Breaking News

ರಾಜ್ಯ

ಎಸ್​ಎಸ್​ಎಲ್​ಸಿ ಫಲಿತಾಂಶ ಆಗಸ್ಟ್ 9 ರ ಸೋಮವಾರ ಪ್ರಕಟ

ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿರುವ ಎಸ್​ಎಸ್​ಎಲ್​ಸಿ ಫಲಿತಾಂಶ ಆಗಸ್ಟ್ 9 ರ ಸೋಮವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ಸೋಮವಾರ ಮಧ್ಯಾಹ್ನ 3:30 ಕ್ಕೆ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ. ವಿದ್ಯಾರ್ಥಿಗಳ ಮೊಬೈಲ್​ಗಳಿಗೆ ನೇರವಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶವನ್ನ ಕಳುಹಿಸಲಾಗುವುದು ಎಂದು ಹೇಳಲಾಗಿದೆ. ಅಂದು ಮಧ್ಯಾಹ್ನ 3:30ಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​​ ನೇತೃತ್ವದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಸಚಿವರಿಗೆ ಇಲಾಖೆಯ ನಿರ್ದೇಶಕರು, ಕಾರ್ಯದರ್ಶಿಗಳು ಸಾಥ್ ನೀಡಲಿದ್ದಾರೆ.

Read More »

ಚಿನ್ನ ಖರೀದಿಗೆ ಒಳ್ಳೆ ಅವಕಾಶ; ಆಗಸ್ಟ್ 7ರಂದು ಭಾರೀ ಇಳಿಕೆಯಾಗಿದೆ ಬೆಲೆ

ನವದೆಹಲಿ, ಆಗಸ್ಟ್‌ 07: ಭಾರತೀಯ ಮಾರುಕಟ್ಟೆಯಲ್ಲಿ ಆಗಸ್ಟ್‌ ತಿಂಗಳ ಮೊದಲ ವಾರವಿಡೀ ಚಿನ್ನದ ವಹಿವಾಟು ನಿರಂತರ ಕುಸಿತ ಕಂಡಿದ್ದು, ಆಗಸ್ಟ್‌ 7ರ ಶನಿವಾರ ಕೂಡ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಹಬ್ಬದ ಸಮಯ ಹತ್ತಿರ ಬರುತ್ತಿದ್ದು, ಚಿನ್ನ ಖರೀದಿಸಲು ಗ್ರಾಹಕರಿಗೆ ಇದು ಉತ್ತಮ ಅವಕಾಶವೂ ಆಗಿದೆ. ಭಾರತದ ಎಲ್ಲಾ ಪ್ರಮುಖ ನಗರಗಳಲ್ಲಿ ಶನಿವಾರ ಚಿನ್ನದ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಬೆಳ್ಳಿ ಬೆಲೆ ಕೂಡ ಸತತ ಇಳಿಕೆಯಾಗಿದೆ. ಶನಿವಾರದ ಈ …

Read More »

ಈ ಬಾರಿಯೂ ಸರಳ ದಸರಾ ಆಚರಣೆಗೆ ಚಿಂತನೆ: ಎಸ್.ಟಿ. ಸೋಮಶೇಖರ್

ಮೈಸೂರು, ಆಗಸ್ಟ್ 7: “ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿಯೂ ಸರಳವಾಗಿ ಆಚರಿಸಲು ಚಿಂತಿಸಲಾಗಿದೆ,” ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಕೋವಿಡ್ ಸೋಂಕು ನಿಯಂತ್ರಣ ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಣ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್, ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲ್ಲೂಕು ಬಾವಲಿ ಚೆಕ್‌ಪೋಸ್ಟ್‌ ಪರಿಶೀಲನೆ ವೇಳೆ ದಸರಾ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಸಚಿವ ಸೋಮಶೇಖರ್ …

Read More »

ಬಿಎಸ್​ವೈ-ಬೊಮ್ಮಾಯಿ ಇಬ್ಬರೂ ನನಗೆ ಕೊಟ್ಟ ಮಾತು ಉಳಿಸಿಕೊಂಡಿಲ್ಲ: ಎಂಟಿಬಿ ನಾಗರಾಜ್​ ಆಕ್ರೋಶ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಆನಂದ್​ ಸಿಂಗ್​ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದರು. ಇದೀಗ ಎಂಟಿಬಿ ನಾಗರಾಜ್​ ಕೂಡ ಇದೇ ಹಾದಿ ತುಣಿದಿದ್ದು, ಇನ್ನೆರಡು ದಿನದಲ್ಲಿ ಮುಂದಿನ ನಿರ್ಧಾರ ಪ್ರಕಟಿಸುವೆ ಎಂದು ಟ್ವೀಟ್​ ಮೂಲಕ ಎಚ್ಚರಿಸಿದ್ದಾರೆ. ನಾನು ಕೇಳಿರೋದೇ ಒಂದು, ಕೊಟ್ಟಿರೋದೇ ಮತ್ತೊಂದು. ನನಗೆ ಕೊಟ್ಟಿರುವ ಖಾತೆಯನ್ನು ಬದಲಾವಣೆ ಮಾಡಬೇಕೆಂದು ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ …

Read More »

ಜೋಗ: ಅಧಿಕಾರಿಗಳ ಹಾಗೂ ಪ್ರವಾಸಿಗರ ಸಂಘರ್ಷ

ಕಾರ್ಗಲ್: ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ದೃಢೀಕರಣ ಕಡ್ಡಾಯಗೊಳಿಸಿರುವ ಜಿಲ್ಲಾಧಿಕಾರಿ ಆದೇಶ ಶುಕ್ರವಾರ ಸಂಘರ್ಷಕ್ಕೆ ಕಾರಣವಾಗಿತ್ತು. ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಯಿಂದ ಬಂದಿದ್ದ ಭಾರಿ ಸಂಖ್ಯೆಯ ಪ್ರವಾಸಿಗರು, ‘ಆರ್‌ಟಿಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಎಂದು ಸರ್ಕಾರ ಘೋಷಣೆ ಮಾಡಿಲ್ಲ. ಈ ಬಗ್ಗೆ ಎಲ್ಲಿಯೂ ಮುಂಚಿತವಾಗಿ ಮಾಹಿತಿ ನೀಡಿಲ್ಲ. ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುವ ಆಶಯದಿಂದ ನೂರಾರು ಕಿ.ಮೀ. ದೂರದಿಂದ ನಿರೀಕ್ಷೆಯೊಂದಿಗೆ ಬರುವ ನಮಗೆ ನಿರಾಸೆ ಮೂಡಿಸಿದಂತಾಗಿದೆ. …

Read More »

ಜಾವೆಲಿನ್ ಥ್ರೋನಲ್ಲಿ ಚಿನ್ನಕ್ಕೆ ಗುರಿಯಿಟ್ಟ ನೀರಜ್ ಚೋಪ್ರಾ ಭಾರತದಒಲಿಂಪಿಕ್ಸ್ ನಲ್ಲಿ 13 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದಿತು.

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಭಾರತದ ಬಂಗಾರದ ಬರ ನೀಗಿದೆ. ಪುರುಷರ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಬಂಗಾರದ ಪದಕ ಗೆದ್ದು ಕೊಂಡಿದ್ದಾರೆ. ಇಂದು ನಡೆದ ಫೈನಲ್ ಪಂದ್ಯದಲ್ಲಿ ನೀರಜ್ ಚೋಪ್ರಾ ಆರಂಭದಿಂದಲೇ ಉತ್ತಮ ಪ್ರದರ್ಶನ ತೋರಿದರು. ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಎಸೆದ ನೀರಜ್, ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಜಾವೆಲಿನ್ ಎಸೆದರು. ಆದರೆ ಮೂರನೇ ಪ್ರಯತ್ನದಲ್ಲಿ ನೀರಜ್ 76.79 ಮೀಟರ್ ಎಸೆದರು. ನಾಲ್ಕನೇ ಸುತ್ತಿನಲ್ಲಿ ಫೌಲ್ ಆಯಿತು. …

Read More »

ಗದಗ: ಎರಡು ಎಕರೆ ಜಮೀನಿನಲ್ಲಿ ಭರ್ಜರಿ ಗುಲಾಬಿ ಹೂವು ಬೆಳೆದ ಉಪನ್ಯಾಸಕ; ಲಕ್ಷ ಲಕ್ಷ ರೂಪಾಯಿ ಸಂಪಾದನೆ

ಗದಗ: ಅವರು ಅತಿಥಿ ಉಪನ್ಯಾಸಕ ವೃತ್ತಿ ಮಾಡುತ್ತಿದ್ದರು. ಆದರೆ ಈ ಉಪನ್ಯಾಸಕ ವೃತ್ತಿಯಿಂದ ಅವರ ಹೊಟ್ಟೆ ತುಂಬುತ್ತಿರಲಿಲ್ಲ. ಹೀಗಾಗಿ ಬದುಕು ಸಾಗಿಸಲು ಏನಾದರು ಮಾಡಬೇಕು ಎಂದು ಯೋಚಿಸುತ್ತಿದ್ದಾಗ ಮೊಬೈಲ್​ನಲ್ಲಿ ಅವರಿಗೆ ಮುಂದಿನ ಜೀವನದ ದಾರಿ ಸಿಕ್ಕಿದೆ. ಅಂದು ಯೂಟ್ಯೂಬ್​ನಲ್ಲಿ ಗುಲಾಬಿ ಕೃಷಿ ( Agriculture) ಹೇಗೆ ಮಾಡುತ್ತಾರೆ ಎಂದು ಮಾಹಿತಿ ಪಡೆದಿದ್ದ ಅತಿಥಿ ಉಪನ್ಯಾಸಕ, ತಮ್ಮ ಜೀವನದಲ್ಲಿ ಅದೇ ಮಾರ್ಗ ಅನುಸರಿಸಿ, ಭರ್ಜರಿ ಗುಲಾಬಿ ಹೂ (Rose) ಬೆಳೆದು, ಹೂವಿನಂತ …

Read More »

ಸಾಹುಕಾರರ ಅನ್ನದಾನ ಕಾರ್ಯಕ್ರಮ ಇಂದು ಗೋಕಾಕ ತಾಲೂಕಿನ ಖನಗಾವ ಗ್ರಾಮದಲ್ಲಿ…

ಗೋಕಾಕ: ಪ್ರತಿ ಶನಿವಾರ ದಂತೆ ಈ ಒಂದು ವಾರ ಕೂಡ ನಮ್ಮ ಸಂತೋಷ್ ಜಾರಕಿಹೊಳಿ ಅವರ ತಂಡ ಇಂದು ಗೋಕಾಕ ತಾಲೂಕಿನ ಮತ್ತೊಂದು ಹಳ್ಳಿಗೆ ಅನ್ನ ಪ್ರಸಾದ ವಿತರಣೆ ಮಾಡುವ ಕಾರ್ಯಕ್ರಮ ಹಮ್ಮಿ ಕೊಂಡಿತ್ತು ಇಂದು ಗೋಕಾಕ ತಾಲೂಕಿನ ಖನಗಾವಿ ಕನ್ನಮ್ಮ ದೇವಸ್ಥಾನದಲ್ಲಿ ಈ ಒಂದು ಅನ್ನ ಸಂತರ್ಪಣೆ ನಡೆಯಿತು. ಇದು ಗೋಕಾಕ ತಾಲೂಕಿನ ಮೂವತ್ತೆರಡನೆಯ ಹಳ್ಳಿ ಇದು ವರೆಗೆ ಮೂವತ್ತಕ್ಕೂ ಹೆಚ್ಚಿನ ಹಳ್ಳಿ ಗಳಲ್ಲಿ ಈ ಒಂದು ಕಾರ್ಯಕ್ರಮ …

Read More »

ಗಡಿಭಾಗಗಳಲ್ಲಿ ದಿಢೀರ್ ಕರ್ಫ್ಯೂ: ತರಕಾರಿಗಳನ್ನು ರಸ್ತೆಗೆ ಎಸೆದು ವ್ಯಾಪಾರಸ್ಥರ ಆಕ್ರೋಶ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ರೈತರು ಹಾಗು ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಲಾಕ್​ಡೌನ್​ ಸಡಲಿಕೆ ನಂತರ ವ್ಯಾಪಾರ ವಹಿವಾಟು ಸಹಜ ಸ್ಥಿತಿಗೆ ಮರಳುವುದರೊಳಗೆ ಮತ್ತೆ ಕರ್ಫ್ಯೂ ಜಾರಿಯಾಗಿದ್ದರಿಂದ ರೈತರು ಮತ್ತು ವ್ಯಾಪಾರಸ್ಥರನ್ನು ಸಂಕಷ್ಟಕ್ಕೆ ತಳ್ಳಿದೆ. ಮಧ್ಯಾಹ್ನ 2 ಗಂಟೆಯವರೆಗೂ ತರಕಾರಿ ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಇದ್ದರೂ ಮಾರ್ಕೆಟ್​ಗೆ ಜನ ಬರುತ್ತಿಲ್ಲ ಎಂದು ಗೋಳಾಡುತ್ತಿರುವ ವ್ಯಾಪಾರಸ್ಥರು, ದಿಢೀರ್​ ಕರ್ಫ್ಯೂನಿಂದ ವಹಿವಾಟು ಬಂದ್​ ಆಗಿದೆ ಎನ್ನುತ್ತಿದ್ದಾರೆ. ಇನ್ನು ಕಲಬುರಗಿ …

Read More »

ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ

ಬೆಂಗಳೂರು: ಅಡ್ಡಾದಿಡ್ಡಿ ಆಟೋ ಚಲಾಯಿಸಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ನಡೆದಿದೆ. ಆಟೋ ಚಾಲಕ ಸೇರಿ ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಕಿರಣ್ (26), ಪ್ರಯಾಣಿಕರಾದ ಅನ್ವರ್ ಹುಸೇನ್ (28) ಮತ್ತು ರಾಹುಲ್( 21) ಮೃತ ದುರ್ದೈವಿಗಳು. ಇನ್ನು ಆಟೋದಲ್ಲಿದ್ದ ವಾಸಪ್ಪ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂವರು ಪ್ರಯಾಣಿಕರನ್ನ ಕೂರಿಸಿಕೊಂಡು …

Read More »