ಧಾರವಾಡ: ನಡುರಸ್ತೆಯಲ್ಲಿಯೇ ಜೆಡಿಎಸ್ ಮುಖಂಡನೋರ್ವ ಮಹಿಳೆಯ ಕೈಹಿಡಿದು ಎಳೆದಾಡಿರುವ ಘಟನೆ ಧಾರವಾಡ ಜಿಲ್ಲೆ ಸತ್ತೂರ ಬಡಾವಣೆಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ಮಹಿಳೆಯ ಕೈಹಿಡಿದು ಎಳೆದಾಡಿದ್ದಾರೆ. ಮಹಿಳೆಯ ಕೈ ಹಿಡಿದು ಎಳೆದಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸತ್ತೂರು ನಿವಾಸಿಯಾಗಿರುವ ಮಹಿಳೆ ಮನೆಯತ್ತ ಹೋಗುತ್ತಿದ್ದರು. ಈ ವೇಳೆ ಜೆಡಿಎಸ್ ಮುಖಂಡ ಮಹಿಳೆ ಕೈ ಹಿಡಿದು ಎಳೆದಾಡಿದ್ದು, ಘಟನೆ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾಗಿರಿ ಠಾಣೆಯಲ್ಲಿ ಮಹಿಳೆ …
Read More »ಕೌಶಲಾಭಿವೃದ್ಧಿ ಕೇಂದ್ರಕ್ಕೆ ಉಪಕರಣ ಖರೀದಿಯಲ್ಲಿ ಅಕ್ರಮ: ಸಿಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ
ಬೆಂಗಳೂರು: ಉನ್ನತ ಶಿಕ್ಷಣ ಸಚಿವಾಲಯ ವ್ಯಾಪ್ತಿಯಲ್ಲಿ ಬರುವ ಕೌಶಲಾಭಿವೃದ್ಧಿ ಕೇಂದ್ರದ ಲ್ಯಾಬ್ ಉಪಕರಣ ಖರೀದಿಯಲ್ಲಿ ಇಲಾಖೆಯ ಅಧಿಕಾರಿಗಳು ಅಕ್ರಮ ಟೆಂಡರ್ ನಡೆಸಿದ್ದು, ಸುಮಾರು 34 ಕೋಟಿ ರೂ. ಕಿಕ್ ಬ್ಯಾಕ್ ಪಡೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಎಚ್.ಎಂ.ರೇವಣ್ಣ ಹಾಗೂ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಹಗರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕು. ಉನ್ನತ ಶಿಕ್ಷಣ ಸಚಿವರಾದ ಡಾ| ಅಶ್ವತ್ಥ್ ನಾರಾಯಣ್ ಅವರ …
Read More »ಬಿಜೆಪಿ ಸೇರಲು ಹಣದ ಆಮಿಷವಿತ್ತು: ಶ್ರೀಮಂತ ಪಾಟೀಲ್
ಕಾಗವಾಡ: ಕಾಂಗ್ರೆಸ್ ತೊರೆದು ಬಿಜೆಪಿ ಸೇರುವಾಗ ಹಣದ ಆಮಿಷ ಬಂದಿತ್ತು. ಆದರೆ ಹಣಕ್ಕೆ ಬೇಡಿಕೆ ಇಡದೆ ಕ್ಷೇತ್ರ ಹಾಗೂ ಜನರ ಸೇವೆ ಮಾಡಲು ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದ್ದಾರೆ. ಶನಿವಾರ ಐನಾಪುರ ಪಟ್ಟಣದಲ್ಲಿ ಒಂದು ಕೋಟಿ ರೂ. ಅನುದಾನದಡಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದಾಗ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ಸೇರುವಾಗ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದರಿಂದ ಯಡಿಯೂರಪ್ಪನವರ ಸಂಪುಟದಲ್ಲಿ …
Read More »ಸಿದ್ದರಾಮಯ್ಯ ಕೋಡಿಮಠ ಶ್ರೀ ಭೇಟಿಯಾದರೆ ತಪ್ಪೇನು?: ಎಚ್ಕೆ
ಗದಗ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಡಿಮಠದ ಸ್ವಾಮೀಜಿ ಬಳಿ ಭವಿಷ್ಯ ಕೇಳಿದ್ದರೆ ತಪ್ಪೇನು? ಒಂದೊಮ್ಮೆ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಪೂಜ್ಯರು ಭವಿಷ್ಯ ನುಡಿದಿದ್ದರೆ ಸಂತಸದ ಸಂಗತಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಚ್.ಕೆ.ಪಾಟೀಲ್ ಅವರು ಸಚಿವ ಗೋವಿಂದ ಕಾರಜೋಳರಿಗೆ ತಿರುಗೇಟು ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಸ್ವಾಮೀಜಿಗಳನ್ನು ಭೇಟಿ ಮಾಡುವುದು ಹೊಸದೇನೂ ಅಲ್ಲ. ಮಠಮಾನ್ಯಗಳ ಬಗ್ಗೆ ಅಪಾರ ಗೌರವ ಹೊಂದಿರುವ …
Read More »ದೆಹಲಿ :121 ವರ್ಷಗಳಲ್ಲೇ ಅತ್ಯಂತ ಭೀಕರ ಮಳೆ; ಇಂದು ಕೂಡ ಮಳೆಯಾಗುವ ಸಾಧ್ಯತೆ
ದೆಹಲಿ: ಶತಮಾನದಲ್ಲೇ ಕಂಡು ಕೇಳರಿಯದ ಮಳೆ ನಿನ್ನೆ(ಸೆಪ್ಟೆಂಬರ್ -11) ಒಂದೇ ದಿನ ದೆಹಲಿಯಲ್ಲಿ ಸುರಿದಿದೆ. ಮಹಾ ಮಳೆಯಲ್ಲಿ ಸಿಲುಕಿ ದೆಹಲಿ ತತ್ತರಿಸಿದ್ದು, ಪ್ರತಿಯೊಂದು ಏರಿಯಾದಲ್ಲೂ ಮಳೆ ನೀರು ತುಂಬಿ ಹೋಗಿತ್ತು. ಇನ್ನು ದೆಹಲಿ ರಸ್ತೆಗಳು ನದಿಯಂತಾಗಿದ್ದು, ಸವಾರರು ಪರದಾಡಿದ್ರು. ಈ ಮಧ್ಯೆ ಇವತ್ತು ಕೂಡ ಭಾರಿ ಮಳೆಯಾಗುವ ಎಚ್ಚರಿಕೆ ನೀಡ್ಲಾಗಿದೆ. ನಿನ್ನೆ ಸುರಿದ ಮಹಾ ಮಳೆಗೆ ರಾಷ್ಟ್ರ ರಾಜಧಾನಿ ತತ್ತರಿಸಿದೆ. ದೆಹಲಿ ಹೃದಯ ಭಾಗವೂ ಸೇರಿದಂತೆ ರಾಷ್ಟ್ರ ರಾಜಧಾನಿಯ ಹೊರ …
Read More »ಇನ್ಮುಂದೆ `ಟ್ರಾಫಿಕ್ ರೂಲ್ಸ್’ ಬ್ರೇಕ್ ಮಾಡಿದ್ರೆ ದುಬಾರಿ ದಂಡ!
ಬೆಂಗಳೂರು : ಸಾರ್ವಜನಿಕರೇ ಗಮನಿಸಿ, ಇನ್ಮುಂದೆ ಸಂಚಾರ ನಿಯಮ ಉಲ್ಲಂಘಿಸುವ ಮುನ್ನ ಎಚ್ಚರ ವಹಿಸಿ, ಇಲ್ಲವಾದರೆ, ಭಾರಿ ದಂಡದ ಕಟ್ಟಬೇಕಾದೀತು. ಹೌದು ಸಂಚಾರ ನಿಯಮ ಉಲ್ಲಂಘನೆ ಮಾಡುವವರಿಗೆ ಟ್ರಾಫಿಕ್ ಪೊಲೀಸರು ಮತ್ತೊಮ್ಮೆ ಬಿಸಿ ಮುಟ್ಟಿಸಲು ಸಜ್ಜಾಗಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಕಾನೂನಿನ ಕಲಂ ಆಧಾರದ ಮೇಲೆ ವಿಧಿಸುವ ದಂಡದ ವಿವರಗಳನ್ನು ಪೊಲೀಸರು ಪ್ರಕಟಿಸಿದ್ದಾರೆ. ಈ ಕುರಿತಂತೆ ಬೆಂಗಳೂರು ಸಂಚಾರ ಪಶ್ಚಿಮ ವಿಭಾಗದ ಡಿಸಿಪಿ ಕುಲ್‌ದೀಪ್ ಕುಮಾರ್ ಆರ್ …
Read More »ಜಿಲ್ಲಾಸ್ಪತ್ರೆಯಲ್ಲಿ ರೋಗಿಗೆ ಇಂಜೆಕ್ಷನ್ ಕೊಟ್ಟ ಸೆಕ್ಯೂರಿಟಿ ಗಾರ್ಡ್; ಅಂಥ ಪರಿಸ್ಥಿತಿ ಏನಿತ್ತು ಎಂಬುದು ನೆಟ್ಟಿಗರ ಪ್ರಶ್ನೆ
ಅಂಗುಲ್: ಅನಾರೋಗ್ಯವೆಂದು ಆಸ್ಪತ್ರೆಗೆ ಬಂದ ರೋಗಿಗೆ ಆ ಹಾಸ್ಪಿಟಲ್ನ ಸೆಕ್ಯೂರಿಟಿ ಗಾರ್ಡ್ ಇಂಜೆಕ್ಷನ್ ಕೊಟ್ಟಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ. ಈ ಘಟನೆ ನಡೆದದ್ದು ಓಡಿಶಾದ ಅಂಗುಲ್ ಜಿಲ್ಲಾ ಪ್ರಧಾನ ಆಸ್ಪತ್ರೆಯಲ್ಲಿ. ಅಲ್ಲಿ ವೈದ್ಯರು, ಪ್ಯಾರಾಮೆಡಿಕಲ್ ಸಿಬ್ಬಂದಿ ಇದ್ದಾಗ್ಯೂ ಕೂಡ ಸೆಕ್ಯೂರಿಟಿ ಗಾರ್ಡ್ ಇಂಜೆಕ್ಷನ್ ನೀಡಿದ್ದಾರೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಸ್ಥಳೀಯ ಮಾಧ್ಯಮವೊಂದು ಆಸ್ಪತ್ರೆಯ ಎಡಿಎಂಒ ಮಾನಸ್ ರಂಜನ್ ಬಿಸ್ವಾಲ್ ಅವರನ್ನು ಮಾತನಾಡಿಸಿದೆ. ಹೀಗೆ …
Read More »ನಾಳೆ 2020-21ನೇ ಸಾಲಿನ ನೀಟ್ ಪರೀಕ್ಷೆ; 16 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ನೋಂದಣಿ
ಬೆಂಗಳೂರು: ದೇಶದಾದ್ಯಂತ ನಾಳೆ 2020-21ನೇ ಸಾಲಿನ ನೀಟ್ ಪರೀಕ್ಷೆ ನಡೆಯಲಿದೆ. ವೈದ್ಯಕೀಯ & ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್ ಗಳಿಗೆ ನಡೆಯುವ ಪರೀಕ್ಷೆ ಇದಾಗಿದ್ದು ನಾಳೆ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ. ಒಟ್ಟು 201 ಪ್ರಮುಖ ನಗರಗಳಲ್ಲಿ ನಾಳೆ ಪರೀಕ್ಷೆ ನಡೆಯಲಿದೆ. ಕರ್ನಾಟಕದಲ್ಲಿ ಒಟ್ಟು 9 ನಗರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೆಳಗಾಂ, ದಾವಣಗೆರೆ, ಧಾರವಾಡ, ಗುಲ್ಬರ್ಗಾ, ಹುಬ್ಬಳ್ಳಿ, ಮೈಸೂರು, ಮಂಗಳೂರು ಮತ್ತು ಉಡುಪಿ …
Read More »ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಆಗೋದು ಪಕ್ಕಾ ಎಂದ ಕಾಂಗ್ರೆಸ್ ಮುಖಂಡ
ಕಲಬುರಗಿ: ಕಲಬುರಗಿಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿ ಕಲಬುರಗಿ ಪಾಲಿಕೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಆಗೋದು ಪಕ್ಕಾ ಎಂದಿದ್ದಾರೆ. ಕುಮಾರಸ್ವಾಮಿ ಸರ್ಕಾರವನ್ನ ಕೆಡವಿದ್ದ, ಬಿಜೆಪಿ ಇದೀಗ ಪಾಲಿಕೆ ಮೈತ್ರಿಗಾಗಿ ಮತ್ತೆ ಜೆಡಿಎಸ್ ಮನೆ ಬಾಗಿಲಿಗೆ ಹೋಗಿದೆ. ನಾಚಿಕೆಯಾಗಬೇಕು ಇವರಿಗೆ, ಮಾನ ಮರ್ಯಾದೆ ಇದೆಯಾ ಬಿಜೆಪಿಯವರಿಗೆ ..? ಈಗಾಗಲೇ ಮಲ್ಲಿಕಾರ್ಜುನ ಖರ್ಗೆಯವರು ಜೆಡಿಎಸ್ ಜೊತೆ ಮಾತುಕತೆ ನಡೆಸಿದ್ದಾರೆ. ಜಾತ್ಯಾತೀತ ನಿಲುವಿನೊಂದಿಗೆ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ. …
Read More »ಸಂಚಾರ ನಿಯಮ ಉಲ್ಲಂಘನೆಯಲ್ಲಿ ರವಿಕಾಂತೇಗೌಡರ ಅಭಿಮಾನಿ ದಾಖಲೆ ನಿರ್ಮಾಣ
ಬೆಂಗಳೂರು: ಸ್ಕೂಟರ್ ಮೇಲೆ ರವಿಕಾಂತೇಗೌಡ ಅಭಿಮಾನಿ ಎಂದು ಬರೆಸಿಕೊಂಡು ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದ ಬೈಕ್ನ್ನು ಜಯನಗರ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಚಾರಿ ವಿಭಾಗ ಜಂಟಿ ಪೊಲೀಸ್ ಆಯುಕ್ತ ಆಗಿರುವ ರವಿಕಾಂತೇಗೌಡ ಹೆಸರು ಬರೆಸಿಕೊಂಡು ನಿಯಮ ಉಲ್ಲಂಘಿಸುತ್ತಿದ್ದವರ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ. ಕೆಎ 05 ಜೆಎಸ್ 2581 ನಂಬರಿನ ಸ್ಕೂಟರ್ ಸೀಜ್ ಮಾಡಲಾಗಿದೆ. ಸ್ವತಃ ರವಿಕಾಂತರೆಗೌಡರ ಆದೇಶದ ಮೇರೆಗೆ ಸ್ಕೂಟರ್ ಸೀಜ್ ಮಾಡಲಾಗಿದೆ. ಆರ್ಟಿಐ ಕಾರ್ಯಕರ್ತ ಗಿರೀಶ್ ಬಾಬು ಓಡಿಸುತ್ತಿದ್ದ …
Read More »
Laxmi News 24×7