ಗದಗ: ನಗರದಲ್ಲಿ ನಕಲಿ ಪೊಲೀಸ್ ವಾಹನ ಓಡಾಟ ಕಂಡು ಗದಗ-ಬೆಟಗೇರಿ ಅವಳಿ ನಗರದ ಜನರು ಗೊಂದಲಕ್ಕೀಡಾದ ಘಟನೆ ನಡೆದಿದೆ. ನಗರದ ಪಂಡಿತ್ ಪುಟ್ಟರಾಜ ಗವಾಯಿಗಳ ಬಸ್ ನಿಲ್ದಾಣ ರಸ್ತೆಯಲ್ಲಿ ನಕಲಿ ಪೊಲೀಸ್ ವಾಹನ ನಿಂತಿದೆ. ಈ ಬೊಲೆರೊ ವಾಹನಕ್ಕೆ ಮುಂದೊಂದು ನಂಬರ್, ಹಿಂದೊಂದು ಎರಡೆರಡು ನಂಬರ್ ಪ್ಲೇಟ್ ಇರುವುದನ್ನು ಅನೇಕರು ಗಮನಿಸಿದ್ದಾರೆ. ನೋಡಿದ ಜನರಿಗೆ ಕೆಲಕಾಲ ಗೊಂದಲ ಸೃಷ್ಟಿಯಾಗಿದೆ. ವಾಹನಕ್ಕೆ ಎರಡು ನಂಬರ್ ಇರಲ್ವಲ್ಲಾ, ಏನಿದು ಅಂತ ತಲೆಕೆಡಿಸಿಕೊಂಡಿದ್ದಾರೆ. ನಂತರ …
Read More »ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆ
ಬೆಳಗಾವಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದು, ಮಾಜಿ ಸಚಿವನಿಗೆ ಕಾಂಗ್ರೆಸ್ ನಾಯಕರು ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣ ಹಾಗೂ ಸಾಕ್ಷ್ಯನಾಶ ಕೇಸ್ ಗಳಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಕಳೆದ 6 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. …
Read More »ಮೈಸೂರು; ಉಪ ಚುನಾವಣೆ ಬಿ-ಫಾರಂ ನೀಡಿದ ಸಿದ್ದರಾಮಯ್ಯ
ಮೈಸೂರು, ಆಗಸ್ಟ್ 20; ಮೈಸೂರು ಮಹಾನಗರ ಪಾಲಿಕೆಯ 36ನೇ ವಾರ್ಡ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ. ಸೆಪ್ಟೆಂಬರ್ 3ರಂದು ಉಪ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ. ಉಪ ಚುನಾವಣೆಗೆ ರಜಿನಿ ಅಣ್ಣಯ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶುಕ್ರವಾರ ರಜನಿ ಅಣ್ಣಯ್ಯಗೆ ಬಿ-ಫಾರಂ ವಿತರಣೆ ಮಾಡಿ, ಗೆಲುವು ಸಿಗಲಿ ಎಂದು ಶುಭ ಹಾರೈಸಿದರು. ರಜನಿ ಅಣ್ಣಯ್ಯ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು ಎಲ್ಲರೂ …
Read More »ತಾಲಿಬಾನ್ ಪರ ಪೋಸ್ಟ್; ಬಾಗಲಕೋಟೆ ಯುವಕನಿಗೆ ಸಂಕಷ್ಟ!
ಬಾಗಲಕೋಟೆ, ಆಗಸ್ಟ್ 20; ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನ್ ಉಗ್ರರ ವಶವಾಗಿದೆ. ಕಾಬೂಲ್ ಸೇರಿದಂತೆ ವಿವಿಧ ಪ್ರದೇಶದಲ್ಲಿ ಹಿಂಸಾಚಾರಗಳು ನಡೆಯುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ತಾಲಿಬಾನ್ ಪರವಾಗಿ ಸ್ಟೇಟಸ್ ಹಾಕಿದ ಕರ್ನಾಟಕದ ಯುವಕನಿಗೆ ಸಂಕಷ್ಟ ಎದುರಾಗಿದೆ. ಬಾಗಲಕೋಟೆಯ ಆಸೀಫ್ ಗಲಗಲಿ ಎಂಬ ಯುವಕ ಫೇಸ್ ಬುಕ್‌ನಲ್ಲಿ ‘ಐ ಲವ್ ತಾಲಿಬಾನಿ’ ಎಂದು ಸ್ಟೇಟಸ್ ಹಾಕಿದ್ದಾನೆ. ಈಗ ಮುಸ್ಲಿಂ ಸಮುದಾಯದ ಯುವಕರೇ ಆಸೀಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಕರಣ ದಾಖಲಿಸಿ ಬಂಧಿಸಿ ಎಂದು ಒತ್ತಾಯಿಸಿದ್ದಾರೆ. ಆಸೀಫ್ …
Read More »ದಕ್ಷಿಣದ ಕಚೇರಿಗಳು ಬರುವವೇ ಉತ್ತರದತ್ತ? ಅಭಿವೃದ್ಧಿ ಕನಸು ನನಸು ಮಾಡುವರೇ ಸಿಎಂ ಬೊಮ್ಮಾಯಿ?
ಆಲಮಟ್ಟಿ: ರಾಜ್ಯದ ಸಮಗ್ರ ಅಭಿವೃದ್ಧಿಯ ಪಣ ತೊಟ್ಟು ಮುಖ್ಯಮಂತ್ರಿಯಾದ ಬಸವರಾಜ ಬೊಮ್ಮಾಯಿ ಅವರು ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತ ಆಗಿರುವ ಕಚೇರಿಗಳನ್ನು ಉತ್ತರದಲ್ಲಿ ಸ್ಥಾಪಿಸಿ ಅಭಿವೃದ್ಧಿ ಕನಸು ನನಸು ಮಾಡುವರೆಂಬ ಆಸೆ ಚಿಗುರೊಡೆದಿದೆ. ಆಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಮಗ್ರ ಕರ್ನಾಟಕ ಅಭಿವೃದ್ಧಿಗಾಗಿ ದಕ್ಷಿಣ ಭಾಗದಲ್ಲಿಯೇ ಕೇಂದ್ರೀಕೃತವಾಗಿರುವ ಕಚೇರಿಗಳಲ್ಲಿ ಕೆಲವು ಕಚೇರಿಗಳು ಉತ್ತರ ಕರ್ನಾಟಕ ಭಾಗದಲ್ಲಿ 2019ರ ಏ.1ರಿಂದ ಕಾರ್ಯಾರಂಭ ಮಾಡಲು ಅಧಿವೇಶನದಲ್ಲಿ ಘೋಷಿಸಿ 10-1-2019ರಂದು ಆದೇಶಿಸಿದ್ದರು. …
Read More »ಕಾಂಗ್ರೆಸ್ ಪ್ರಮುಖ ಮತ್ತು ಪ್ರಬಲ ಪ್ರತಿ ಪಕ್ಷವಾಗಿ ಬೆಳೆಯಬೇಕು : ನಿತಿನ್ ಗಡ್ಕರಿ
ನವ ದೆಹಲಿ : ಕಾಂಗ್ರೆಸ್ ಪ್ರಮುಖ ಮತ್ತು ಪ್ರಬಲ ಪ್ರತಿ ಪಕ್ಷವಾಗಿ ಬೆಳೆಯಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಒಂದು ಗಣರಾಜ್ಯ ಯಶಸ್ವಿಯಾಗಬೇಕೆಂದರೆ ಅದರಲ್ಲಿ ಆಡಳಿತ ಪಕ್ಷದ ಜತೆ ಪ್ರತಿಪಕ್ಷವೂ ಮುಖ್ಯ. ಅವರೆಡೂ ಚಕ್ರವಿದ್ದರೆ ಮಾತ್ರ ಗಣರಾಜ್ಯ ಉತ್ತಮವಾಗಿ ಸಾಗುತ್ತದೆ ಎಂದು ಅವರು ಹೇಳಿದ್ದಾರೆ. ಅದೇ ಕಾರಣಕ್ಕೆ ಮೊದಲ ಪ್ರಧಾನಿ ನೆಹರೂ ಕೂಡ ಅಟಲ್ ಜಿಗೆ ಹೆಚ್ಚಿನ ಗೌರವ ಕೊಡುತ್ತಿದ್ದರು ಎಂದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನಾನು ಹಲವು ವರ್ಷಗಳ ಕಾಲ ಪ್ರತಿಪಕ್ಷದಲ್ಲಿದ್ದೆ. …
Read More »ಏರಿಕೆಯತ್ತ ಮುಖ ಮಾಡಿದ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ದರ ವಿವರ ಪರಿಶೀಲಿಸಿ
Gold Silver Rate Today, 21st August: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,250 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,42,500 ರೂಪಾಯಿಗೆ ಏರಿದೆ. ದೈನಂದಿನ ದರ ಏರಿಕೆಯಲ್ಲಿ 1,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. Gold Silver Rate Today |ಬೆಂಗಳೂರು: ಚಿನ್ನದ ದರ ನಿನ್ನೆ ಇಳಿಕೆಯತ್ತ ಮುಖ ಮಾಡಿತ್ತು. ಆದರೆ ಇಂದು (ಆಗಸ್ಟ್ 21, ಶನಿವಾರ) ಚಿನ್ನದ ದರ (Gold …
Read More »ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ; ಎಲ್ಲೆಲ್ಲಿ ಎಷ್ಟೆಷ್ಟು ?
Petrol Diesel Price Today: ಕಳೆದ 3 ದಿನಗಳಲ್ಲಿ ಲೀಟರ್ ಡೀಸೆಲ್ ದರದಲ್ಲಿ 60 ಪೈಸೆ ಇಳಿಕೆ ಕಂಡು ಬಂದಿದ್ದು, ಇಂದು ಸ್ಥಿರವಾಗಿದೆ. ಆದೆ ಪೆಟ್ರೋಲ್ ದರ ಸತತವಾಗಿ 34 ದಿನಗಳಿಂದಲೂ ಸ್ಥಿರತೆಯಲ್ಲಿಯೇ ಇದೆ. ಜುಲೈ 18 ರಿಂದ ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. Petrol Diesel Rate Today | ದೆಹಲಿ: ಸತತ 3 ದಿನಗಳಿಂದ ಡೀಸೆಲ್ ಬೆಲೆ ಇಳಿಕೆ ಕಂಡಿತ್ತು. ಆದರೆ ಇಂದು (ಆಗಸ್ಟ್ 21, ಶನಿವಾರ) …
Read More »ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕುಟುಂಬ ಸಮೇತ ತುಂಗಭದ್ರಾ ಆಣೆಕಟ್ಟೆಗೆ ಭೇಟಿ
ಬಳ್ಳಾರಿ ; ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಕುಟುಂಬ ಸಮೇತರಾಗಿ ತುಂಗಭದ್ರಾ ಆಣೆಕಟ್ಟಿಗೆ ಭೇಟಿ ಕೊಟ್ಟು ವಿಹಂಗಮ ನೋಟವನ್ನು ಕಣ್ತುಂಬಿಸಿಕೊಂಡರು. ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಆಗಮನದಿಂದ ಸ್ಥಳಿಯರ ಮತ್ತು ತುಂಗಭದ್ರಾ ಜಲಾಶಯದ ಅಧಿಕಾರಿಗಳ ಮನಸ್ಸು ಸಂತಸಗೊಂಡಿತ್ತು. ಕಳೆದ ನಾಲ್ಕು ವರ್ಷಗಳಿಂದ ಜಲಾಶಯ ಭರ್ತಿಯಾಗಿದೆ. ತುಂಗಭದ್ರಾ ಜಲಾಶಯವು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ರೈತರ ಜೀವನಾಡಿಯಾಗಿದೆ. ಈ ಭಾಗಗಳ ರೈತರು ಕೃಷಿಗೆ ಪೂರಕವಾಗಿದೆ ಎಂದು ಇದೇ ಸಂದರ್ಭದಲ್ಲಿ …
Read More »ನೀರಜ್ ಈಗ ನ್ಯಾಷನಲ್ ಕ್ರಶ್! ಚಿನ್ನದ ಹುಡುಗ ನೀರಜ್ ಚೋಪ್ರಾಗೆ ಮನಸೋತ ಕಿಯಾರಾ ಅಡ್ವಾಣಿ
ಭಾರತದ ಬಹುತೇಕ ಪ್ರತಿಯೊಬ್ಬ ಹುಡುಗಿರ ಕ್ರಶ್ ಆಗಿದ್ದಾರೆ ನೀರಜ್. ಅದೇ ಸಮಯದಲ್ಲಿ, ಈಗ ಕಿಯಾರಾ ಅಡ್ವಾಣಿ ಕೂಡ ತನ್ನ ಕ್ರಶ್ ಯಾರೆಂಬುದನ್ನು ಹೇಳಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತೀಯರ ಮನೆ ಮಾತಾಗಿರುವ ನೀರಜ್ ಚೋಪ್ರಾ ಅಭಿಮಾನಿಗಳಲ್ಲಿ ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಸೇರಿದ್ದಾರೆ. ಸೋಶಿಯಲ್ ಮೀಡಿಯಾದಿಂದ ಹಿಡಿದು ನೀರಜ್ ವರೆಗೂ ಅವರನ್ನು ಎಲ್ಲೆಡೆ ಪ್ರಶಂಸಿಸಲಾಗುತ್ತಿದೆ. ಜಾವೆಲಿನ್ ಎಸೆತದಲ್ಲಿ ನೀರಜ್ ಚಿನ್ನದ ಪದಕ ಗೆದ್ದಾಗಿನಿಂದ, ಅವರ ಗೆಲುವಿನ ಬಗ್ಗೆ ಚರ್ಚೆಗಳು …
Read More »
Laxmi News 24×7