಲ್ಲಿ ತೆರಳಿದ್ದಾನೆ. ದರೋಡೆಕೋರ ಎಟಿಎಂ ಒಳಗಡೆ ನುಗ್ಗಿ ದರೋಡೆಗೆ ಯತ್ನ ಮಾಡಿದ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ. ಕಳ್ಳತನ ಮಾಡಲು …
Read More »ಬೈಕ್ ಅಪಘಾತ- ಚಿಕಿತ್ಸೆ ಫಲಿಸದೆ ಸೈನಿಕ ಸಾವು
ಬಾಗಲಕೋಟೆ: ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸೈನಿಕನೊಬ್ಬ ಚಿಕಿತ್ಸೆ ಫಲಿಸದೇ ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಬಾದಾಮಿ ತಾಲೂಕಿನ ಸೂಳಿಕೇರಿ ಗ್ರಾಮದ ಹನಮಂತ ಸಿದ್ರಾಮಪ್ಪ ಹಡಪದ(33) ಮೃತಪಟ್ಟ ದುರ್ದೈವಿ. ಬಾದಾಮಿಯಿಂದ ಪಟ್ಟದಕಲ್ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ನಂದಿಕೇಶ್ವರ ಗ್ರಾಮದ ಹತ್ತಿರ ಪಲ್ಸರ್ ಬೈಕ್‍ನಲ್ಲಿ ವೇಗವಾಗಿ ಬಂದ ಮಂಜುನಾಥ ಮಾಗುಂಡಪ್ಪ ಜತ್ತಿ, ಸೈನಿಕ ತೆರಳುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದಿದ್ದ. ಕಳೆದ ಸೆ.8 ರಂದು ಘಟನೆ …
Read More »ಶ್ರೀಶೈಲ ಜಗದ್ಗುರುಗಳಿಂದ ವೀರಭದ್ರೇಶ್ವರ ಜಯಂತಿ
ಚಿಕ್ಕೋಡಿ: ಭಾದ್ರಪದ ಮಾಸದ ಪ್ರಥಮ ಮಂಗಳವಾರ ಪ್ರತಿ ವರ್ಷ ವೀರಭದ್ರೇಶ್ವರ ಜಯಂತಿಯನ್ನು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸುಕ್ಷೇತ್ರ ಯಡೂರ ಗ್ರಾಮದಲ್ಲಿ ಅತಿ ಸರಳವಾಗಿದೆ ಆಚರಣೆ ಮಾಡಿದರು. ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ವೀರಭದ್ರ ದೇವಸ್ಥಾನದಲ್ಲಿ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ವೀರಭದ್ರೇಶ್ವರ ಮೂರ್ತಿಗೆ ವಿಶೇಷ ಅಭಿಷೇಕ ಹಾಗೂ ಪೂಜೆ ಮಾಡಿ ವಿಶ್ವ ಶಾಂತಿಗಾಗಿ ದೇವರಲ್ಲಿ ಆರಾಧಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಶೈಲ ಜಗದ್ಗುರುಗಳು, ಕೊರೊನಾ …
Read More »ಡಿ.ಕೆ. ಶಿವಕುಮಾರ್ ಗೆ ಸುಳ್ಯ ಕೋರ್ಟ್ ನಿಂದ ವಾರಂಟ್ ಜಾರಿ:ಏನಿದು ಪ್ರಕರಣ?
ಸುಳ್ಯ, ಸೆ. 14: ವಿದ್ಯುತ್ ಸಮಸ್ಯೆ ಬಗ್ಗೆ ಕರೆ ಮಾಡಿದ ಬೆಳ್ಳಾರೆಯ ಸಾಯಿ ಗಿರಿಧರ್ ಮತ್ತು ಇಂಧನ ಖಾತೆಯ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ನಡುವಿನ ಫೋನ್ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಬಾರಿ ಸಮನ್ಸ್ ಜಾರಿ ಮಾಡಿದ ಬಳಿಕವೂ ನ್ಯಾಯಾಲಯಕ್ಕೆ ಹಾಜರಾಗದಿರುವ ಹಾಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸುಳ್ಯ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ. ಕೋರ್ಟ್‌ಗೆ ಹಾಜರಾಗದಿರುವು ದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶರು ಡಿ.ಕೆ. ಶಿವಕುಮಾರ್ …
Read More »ಶ್ರೀರಂಗಪಟ್ಟಣದ ಕರಿಘಟ್ಟ ಬೆಟ್ಟದಲ್ಲಿ ಪ್ರೇಮಿಗಳ ವಿಹಾರ : ಪೊಲೀಸರಿಂದ ಎಚ್ಚರಿಕೆ
ಶ್ರೀರಂಗಪಟ್ಟಣ : ನಗರದ ಪ್ರವಾಸಿತಾಣ ಕರಿಘಟ್ಟದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳಿಗೆ ಶ್ರೀರಂಗಪಟ್ಟಣ ಪೋಲೀಸರು ಎಚ್ಚರಿಕೆ ನೀಡಿ ಜಾಗೃತಿ ಮೂಡಿಸಿ ವಾಪಸ್ಸು ಕಳಿಸಿದ ಘಟನೆ ನಡೆದಿದೆ ಬುಧವಾರ ನಡೆದಿದೆ. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಕರಿಘಟ್ಟ ಬೆಟ್ಟದಲ್ಲಿ ಕಾರ್ಯಾಚರಣೆ ನಡೆಸಿದ ಶ್ರೀರಂಗಪಟ್ಟಣ ಪೊಲೀಸ್ ಇನ್ಸ್‌ಪೆಕ್ಟರ್ ರೇಖಾ ಹಾಗೂ ಅಪರಾಧ ದಳದ ಇನ್ಸ್‌ಪೆಕ್ಟರ್ ಸುನೀಲ್ ನೇತೃತ್ವದ ಪೊಲೀಸರ ತಂಡ ಬೆಟ್ಟದಲ್ಲಿ ವಿಹರಿಸುತ್ತಿದ್ದ ಪ್ರೇಮಿಗಳಿಗೆ ಎಚ್ಚರಿಕೆ ನೀಡಿ …
Read More »ನಿಲ್ಲದ ಮರಗಳ ಮಾರಣ ಹೋಮ : ಅಧಿಕಾರಿಗಳ ಮೌನವೆಕೆ?
ಚಿಂತಾಮಣಿ : ತಾಲ್ಲೂಕು ವ್ಯಾಪ್ತಿಯ ಸಾಮಿಲ್ ಹಾಗೂ ಇಟ್ಟಿಗೆ ಕಾರ್ಖಾನೆಗಳಿಗೆ ಯಾವುದೇ ಪರವಾನಿಗೆ ಇಲ್ಲದೆ ಮರಗಳನ್ನು ಕಡೆದು ರಾಜರೋಷವಾಗಿ ಸಾಗಿಸುತ್ತಿರುವುದು ನೋಡಿದರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತ್ತಿದ್ದಾರೆ. ಸರ್ಕಾರ ಹಾಗೂ ಜನ ಪ್ರತಿನಿಧಿಗಳು ಕಾಡನ್ನು ಉಳಿಸಿ ಕಾಡನ್ನು ಬೆಳೆಸಿಯೆಂಬ ಬೊಬ್ಬೆ ಹೊಡೆಯುತ್ತಾರೆ ಹೊರೆತು ಇದರ ಬಗ್ಗೆ ಯಾರೊಬ್ಬರು ಸೂಕ್ತ ಕ್ರಮ ಕೈಗೊಂಡಿಲ್ಲವೆಂದು ಪರಿಸರ ಪ್ರೇಮಿ ಅಮಿಟ್ಟಿಗಾನಹಳ್ಳಿ ಶ್ರೀನಿವಾಸರೆಡ್ಡಿ ಆರೋಪ ಮಾಡಿದ್ದಾರೆ. ಪರಿಸರವು ಸಂರಕ್ಷಣೆ ಮಾಡುವುದು ನಮ್ಮ ಹಕ್ಕೆಂದು …
Read More »ಗೋವಾ ಚುನಾವಣೆ : 25 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಶಿವಸೇನೆ ನಿರ್ಧಾರ
ಪಣಜಿ: ಶಿವಸೇನೆಯು ಗೋವಾ ವಿಧಾನಸಭಾ ಚುನಾವಣೆಯಲ್ಲಿ 25 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ. ಶಿವಸೇನೆಯ ಗೋವಾ ರಾಜ್ಯ ಪ್ರಮುಖರಾದ ಜಿತೇಶ್ ಕಾಮತ್, ಮಿಲಿಂದ ಗಾವಸ್ ರವರು ಮುಂಬಯಿಯ ಖಾಸಗಿ ಹೋಟೆಲ್‍ನಲ್ಲಿ ಶಿವಸೇನೆಯ ರಾಷ್ಟ್ರೀಯ ನಾಯಕ ಸಂಜಯ ರಾವುತ್ ರವರನ್ನು ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿದರು. ಶಿವಸೇನೆ ಪಕ್ಷ ಪ್ರಮುಖ ಉದ್ಧವ ಠಾಕ್ರೆಯವರೊಂದಿಗೆ ಈ ಕುರಿತಂತೆ ಸಂಜಯ್ ರಾವುತ್ ರವರು ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಗೋವಾ …
Read More »ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣದಾಖಲು
ನವದೆಹಲಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅಂತ್ಯಕ್ರಿಯೆ ವೇಳೆ ಪಾರ್ಥೀವ ಶರೀರಕ್ಕೆ ಗೌರವ ಸಲ್ಲಿಸುವ ವೇಳೆ ರಾಷ್ಟ್ರಧ್ವಜದ ಮೇಲೆ ಜೆ.ಪಿ. ನಡ್ಡಾ ಬಿಜೆಪಿ ಬಾವುಟ ಇಟ್ಟಿದ್ದರು. ಈ ಮೂಲಕ ನಡ್ಡಾ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಜೆ.ಪಿ.ನಡ್ಡಾ ವಿರುದ್ಧ ಚಂದ್ರ ಕಿಶೋರ್ ಪರಾಶರ್ ಮುಜಾಫರ್ …
Read More »ಹೆಣ್ಣು ಶಿಶು ಮಾರಾಟ ಪ್ರಕರಣದ ಬಗ್ಗೆ ಸದನದಲ್ಲಿ ಚರ್ಚೆ : ಎಂ.ಬಿ.ಪಾಟೀಲ
ವಿಜಯಪುರ: ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಶಾಮೀಲಾಗಿ ಜಿಲ್ಲೆಯಲ್ಲಿ ಹೆಣ್ಣು ಶಿಶು ಮಾರಾಟ ಮಾಡಿದ ಪ್ರಕರಣ ಅತ್ಯಂತ ಗಂಭೀರ ಸ್ವರೂಪದ್ದು. ಈ ಕುರಿತು ಸದನದಲ್ಲಿ ಚರ್ಚೆ ನಡೆಸುವುದಾಗಿ ಬಬಲೇಶ್ವರ ಶಾಸಕರಾದ ಮಾಜಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಉದಯವಾಣಿ ಪತ್ರಿಕೆಗೆ ಪ್ರತಿಕ್ರಿಯಿಸಿರುವ ಅವರು, ಜಿಲ್ಲೆಯಲ್ಲಿ ಹೆಣ್ಣು ಶಿಶು ಮಾರಾಟದ ಪ್ರಕರಣದ ಕುರಿತು ವಿಶೇಷ ವರದಿ ಮೂಲಕ ಉದಯವಾಣಿ ಪತ್ರಿಕೆ ಉತ್ತಮ ಕೆಲಸ ಮಾಡಿದೆ ಎಂದು ಶ್ಲಾಘಿಸಿದ್ದಾರೆ. ಈ ಘಟನೆ …
Read More »
Laxmi News 24×7