ಕಾರವಾರ: ಫೇಸ್‌ಬುಕ್‌ನಲ್ಲಿ ಮಕ್ಕಳ ಅಶ್ಲೀಲ ವಿಡಿಯೊ ಅಪ್‌ಲೋಡ್ ಮಾಡಿದವರಿಗೆ, ಅದನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡವರಿಗೆ (ಶೇರ್) ಪೊಲೀಸ್ ಇಲಾಖೆಯಿಂದ ಬಿಸಿ ಮುಟ್ಟತೊಡಗಿದೆ. ಒಂದೊಂದೇ ಪ್ರಕರಣಗಳನ್ನು ಹುಡುಕಿ ತೆಗೆದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಮಕ್ಕಳಿಗೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯದ, ಅಶ್ಲೀಲ ವಿಡಿಯೊಗಳನ್ನು ನೋಡುವುದೂ ಭಾರತೀಯ ದಂಡಸಂಹಿತೆಯ ಪ್ರಕಾರ ಅಪರಾಧ. ಅದರಲ್ಲೂ ಫೇಸ್‌ಬುಕ್, ವಾಟ್ಸ್‌ಆಯಪ್‌ನಂಥ ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದು, ಡೌನ್‌ಲೋಡ್ ಮಾಡುವುದು ಕಠಿಣ ಶಿಕ್ಷಾರ್ಹ ಅಪರಾಧವಾಗಿದೆ. ಜಿಲ್ಲೆಯಲ್ಲಿ ಒಂದು ವರ್ಷದ …
Read More »ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದ ವ್ಯಕ್ತಿ ಅಧಿಕಾರಿಗಳ ಕಣ್ತಪ್ಪಿಸಲು ಮಾಡಿದ್ದೇನು ಗೊತ್ತಾ…?
ಮನೆಗೆ ಹಾಕಲಾಗಿದ್ದ ಅಕ್ರಮ ವಿದ್ಯುತ್ ಸಂಪರ್ಕವನ್ನ ಕಡಿತಗೊಳಿಸಲು ವ್ಯಕ್ತಿಯೊಬ್ಬ ಹಾವಿನಂತೆ ತೆವಳುತ್ತಾ ಮನೆಯ ಛಾವಣಿ ತಲುಪಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಮುರಾದ್ನಗರದಲ್ಲಿ ಅಕ್ರಮ ವಿದ್ಯುತ್ ಸಂಪರ್ಕ ಹೊಂದಿದ್ದ ಮನೆಯ ಮೇಲೆ ದಾಳಿ ನಡೆಸಿದ ವೇಳೆ ವಿದ್ಯುತ್ ಇಲಾಖೆ ಸಿಬ್ಬಂದಿ ಈ ವಿಡಿಯೋವನ್ನ ಚಿತ್ರೀಕರಿಸಿದ್ದಾರೆ. ತಮ್ಮ ಮನೆಗೆ ವಿದ್ಯುತ್ ಇಲಾಖೆ ಅಧಿಕಾರಿಗಳು ದಾಳಿ ಮಾಡ್ತಿದ್ದಾರೆ ಎಂಬ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ವ್ಯಕ್ತಿ ಹಾವಿನಂತೆ ತೆವಳುತ್ತಾ …
Read More »ಪುಡ್ಕಿಟ್ ವಿತರಣೆಯಲ್ಲಿ ನೂಕಾಟ ಉಂಟಾಗಿ ಗಲಾಟೆ ಆರಂಭ
ಚಿಕ್ಕಬಳ್ಳಾಪುರ: ಫುಡ್ಕಿಟ್ ವಿತರಣೆ ಸಂದರ್ಭದಲ್ಲಿ ಜನ ಕಿತ್ತಾಟ ನಡೆಸಿ ಕಿಟ್ಗಳನ್ನು ಹೊತ್ತೊಯ್ದ ಘಟನೆ ಜಿಲ್ಲೆಯ ಬಾಗೇಪಲ್ಲಿಯಲ್ಲಿ ನಡೆದಿದೆ. ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಇಂದು ಪಟ್ಟಣದ ಶಾದಿ ಮಹಲ್ನಲ್ಲಿ ಪುಡ್ಕಿಟ್ ವಿತರಣೆ ಕಾರ್ಯಕ್ರಮ ಆಯೋಜಿಸಿದ್ದರು. ಫುಡ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗಮಿಸಿದ್ದರು. ಸಾಂಕೇತಿಕವಾಗಿ ಪುಡ್ಕಿಟ್ಗೆ ಚಾಲನೆ ನೀಡಿ ನಾಯಕರು ತೆರಳಿದ ಬಳಿಕ ಶಾಸಕರು ಪುಡ್ಕಿಟ್ ವಿತರಿಸಲು ಆರಂಭಿಸಿದ್ದಾರೆ. ಈ …
Read More »ಕಲ್ಯಾಣ ಕರ್ನಾಟಕಕ್ಕೆ ಎಲ್ಲಾ ವಿಚಾರದಲ್ಲೂ ಅನ್ಯಾಯ
ಯಾದಗಿರಿ: ಕಲ್ಯಾಣ ಕರ್ನಾಟಕಕ್ಕೆ ರಾಜಕೀಯ ಸ್ಥಾನಮಾನ ಸೇರಿ ಎಲ್ಲಾ ವಿಚಾರಗಳಲ್ಲೂ ಅನ್ಯಾಯವಾಗಿದೆ ಎಂದು ಶಾಸಕ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಜುಗೌಡ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯ ಸುರಪುರ ನಗರದ ತಮ್ಮ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್ ಸ್ ಡ್ಯಾಮ್ ಬಿರುಕು ವಿಷಯದಲ್ಲಿ ನಡೆಯುತ್ತಿರುವ ರಾಜಕೀಯ ವಾಕ್ಸಮರದ ಕುರಿತು ಪ್ರತಿಕ್ರಿಯಿಸಿದ ಅವರು ವೈಯಕ್ತಿಕ ಹೇಳಿಕೆಗಳು ಸರಿಯಲ್ಲ. ಸುಮಲತಾ ಅವರು ಗಣಿಗಾರಿಕೆಯಿಂದ ಮುಂದೆ ಅನಾಹುತ ಆಗಬಹುದು ಎಂದು …
Read More »ಮಳೆ ಪ್ರಾರ್ಥಿಸಿ ಕತ್ತೆ ಮದುವೆ ಮಾಡಿದ ಗ್ರಾಮಸ್ಥರು
ಚಿತ್ರದುರ್ಗ: ಕತ್ತೆ ಮದುವೆ ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆಯಿಂದ ಕೋಟೆ ನಾಡಿನಲ್ಲಿ ಕತ್ತೆ ಮದುವೆಯನ್ನು ಮಾಡಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥಿಸಿದ್ದಾರೆ. ಜಿಲ್ಲೆಯ ಈಚಲನಾಗೇನಹಳ್ಳಿಯಲ್ಲಿ ಸಮೃದ್ಧ ಮಳೆ ಬೆಳೆಗಾಗಿ ಕತ್ತೆ ಮದುವೆ ಮಾಡಿ ವರುಣನಿಗೆ ಪ್ರಾರ್ಥನೆ ಸಲ್ಲಿಸಲಾಗಿದೆ. ತುಂತುರು ಮಳೆಯ ಸಂದರ್ಭದಲ್ಲಿ ಮಳೆಯಾಗದಿದ್ದರೆ ಮಳೆಗಾಗಿ ಮೊರೆಯಿಟ್ಟು ಸಾಂಪ್ರದಾಯಿಕವಾಗಿ ಕತ್ತೆಗಳ ಮದುವೆ ಮಾಡಿಸಿ, ಊರಿನ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮಾಡಿ ದೇವರಲ್ಲಿ ಮಳೆಯಾಗುವಂತೆ ಬೇಡಿಕೊಳ್ಳುವ ಈ ವಿಶೇಷ …
Read More »ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ನವದೆಹಲಿ – ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಯುವಮೋರ್ಚಾ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಈ ಆದೇಶ ಹೊರಡಿಸಿದ್ದಾರೆ. 7 ಜನ ಉಪಾಧ್ಯಕ್ಷರು, 3 ಪ್ರಧಾನ ಕಾರ್ಯದರ್ಶಿ, 7 ಕಾರ್ಯದರ್ಶಿ ಸೇರಿದಂತೆ ಒಟ್ಟೂ 22 ಜನರು ಪಟ್ಟಿಯಲ್ಲಿದ್ದಾರೆ.
Read More »ನಾಡ ಪಿಸ್ತೂಲು ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್ ಸೆರೆ
ಬೆಂಗಳೂರು, ಜು. 14: ಮಹಾರಾಷ್ಟ್ರದ ಶಿರಡಿಯಿಂದ ನಾಡ ಪಿಸ್ತೂಲು ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಮೂವರು ರೌಡಿ ಶೀಟರ್‌ಗಳನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಮೂರು ನಾಡ ಪಿಸ್ತೂಲು ಹಾಗೂ 24 ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಗ್ಗಡೆ ನಗರದ ನಿವಾಸಿಗಳಾದ ಫಯಾಜ್ ಉಲ್ಲಾ, ಮಹಮದ್ ಆಲಿ, ಸಯ್ಯದ್ ಸಿರಾಜ್ ಅಹಮದ್ ಬಂಧಿತ ಆರೋಪಿಗಳು. ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಫಯಾಜ್ ವುಲ್ಲಾ ವಿರುದ್ಧ ಈಗಾಗಲೇ ಆರು ಪ್ರಕರಣ ದಾಖಲಾಗಿವೆ. …
Read More »ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿಗಳು ಹಾಗೂ ವಿಧಾನಸಭೆಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005ರ ಸೆಕ್ಷನ್ 3 ಮತ್ತು 4 ರಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ ಸರ್ಕಾರವು ಇದುವರೆಗೂ ಕೂಡ ಅಧಿವೇಶನ ನಡೆಸಲು ಯಾವುದೆ ಕ್ರಮಗಳನ್ನು ಕೈಗೊಳ್ಳದಿರುವುದು …
Read More »ಕೋವಿಡ್ ನಿಂದ ಮೃತಪಟ್ಟ ರೈತರ ಸಾಲ ಮನ್ನಾ.!
ಬೆಂಗಳೂರು: ಕೊರೊನಾ ಸೋಂಕಿನಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಕೋವಿಡ್ ಗೆ ಬಲಿಯಾದ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆಸಿದೆ. ಈ ಕುರಿತು ಸಚಿವ ಎಸ್.ಟಿ.ಸೋಮಶೇಖರ ಮಾಹಿತಿ ನೀಡಿದ್ದು, ಕೊರೋನಾದಿಂದ ಮೃತಪಟ್ಟ 10187 ರೈತರ 79.47 ಕೋಟಿ ರೂ. ಸಾಲ ಮನ್ನಾ ಮಾಡುವ ಬಗ್ಗೆ ಸಿಎಂ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ 3-4 ದಿನಗಳಲ್ಲಿ ಅಪೆಕ್ಸ್, ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆ …
Read More »ನೆಗೆಟಿವ್ ರಿಪೋರ್ಟ್ ಇಲ್ಲದಿದ್ದಲ್ಲಿ ಬಸ್ ವಾಪಸ್
ಮಹಾರಾಷ್ಟ್ರದಲ್ಲಿ ಕೊರೋನಾ, ಡೆಲ್ಟಾ ಪ್ಲಸ್ ವೈರಸ್ ಆತಂಕ ಹೆಚ್ಚುತ್ತಿದ್ದಂತೆ ಬೆಳಗಾವಿ ಗಡಿಯಲ್ಲಿ ತಪಾಸಣೆ ಹೆಚ್ಚಿಸಲಾಗಿದೆ. ಮಹಾರಾಷ್ಟ್ರದಿಂದ ಬರುವ ಪ್ರತಿಯೊಂದು ವಾಹನವನ್ನೂ ತಪಾಸಿಸಲಾಗುತ್ತಿದೆ. ವಾಹನದಲ್ಲಿದ್ದವರು ನೆಗೆಟಿವ್ ರಿಪೋರ್ಟ್ ಹೊಂದಿದ್ದಾರಾ ಎನ್ನುವುದನ್ನು ಚೆಕ್ ಮಾಡಲಾಗುತ್ತಿದೆ. ನೆಗೆಟಿವ್ ರಿಪೋರ್ಟ್ ಇಲ್ಲದಿದ್ದಲ್ಲಿ ಅವರನ್ನು ಕೆಳಗಿಳಿಸಲಾಗುತ್ತಿದೆ. ಮಿರಜ್ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಬಸ್ ನಲ್ಲಿ ಸಾಮಾಜಿಕ ಅಂತರ ಪಾಲಿಸದಿರುವ ಮತ್ತು ಕೆಲವರಲ್ಲಿ ನೆಗೆಟಿವ್ ರಿಪೋರ್ಟ್ ಇಲ್ಲದ ಹಾಗೂ ವ್ಯಾಕ್ಸಿನೇಶನ್ ಮಾಡಿಸದ ಕಾರಣಕ್ಕಾಗಿ ಬಸ್ ವಾಪಸ್ …
Read More »
Laxmi News 24×7