ಬೆಂಗಳೂರು: ನೂತನ ಸಿಎಂ ಬಸವರಾಜ್ ಬೊಮ್ಮಾಯಿಯವರ ಆರ್. ಟಿ ನಗರದ ಮನೆ ಸುತ್ತಮುತ್ತ ಬೈಕ್ ವ್ಹೀಲಿಂಗ್ ಮಾಡುವ ಪುಂಡರ ಹಾವಳಿ ಹೆಚ್ಚಾಗಿದೆ. ಸಿಎಂ ಮನೆ ಮುಂದೆ ವ್ಹೀಲಿಂಗ್ ಮಾಡುತ್ತಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದು ಬೈಕ್ಗಳನ್ನ ಸೀಜ್ ಮಾಡಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಮನೆ ಸುತ್ತಮುತ್ತ ಪೊಲೀಸ್ರ ದಂಡೆ ಇದ್ದರು ಕ್ಯಾರೆ ಎನ್ನದ ಪುಂಡರ ಗುಂಪು ವ್ಹೀಲಿಂಗ್ ಮಾಡುತ್ತಿದ್ದರು. ಡಿಯೋ, ಌಕ್ಟಿವಾ ಬೈಕ್ ಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ಗ್ಯಾಂಗ್ನ್ನು …
Read More »ಮಳೆ ಕಡಿಮೆಯಾದ್ರು ತಗ್ಗದ ಕೃಷ್ಣೆಯ ಅಬ್ಬರ -ನಡುಗಡ್ಡೆಯಲ್ಲಿ ಸಿಲುಕಿದ್ದ 54 ಮಂದಿಯ ರಕ್ಷಣೆ
ಬೆಳಗಾವಿ: ಕಳೆದ ನಾಲ್ಕು ದಿನಗಳಿಂದ ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಕೃಷ್ಣಾ ನದಿಯಲ್ಲಿ ಪ್ರವಾಹ ತಗ್ಗಿಲ್ಲ. ಪರಿಣಾಮ ಜಿಲ್ಲೆಯ ಕೆಲವು ಗ್ರಾಮಗಳು ಸಂಪೂರ್ಣ ಜಲಾವೃತವಾಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಅಥಣಿ ತಾಲೂಕಿನ ಸವದಿ ಗ್ರಾಮದ ನಡುಗಡ್ಡೆಯಲ್ಲಿ ಸಿಲುಕಿದ್ದ 54 ಜನರನ್ನು ಎಸ್ಡಿಆರ್ಎಫ್ ತಂಡ ರಕ್ಷಣೆ ಮಾಡಿದೆ. ಕಾರ್ಯಾಚರಣೆ ನಡೆಸಿದ ಎಸ್ಡಿಆರ್ಎಫ್ ತಂಡ ನಡುಗಡ್ಡೆಯಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದ್ದಾರೆ. #KarnatakaRains UPDATE28/7/21🔸Water-logging/flooding 🔸Belagavi …
Read More »ಗ್ರಾಮದ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದವನಿಗೆ ಬಿಗ್ ಶಾಕ್
ಮಂಡ್ಯ: ಮಹಿಳೆಯೊಂದಿಗೆ ಏಕಾಂತದಲ್ಲಿದ್ದ ಯುವಕನ ಮೇಲೆ ಹಲ್ಲೆ ನಡೆಸಿ 30 ಸಾವಿರ ರೂ. ದೋಚಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸ್ನೇಹಿತರಿಂದಲೇ ಹನಿಟ್ರ್ಯಾಪ್ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಐದು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಗಿರೀಶ್ ಎಂಬಾತ ಮಂಡ್ಯ ಸಮೀಪದ ಕೊತ್ತತ್ತಿ ಹೊರವಲಯದಲ್ಲಿ ಮಹಿಳೆಯೊಂದಿಗೆ ಏಕಾಂತದಲ್ಲಿದ್ದ ವೇಳೆ ರವಿಚಂದ್ರ, ಕಾರ್ತಿಕ್, ಕಿರಣ್, ಮಂಜು ದಾಳಿ ಮಾಡಿ ಹಲ್ಲೆ ನಡೆಸಿದ್ದು, ಹಣ ಕಸಿದುಕೊಂಡು …
Read More »ಯಾವ ಖಾತೆ ಕೊಟ್ಟರೂ ಸಹ ಸಮರ್ಥವಾಗಿ ನಿಭಾಯಿಸುತ್ತೇನೆ: ಶಾಸಕ ರೇಣುಕಾಚಾರ್ಯ ಹೇಳಿಕೆ
ಬೆಂಗಳೂರು:ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ್ರೆ ತಪ್ಪೇನಿಲ್ಲ, ಈಗಲೂ ಯಡಿಯೂರಪ್ಪನವರೇ ನಮ್ಮ ನಾಯಕ ಎಂದು ಎದೆತಟ್ಟಿ ಹೇಳುತ್ತೇನೆ ಎಂದು ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು. ಆರ್.ಟಿ ನಗರದಲ್ಲಿರುವ ಸಿಎಂ ನಿವಾಸಕ್ಕೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿ, ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಆರು ಶಾಸಕರಿದ್ದು, ಜಿಲ್ಲೆಯನ್ನು ಕಡೆಗಣಿಸದಂತೆ ಮನವಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ನಮ್ಮ ಜಿಲ್ಲೆಗೆ ಒಂದು ಸಚಿವ …
Read More »ಮಂತ್ರಿ ಸ್ಥಾನಕ್ಕಾಗಿ ಲಾಬಿ; ಹೈಕಮಾಂಡ್ ಭೇಟಿಗೆ ದೆಹಲಿಗೆ ದೌಡಾಯಿಸಿದ ಹಿರಿಯ ಸಚಿವರು; ಕುತೂಹಲ ಮೂಡಿಸಿದ ಉಮೇಶ್ ಕತ್ತಿ ನಡೆ
ನವದೆಹಲಿ: ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಹಲವು ಹಿರಿಯ ನಾಯಕರಿಗೆ ಸಚಿವ ಸ್ಥಾನ ಕೈತಪ್ಪುವ ಭೀತಿ ಎದುರಾಗಿದ್ದು, ದೆಹಲಿಗೆ ದೌಡಾಯಿಸಿದ್ದಾರೆ. ವರಿಷ್ಠರ ಮೂಲಕ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುವ ಪ್ರಯತ್ನ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಸಚಿವ ಉಮೇಶ್ ಕತ್ತಿ ಹೈಕಮಾಂಡ್ ಭೇಟಿಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ನವದೆಹಲಿಯಲ್ಲಿ ಮಾತನಾಡಿದ ಉಮೇಶ್ ಕತ್ತಿ, ಸಿಎಂ ಬೊಮ್ಮಾಯಿ ನನ್ನನ್ನು ಬಿಟ್ಟು ಸಂಪುಟ ರಚನೆ ಮಾಡಲ್ಲ ಎಂಬ ನಂಬಿಕೆಯಿದೆ. ನಾನು ಈಗಗಾಲೆ 4 …
Read More »ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನನ್ನು ಬಿಟ್ಟು ಸಂಪುಟ ರಚಿಸಿಲ್ಲವೆಂಬ ನಂಬಿಕೆ ಇದೆ.: ಉಮೇಶ್ ಕತ್ತಿ,
ಬೆಂಗಳೂರು : ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬೆನ್ನಲ್ಲೇ ಇದೀಗ ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆಗಳು ಶುರುವಾಗಿದೆ. ಹೊಸ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಸಚಿವ ಸಂಪುಟ ರಚನೆ ಕುರಿತು ಮಾತನಾಡಿದ ಮಾಜಿ ಸಚಿವ ಉಮೇಶ್ ಕತ್ತಿ, ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನನ್ನು ಬಿಟ್ಟು ಸಂಪುಟ ರಚಿಸಿಲ್ಲವೆಂಬ ನಂಬಿಕೆ ಇದೆ. ಈ ಹಿಂದೆ 4 ಬಾರಿ ಮಂತ್ರಿಯಾಗಿದ್ದೇನೆ. ಮುಂದೆಯೂ ಸಚಿವ ಆಗುತ್ತೇನೆ ಎಂಬ ನಂಬಿಕೆ …
Read More »ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್
ಜೆಡಿಎಸ್ ಯುವ ಘಟಕದ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್ ಆಗಿದೆ. ಹೌದು. ಇದೇ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಸಮ್ಮುಖದಲ್ಲಿ ಮಧು ಬಂಗಾರಪ್ಪ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ …
Read More »ಕುತೂಹಲ ಮೂಡಿಸಿದ ಈಶ್ವರಪ್ಪ ಸುದ್ದಿಗೋಷ್ಠಿ:ಶೆಟ್ಟರ್ ರೀತಿಯಲ್ಲೇ ನಿರ್ಧಾರ ಮಾಡ್ತಾರಾ BJPನಾಯಕ
ಶಿವಮೊಗ್: ರಾಜ್ಯದಲ್ಲಿ ಬಸವರಾಜ್ ಬೊಮ್ಮಯಿ ನೂತನ ಮುಖ್ಯಮಂತ್ರಿಯಾಗಿ ನೇಮಕವಾದ ಬಳಿಕ ಬಿಜೆಪಿ ಹಿರಿಯ ನಾಯಕರ ನಡೆಗಳು ಕುತೂಹಲಕ್ಕೆ ಕಾರಣವಾಗಿದೆ. ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಪತ್ರಿಕಾಗೋಷ್ಠಿ ಕರೆದಿದ್ದು, ಕುತೂಹಲ ಮೂಡಿಸಿದೆ. ಬಿಎಸ್ವೈ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದ ನೆಹರು ರಸ್ತೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತನ್ನ ಭವಿಷ್ಯದ ರಾಜಕೀಯ ನಿರ್ಧಾರವನ್ನು ಈಶ್ವರಪ್ಪ ಘೋಷಣೆ ಮಾಡುತ್ತಾರೆ. ಜಗದೀಶ್ ಶೆಟ್ಟರ್ ರೀತಿಯಲ್ಲೆ ನಿರ್ಧಾರ …
Read More »ಬಸವರಾಜ ಬೊಮ್ಮಾಯಿಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಲು ಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ :ಸಿದ್ದರಾಮಯ್ಯ
ಬೆಂಗಳೂರು: ಜವಾಬ್ದಾರಿಯುತ ಪ್ರತಿಪಕ್ಷವಾಗಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ನಮ್ಮ ರಚನಾತ್ಮಕ ಸಹಕಾರದ ಭರವಸೆಯನ್ನು ನೀಡಲು ಬಯಸುತ್ತೇನೆ. ಇದೇ ರೀತಿಯ ಸಹಕಾರ ನಿಮ್ಮ ಪಕ್ಷದಿಂದಲೂ ನಿಮಗೆ ಸಿಗಲಿ ಎಂದು ಹಾರೈಸುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಪ್ರಮಾಣ ವಚನ ಸ್ವೀಕಾರದ ಮೂಲಕ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಅವಕಾಶವನ್ನು ಸಂವಿಧಾನ ಬದ್ದವಾಗಿ ಪಡೆದಿರುವ ಬಸವರಾಜ ಬೊಮ್ಮಾಯಿಯವರಿಗೆ ಹಾರ್ದಿಕ ಅಭಿನಂದನೆಗಳು. ಕಳೆದ 2 ವರ್ಷಗಳಿಂದ …
Read More »ಇಷ್ಟು ದಿನ ನೀವು ಏನು ಮಾಡಿದ್ದೀರಿ? ಎಂಬುದು ನನಗೆ ಬೇಕಿಲ್ಲ. ಆಡಳಿತದಲ್ಲಿ ನಾನು ಏನು ಆದೇಶ ಮಾಡುತ್ತೇನೊ ಅದು ಜಾರಿ ಆಗಲೇ ಬೇಕು: ಬೊಮ್ಮಾಯಿ ಗರಂ! .
ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಗಳ ಮಹತ್ವದ ಸಭೆ ನಡೆಸಿದ್ದಾರೆ. ನಂತರ ರಾಜ್ಯ ಸಚಿವ ಸಂಪುಟ ಸಭೆಯನ್ನೂ ಮಾಡಿದ್ದಾರೆ. ಆದರೆ ಅಧಿಕಾರಿಗಳ ಸಭೆಯಲ್ಲಿ ಮಹತ್ವದ ಸೂಚನೆಗಳನ್ನು ಕೊಡುವ ಮೂಲಕ ತಮ್ಮ ಮುಂದಿನ ಆಡಳಿತದ ಮುನ್ಸೂಚನೆಯನ್ನು ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ. ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. …
Read More »
Laxmi News 24×7