Breaking News

ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಸುರಿದ ಧಾರಾಕಾರ ಮಳೆಗೆ ಹೆಗಡೆ ನಗರದ ಬ್ರಿಡ್ಜ್ ಬಳಿ ರಸ್ತೆ ಕುಸಿತ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಜೆ ಸುರಿದ ಧಾರಾಕಾರ ಮಳೆಗೆ ಹೆಗಡೆ ನಗರದ ಬ್ರಿಡ್ಜ್ ಬಳಿ ರಸ್ತೆ ಕುಸಿತಗೊಂಡಿದೆ. ಹೆಗಡೆನಗರದ ಬ್ರಿಡ್ಜ್ ಬಳಿಯ ಎರಡ್ಮೂರು ಕಡೆ ಸುಮಾರು ಎಂಟು ಅಡಿ ಆಳಕ್ಕೆ ರಸ್ತೆ ಕುಸಿದಿದೆ. ಪರಿಣಾಮ ಸ್ಟೀಲ್ ಕಂಬಿ ಸಾಗಿಸುತ್ತಿದ್ದ ಟ್ರಕ್ವೊಂದು ರಸ್ತೆ ಮಧ್ಯದಲ್ಲೇ ಪಲ್ಟಿಯಾಗಿದೆ. ರಸ್ತೆಯಲ್ಲಿ ಒಳಚರಂಡಿ ಹಾಗೂ ಕಾವೇರಿ ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯುತ್ತಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಕಳಪೆ ಕಾಮಗಾರಿಯಿಂದ ರಸ್ತೆ ಕುಸಿದಿರುವ ಶಂಕೆ ವ್ಯಕ್ತವಾಗಿದೆ.

Read More »

ಸೀಮಂತ ಕಾರ್ಯಕ್ರಮದಲ್ಲಿ ವಿಷ ಆಹಾರ ಸೇವಿಸಿ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ದಾವಣಗೆರೆ: ವಿಷ ಆಹಾರ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ದುರ್ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಷಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಣ್ಣೆಹಳ್ಳಿ ಗ್ರಾಮದ ಮನೆ ಒಂದರಲ್ಲಿ ಸೀಮಂತ ಕಾರ್ಯ ನಡೆದಿತ್ತು. ಈ ವೇಳೆ ನೂರಾರು ಜನರಿಗೆ ಸಿಹಿಯೂಟ ಹಾಕಲಾಗಿತ್ತು. ಊಟ ಸೇವಿಸಿದ 100ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ-ಭೇದಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅಸ್ವಸ್ಥರೆಲ್ಲರನ್ನೂ ಬೆಣ್ಣೆಹಳ್ಳಿ ಪಿಎಚ್‌ಸಿ‌ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಲವರು …

Read More »

ಮೈಸೂರು: ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳಿಂದ ಸಾಮೂಹಿಕ ಅತ್ಯಾಚಾರ

ಮೈಸೂರು: ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೈಸೂರಿನ ಹೆಲಿಪ್ಯಾಡ್ ಬಳಿಯ ವಾಟರ್ ಟ್ಯಾಂಕ್ ನ ಗುಡ್ಡದ ಬಳಿ ಗ್ಯಾಂಗ್ ರೇಪ್ ನಡೆದಿದೆ. ವಿದ್ಯಾರ್ಥಿನಿಯು ಸ್ನೇಹಿತನ ಜೊತೆ ಬೆಟ್ಟಕ್ಕೆ ತೆರಳಿದ್ದ ವೇಳೆ ಯುವಕರ ತಂಡ ಸಾಮೂಹಿಕ ಅತ್ಯಾಚಾರ ಎಸಗಿದೆ. ಸದ್ಯ ವಿದ್ಯಾರ್ಥಿನಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನೆ ಕುರಿತು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, …

Read More »

ಆರ್ಯಗೆ ಪರಸ್ತ್ರೀ ಸಂಬಂಧದ ಕಳಂಕ ಬರಲು ಕಾರಣವಾದ ಇಬ್ಬರ ಬಂಧನ; ಪ್ರಕರಣಕ್ಕೆ ಸಿಕ್ತು ದೊಡ್ಡ ಟ್ವಿಸ್ಟ್​

ಮೊಹಮ್ಮದ್​ ಅರ್ಮಾನ್​ ಮತ್ತು ಮೊಹಮ್ಮದ್​​ ಹುಸೇನಿ ಎಂಬ ಇಬ್ಬರು ಆರೋಪಿಗಳನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ. ಆರ್ಯ ಹೆಸರು ಹೇಳಿಕೊಂಡು ಮಹಿಳೆಗೆ ಮೋಸ ಮಾಡಿರುವುದು ಇವರೇ ಎಂದು ಪೊಲೀಸರು ಶಂಕಿಸಿದ್ದಾರೆ. ಜರ್ಮನಿಯಲ್ಲಿ ನೆಲೆಸಿರುವ ಶ್ರೀಲಂಕಾ ಮೂಲದ ತಮಿಳು ಮಹಿಳೆಗೆ ನಟ ಆರ್ಯ ಅವರು ಮೋಸ ಮಾಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಈಗ ದೊಡ್ಡ ಟ್ವಿಸ್ಟ್​ ಸಿಕ್ಕಿದೆ. ತಮ್ಮನ್ನು ಮದುವೆ ಆಗುವುದಾಗಿ ನಂಬಿಸಿ, ಲಕ್ಷಾಂತರ ರೂಪಾಯಿ ಹಣ ಪಡೆದು, ಬಳಿಕ ಮೋಸ ಮಾಡಿದ್ದಾರೆ ಎಂದು …

Read More »

ಗುರುವಾರ (ಆಗಸ್ಟ್ 26) ಮಲೆಮಹದೇಶ್ವರ ಬೆಟ್ಟದಿಂದ ಬೃಹತ್ ಪಾದಯಾತ್ರೆ ಆರಂಭವಾಗಲಿದೆ. ಶ್ರೀಗಳ ನೇತೃತ್ವದಲ್ಲಿ ವಿಧಾನಸೌಧದ ವರೆಗೆ ಪಾದಯಾತ್ರೆ ನಡೆಯಲಿದೆ.

ಮೈಸೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ವಿಚಾರವಾಗಿ ಮತ್ತೆ ಸಮುದಾಯದ ಸ್ವಾಮೀಜಿಗಳ ಕೂಗು ಕೇಳಿಬಂದಿದೆ. ಬಸವ ಜಯಮೃತ್ಯುಂಜಯಶ್ರೀ ನೇತೃತ್ವದಲ್ಲಿ ಮತ್ತೆ ಹೋರಾಟ ನಡೆಯಲಿದೆ. ಗುರುವಾರ (ಆಗಸ್ಟ್ 26) ಮಲೆಮಹದೇಶ್ವರ ಬೆಟ್ಟದಿಂದ ಬೃಹತ್ ಪಾದಯಾತ್ರೆ ಆರಂಭವಾಗಲಿದೆ. ಶ್ರೀಗಳ ನೇತೃತ್ವದಲ್ಲಿ ವಿಧಾನಸೌಧದ ವರೆಗೆ ಪಾದಯಾತ್ರೆ ನಡೆಯಲಿದೆ. ನಾಳೆಯಿಂದ ಅಕ್ಟೋಬರ್ 1 ರವರೆಗೆ ಹೋರಾಟ ನಡೆಯಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಬೇಡಿಕೆ ವಿಚಾರವಾಗಿ ಮೈಸೂರಿನಲ್ಲಿ ಬಸವ …

Read More »

ಸೆಪ್ಟೆಂಬರ್‌ನಲ್ಲಿ ದಿನವೂ 5 ಲಕ್ಷ ಜನರಿಗೆ ಲಸಿಕೆ: ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ನಿಂದ ಪ್ರತಿ ದಿನ 5 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬವಸರಾಜ ಬೊಮ್ಮಾಯಿ ಹೇಳಿದರು. ರಾಜಭವನದಲ್ಲಿ ಯೋಜನೆ, ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಸುಸ್ಥಿರ ಗುರಿಗಳ ಸಹಕಾರ ಹಾಗೂ ಗೀವ್‌ ಇಂಡಿಯಾ ಪ್ರತಿಷ್ಠಾನದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವ್ಯಾಕ್ಸಿನೇಟ್‌ ಇಂಡಿಯಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈಗ ಪ್ರತಿ ದಿನ 3.5 ರಿಂದ 4 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಕೇಂದ್ರ …

Read More »

‘ಆನಂದ’ ಇಲ್ಲದೇ ಸಿಂಗ್ ಅಧಿಕಾರ ಸ್ವೀಕಾರ!

ಬೆಂಗಳೂರು : ಪ್ರಬಲ ಖಾತೆಗಾಗಿ ಮುನಿಸಿಕೊಂಡು ಬೆಂಗಳೂರಿನತ್ತ ತಲೆ ಹಾಕದೇ ಹೊಸಪೇಟೆಯಲ್ಲೇ ಬೀಡು ಬಿಟ್ಟಿದ್ದ ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್ ಅವರು ಮಂಗಳವಾರ ಮಧ್ಯಾಹ್ನ ‘ದಿಢೀರ್‌’ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕಾರ ಕ್ರಿಯೆಯೇ ಒಂದು ರೀತಿಯಲ್ಲಿ ಪ್ರಹಸನದಂತೆ ನಡೆಯಿತು. ಬಾಯಿ ಮಾತಿನಲ್ಲಿ ತಮಗೆ ಅಸಮಾಧಾನ ಇಲ್ಲ ಎಂದು ಹೇಳುತ್ತಲೇ ಒಲ್ಲದ ಮನಸ್ಸಿನಿಂದಲೇ ಆನಂದ್‌ಸಿಂಗ್‌ ಅಧಿಕಾರ ಸ್ವೀಕರಿಸಿದರು. ಪೂರ್ವ ನಿಗದಿಯಾದ ಯಾವುದೇ ‘ಕಾರ್ಯಕ್ರಮ’ಗಳಲ್ಲಿದೇ ಏಕಾಏಕಿ ಸಚಿವಗಿರಿ ಸ್ವೀಕರಿಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ …

Read More »

ಶಾಲಾ ಆರಂಭದಲ್ಲಿಯೇ ಉತ್ತಮ ಹಾಜರಾತಿ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಬೆಂಗಳೂರು : ಕೋವಿಡ್-೧೯ ಕಾರಣದಿಂದಾಗಿ ಒಂದು ವರ್ಷದಿಂದ ಸ್ಥಗಿತಗೊಂಡಿದ್ದ ಶಾಲೆಗಳು ಮತ್ತೆ ಪುನಾರಂಭಗೊಂಡಿದ್ದು, ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಬಹಳ ಆಸಕ್ತಿಯಿಂದ ಶಾಲೆಗೆ ಮರಳುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.೫೨ ರಷ್ಟು ಮಕ್ಕಳು ಹಾಜರಾಗಿದ್ದು, ಶಾಲಾ ಆರಂಭದಲ್ಲಿಯೇ ಉತ್ತಮ ಹಾಜರಾತಿ ಕಂಡು ಸಂತಸವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿಳಿಸಿದರು. ಕೋವಿಡ್-೧೯ ಸೋಂಕಿನ ಇಳಿಕೆ ಹಿನ್ನೆಲೆ, ಶಾಲಾ ಕಾಲೇಜುಗಳು ಪುನರಾರಂಭವಾಗಿದ್ದರಿಂದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇಂದು …

Read More »

ಕೋವಿಡ್ ಇಳಿಕೆ, ಕಳ್ಳತನ ಏರಿಕೆ‌: ಊರಿಗೆ ಊರೇ ಕಳ್ಳರ ಸಂತೆ!

ಅಂತಾರಾಜ್ಯ ಮತ್ತು ಗಡಿಜಿಲ್ಲೆಗಳಿಂದ ಬೆಂಗಳೂರು ಮತ್ತು ಇತರ ಪ್ರದೇಶಗಳಿಗೆ ಬಂದು ಕಳ್ಳತನ, ದರೋಡೆ, ಸರಗಳವು ಮತ್ತಿತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಸಾರ್ವಜನಿಕರು ಮತ್ತು ಪೊಲೀಸರ ನೆಮ್ಮದಿಗೆ ಭಂಗ ತಂದಿರುವ ಹತ್ತು ಹಲವು ಗ್ಯಾಂಗ್‌ಗಳಬಗ್ಗೆವಿಸ್ತೃತ ವರದಿ ಸರಣಿ. ಇಂತಹವರ ಬಗ್ಗೆ ಸಾರ್ವಜನಿಕರು ಎಚ್ಚೆತ್ತುಕೊಳ್ಳುವಂತೆ ಮಾಡುವುದು, ಅಪರಾಧ ನಿಯಂತ್ರಕ ಪೊಲೀಸರಿಗೆ ಸಹಾಯ ಮಾಡುವುದು ಉದಯವಾಣಿಕಾಳಜಿ ಬೆಂಗಳೂರು: ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ಭೂಗತವಾಗಿದ್ದ ಅಂತಾರಾಜ್ಯ ಮತ್ತು ಗಡಿಭಾಗಗಳಕಳ್ಳರ ಗ್ಯಾಂಗ್‌ಗಳು ರಾಜಧಾನಿ ಮತ್ತು ಇತರೆ ನಗರಗಳಲ್ಲಿ …

Read More »

ಬೆಳಗಾವಿ ಇರೋದು ಕರ್ನಾಟಕದಲ್ಲಿ’: ಎಂಇಎಸ್‍ಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು

ಬೆಳಗಾವಿ: ಕರ್ನಾಟಕ ರಾಜ್ಯದಲ್ಲೇ ಬೆಳಗಾವಿ ಇರೋದು, ಪಾಲಿಕೆ ಬೆಳಗಾವಿದು, ಇಲ್ಲಿ ರಾಜ್ಯ ಧ್ವಜ ಬಿಟ್ಟು ಬೇರೆ ಧ್ವಜ ಬರಲು ಸಾಧ್ಯವಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗುಡುಗಿದ್ದಾರೆ. ಬೆಳಗಾವಿ ಪಾಲಿಕೆ‌ ಮೇಲೆ ನಾಡ ಧ್ವಜ ತೆಗೆಯಬೇಕು ಎಂಬ ಎಂಇಎಸ್ ಮುಖಂಡನ ಹೇಳಿಕೆಗೆ ತಿರುಗೇಟು ನೀಡಿರುವ ಹೆಬ್ಬಾಳ್ಕರ್, ಎಂಇಸಿ ಒಂದಾಗಲಿ ನೋಡೋಣ. ಅದರ ಬಗ್ಗೆ ನನ್ನ ವಿರೋಧವಿಲ್ಲ. ಮೂರನೇ ತಾರೀಖು ರಿಸಲ್ಟ್ ಬರುತ್ತದೆ. ಒಳ್ಳೆಯ ಸುದ್ದಿ ಕೊಡುತ್ತೇವೆ …

Read More »