ವಿಜಯಪುರ: ಜಿಲ್ಲೆಯ ಹಲವೆಡೆ ಬುಧವಾರ ರಾತ್ರಿ ಮತ್ತೆ ನಿಗೂಢ ಶಬ್ಧ ಕೇಳಿ ಬಂದಿದೆ. ಪರಿಣಾಮ ಭೂಕಂಪನದ ಅನುಭವ ಎಂದುಕೊಂಡ ಜನರು ಭಯದಿಂದ ಇಡೀ ರಾತ್ರಿ ಮನೆಯಿಂದ ಹೊರಗೆ ಓಡಿಬಂದು ನಿದ್ದೆ ಇಲ್ಲದೇ ಜಾಗರಣೆ ಮಾಡಿದ್ದಾರೆ. ಬಸವನಬಾಗೇವಾಡಿ ತಾಲೂಕಿನ ಕರಿಭಂಟನಾಳ, ಪಿ.ಬಿ.ಹುಣಶ್ಯಾಳ ಗ್ರಾಮದಲ್ಲಿ ಬುಧವಾರ ರಾತ್ರಿ ಭೂಕಂಪದ ಮಾದರಿಯಲ್ಲಿ ಭಾರಿ ಸದ್ದು ಕೇಳಿಬಂದಿದೆ. ಮನೆಯಲ್ಲಿ ಪಾತ್ರೆಗಳು, ಇತರೆ ವಸ್ತುಗಳು ಅಲುಗಾಡಿ ಕೆಳಗೆ ಬಿದ್ದಿವೆ. ಇದರಿಂದ ಭಯಗೊಂಡ ಗ್ರಾಮದ ಜನರು ಮನೆಯಿಂದ ಹೊರಗೆ ಓಡಿ …
Read More »ಮೋದಿ ಸರ್ಕಾರವು ಬಂಡವಾಳಶಾಯಿ ಕೈಗೊಂಬೆ: ಸಿದ್ದರಾಮಯ್ಯ ಆರೋಪ
ಬೆಂಗಳೂರು: ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಉದ್ಯಮಿಗಳ 7 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ. ಆ ಪೈಕಿ ಅದಾನಿ ಅವರದ್ದೇ 4.50 ಲಕ್ಷ ಕೋಟಿ ರೂ. ಎನ್ ಪಿಎ ಇದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಜಗತ್ತಿನ ಅಭಿವೃದ್ದಿ ಹೊಂದುವ ವೇಗದ ದೇಶಗಳಲ್ಲಿ ಭಾರತ 5ನೇ ಸ್ಥಾನದಲ್ಲಿತ್ತು. ಈಗ 193 ದೇಶಗಳ …
Read More »ಪಿಎಚ್‍ಡಿ ವ್ಯಾಸಂಗ ಬೇಡ ಎಂದ ಪಾಲಕರು- ಯುವತಿ ಆತ್ಮಹತ್ಯೆ
ಬಳ್ಳಾರಿ: ಪಿಎಚ್‍ಡಿ ವ್ಯಾಸಂಗ ಮಾಡುವುದು ಬೇಡ ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ನಡೆದಿದೆ. ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಯು.ಎನ್. ಪೂಜಾ(24) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪೂಜಾ ಎಂ.ಎಸ್ಸಿ ಮುಗಿಸಿಕೊಂಡು ಬಿ.ಎಡ್ ಮಾಡುತ್ತಿದ್ದರು. ಈಗ ಪಿಎಚ್‍ಡಿ ಮಾಡುವುದದಾಗಿ ತಂದೆಯೊಂದಿಗೆ ತನ್ನ ಅಭಿಪ್ರಾಯ ತಿಳಿಸಿದ್ದಾರೆ. ಅದಕ್ಕೆ ತಂದೆ ನಾಗರಾಜ್, ಪಿಎಚ್‍ಡಿ ಮಾಡುವುದು ಬೇಡ ಎಂದು ಹೇಳಿದ್ದಾರೆ.ತಂದೆ ಪಿಎಚ್‍ಡಿ ಮಾಡುವುದು …
Read More »ಬೈಕ್-ಗೂಡ್ಸ್ ವಾಹನ ಮಧ್ಯೆ ಭೀಕರ ಅಪಘಾತ; ಇಬ್ಬರು ದುರ್ಮರಣ
ಧಾರವಾಡ: ಬೈಕ್ ಮತ್ತು ಗೂಡ್ಸ್ ವಾಹನದ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಶಿಂಗನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಡಿವಾಳೆಪ್ಪ ಬಸಪ್ಪ ಪೂಜಾರ, ಮಹದೇವ ಸಹದೇವಪ್ಪ ಲಕ್ಕಣ್ಣನವರ ಸಾವನ್ನಪ್ಪಿದ ದುರ್ದೈವಿಗಳು. ಇವರೆಲ್ಲ ಧಾರವಾಡ ತಾಲೂಕಿನ ಬೇಲೂರ ಗ್ರಾಮದವರು ಅಂತಾ ತಿಳಿದು ಬಂದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
Read More »ಸೆ.20ಕ್ಕೆ ಸಿಇಟಿ ಫಲಿತಾಂಶ ಸಾಧ್ಯತೆ?
ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಸೆ.20ರಂದು ಹೊರಬೀಳುವ ಸಾಧ್ಯತೆಯಿದೆ. ಎಂಜಿನಿಯರಿಂಗ್ ಮೊದಲಾದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ವಿದ್ಯಾರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನ ಕಾರ್ಯವೂ ನಡೆಯುತ್ತಿದೆ. ಸೆ.20ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಸಕ್ತ ಸಾಲಿಗೆ ಅನ್ವಯವಾಗುವಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ …
Read More »ಪಾನಿಪೂರಿ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಮಹಿಳೆಯೊಬ್ಬಳ ಆತ್ಮಹತ್ಯೆ
ಹುಡುಗಿಯರಿಗೆ ಪಾನಿಪುರಿ ಅಂದ್ರೆ ಪಂಚಪ್ರಾಣ. ಮಹಿಳೆಯೊಬ್ಬಳು ಪಾನಿಪೂರಿ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಪುಣೆಯ ನಿವಾಸಿಯಾಗಿರುವ ಪ್ರತೀಕ್ಷಾ ಸರ್ವಾಡೆ ೨೦೧೯ ರಲ್ಲಿ ಗಹಿನಿನಾಥ್ ಸರ್ವಾಡೆ ಎಂಬವರನ್ನು ಮದುವೆಯಾಗಿದ್ದರು. ಗಹಿನಿನಾಥ್ ಸರ್ವಾಡೆ ಕೆಲಸದಿಂದ ಬರುವಾಗ ಪತ್ನಿಗೆ ತಿಳಿಸದೇ ಪಾನಿಪೂರಿಯನ್ನು ತಂದಿದ್ದರು. ಅಡುಗೆ ಮಾಡಿಟ್ಟಿದ್ದ ಪತ್ನಿ ಪ್ರತೀಕ್ಷಾ ಇದೇ ಕಾರಣಕ್ಕೆ ಕೋಪ ಮಾಡಿಕೊಂಡಿದ್ದಾಳೆ. ಮರುದಿನ ಪತಿ ಮನೆಯಲ್ಲಿ ಇಲ್ಲದ ವೇಳೆಯಲ್ಲಿ ವಿಷ ಸೇವನೆ ಮಾಡಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾಳೆ. …
Read More »ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣ: ಪಿಎಸ್ ಐ ಅರ್ಜುನ್ ಬಂಧಿಸಿದ ಸಿಐಡಿ
ಚಿಕ್ಕಮಗಳೂರು, ಸೆ.1 ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪ್ರಕರಣದ ಆರೋಪಿ ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್ ಐ ಅರ್ಜುನ್ ಅವರನ್ನು ಸಿಐಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆಂದು ತಿಳಿದು ಬಂದಿದೆ. 2021 ಮೇ 10ರಂದು ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್‍ಐ ಆಗಿದ್ದ ಅರ್ಜುನ್ ಎಂಬುವರು ಠಾಣಾವ್ಯಾಪ್ತಿಯ ಕಿರುಗುಂದ ಗ್ರಾಮದ ದಲಿತ ಯುವಕ ಪುನೀತ್ ಎಂಬಾತನನ್ನು ಪ್ರಕರಣವೊಂದರ ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆ ತಂದಿದ್ದರು. ಪಿಎಸ್‍ಐ ಅರ್ಜುನ್ ಅವರು …
Read More »ಅತ್ಯಾಚಾರ ತಡೆದಿದ್ರೆ ಬೇಷ್ ಅನ್ನಬಹುದಿತ್ತು|ಸರ್ಕಾರ-ಪೊಲೀಸ್ ವಿರುದ್ಧ ಸಿದ್ಧರಾಮಯ್ಯ ಆಕ್ರೋಶ
ಮೈಸೂರು : ನಗರದಲ್ಲಿ ನಡೆದ ಗ್ಯಾಂಗ್ ರೇಪ್ ಬಹಳ ಹೇಯ ಕೃತ್ಯ. ನಾಗರೀಕ ಸಮಾಜ ತಲೆ ತಗ್ಗಿಸುವಂತಹ ಕೃತ್ಯ. ಸರ್ಕಾರ ಈ ಪ್ರಕರಣವನ್ನು ಹಗುರವಾಗಿ ತೆಗೆದುಕೊಂಡಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಕಿಡಿ ಕಾರಿದರು. ಇಂದು (ಸೆ.01) ಅತ್ಯಾಚಾರ ನಡೆದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸರ್ಕಾರ ಹಾಗೂ ಪೊಲೀಸ್ ಇಲಾಖೆ ವಿರುದ್ಧ ಹರಿಹಾಯ್ದರು. ಇತ್ತೀಚಿನ ದಿನಗಳಲ್ಲಿ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿವೆ. ಮೈಸೂರು …
Read More »ಗೋಕಾಕ ನಗರದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಪ್ರತಿಕ್ರಿಯೆ.
ಗೋಕಾಕನಗರದಲ್ಲಿ ನಡೆಯುತ್ತಿರುವುಕಳ್ಳತನ ಪ್ರಕರಣಗಳ ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ ಪ್ರತಿಕ್ರಿಯಿಸಿದ್ದು ಈಗಾಗಲೇ ಕಳ್ಳತನ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲು ತಂಡಗಳನ್ನರಚನೆ ಮಾಡಲಾಗಿದೆ. ಇಂತಹಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಗುಂಪೊಂದನ್ನು ಇತ್ತಿಚಿಗಷ್ಟೆರಾಮದುರ್ಗದಲ್ಲಿ ಬಂಧಿಸಲಾಗಿದೆ. ಗೋಕಾಕ ನಗರದ ಜನ ಹೆದರುವ ಅವಶ್ಯಕತೆ ಇಲ್ಲ. ಅನಾಮಿಕರು ರಾತ್ರಿ ವೇಳೆಯಲ್ಲಿ ಓಡಾಡುವುದು ಗೊತ್ತಾದರೆ ಸ್ಥಳೀಯರು 112ಗೆ ಕರೆಮಾಡಲು ಸೂಚಿಸಿದ್ದಾರೆ.
Read More »ಹಾಸನ ಪೊಲೀಸ್ ಠಾಣೆ ಕೂಗಳತೆಯಲ್ಲೇ ಪುಡಿರೌಡಿಗಳ ಪುಂಡಾಟ.. ಯುವಕನಿಗೆ ಥಳಿತ
ಹಾಸನ: ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಪುಡಿರೌಡಿಗಳು ರಸ್ತೆಯಲ್ಲಿ ಮಚ್ಚು ಹಿಡಿದು ಗಲಾಟೆ ಎಬ್ಬಿಸಿದ ಘಟನೆ ನಗರದ ಕುವೆಂಪು ನಗರ ಬಡಾವಣೆಯಲ್ಲಿ ನಡೆದಿದೆ. ಹಾಸನ ನಗರದ ಕುವೆಂಪುನಗರ ಬಡಾವಣೆಯ ಜೆಕೆ ಬಾರ್ ಌಂಡ್ ರೆಸ್ಟೋರೆಂಟ್ ಬಳಿ ನಿಂತಿದ್ದ ಯುವಕರ ಬಳಿ ಆಗಮಿಸಿದ ರೌಡಿಗಳ ಗುಂಪು, ಸುಖಾಸುಮ್ಮನೆ ಯುವಕರೊಂದಿಗೆ ಜಗಳ ತೆಗೆದು ಓರ್ವ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಪುಡಿ ರೌಡಿಗಳ ಪುಂಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದೆ. …
Read More »
Laxmi News 24×7