Breaking News

ರಾಜ್ಯ

1 ರಿಂದ 5ನೇ ತರಗತಿ ಆರಂಭ- ಚರ್ಚೆ ನಡೆದಿಲ್ಲ: ಮುಖ್ಯಮಂತ್ರಿ

ಬೆಂಗಳೂರು: ಸದ್ಯ 6, 7 ಮತ್ತು 8ನೇ ತರಗತಿ ಆರಂಭಿಸಲು ತೀರ್ಮಾನಿಸಿದ್ದೇವೆ. ಪರಿಸ್ಥಿತಿ ಅವಲೋಕಿಸಿ 1 ರಿಂದ 5ನೇ ತರಗತಿ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಈ ಬಗ್ಗೆ ಸದ್ಯ ಯಾವುದೇ ಚರ್ಚೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರ‍್ಯಾಲಿ, ಚುನಾವಣೆ, ಸಭೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವ ಸಂಬಂಧ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿಹಾರ …

Read More »

ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ

ಸವದತ್ತಿ: ಅನ್ನದಾನ ಮಹಾದಾನ ಹೇಳಿಕೆ ಯೊಂದಿಗೆ ಇವತ್ತಿನ ವಿಷಯ ಮತ್ತೆ ಇವತ್ತು ಶನಿವಾರ ಬಂತು ನಮ್ಮ ತಂಡ ಅನ್ನ ಸಂತರ್ಪಣೆ ಮಾಡಲು ಇವತ್ತು ಸಜ್ಜಾಗಿದ್ದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದಲ್ಲಿ ನಮ್ಮ ತಂಡ ಇಂದಿನ ಕಾರ್ಯಕ್ರಮ ರೂಪಿಸಿದೆ   ಹೌದು ಇಂದು ಸವದತ್ತಿ ತಾಲೂಕಿನ ಕಡಬಿ ಗ್ರಾಮದ ಸಿದ್ದಾರೂಢ ಮಠದಲ್ಲಿ ಇಂದಿನ ಅನ್ನ ಸಂತರ್ಪಣೆ ಮಾಡಲು ಶ್ರೀ ಸಂತೋಷ್ ಜಾರಕಿಹೊಳಿ ಅವರ ಆದೇಶದ ಮೇರೆಗೆ ಅಲ್ಲಿ ಎಲ್ಲ ತಂಡ …

Read More »

ಹಾವು ಕಚ್ಚಿ ತಂದೆ-ಮಗ ಇಬ್ಬರೂ ಸಾವು

ಚಿಕ್ಕೋಡಿ: ಹಾವು ಕಚ್ಚಿ ತಂದೆ-ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಲ್ಲಿಕಾರ್ಜುನ್ ಮುತ್ತಪ್ಪ ಕುಂಬಾರ (14) ಹಾಗೂ ಮುತ್ತಪ್ಪ ಬಾಳಪ್ಪ ಕುಂಬಾರ (40) ಮೃತ ದುರ್ದೈವಿಗಳು. ಕಳೆದ ಆಗಸ್ಟ್ 29 ರಂದು ಹಾವು ಕಚ್ಚಿತ್ತು. ಪರಿಣಾಮ ಆಗಸ್ಟ್ 31 ರಂದು ಮಲ್ಲಿಕಾರ್ಜುನ್ ಮುತ್ತಪ್ಪ ಕುಂಬಾರ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 2 ರಂದು ಮುತ್ತಪ್ಪ ಬಾಳಪ್ಪ ಕುಂಬಾರ ಮೃತಪಟ್ಟಿದ್ದಾನೆ ಅಂತಾ ವರದಿಯಾಗಿದೆ. ಅಥಣಿ ಖಾಸಗಿ …

Read More »

ದೇಶ ಬಿಡಲು ಕಾಬೂಲ್ ವಿಮಾನ ನಿಲ್ದಾಣದಲ್ಲಿ ಮದುವೆಯಾಗ್ತಿರುವ ಹುಡುಗಿಯರು.!

ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ನಂತ್ರ ಜನರು ದೇಶ ಬಿಡ್ತಿದ್ದಾರೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಜನ ಸಂದಣಿಯಿದೆ. ಆದ್ರೆ ಮಹಿಳೆಯರಿಗೆ ದೇಶ ಬಿಡುವುದು ಕಷ್ಟವಾಗಿದೆ. ಕಾಬೂಲ್ ವಿಮಾನ ನಿಲ್ದಾಣದಲ್ಲಿ ಒಂಟಿ ಮಹಿಳೆ ಹಾಗೂ ಹುಡುಗಿಯರಿಗೆ ಪ್ರವೇಶ ಸಿಗ್ತಿಲ್ಲ. ಇದ್ರಿಂದ ತಪ್ಪಿಸಿಕೊಳ್ಳಲು ಕೆಲ ಹುಡುಗಿಯರನ್ನು ಒತ್ತಾಯ ಪೂರ್ವಕವಾಗಿ ಅಲ್ಲಿರುವ ಯಾವುದೋ ವ್ಯಕ್ತಿಗೆ ಮದುವೆ ಮಾಡಲಾಗ್ತಿದೆ. ಕೆಲ ಹುಡುಗಿಯರು, ಅಪರಿಚಿತನ ಪತ್ನಿಯೆಂದು ಸುಳ್ಳು ಹೇಳಿ ವಿಮಾನ ಏರುತ್ತಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದ ಕುಟುಂಬಸ್ಥರು, ಮಗಳನ್ನು …

Read More »

ಜನವರಿ 21 ನ್ನು ”ದಾಸೋಹ ದಿನ” ವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನ

ಬೆಂಗಳೂರು: ತ್ರಿವಿದ ದಾಸೋಹಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವಾದ ಜನವರಿ 21ನ್ನು ”ದಾಸೋಹ ದಿನ” ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತ ಆದೇಶವನ್ನು ಹೊರಡಿಸಲಾಗಿದೆ. ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಲಿಂಗೈಕ್ಯರಾದ ಶಿವಕುಮಾರ ಸ್ವಾಮೀಜಿ ಅವರ ಅಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ ಜನವರಿ 21 ರಂದು ಸರ್ಕಾರದ ವತಿಯಿಂದ ದಾಸೋಹ ದಿನವೆಂದು ಆಚರಿಸಲು ನಿರ್ಧರಿಸಲಾಗಿದೆ. ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ರೂಪುರೇಷೆ ತಯಾರಿಸಿ …

Read More »

ಈ ಬಾರಿ ಸರಳ ಮೈಸೂರು ದಸರಾ ಆಚರಣೆ

ಮೈಸೂರು ದಸರಾ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ, ಇದೊಂದು ಜಗತ್ ಪ್ರಸಿದ್ಧ ಆಚರಣೆಯಾಗಿದ್ದು, ಪ್ರತಿ ವರ್ಷ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸುತ್ತಾ ಬರುತ್ತಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಕಳೆದ ಬಾರಿಗಿಂತ ವಿಶೇಷವಾಗಿ ಸರಳ ಹಾಗೂ ಸಾಂಪ್ರದಾಯಿಕವಾಗಿ ಮೈಸೂರು ದಸರಾವನ್ನು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ಹೇಳಿದರು.   ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಾಡ ಹಬ್ಬ ಮೈಸೂರು ದಸರಾ -2021ರ ಆಚರಣೆ ಕುರಿತಂತೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ …

Read More »

ನಾಳೆ ವೀಕೆಂಡ್ ಕರ್ಫ್ಯೂ ಇರುವುದಿಲ್ಲ, ತಮ್ಮ ಗಮನಕ್ಕೆ…

ಗೋಕಾಕ ಕೋವಿಡ್ ಮಹಾಮಾರಿ ಮೂರನೇ ಅಲೆಯ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದ ಮಾರ್ಗ ಸೂಚಿಯಂತೆ ಗಡಿ ಜಿಲ್ಲೆ ಬೆಳಗಾವಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿತ್ತು. ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖ ಹಿನ್ನೆಲೆ ರಾಜ್ಯ ಸರ್ಕಾರ ವೀಕೆಂಡ್ ಕರ್ಪ್ಯೂ ಹಿಂಪಡೆದು ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ನಿಯಮ ಪಾಲಿಸಿ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ.ಗೋಕಾಕ ತಹಸೀಲ್ದಾರ್ ಪ್ರಕಾಶ್ ಹೊಳೆಪ್ಪಗೋಳ ಪ್ರತಿಕಾಗೋಷ್ಠಿ ತಿಳಿಸಿದ್ದಾರೆ.

Read More »

ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ: ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎಲ್ಲ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್ ಟಿಸಿ) 60ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ನಾಲ್ಕು ಸಾರಿಗೆ ನಿಗಮಗಳ 60 ಚಾಲಕರಿಗೆ ಅಪಘಾತ ರಹಿತ ಚಾಲನೆಗಾಗಿ ಮುಖ್ಯಮಂತ್ರಿಯವರ ಚಿನ್ನದ ಪದಕ ಪ್ರದಾನ ಮಾಡಿ ಅವರು ಮಾತನಾಡಿದರು. ಸಾರಿಗೆ ನಿಗಮಗಳ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸಮಿತಿಗೆ ಐದು …

Read More »

ಬಟ್ಟೆ ಬ್ಯಾಗ್ ಖರೀದಿಯಲ್ಲಿ ರೋಹಿಣಿ ಅಕ್ರಮ: ಸಾ.ರಾ. ಮಹೇಶ್ ಆರೋಪ

ಮೈಸೂರು: ಮೈಸೂರನ್ನು ಪ್ಲಾಸ್ಟಿಕ್ ಮುಕ್ತ ಮಾಡುವ ಯೋಜನೆ ನೆಪದಲ್ಲಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅಕ್ರಮವೆಸಗಿದ್ದಾರೆ ಎಂದು ಸಾ.ರಾ. ಮಹೇಶ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಟ್ಟೆ ಬ್ಯಾಗ್ ಖರೀದಿಗೆ ಜಿಎಸ್‌ಟಿ ಸೇರಿ ₹ 9 ಆಗುತ್ತದೆ. ಆದರೆ, ರೋಹಿಣಿ ಸಿಂಧೂರಿ ಅವರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಕೈಮಗ್ಗ ಇಲಾಖೆಯವರಿಂದ ಖರೀದಿಸದೆ, ಖಾಸಗಿಯವರಿಂದ ಬ್ಯಾಗ್ ಖರೀದಿಸಿದ್ದಾರೆ. ಈ ಒಂದು ಬ್ಯಾಗ್ ಬೆಲೆ ₹ 52 ಇದೆ ಎಂದು ದಾಖಲೆ …

Read More »

ರಸ್ತೆ ಅಪಘಾತ, ದೇವನಕಟ್ಟಿಯ ಯೋಧ ಮುಂಬೈನಲ್ಲಿ ಸಾವು- ಸ್ವಗ್ರಾಮದಲ್ಲಿ ಅಂತಿಮ ನಮನ

ಚಿಕ್ಕೋಡಿ: ಸೇವೆಗೆ ಹಾಜರಾಗಲು ಹೊರಟಿರುವಾಗ ಸೆಪ್ಟೆಂಬರ್ 1ರಂದು ಮಾರ್ಗಮಧ್ಯೆ ಮುಂಬಯಿ ನಗರದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ರಾಯಭಾಗ ತಾಲೂಕಿನ ಯೋಧ ಯಲ್ಲಪ್ಪಾ ಬಾಲಪ್ಪಾ ನಾಯಿಕ ಅವರ ಅಂತ್ಯಸಂಸ್ಕಾರವನ್ನು ತಾಲೂಕಿನ ದೇವನಕಟ್ಟಿಯಲ್ಲಿ ಗುರುವಾರ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ರಾಯಭಾಗ ತಾಲೂಕು ದೇವನಕಟ್ಟಿ ನಿವಾಸಿಯಾದ ಯಲ್ಲಪ್ಪಾ ಅವರು, ಕಳೆದ 9 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮಂಗಳವಾರ ರಾತ್ರಿ ಸೇವೆಗೆ ಹಾಜರಾಗಲು ಸ್ವಗ್ರಾಮದಿಂದ ಜಮ್ಮು-ಕಾಶ್ಮೀರಕ್ಕೆ ಹೊರಟಿರುವಾಗ ಮಾರ್ಗಮಧ್ಯೆ ರಸ್ತೆಯ ಅಪಘಾತದಿಂದ ಸಾವನ್ನಪ್ಪಿದ್ದರು. ಯಲ್ಲಪ್ಪ ಅವರ …

Read More »