ನವದೆಹಲಿ:ಭಾರತ ಸರ್ಕಾರ ಶೀಘ್ರವೇ 1.06 ಬಿಲಿಯನ್ ಡಾಲರ್ ಮೊತ್ತವನ್ನು ಪಾವತಿಸುವ ವಿಶ್ವಾಸವಿದೆ. ಈ ಮೊತ್ತ ಪಾವತಿ ಮಾಡಿದರೆ, ವಿದೇಶಗಳಲ್ಲಿರುವ ಕೇಂದ್ರದ ಆಸ್ತಿ ವಶಪಡಿಸಿಕೊಳ್ಳುವುದನ್ನು ಕೈ ಬಿಡುವುದಾಗಿ ಕೈರ್ನ್ ಎನರ್ಜಿ ಮಂಗಳವಾರ ಹೇಳಿದೆ. ಭಾರತದ 1.06 ಶತ ಕೋಟಿ ಡಾಲರ್ ಮರು ಪಾವತಿ ಆಫರ್ ಅನ್ನು ನಾವು ಸ್ವೀಕರಿಸಿದ್ದು, ತೆರಿಗೆ ವಿವಾದ ಶೀಘ್ರವೇ ಇತ್ಯರ್ಥಗೊಳ್ಳಲಿದೆ ಎಂದು ಕೈರ್ನ್ ಎನರ್ಜಿ ಸಿಇಒ ಸಿಮೊನ್ ಥಾಮ್ಸನ್ ಹೇಳಿದ್ದಾರೆ. ಕೇಂದ್ರ ಸರ್ಕಾರದ ಜತೆಗೆ ದೀರ್ಘ ಕಾಲದಿಂದ ಇರುವ ವಿವಾದ …
Read More »ದೇಶದಲ್ಲಿ ಕೋವಿಡ್ ದಿಂದಾಗಿ ಕಡಿಮೆಯಾಗಿದ್ದ ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆ
ನವದೆಹಲಿ: ದೇಶದಲ್ಲಿ ಕೋವಿಡ್ ದಿಂದಾಗಿ ಕಡಿಮೆಯಾಗಿದ್ದ ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಆಗಸ್ಟ್‌ನಲ್ಲಿ ಪ್ರಯಾಣಿಕ ವಾಹನಗಳ ಮಾರಾಟ ಶೇ.39 ಏರಿಕೆಯಾಗಿದೆ ಎಂದು ಆಟೋಮೊಬೈಲ್ ವಿತರಕ ಸಂಘಗಳ ಒಕ್ಕೂಟ (ಎಫ್‌ಎಡಿಎ) ತಿಳಿಸಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ 1,82,651 ವಾಹನ ಮಾರಾಟ ವಾಗಿತ್ತು, ಈ ವರ್ಷ ಆಗಸ್ಟ್‌ಗೆ ಅದು 2,53,363ಕ್ಕೆ ಏರಿಕೆಯಾಗಿದೆ. ಕಳೆದ ಆಗಸ್ಟ್ ಗೆ 9,15,126 ಬೈಕುಗಳು ಮಾರಾಟವಾಗಿದ್ದು, ಈ ವರ್ಷ 9,76,051ಕ್ಕೆ ಏರಿದೆ. ವಾಣಿಜ್ಯ …
Read More »ದ.ಕ.ಜಿಲ್ಲೆಯ ಪ್ರಮುಖ ದೇವಸ್ಥಾನಗಳ ನಿರ್ಬಂಧ ಸಡಿಲಿಕೆ ..!
ಮಂಗಳೂರು: ಕೋವಿಡ್ ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು ದ.ಕ.ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳು ಸೇರಿದಂತೆ ಪ್ರಮುಖ ದೇವಸ್ಥಾನಗಳು ವಾರಾಂತ್ಯಗಳನ್ನು ಹೊರತುಪಡಿಸಿ ಭಕ್ತಾದಿಗಳಿಗೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭ ಭಕ್ತಾದಿಗಳು ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ …
Read More »ಗುಂಡೇಟಿಗೆ ಎಮ್ಮೆ ಬಲಿ
ಬೆಳ್ತಂಗಡಿ :ಮೇಯಲು ಬಿಟ್ಟಿದ್ದ ಎಮ್ಮೆಯನ್ನು ಕಿಡಿಗೇಡಿಗಳು ಗುಂಡುಹಾರಿಸಿ ಕೊಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಫಲಸ್ತಡ್ಕ ಎಂಬಲ್ಲಿ ನಡೆದಿದೆ. ಹೊಸ್ತೋಟ ವಾಳ್ಯದ ಅರೆಕ್ಕಲ್ ಮಹಾದೇವ ಭಟ್ ಎಂಬವರ ಹಾಲು ಕರೆಯುವ ಸುಮಾರು 10 ವರ್ಷ ಪ್ರಾಯದ ಎಮ್ಮೆಯನ್ನು ಮನೆ ಪರಿಸರದಲ್ಲಿ ಮೇಯಲು ಬಿಟ್ಟಿದ್ದರು. ಎಮ್ಮೆ ತಡರಾತ್ರಿವರೆಗೂ ಮನೆಗೆ ಬಾರದ ಕಾರಣ ಹುಡುಕಾಟ ನಡೆಸಿದಾಗ ಸಮೀಪದ ಫಲಸ್ತಡ್ಕ ಎಂಬಲ್ಲಿ ಮಂಗಳವಾರ ಮೃತದೇಹ ಪತ್ತೆಯಾಗಿದೆ. ಎಮ್ಮೆಯ ಮೈಮೇಲೆ ಗುಂಡಿನ ಗಾಯಗಳು …
Read More »ಪಕ್ಷ ಸಂಘಟನೆಗೆ ಕ್ರಿಯಾಶೀಲತೆ ಅಗತ್ಯ
ಕೊಪ್ಪಳ: ‘ಜಿಲ್ಲಾ ಕಾಂಗ್ರೆಸ್ ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಹೊಂದಲು ದೂರದೃಷ್ಟಿಯಿಂದ ಕೆಲಸ ಮಾಡಬೇಕಿದೆ. ಎಲ್ಲ ಮುಂಚೂಣಿ ಘಟಕಗಳು ಪ್ರತಿ ವಾರ ಒಂದು ಕಾರ್ಯಕ್ರಮ ಮಾಡಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ಮನವಿ ಮಾಡಿದರು. ಅವರು ಮಂಗಳವಾರ ಪಕ್ಷದ ಕಚೇರಿಯಲ್ಲಿ ವಿವಿಧ ಮೋರ್ಚಾ, ಬ್ಲಾಕ್ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ‘ಪ್ರತಿ ಘಟಕವೂ ಸಹ ಜಿಲ್ಲಾ ಪದಾಧಿಕಾರಿಗಳು ಮತ್ತು ಏಳು ಬ್ಲಾಕ್‍ಗಳನ್ನು ಹೊಂದಿರಬೇಕು. ಎಲ್ಲರೂ ಒಂದೊಂದು …
Read More »ಬಿಜೆಪಿಗೆ ಅಧಿಕಾರ ದುರುಪಯೋಗದ ಗೆಲುವು: ಜಿ.ಪರಮೇಶ್ವರ್
ಉಡುಪಿ: ಮಹಾನಗರ ಪಾಲಿಕೆ ಚುನಾವಣೆಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ನಾಯಕ ಜಿ.ಪರಮೇಶ್ವರ್ ಹೇಳಿದರು. ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಪರಮೇಶ್ವರ್ ಪೆಟ್ರೋಲ್, ಡೀಸೆಲ್, ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿರುವ ಸಂದರ್ಭದಲ್ಲೂ ಬಿಜೆಪಿ ಗೆಲುವು ಸಾಧಿಸಿರುವುದು ಅಧಿಕಾರ ದುರುಪಯೋಗದಿಂದ ಎಂದರು. ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಪಕ್ಷವನ್ನು ನಿರಾಶೆಗೊಳಿಸಿಲ್ಲ. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ …
Read More »ಖಾನಾಪುರ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಎಸಿಬಿ ಬಲೆಗೆ
ಖಾನಾಪುರ – ಇಲ್ಲಿಯ ಎಡಿಎಲ್ಆರ್ ಕಚೇರಿಯ ಸರ್ವೇಯರ್ ಒಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ. ತಾಲೂಕಿನ ಸುರಾಪುರದ ಶಶಿಕಾಂತ ತಳವಾರ ಎನ್ನುವವರಿಂದ 6 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಡಿಎಸ್ಪಿ ಕರುಣಾಕರ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆಯಿತು. ಒಟ್ಟೂ 10 ಸಾವಿರ ರೂ. ಲಂಚ ಕೇಳಿದ್ದ ಸರ್ವೇಯರ್ ಶಶಿಕಾಂತ ಮದವಾಲ ಈ ಮೊದಲು 4 ಸಾವಿರ ರೂ. ಪಡೆದಿದ್ದ. ಇದೀಗ ಕಚೇರಿಯಲ್ಲೇ 6 ಸಾವಿರ ರೂ. ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ …
Read More »ಗಣೇಶೋತ್ಸವಕ್ಕೆ ಹೊಸ ಗೈಡ್ ಲೈನ್; 5 ದಿನದ ಬದಲು 3 ದಿನಕ್ಕೆ ಸೀಮಿತ; ಷರತ್ತಿನ ಮೇಲೆ ಷರತ್ತು ಹಾಕಿದ ಬಿಬಿಎಂಪಿ
ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ನಿಫಾ ವೈರಸ್ ಭೀತಿ ಕೂಡ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಬಿಬಿಎಂಪಿ ಷರತ್ತುಗಳ ಮೇಲೆ ಷರತ್ತು ವಿಧಿಸಿದೆ. ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ 5 ದಿನಗಳ ಕಾಲ ಅವಕಾಶ ನೀಡಿತ್ತು. ಆದರೆ ಬಿಬಿಎಂಪಿ ಬೆಂಗಳೂರಿಗೆ ಪ್ರತ್ಯೇಕ ಗಣೇಶೋತ್ಸವ ಗೈಡ್ ಲೈನ್ ಪ್ರಕಟಿಸಿದ್ದು, 3 ದಿನಗಳು ಮಾತ್ರ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿದೆ. ಹೊಸ ಗೈಡ್ ಲೈನ್: ವಾರ್ಡ್ ಗೆ …
Read More »ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬುಧವಾರ ಬೆಳಗಾವಿಗೆ
ಬೆಳಗಾವಿ – ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಸಚಿವರಾದ ನಂತರ ಇದು ಬೆಳಗಾವಿಗೆ ಅವರ ಮೊದಲ ಭೇಟಿಯಾಗಿದೆ. ಕಂಗ್ರಾಳಿಯ ಕೆಎಸ್ ಆರ್ ಪಿ ತರಬೇತಿ ಶಾಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ನಡೆಯಲಿರುವ ಸಶಸ್ತ್ರ ಮೀಸಲು ಪೊಲೀಸ್ ಕಾನ್ ಸ್ಟೆಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮ ಪಥ ಸಂಚಲನ ಕಾರ್ಯಕ್ರಮಕ್ಕೆ ಅರಗ ಜ್ಞಾನೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ …
Read More »ಮಕ್ಕಳ ಮನೋಸ್ಥಿತಿ ಅರಿತು ಶಿಕ್ಷಣ ನೀಡಿ : ಸಚಿವ ಗೋವಿಂದ ಕಾರಜೋಳ
ಬಾಗಲಕೋಟೆ: ಮಕ್ಕಳ ಭವಿಷ್ಯವನ್ನು ರೂಪಿಸುವ ಶಿಕ್ಷಕರು ಮನೋವಿಜ್ಞಾನಿಯಾಗಿ, ತತ್ವಜ್ಞಾನಿಯಾಗಿ ಮಕ್ಕಳ ಮನಸ್ಥಿತಿ ಅರಿತು ಶಿಕ್ಷಣ ನೀಡುವಂತಾಗಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು. ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಕರು ಕೇವಲ ಸಂಬಳಕ್ಕಾಗಿ ಕೆಲಸ ಮಾಡದೇ ಉತ್ತಮ ಭವಿಷ್ಯ ನಿರ್ಮಿಕಸುವ ಕಾರ್ಯವಾಗಬೇಕು. …
Read More »
Laxmi News 24×7