ಪ್ರತಿವರ್ಷ ಮುಂಬೈಯಲ್ಲಿ ಬೀಳುವ ಭಾರಿ ಮಳೆ ವಾತಾವರಣವನ್ನು ನೋಡಲು ಎಷ್ಟು ಸುಂದರ ಗೊಳಿಸುತ್ತದೆಯೋ, ಅಷ್ಟೇ ಭಯಾನಕವಾಗಿಯೂ ಸಹ ಇರುತ್ತದೆ. ಈ ಭಾರಿ ಮಳೆ ಬೀಳುವುದರಿಂದ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ರಸ್ತೆಯಲ್ಲಿ ನಡೆದು ಕೊಂಡು ಹೋಗಿ ಸುರಕ್ಷಿತವಾಗಿ ಒಂದು ಜಾಗಕ್ಕೆ ಸೇರುವುದೇ ಸುಮಾರು ಜನರಿಗೆ ಒಂದು ದೊಡ್ಡ ಸವಾಲಿನ ಕೆಲಸವಾಗಿದೆ. ಇಂತಹ ಮಳೆಯಲ್ಲಿ ಅನೇಕರಿಗೆ ರಸ್ತೆ ಕಾಣದೆ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆಗಳು ಸಹ ನಡೆದಿವೆ. ಮೊಣಕಾಲು ಉದ್ದಕ್ಕೆ ನೀರು ನಿಂತಿದ್ದರೆ ನಡೆದು …
Read More »ಬಿ.ಎಸ್.ಯಡಿಯೂರಪ್ಪ ಕೆಳಗಿಳಿದರು ಅದಕ್ಕೆ ಗಡ್ಡ ತೆಗೆದೆ; ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಾನಾ ಬಗೆಯ ಚರ್ಚೆಗಳು ನಡೆದಿದ್ದು, ಅನೇಕ ಶಾಸಕರು ಈ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು. ಅದರಲ್ಲೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬದಲಾವಣೆಗಾಗಿ ಗಡ್ಡ, ತಲೆ ಕೂದಲು ಬಿಟ್ಟಿದ್ದು, ಹರಕೆ ಹೊತ್ತಿದ್ದರು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿತ್ತು. ಈ ವಿಚಾರವಾಗಿ ಗಡ್ಡ ಬಿಟ್ಟಿರಲ್ಲಾ ಎಂದು ಕೇಳಿದ್ದ ಪ್ರಶ್ನೆಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ …
Read More »ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಬಾರದು : ಬಸವನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು : ಕರ್ನಾಟಕದ 30 ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಗ್ಗೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಸಿಎಂ ಬಸವರಾಜ ಬೊಮ್ಮಾಯಿ ಶ್ಯಾಡೋ ಆಗಿ ಕೆಲಸ ಮಾಡಲ್ಲ. ಬಿ.ಎಸ್.ಯಡಿಯೂರಪ್ಪ ಕುಟುಂಬದಿಂದ ದೂರ ಉಳಿದು ಕೆಲಸ ಮಾಡುತ್ತಾರೆ. ರಾಜ್ಯದಲ್ಲಿ ಬದಲಾವಣೆ ಆಗುತ್ತೆ ನೋಡುತ್ತೀರಿ. ಬಿಜೆಪಿ ಶಾಸಕರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತಾರೆ. ಹೈಕಮಾಂಡ್ …
Read More »ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ
ಬೆಂಗಳೂರು : ಇಂದು ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಪರಮಾಣ ವಚನ ಸ್ವೀಕರಿಸಿದ್ದಾರೆ. ಇಂತಹ ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ ಈ ಕುರಿತಂತೆ ರಾಜಭವನದಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಮಾಜಿ ಸಚಿವ ಆರ್ ಅಶೋಕ್, ಇಂದು ಸಂಜೆ ನೂತನ ಸಿಎಂ ಆದಂತ ಬಸವರಾಜ ಬೊಮ್ಮಾಯಿಯವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ …
Read More »ರೈತರ ಮಕ್ಕಳಿಗೆ ಶಿಷ್ಯ ವೇತನ: ಸಿಎಂ ಬೊಮ್ಮಾಯಿ ಘೋಷಣೆ
ಬೆಂಗಳೂರು: ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ನೂತನ ಮುಖ್ಯಮಂತ್ರಿಗಳು ತಮ್ಮ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ ಜೊತೆ ಕಡತ ಪರಿಶೀಲನೆ ನಡೆಸಿದರು. ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸರ್ಕಾರದ ಹೊಸ ಯೋಜನೆಗಳನ್ನು ಘೋಷಣೆ ಮಾಡಿದರು ಸಿಎಂ …
Read More »ನಿರಾಣಿ, ಬೆಲ್ಲದ್‍ಗೆ ಸಿಎಂ ಕುರ್ಚಿ ತಪ್ಪಿದ್ದು ಹೇಗೆ?
ಬೆಂಗಳೂರು: ಸಿಎಂ ರೇಸ್‍ನಲ್ಲಿದ್ದ ಬೆಲ್ಲದ್, ನಿರಾಣಿ ಪೈಕಿ ಒಬ್ಬರನ್ನು ಹೈಕಮಾಂಡ್ ಅಂತಿಮಗೊಳಿಸಲಿದೆ ಎಂಬ ಮಾತು ಕೇಳಿ ಬಂದಿತ್ತು. ಆದರೆ ಕ್ಲೈಮ್ಯಾಕ್ಸ್‍ನಲ್ಲಿ ಇವರಿಬ್ಬರಿಗೂ ಸಿಎಂ ಪಟ್ಟ ತಪ್ಪಿದ್ದು ಲಾಬಿ ಮಾಡದ ಬೊಮ್ಮಾಯಿ ಅವರಿಗೆ ಒಲಿದಿದೆ. ಮುಖ್ಯಮಂತ್ರಿ ರೇಸ್‍ನಲ್ಲಿದ್ದ ನಿರಾಣಿ ಮತ್ತು ಬೆಲ್ಲದ್ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು. ಅಷ್ಟೇ ಅಲ್ಲದೇ ಇವರಿಬ್ಬರೂ ವಾರಣಾಸಿಗೆ ತೆರಳಿ ಗಂಗೆಯಲ್ಲಿ ಸ್ನಾನ ಮಾಡಿ ಕಾಶಿ ವಿಶ್ವನಾಥನ ದರ್ಶನ ಮಾಡಿದ್ದರು. ಹೀಗಾಗಿ ನಿರಾಣಿ ಮತ್ತು ಬೆಲ್ಲದ್ …
Read More »ಆಗಸ್ಟ್ ತಿಂಗಳಲ್ಲಿ 12 ದಿನ ಬ್ಯಾಂಕ್ ಕಾರ್ಯ ನಿರ್ವಹಿಸಲ್ಲ ಏಕೆಂದ್ರೆ..
ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ . ಭಾರತದಲ್ಲಿ ಬ್ಯಾಂಕ್ ರಜಾ ದಿನಗಳು ಆಯಾ ರಾಜ್ಯಗಳ ಮೇಲೂ ಅವಲಂಬನೆ ಆಗಿರುತ್ತದೆ . ಇನ್ನು ಭಾರತದ ವಿವಿಧ ಭಾಗಗಳಲ್ಲಿ ನಿರ್ಬಂಧಿತ ರಜಾಗಳು ಹಾಗೂ ಗೆಜೆಟೆಡ್ ರಜಾ ದಿನಗಳಿವೆ . ಗೆಜೆಟೆಡ್ ಅಥವಾ ಸಾರ್ವಜನಿಕ ರಜಾ ದಿನಗಳು ದೇಶದಾದ್ಯಂತ ಅನ್ವಯಿಸುತ್ತದೆ. ಬ್ಯಾಂಕ್ ಗಳು ಪ್ರತಿ ತಿಂಗಳ ಎರಡು ಮತ್ತು ನಾಲ್ಕನೇ ಶನಿವಾರ ಹಾಗೂ …
Read More »ರಿಯಾಲಿಟಿ ಶೋ ಜಡ್ಜ್ ಸ್ಥಾನದಿಂದ ಶಿಲ್ಪಾ ಔಟ್? ರಾಜ್ ಕುಂದ್ರ ಪತ್ನಿ ಜಾಗಕ್ಕೆ ಸ್ಟಾರ್ ದಂಪತಿ ಎಂಟ್ರಿ
ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಜುಲೈ 19ರಂದು ರಾಜ್ ಕುಂದ್ರ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪತಿಯ ಬಂಧನದಿಂದ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಮುಜುಗರ ಅನುಭವಿಸಬೇಕಾಗಿದೆ. ಪತಿಯ ಬ್ಲೂ ಫಿಲ್ಮ್ ಪ್ರಕರಣ ಶಿಲ್ಪಾ ಶೆಟ್ಟಿ ಪರಿಣಾಮ ಬೀರಿದೆ. ಇತ್ತೀಚಿಗೆ ಮುಂಬೈ ಪೊಲೀಸರು ಶಿಲ್ಪಾ ಶೆಟ್ಟಿಯನ್ನು ವಿಚಾರಣೆ ನಡೆಸಿದ್ದರು. ಇದೆಲ್ಲದರ ನಡುವೆ …
Read More »ಕಂಗನಾಗೆ ಮುಂಬೈ ಕೋರ್ಟ್ ಖಡಕ್ ಎಚ್ಚರಿಕೆ: ಹಾಜರಾಗಿಲ್ಲ ಅಂದ್ರೆ ವಾರೆಂಟ್ ಜಾರಿ
ಚಿತ್ರಕತೆ ರಚನೆಕಾರ, ಚಿತ್ರಸಾಹಿತಿ, ಮಾಜಿ ಸಂಸದ ಜಾವೇದ್ ಅಖ್ತರ್ ದಾಖಲಿಸಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ಕಂಗನಾ ರಣಾವತ್‌ಗೆ ಮುಂಬೈ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕೊನೆಯ ಎಚ್ಚರಿಕೆ ನೀಡಿದೆ. ಮುಂದಿನ ವಿಚಾರಣೆಗೆ ನಟಿ ಹಾಜರಾಗಿಲ್ಲ ಅಂದ್ರೆ ವಾರೆಂಟ್ ಜಾರಿ ಮಾಡಬೇಕಾಗುತ್ತದೆ ಎಂದು ಕಟುವಾಗಿ ಪ್ರತಿಕ್ರಿಯಿಸಿದೆ. ಕಂಗನಾ ಪರ ವಕೀಲರು, ”ಕಂಗನಾ ದೇಶದಲ್ಲಿಲ್ಲ, ಹಾಗಾಗಿ, ಇಂದಿನ (ಜುಲೈ 27) ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಇಂದಿನ ವಿಚಾರಣೆಗೆ ವಿನಾಯಿತಿ ಕೊಡಿ” ಎಂದು ನ್ಯಾಯಾಲಯಕ್ಕೆ ಕೋರಿದ್ದರು. …
Read More »ಕರ್ನಾಟಕದ 20ನೇ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ
ಬೆಂಗಳೂರು: ಕರ್ನಾಟಕದ 20ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದ ಬಳಿಕ ಹಂಗಾಮಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಐವರು ನಾಯಕರ ಜೊತೆ ನಿಯೋಜಿತ ಸಿಎಂ ಬೊಮ್ಮಾಯಿ ರಾಜಭವನಕ್ಕೆ ಆಗಮಿಸಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. …
Read More »
Laxmi News 24×7