Breaking News

ರಾಜ್ಯ

ಜಿಎಸ್​ಟಿ ಬಾಕಿ ಹಣ 11,400 ಕೋಟಿ ರೂ. ನೀಡಲು ಕೇಂದ್ರ ಒಪ್ಪಿಗೆ; ಕೊರೊನಾ ಲಸಿಕೆ ಪೂರೈಕೆ ಹೆಚ್ಚಿಸುವ ಭರವಸೆ: ಸಿಎಂ ಬೊಮ್ಮಾಯಿ

ದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದು, ಅಲ್ಲಿ ಕೇಂದ್ರ ಆರೋಗ್ಯ ಸಚಿವ ಮನಸುಖ್​ ಮಾಂಡವೀಯ ಜತೆ ಚರ್ಚೆ ನಡೆಸಿ ಮುಂದಿನ ತಿಂಗಳಿಂದ ರಾಜ್ಯಕ್ಕೆ 1.5 ಕೋಟಿ ಡೋಸ್​ ಕೊರೊನಾ ಲಸಿಕೆ ಪೂರೈಸಲು ಮನವಿ ಸಲ್ಲಿಸಿದ್ದಾರೆ. ಕೊರೊನಾ ಲಸಿಕೆ ಬಗ್ಗೆ ಆರೋಗ್ಯ ಸಚಿವರ ಜತೆ ಚರ್ಚಿಸಿರುವ ಅವರು, ಪ್ರಸ್ತುತ 60ರಿಂದ 65 ಲಕ್ಷ ಡೋಸ್​ ಲಸಿಕೆಯಷ್ಟಿರುವ ಪೂರೈಕೆಯನ್ನು 1.5 ಕೋಟಿ ಡೋಸ್​ಗೆ ಹೆಚ್ಚಳ ಮಾಡಲು ಬೇಡಿಕೆ ಇಟ್ಟಿದ್ದಾಗಿ …

Read More »

ಮಹಿಳೆಯರ ಜೊತೆ ಅಸಭ್ಯ ವರ್ತನೆ; ಸಾರ್ವಜನಿಕರಿಂದ ಧರ್ಮದೇಟು

ರಾಯಚೂರು: ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ನಗರದ ನಗರದ ಆಶಾಪುರ ರಸ್ತೆಯಲ್ಲಿ ನಡೆದಿದೆ. ರಸ್ತೆಯಲ್ಲಿ ಒಂಟಿಯಾಗಿ ಓಡಾಡ್ತಿದ್ದ ಒಂಟಿ ಮಹಿಳೆಯರನ್ನು ಹಿಂಬಾಲಿಸುತ್ತಿದ್ದ ಅಪರಿಚಿತನೋರ್ವ, ಮಹಿಳೆಯರ ಸೀರೆ ಎಳೆಯಲು ಪ್ರಯತ್ನ ಮಾಡ್ತಿದ್ದ ಎನ್ನಲಾಗಿದೆ. ಇದರಿಂದ ಗಾಬರಿಗೊಂಡಿದ್ದ ಕೆಲವು ಮಹಿಳೆಯರು ಈತ ಮೇಲೆ ಆರೋಪ ಮಾಡಿದ್ದರು. ವ್ಯಕ್ತಿಯ ಅಸಭ್ಯ ವರ್ತನೆಯಿಂದ ರೊಚ್ಚಿಗೆದ್ದ ಸ್ಥಳೀಯರು ಆತನನ್ನು ಮರಕ್ಕೆ ಕಟ್ಟಿ ಹಾಕಿ ಧರ್ಮದೇಟು ಕೊಟ್ಟು ಪೊಲೀಸ​ರ ವಶಕ್ಕೆ ನೀಡಿದ್ದಾರೆ.

Read More »

ಗುರುತು ಸಿಗದ ರೀತಿಯಲ್ಲಿರುವ ಮೃತದೇಹ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.

ಬೆಳಗಾವಿ: ಘಟಪ್ರಭಾ ಹಾಗೂ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಮುಂದುವರೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬರ ಶವ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ. ಗೋಕಾಕ್ ತಾಲೂಕಿನ ಮಳವಂಕಿ ಗ್ರಾಮದಲ್ಲಿ ಘಟಪ್ರಭಾ ನದಿಯಲ್ಲಿ ಶವವೊಂದು ತೇಲಿ ಬಂದಿದ್ದು, ಕೊಳೆತು ಗುರುತು ಸಿಗದ ರೀತಿಯಲ್ಲಿ ಪತ್ತೆಯಾಗಿದೆ.

Read More »

ಅಕ್ರಮ ಗಣಿಗಾರಿಕೆ ವಿರುದ್ಧ ಅಮಿತ್ ಶಾಗೆ ದೂರು; ತನಿಖೆಗೆ ಒತ್ತಾಯಿಸಿದ ಸುಮಲತಾ

ನವದೆಹಲಿ: ಕೆ.ಆರ್.ಎಸ್. ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೂರು ನೀಡಿದ್ದಾರೆ. ನವದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಸುಮಲತಾ, ಅಕ್ರಮ ಗಣಿಗಾರಿಕೆಯಿಂದ ಕೆ.ಆರ್.ಎಸ್ ಗೆ ಆಗುತ್ತಿರುವ ಅಪಾಯ, ಸುತ್ತಮುತ್ತಲಿನ ರೈತರು, ಪರಿಸರ, ಅರಣ್ಯ ಹಾಗೂ ಪ್ರಾಣಿ ಸಂಕುಲಕ್ಕೆ ಆಗುತ್ತಿರುವ ತೊಂದರೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.   ಕೆ.ಆರ್.ಎಸ್ ಡ್ಯಾಂ ಬಿರುಕು …

Read More »

ದೊಡ್ಡ ಗಂಡಾಂತರದ ಬಗ್ಗೆ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಶಾಕಿಂಗ್ ಮಾಹಿತಿ

ಕೋಲಾರ: ದೇಶಕ್ಕೆ ಸಂಕ್ರಾಂತಿಯೊಳಗೆ ದೊಡ್ಡ ಗಂಡಾಂತರವಿದೆ ಎಂದು ತಮ್ಮ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕಾರ್ತಿಕ ಮಾಸದವರೆಗೆ ಜಲ ಗಂಡಾಂತರವಿದೆ. ದೇಶದಲ್ಲಿ ದೊಡ್ಡ ಅವಘಡ ಉಂಟಾಗಲಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಲಿದ್ದು ಕೆರೆ ಕಟ್ಟೆಗಳೆಲ್ಲ ತುಂಬಲಿವೆ ಎಂದು ಅವರು ತಿಳಿಸಿದ್ದಾರೆ. ರಾಜಕಾರಣದ ಬಗ್ಗೆ ಆಷಾಢದಲ್ಲಿ ಅಶುಭ ಹೇಳುವುದು ಬೇಡ. ಪೂರ್ಣ ಪ್ರಮಾಣದ ಮಂತ್ರಿಮಂಡಲ ರಚನೆಯಾದ ನಂತರ, ಕಾರ್ತಿಕಮಾಸ ಕಳೆದ ನಂತರ ಹೇಳುತ್ತೇನೆ. ಕೊರೋನಾ …

Read More »

ಬಿ ಎಸ್ ವೈ ಬಿಜೆಪಿಯಲ್ಲಿಯೇ ಇದ್ದವರು. ಅವರ ಮಾತನ್ನೇ ಕೇಳಿಲ್ಲ, ಇನ್ನು ಜನತಾದಳದಿಂದ ಬಿಜೆಪಿಗೆ ಹೋದ ಬೊಮ್ಮಾಯಿ ಮಾತು ಕೇಳ್ತಾರಾ?

ಮೈಸೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯದ ಮೇಲೆ ಅನ್ಯಾಯವಾದರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರೇ ಏನೂ ಮಾಡಲು ಸಾಧ್ಯವಾಗಿಲ್ಲ. ಇನ್ನು ಹೊಸ ಸಿಎಂ ಬಸವರಾಜ ಬೊಮ್ಮಾಯಿ ಏನು ಮಾಡುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತರುವ ವಿಚಾರವಾಗಿ ಮಾತನಾಡುತ್ತಾ, ಕೇಂದ್ರದಿಂದ ಜಿ ಎಸ್ ಟಿ ಪಾಲು ತರಲಾಗಿಲ್ಲ. ಜನರಿಗೆ ಈವರೆಗೆ ಪರಿಹಾರದ ಹಣವೂ ಸಿಕ್ಕಿಲ್ಲ. ಮಾಜಿ ಸಿಎಂ ಯಡಿಯೂರಪ್ಪನವರಿಂದಲೇ ಏನೂ ಸಾಧ್ಯವಾಗಿಲ್ಲ …

Read More »

ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್

ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ. ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, ಅಮಿತ್ ಶಾ, ಬಿ.ಎಸ್.ವೈ. ಆಡಳಿತದ ಬಿಜೆಪಿಯ ಸಿದ್ಧಾಂತದಡಿ ಮಾಡಿದ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗಿರುವುದಿಲ್ಲ ಎಂದು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಸರ್ಕಾರವನ್ನು ಜನ ತಿರಸ್ಕರಿಸಿದ್ದರು. ಅವರಿಗೆ ಯಾವ …

Read More »

ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ.

ಬೆಳಗಾವಿ – ಬೆಳಗಾವಿಯಲ್ಲಿ ಈ ಬಾರಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗೆ ಅವಕಾಶವಿಲ್ಲ. ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದೇವಸ್ಥಾನಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಬಹುದು ಮತ್ತು ಮನೆಗ ಮನೆಗಳಲ್ಲಿ ಮೂರ್ತಿ ಸ್ಥಾಪಿಸಬಹುದು ಎಂದು ತಿಳಿಸಿದ್ದಾರೆ. ಪಕ್ಕದ ಮಹಾರಾಷ್ಟ್ರದಲ್ಲಿ ಕೊರೋನಾ ಏರುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆಳಗಾವಿಯಲ್ಲಿ ಸಧ್ಯ 567 ಸಕ್ರೀಯ ಪ್ರಕರಣಗಳಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಚಿಕ್ಕೋಡಿಯಲ್ಲಿ ಕೊರೋನಾ …

Read More »

ಸಚಿವ ಸಂಪುಟ ಪುನರಚನೆ ವರಿಷ್ಠರ ಸೂಚನೆಯಂತೆ ಮಾಡಲಾಗುವುದು: ಬೊಮ್ಮಾಯಿ

ದೆಹಲಿ: ಸಚಿವ ಸಂಪುಟ ಪುನರಚನೆ ಬಗ್ಗೆ ಹೈಕಮಾಂಡ್ ಭೇಟಿ ವೇಳೆ ಯಾವುದೇ ಚರ್ಚೆಯಾಗಿಲ್ಲ. ವರಿಷ್ಠರ ಸೂಚನೆಯಂತೆ ಸಂಪುಟ ರಚನೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಬೊಮ್ಮಾಯಿ, ಸಂಪುಟ ರಚನೆ ವಿಚಾರವಾಗಿ ಹೈಕಮಾಂಡ್ ಸೂಚನೆಗೆ ಕಾಯುತ್ತಿದ್ದೇನೆ. ಮಧ್ಯಾಹ್ನದೊಳಗೆ ಲಿಸ್ಟ್ ಬರುತ್ತೋ ಇಲ್ವೋ ಗೊತ್ತಿಲ್ಲ. ಈ ಬಗ್ಗೆ ನನಗಿನ್ನೂ ಯಾವುದೇ ಕರೆ ಬಂದಿಲ್ಲ. ಸೂಚನೆ ಬಂದ ಕೂಡಲೇ ಸಚಿವರ ಪಟ್ಟಿ ಬಗ್ಗೆ ಚರ್ಚಿಸುತ್ತೇನೆ ಎಂದರು. ಇಂದು ಬೆಂಗಳೂರಿಗೆ …

Read More »

ಅಳ್ತಾರೆ, ಗಂಡನ ಜತೆ ಜಗಳವಾಡ್ತಾರೆ ಅನ್ನೋ ಸುದ್ದಿ ಮಾನಹಾನಿ ಆಗತ್ತೇನ್ರಿ? ಶಿಲ್ಪಾ ವಿರುದ್ಧ ಕೋರ್ಟ್​ ಗರಂ

ಮುಂಬೈ: ಬ್ಲೂ ಫಿಲ್ಮ್ಂ ಪ್ರಕಣದಲ್ಲಿ ಸಿಲುಕಿರುವ ಉದ್ಯಮಿ ರಾಜ್​ ಕುಂದ್ರಾ ಪೊಲೀಸರ ವಶದಲ್ಲಿದ್ದರೆ, ಇತ್ತ ಅವರ ಪತ್ನಿ ನಟಿ ಶಿಲ್ಪಾ ಶೆಟ್ಟಿ ಬಾಂಬೆ ಹೈಕೋರ್ಟ್​ ಮೊರೆ ಹೋಗಿದ್ದಾರೆ. ಅವರು ಕೋರ್ಟ್​ಗೆ ಅರ್ಜಿ ಸಲ್ಲಿಸಿರುವುದು ಮಾಧ್ಯಮಗಳ ವಿರುದ್ಧ. ಪತಿ ರಾಜ್‌ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕುರಿತು ಸುಳ್ಳು ಮತ್ತು ಚಾರಿತ್ರ್ಯ ಹರಣ ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ. ಜತೆಗೆ ಶಿಲ್ಪಾ ಅಳುತ್ತಿದ್ದಾರೆ, ಗಂಡನ ಜತೆ ಜಗಳವಾಡುತ್ತಿದ್ದಾರೆ ಇತ್ಯಾದಿಯಾಗಿ ಮಾನಹಾನಿಯಾಗುವಂಥ ಸುದ್ದಿಗಳನ್ನು …

Read More »