ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …
Read More »ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …
Read More »ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ
ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ. ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …
Read More »ಮನೆಯ ಯಜಮಾನನಿಂದಲೇ ಕಳ್ಳತನ : ಘಟನೆ ನಡೆದ ಕೆಲವೇ ಗಂಟೆಯಲ್ಲಿ ಪ್ರಕರಣ ಭೇದಿಸಿದ ಪೊಲೀಸರು
ಕೊಪ್ಪಳ: ಕೊಪ್ಪಳದಲ್ಲಿನ ಕಲ್ಯಾಣ ನಗರದ ಮನೆಯೊಂದರಲ್ಲಿ ಆಭರಣ, ನಗದು ಕಳ್ಳತನ ಪ್ರಕರಣದಲ್ಲಿ ಮನೆಯ ಯಜಮಾನನೇ ಕಳ್ಳತನ ಮಾಡಿರುವ ವಿಚಿತ್ರ ಘಟನೆ ನಡೆದಿದ್ದು ಈ ಪ್ರಕರಣವನ್ನು ಪೊಲೀಸರು ಕೇವಲ ಕೆಲವೇ ಗಂಟೆಯಲ್ಲಿ ಪತ್ತೆ ಮಾಡಿ ಬಂಧಿತನಿಂದ ನಗದು, ಆಭರಣ ಜಪ್ತಿ ಮಾಡಿದ ಪ್ರಸಂಗವೂ ನಡೆದಿದೆ. ಕೊಪ್ಪಳದ ಕಲ್ಯಾಣ ನಗರದ ಜ್ಯೋತಿ ಶಿವರಾಜ ಭಜೇಂತ್ರಿ ಎನ್ನುವವರು ಊರಿಗೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಕಳ್ಳತನ ನಡೆದಿತ್ತು. ಅವರು ಮನೆಗೆ ಬಂದು ನೋಡಿದಾಗ ಆಭರಣ, ನಗದು …
Read More »ತಗ್ಗಿದ ಮಳೆಯ ಅಬ್ಬರ: ಜಲಾಶಯಗಳಲ್ಲಿ ಹೆಚ್ಚಿದ ನೀರು
ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಬಹುತೇಕ ಕಡೆ ಸೋಮವಾರ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಆರ್ಭಟಿಸಿದ್ದ ಮಳೆ ಸೋಮವಾರ ಸ್ವಲ್ಪ ಬಿಡುವು ನೀಡಿದೆ. ಶಿವಮೊಗ್ಗ ಸೇರಿ ಹಲವೆಡೆ ಬಿಸಿಲ ದರ್ಶನವಾದರೆ, ಸೊರಬ, ಹೊಸನಗರ, ತೀರ್ಥಹಳ್ಳಿ, ಸಾಗರದ ಕೆಲವೆಡೆ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗಿದೆ. ಮಳೆ ಕ್ಷೀಣಿಸಿದರೂ ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ. ಹೊಸನಗರ ತಾಲ್ಲೂಕಿನಲ್ಲಿ 17.1 ಸೆಂ.ಮೀ, ಹುಲಿಕಲ್‌ನಲ್ಲಿ 13.6 ಸೆಂ.ಮೀ, ಮಾಣಿಯಲ್ಲಿ 11.5 …
Read More »ಮಹಿಳೆ ಸುಪಾರಿ ಕೊಲೆ ಶಂಕೆ ; ಗಂಡನ ತೀವ್ರ ವಿಚಾರಣೆ
ಉಡುಪಿ: ಇಲ್ಲಿಗೆ ಸಮೀಪದ ಬ್ರಹ್ಮಾವರದ ಉಪ್ಪಿನಕೋಟೆ ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಜುಲೈ.12 ರಂದು ಸಂಭವಿಸಿದ ವಿಶಾಲಾ ಗಾಣಿಗ ಎಂಬ ಮಹಿಳೆಯ ಕೊಲೆಗೆ ಸಂಬಂದಿಸಿದಂತೆ ಮಹಿಳೆಯ ಪತಿ ರಾಮಕೃಷ್ಣ ಗಾಣಿಗ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣದಲ್ಲಿ ತನಿಖೆಗೆ ಪೊಲೀಸರು ನಾಲ್ಕು ತಂಡ ರಚಿಸಿದ್ದು, ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಹೊರ ರಾಜ್ಯದ ವ್ಯಕ್ತಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳಿಂದ …
Read More »ರಾಜ್ಯ ಶಿಕ್ಷಣ ಇಲಾಖೆಯಿಂದ ಬೆಳಗಾವಿ ಡಿಡಿಪಿಐ ತಂಡಕ್ಕೆ ಅಭಿನಂದನಾ ಸಂದೇಶ
ಬೆಳಗಾವಿ– ಎಸ್ಎಸ್ಎಲ್ ಸಿ ಪರೀಕ್ಷೆಯ ಮೊದಲ ಹಂತದ ಯಶಸ್ಸಿನ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ಇಲಾಖೆ ಬೆಳಗಾವಿ ಡಿಡಿಪಿಐ ಮತ್ತು ಅವರ ಸಂಪೂರ್ಣ ತಂಡಕ್ಕೆ ಅಭಿನಂದನೆ ಸಲ್ಲಿಸಿದೆ. ಈ ಕುರಿತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ಕೆ. ಎಸ್. ಕರಿಚಣ್ಣವರ ಸಂದೇಶ ಕಳಿಸಿದ್ದಾರೆ. ಅವರ ಸಂದೇಶ ಹೀಗಿದೆ – “ಬೆಳಗಾವಿ ಜಿಲ್ಲೆಯಾದ್ಯಂತ ಇಂದು ದಿ: ೧೯-೦೭-೨೦೨೧ ರಂದು ನಡೆದ SSLC ಪರೀಕ್ಷೆಯ ಯಶಸ್ಸಿಗೆ ಕಾರಣರಾದ ಉಪ ನಿರ್ದೇಶಕರು(ಆಡಳಿತ) ಹಾಗೂ ತಂಡ, (ಅಭಿವೃದ್ಧಿ) …
Read More »3 ದಿನಗಳಲ್ಲಿ ದೇವಸ್ಥಾನಗಳಲ್ಲಿ ಎಲ್ಲ ಸೇವೆಗೆ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ
ದೇವಸ್ಥಾನಗಳಲ್ಲಿ ಎಲ್ಲ ಸೇವೆಗಳು ಮತ್ತು ಅನ್ನಪ್ರಸಾದ ವಿತರಣೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಅನುಮತಿ ನೀಡಲಾಗು ವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೋಮವಾರ ಕೊರ್ಗಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದ ಅವರು ಉದಯವಾಣಿ ಜತೆ ಮಾತನಾಡಿದರು. ಧ್ವನಿ ಸುರುಳಿ ಬಗ್ಗೆ ಶಂಕೆೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಾಮಾನ್ಯ ಕಾರ್ಯ ಕರ್ತನಾಗಿ ಬಂದು ರಾಜ್ಯದ …
Read More »ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್‍ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್‍ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ …
Read More »ವಿದ್ಯಾಕಾಶಿ ಧಾರವಾಡದಲ್ಲಿ SSLC ಪರೀಕ್ಷೆ : ವಿದ್ಯಾರ್ಥಿಗಳಿಗೆ ಚಾಕೊಲೇಟ್ ಸ್ವಾಗತ
ಧಾರವಾಡ : ಜಿಲ್ಲೆಯಲ್ಲಿ ಎಸ್‌ಎಸ್‌ಎಲಸಿ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶುಭ ಹಾರೈಸಿದ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ರೆಡ್ ಕಾರ್ಪೆಟ್ ಹಾಸಿ, ಚಾಕೊಲೇಟ್ ನೀಡಿ ಸ್ವಾಗತಿಸಿ ಗಮನ ಸೆಳೆದಿವೆ. ಇಲ್ಲಿನ.ಮಾಳಮಡ್ಡಿಯಲ್ಲಿರುವ ಕೆ.ಇ.ಬೋರ್ಡ್ ಶಾಲೆಯ ಆಡಳಿತ ಮಂಡಳಿಯ ಸದಸ್ಯರೆಲ್ಲಾ ಪರೀಕ್ಷೆ ಬರೆಯಲು ಬಂದ ಎಲ್ಲಾ ವಿದ್ಯಾರ್ಥಿಗಳಿಗೆ ಚಾಕೊಲೇಟ್ ನೀಡಿ ಅವರಿಗೆ ಸ್ವಾಗತಿಸಿದರು. ಶಾಲೆಯ ದ್ವಾರ ಬಾಗಿಲಿಗೆ ಬಲೂನಿನಿಂದ ಅಲಂಕಾರ ಮಾಡಿ, ತಳಿರು ಕಟ್ಟಿಸಿಂಗರಿಸಲಾಗಿತ್ತು. ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳುಅಂಜಿಕೊಳ್ಳುವ ಅಗತ್ಯವಿಲ್ಲ. …
Read More »
Laxmi News 24×7