Breaking News

ರಾಜ್ಯ

ಉತ್ತರಕನ್ನಡದಲ್ಲಿ ಭಾರಿ Heavy rain ವರ್ಷಧಾರೆ : ಜನರಲ್ಲಿ ಆತಂಕ

ಕಾರವಾರ : ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು, ನಿನ್ನೆ ರಾತ್ರಿಯಿಂದ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಜಿಲ್ಲೆಯ ಕಾರವಾರ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ನಿನ್ನೆ ಮಧ್ಯಾಹ್ನದಿಂದ ಜಿಲ್ಲೆಯಲ್ಲಿ ವರ್ಷಧಾರೆ ಆರಂಭವಾಗಿದ್ದು, ಇಂದು ಕೂಡ ಮುಂದುವರೆದಿದೆ. ಕಾರವಾರದಲ್ಲಿ ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವ ಕಾರಣ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಇನ್ನು ಅರಬ್ಬೀ ಸಮುದ್ರದಲ್ಲಿ …

Read More »

ವ್ಯಕ್ತಿಯೊಬ್ಬರ ತಲೆಗೆ ಡಿಕೆಎಸ್ ಬಾರಿಸಿದ ಬೆನ್ನಲ್ಲೇ ವೈರಲ್​ ಆಯ್ತು ಸಿದ್ದರಾಮಯ್ಯ ಫೋಟೋ

ಬೆಂಗಳೂರು: ಕಳೆದ ಎರಡು ದಿನಗಳಿಂದ ಸೋಶಿಯಲ್ ಮಿಡಿಯಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರು ವ್ಯಕ್ತಿಯೊಬ್ಬರ ತಲೆಗೆ ಹೊಡೆಯುವ ದೃಶ್ಯವೊಂದು ವೈರಲ್ ಆಗುತ್ತಿದೆ. ಡಿ.ಕೆ ಶಿವಕುಮಾರ್ ಕೈ ಮಾಡಿರುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್​ ಕಾರ್ಯಕರ್ತನೊಬ್ಬ ಸಿದ್ದರಾಮಯ್ಯಯ ಹೆಗಲ ಮೇಲ ಕೈಹಾಕಿ ಸೆಲ್ಫಿ ತೆಗೆದುಕೊಳ್ಳುತ್ತಿರುವ ಫೋಟೋ ಒಂದು ಸಖತ್ ವೈರಲ್ ಆಗಿದೆ.   ‘ಮುಂದಿನ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​’ ಅನ್ನೋ ಚರ್ಚೆ ಮುನ್ನೆಲೆಯಲ್ಲಿರುವಾಗಲೇ ಈ …

Read More »

ರಾತ್ರಿ ಬೈಕ್ ಹಾಗೂ ಅಪರಿಚಿತ ವಾಹನ ನಡುವೆ ಡಿಕ್ಕಿ ಸಂಭವಿಸಿ ಯುವಕನೋರ್ವ ಸಾವಿಗೀಡಾಗಿದ್ದಾನೆ.

ಚಿಕ್ಕೋಡಿ ರೈಲ್ವೆ ನಿಲ್ದಾಣ ಬಳಿ ಶನಿವಾರ ರಾತ್ರಿ ಬೈಕ್ ಹಾಗೂ ಅಪರಿಚಿತ ವಾಹನ ನಡುವೆ ಡಿಕ್ಕಿ ಸಂಭವಿಸಿ ಯುವಕನೋರ್ವ ಸಾವಿಗೀಡಾಗಿದ್ದಾನೆ. ಬೈಕ್ ಮೇಲೆ ಇದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದರು. ಗೋಕಾಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಾಗರಮುನ್ನೋಳಿ ಗ್ರಾಮದ ಸಿದ್ದಪ್ಪಾ ಪ್ರಕಾಶ ಜಿಪರೆ (೨೫) ಸಾವನಪ್ಪಿದ್ದಾನೆ. ಮಾಳಪ್ಪಾ ಗುಳಪ್ಪಾ ಕೊಟಬಾಗಿ ಗಂಭೀರವಾಗಿ ಗಾಯಗೊಂಡು ಗೋಕಾಕ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನಾ ಸ್ಥಳಕ್ಕೆ ರೈಲ್ವೆ ಪೋಲಿಸರು ಭೇಟಿ ನೀಡಿ ಪ್ರಕರಣ …

Read More »

ಜು. 14ರ ವರೆಗೆ ಭಾರೀ ಮಳೆ ನಿರೀಕ್ಷೆ : ಹವಾಮಾನ ಇಲಾಖೆ ಮುನ್ಸೂಚನೆ

ಬಂಗಾಲಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು. 14ರ ವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಜು. 11ರಂದು ರೆಡ್‌, ಜು. 12 ಮತ್ತು 13ರಂದು ಆರೆಂಜ್‌ ಹಾಗೂ …

Read More »

ನಾಗಾಲ್ಯಾಂಡ್ ಗಡಿಯಲ್ಲಿ ಬೆಳಗಾವಿ ಯೋಧನ ವೀರಮರಣ..

ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ. ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್​​ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. …

Read More »

ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತೆ, ರೋಗ ಬರಲ್ಲ : ದಾವಣಗೆರೆ ಸಂಸದ

ದಾವಣಗೆರೆ: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತೆ. ರೋಗ ಬರಲ್ಲ! ಇದು ದಾವಣಗೆರೆಯ ಬಿಜೆಪಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ರೀತಿ. ದಿನದಿಂದ ದಿನಕ್ಕೆ ಪೆಟ್ರೋಲ್-ಡಿಸೇಲ್ ದರ ಹೆಚ್ಚಾಗುತ್ತಿದ್ದು ಜನರು ಸೈಕಲ್ ಮೇಲೆ ಓಡಾಡುವ ಸ್ಥಿತಿ ಬಂದಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಂಸದರು, ಸೈಕಲ್‌ನಲ್ಲಿ ಓಡಾಡಿದರೆ ಏನ್ ಆಗುತ್ತೆ, ಒಳ್ಳೆಯ ವ್ಯಾಯಾಮ ಆಗುತ್ತೆ ಎಂದು ಲಘುವಾಗಿ ಉತ್ತರಿಸಿದರು. ಬಳಿಕ ಮಾತನಾಡಿದ ಅವರು …

Read More »

ಕೈ ನಾಯಕತ್ವದಲ್ಲಿ ಭಾರೀ ಬದಲಾವಣೆ? ಮಲ್ಲಿಕಾರ್ಜುನ ಖರ್ಗೆಗೆ ಪ್ರಮುಖ ಸ್ಥಾನ?

ನವದೆಹಲಿ: ಉತ್ತರಪ್ರದೇಶ ಮತ್ತು ಪಂಜಾಬ್‌ನಂತಹ ಪ್ರಮುಖ ರಾಜ್ಯಗಳ ಚುನಾವಣೆ ಹತ್ತಿರದಲ್ಲಿರುವುದರಿಂದ ಕಾಂಗ್ರೆಸ್‌ ತನ್ನ ಸಂಘಟನಾತ್ಮಕ ಸ್ವರೂಪದಲ್ಲಿ ಭಾರೀ ಬದಲಾವಣೆ ಮಾಡುವ ನಿರೀಕ್ಷೆಯಿದೆ. ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜಸ್ಥಾನದ ಯುವ ನಾಯಕ ಸಚಿನ್‌ ಪೈಲಟ್‌, ಟಿ.ಎಸ್‌.ಸಿಂಗ್‌ ದೇವ್‌ ಅವರು ರಾಷ್ಟ್ರ ರಾಜಕೀಯದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ. ಇಷ್ಟಾದರೂ ಗಾಂಧಿ ಕುಟುಂಬದವರೇ ಪಕ್ಷದ ಅಗ್ರನಾಯಕತ್ವ ಉಳಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಆದರೆ ರಾಹುಲ್‌ ಗಾಂಧಿ ಮತ್ತೆ ಅಧ್ಯಕ್ಷ ಸ್ಥಾನ …

Read More »

ವಿಶ್ವ ಸಂಸ್ಥೆಯ ಕಾರ್ಮಿಕ ಕಾರ್ಡ್ ನೀಡೋದಾಗಿ ಮಹಿಳೆಯರಿಗೆ ವಂಚನೆ‌: ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು

ಗದಗ: ಹಳ್ಳಿಗಾಡಿನ ಮಹಿಳೆಯರನ್ನೇ ಟಾರ್ಗೆಟ್​ ಮಾಡಿಕೊಂಡು ವಂಚಿಸುತ್ತಿದ್ದ ವ್ಯಕ್ತಿಗೆ ಗದಗದ ಮಸಾರಿ ಪ್ರದೇಶದಲ್ಲಿ ಜನ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ನಡೆದಿದೆ. ಕಾರ್ಮಿಕ ಕಾರ್ಡ್ ಮಾಡಿಸಿದ್ರೆ ವಿಶ್ವ ಸಂಸ್ಥೆಯಿಂದ ಹಣ ಬರುತ್ತೆ. ಅಂತಹ ಕಾರ್ಮಿಕ ಕಾರ್ಡ್ ತಾನು ನೀಡೋದಾಗಿ ಮಹಿಳೆಯರಿಗೆ ಆ ವ್ಯಕ್ತಿ ವಂಚಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಗದಗದ ಮಸಾರಿ ಪ್ರದೇಶದಲ್ಲಿ ಹಳ್ಳಿಯ ಮಹಿಳೆಯರನ್ನೇ ಟಾರ್ಗೆಟ್​ ಮಾಡಿ ವಂಚಿಸುತ್ತಿದ್ದ ಕುಮಾರ್ ಎಂಬ ವ್ಯಕ್ತಿಗೆ ಸ್ಥಳೀಯರು ಸೇರಿಕೊಂಡು ಬಾರಿಸಿದ್ದಾರೆ. ಚಿತ್ರದುರ್ಗ ಮೂಲದ ಡೆವಲೆಪ್ …

Read More »

ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ: ಚಾಕು, ಗಾಂಜಾ ಸೇರಿದಂತೆ ಹಲವು ವಸ್ತು ವಶಕ್ಕೆ

ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿ ಕೈದಿಗಳ ಬಳಿ ಇದ್ದ ಗಾಂಜಾ, ಚಾಕು, ಮೊಬೈಲ್ಸ್, ಸಿಮ್ಸ್‌, ಮೆಮೋರಿ ಕಾರ್ಡ್‌ಗಳನ್ನು ವಶಪಡಿಸಿಕೊಂಡರು. ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕೈದಿಗಳು ಮೊಬೈಲ್ ಬಳಸಿ ಅಕ್ರಮ ಚಟುವಟಿಕೆಗಳ ನಡೆಸುತ್ತಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ಈ ದಾಳಿ ನಡೆಸಲಾಗಿದೆ. ಶನಿವಾರ ನಸುಕಿನ 5 ಗಂಟೆಗೆ ಶ್ವಾನ ದಳದ ಮೂಲಕ ಸಿಸಿಬಿ ತಂಡ ದಾಳಿ ನಡೆಸಿದೆ ಎಂದು ಸಿಸಿಬಿ …

Read More »

ವ್ಯಕ್ತಿಯ ಬಳಿ ಇದ್ದದ್ದನ್ನೆಲ್ಲಾ ದೋಚಿದ್ದ ಕಳ್ಳರು ಇಂದು ಅಂದರ್..!

ಬೆಳಗಾವಿ: ಜುಲೈ 8 ರಂದು ಮುಂಜಾನೆ ವ್ಯಕ್ತಿಯನ್ನು ದರೋಡೆ ಮಾಡಿದ 2 ಆರೋಪಿಗಳನ್ನು ಗಾಂಧಿ ನಗರ ಬಳಿ ಮಾಳ ಮಾರುತಿ ಪೊಲೀಸರು ಇಂದು ಬಂಧಿಸಿದ್ದಾರೆ. ಪರ್ವೇಜ್ ಪರಿಷ್ಟಾಡಿ ಮತ್ತು ಹೊಸ ಗಾಂಧಿ ನಗರದ ಜುಬರ್ ದಲಾಯತ್ ಬಂಧಿತ ಆರೋಪಿಗಳು. ಚಿಕ್ಕೋಡಿ ಮೂಲದ ತಮನ್ನಾ ಎಂಬಾತನ ಮೇಲೆ ಈ ಇಬ್ಬರು ಆರೋಪಿಗಳು ಹಲ್ಲೆ ನಡೆಸಿ ನಗದು, ಎಟಿಎಂ ಕಾರ್ಡ್ ಮತ್ತು ಮೊಬೈಲ್ ತೆಗೆದುಕೊಂಡಿದ್ದರು.

Read More »