Breaking News

ರಾಜ್ಯ

ಕಿತ್ತೂರಿನ ಅಮಾಯಕ ಮುದುಕಿಯ ಜಮೀನು ಕಿತ್ತು ಕೊಂಡ್ರ ಪ್ರಭಾವಿ ಗಳು…..? ನ್ಯಾಯ ಕೊಡಿಸಿ ಎಂದು ಅಂಗಲಾಚಿದ ಹಿರಿಯ ಜೀವ…

ಕಿತ್ತೂರ: ಕಿತ್ತೂರು ರಾಣಿ ಚೆನ್ನಮ್ಮನ ಕಿತ್ತೂರ ಇಲ್ಲಿ ಒಂದು ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ .ಚೆನ್ನಮನ ನಾಡಲ್ಲಿ ಇಂಥದೊಂದು ಘಟನೆ ನಡೆದದ್ದು ಎಲ್ಲರಿಗೂ ಒಂತರ ಆಶ್ಚರ್ಯ ತಂದಿದೆ. ಒಬ್ಬ ಹಿರಿಯ ಜೀವಿಯ ಆಸ್ತಿಯನ್ನ ಕೆಲವೊಂದಿಷ್ಟು ಜನ ಅವರಿಗೆ ಗೊತ್ತಾಗದಂತೆ ದಾಖಲಾತಿ ಗಳನ್ನ ತಿರುಚಿ ತಮ್ಮ ಹೆಸರಿನಲ್ಲಿ ಮಾಡಿಕೊಂಡಿದ್ದಾರೆ ಎಂಬ ಆರೋಪ . ಹೌದು ಕಿತ್ತೂರಿನ ನಿವಾಸಿ ಇವರು ಸ್ವಲ್ಪ ಜನ ಕಿರಾತಕ ಜನ ಇವರನ್ನ ಯಾಮಾರಿಸಿ ತಮ್ಮ ಹೆಸರಿನಲ್ಲಿ ಇವರ …

Read More »

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ

ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿ 8ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 73ವರ್ಷದ ಗೆಹ್ಲೋಟ್ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕರಾಗಿದ್ದಾರೆ.

Read More »

ನನ್ನ ಮಗ ಡ್ರೈವಿಂಗ್ ಮಾಡುತ್ತಿರಲಿಲ್ಲ; ಮಂತ್ರಿ ಮಗನ ಹೆಸರು ಕೇಳಿಬಂದಾಗ ಚರ್ಚೆ ಸಹಜ: ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಪುತ್ರ ಚಿದಾನಂದ ಕಾರು ಅಪಘಾತ ಪ್ರಕರಣದಲ್ಲಿ ರೈತ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ, “ನನ್ನ ಮಗ ಡ್ರೈವಿಂಗ್ ಮಾಡಲ್ಲ. ಕಾರನ್ನು ಚಾಲಕ ಓಡಿಸುತ್ತಿದ್ದ” ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, “ನನ್ನ ಮಗ ಚಿದಾನಂದ ಡ್ರೈವಿಂಗ್ ಮಾಡಲ್ಲ. ಅವನಿಗೆ ಡ್ರೈವರ್ ಇದ್ದಾನೆ. ಮೊದಲಿನಿಂದಲೂ ಆತನೇ ಕಾರು ಓಡಿಸುವುದು. ನನ್ನ ಮಗ ಮುಂದೆ ಫಾರ್ಚುನ್ ಕಾರಲ್ಲಿದ್ದ. ಆತನ ಸ್ನೇಹಿತರು ಇನ್ನೊಂದು ಗಾಡಿಯಲ್ಲಿದ್ದರು. ಡಿವೈಡರ್ …

Read More »

ನೇತ್ರಾವತಿ ನದಿಗೆ ಸ್ನಾನಕ್ಕೆ ಇಳಿದ ಗದಗದ ಸಹೋದರರು ನೀರುಪಾಲು

ಮಂಗಳೂರು: ಇಲ್ಲಿನ ನೇತ್ರಾವತಿ ನದಿ ನೀರಿಗೆ ಸ್ನಾನಕ್ಕೆ ಇಳಿದ ಗದಗ ಮೂಲಕದ ಇಬ್ಬರು ಸಹೋದರರು ಸೋಮವಾರ ನೀರುಪಾಲಾಗಿ ಮೃತಪಟ್ಟಿದ್ದಾರೆ. ಉಪ್ಪಿನಂಗಡಿಯಲ್ಲಿ ತೋಟದ ಕಾರ್ಮಿಕರಾದ, ಮೂಲತಃ ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಸುಬ್ಬನಹಳ್ಳಿ ನಿವಾಸಿಯಾದ ಧರ್ಮ ಮತ್ತು ಮೀನಾಕ್ಷಿ ದಂಪತಿಯ ಮಕ್ಕಳಾದ ನಿಂಗರಾಜು (16) ಮತ್ತು ಸತೀಶ್ (14) ಮೃತರು. ‌ಬೆಳ್ತಂಗಡಿ ತಾಲ್ಲೂಕು ಮುಂಡಾಜೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿಂಗರಾಜು ಹತ್ತನೇ ತರಗತಿಯಲ್ಲಿ, ಆತನ ಸಹೋದರ ಸತೀಶ್, ಪುತ್ತೂರು ಬಲ್ನಾಡು …

Read More »

ಬೈಕ್‍ಗೆ ಡಿಕ್ಕಿ ಹೊಡೆದ ಲಕ್ಷ್ಮಣ್ ಸವದಿ ಪುತ್ರನ ಕಾರ್- ಸವಾರ ,ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ

ಬಾಗಲಕೋಟೆ: ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಪುತ್ರ ಚಿದಾನಂದ್ ಕಾರ್ ಅಪಘಾತಕ್ಕೆ ಒಳಗಾಗಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮ ಕ್ರಾಸ್ ಬಳಿಯ ಚಿತ್ರದುರ್ಗ-ಸೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಕೊಡ್ಲೆಪ್ಪ ಬೋಳಿ ಮೃತ ಬೈಕ್ ಸವಾರ. ಕುಡ್ಲೆಪ್ಪ ಹೊಲದಿಂದ ಮನೆಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಕಾರ್ ಡಿಕ್ಕಿಯಾಗುತ್ತಿದ್ದಂತೆ ಕೂಡ್ಲೆಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕೂಡ್ಲೆಪ್ಪ ಸಾವನ್ನಪ್ಪಿದ್ದಾರೆ.ಬೈಕ್‍ಗೆ ಕಾರ್ ಡಿಕ್ಕಿಯಾಗುತ್ತಿದ್ದಂತೆ ಡಿಸಿಎಂ ಪುತ್ರ ಚಿದಾನಂದ್ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಮತ್ತು ಶಿವಸೇನೆ ಮೈತ್ರಿ? ಠಾಕ್ರೆ ಬಣದ ಷರತ್ತುಗಳೇನು?

ನವದೆಹಲಿ/ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮತ್ತೂಮ್ಮೆ ಮೈತ್ರಿ ಮಾಡಿಕೊಳ್ಳುವ ವದಂತಿಗಳ ನಡುವೆಯೇ ಹೊಸ ಮಾಹಿತಿಯೊಂದು ಸೋಮವಾರ ಬಹಿರಂಗವಾಗಿದೆ. ಸದ್ಯ ಮಹಾರಾಷ್ಟ್ರದಲ್ಲಿ ಪ್ರತಿಪಕ್ಷ ನಾಯಕ, ಮಾಜಿ ಸಿಎಂ ದೇವೇಂದ್ರ ಫ‌ಡ್ನವಿಸ್‌ ಅವರನ್ನು ಕೇಂದ್ರ ಸಂಪುಟಕ್ಕೆ ಸಚಿವರನ್ನಾಗಿ ಮಾಡಬೇಕು. ಶಿವಸೇನೆ ಬಳಿಯೇ ಮುಖ್ಯಮಂತ್ರಿ ಹುದ್ದೆ ಇರಬೇಕು ಎಂಬ ಷರತ್ತನ್ನು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಿಜೆಪಿ ವರಿಷ್ಠರಿಗೆ ಹಾಕಿದ್ದರು. ಶೀಘ್ರದಲ್ಲಿಯೇ ಕೇಂದ್ರ ಸಚಿವ ಸಂಪುಟ ಪುನಾರಚನೆ ನಡೆಯಲಿದೆ ಎಂಬ ಚರ್ಚೆಗಳ ನಡುವೆಯೇ ಇಂಥ …

Read More »

ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …

Read More »

ಗೋಕಾಕ: ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ) ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡ ರೈತ ಮುಖಂಡರು.

ಗೋಕಾಕ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಕೋಡಿಹಳ್ಳಿ ಬಣ)ಬೆಳಗಾವಿ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯು ಸೋಮವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು. ಜಿಲ್ಲಾಧ್ಯಕ್ಷ ಸತ್ತೆಪ್ಪ ಮಲ್ಲಾಪೂರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜುಲೈ-21 ರಂದು ರಾಜ್ಯ ಮಟ್ಟದ ರೈತ ಹುತ್ಮಾತ ದಿನಾಚರಣೆಯನ್ನು ಯರಗಟ್ಟಿಯಲ್ಲಿ ನಡೆಸಲು ನಿರ್ಧರಿಸಲಾಯಿತ್ತಲ್ಲದೇ ಕೃಷಿ ಇಲಾಖೆ ನೀಡುತ್ತಿರುವ ಉಪಕರಣಗಳ ಸಹಾಯಧನವನ್ನು ರದ್ದು ಮಾಡಿದ್ದು ಅದನ್ನು ಪುನ: ಆರಂಭಿಸಬೇಕು. ನೀರಿನ ಪಂಪಸೆಟ್‍ಗಳನ್ನು ನಡೆಸಲು 3ಪೇಸ್ …

Read More »

ಖಾಸಗಿ ಬಸ್ ಪ್ರಯಾಣ ದರ ಏರಿಕೆಗೆ ತಡೆ : ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು, ಜು.5: ದ.ಕ.ಜಿಲ್ಲೆಯ ಖಾಸಗಿ ಬಸ್ ಮಾಲಕರ ಸಂಘವು ಏರಿಕೆ ಮಾಡಿರುವ ಬಸ್ ಪ್ರಯಾಣ ದರಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಸೋಮವಾರ ಬಸ್ ಮಾಲಕರ ಸಂಘದ ಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಲಾಕ್‌ ಡೌನ್ ಮುಂಚೆ ಚಾಲ್ತಿಯಲ್ಲಿದ್ದ ಪ್ರಯಾಣ ದರವನ್ನು ತೆಗೆದುಕೊಳ್ಳಬೇಕು ಎಂದು ಮಾಲಕರಿಗೆ ಸೂಚಿಸಲಾಗಿದೆ. ಪ್ರಯಾಣ ದರ ಏರಿಕೆಗೆ ಸಂಬಂಧಿಸಿ ಈ …

Read More »

ಕುರಿ ಸಾಕಾಣಿಕೆ ಆರಂಭಿಸಿದ ಮಾಜಿ ಸಿಎಂ ಹೆಚ್​ಡಿಕೆ

ರಾಮನಗರ: ಜಿಲ್ಲೆಯ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿ ಕೃಷಿ ಭೂಮಿ ಹೊಂದಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ತಮ್ಮ ಜಮೀನಿನಲ್ಲಿ ಇಸ್ರೇಲ್ ಮಾದರಿ ಕುರಿ ಸಾಕಾಣಿಕೆ ಆರಂಭ ಮಾಡಿದ್ದು, ಆ ಮೂಲಕ ಪ್ರಗತಿ ಪರ ರೈನತನಾಗಿ ಇತರರಿಗೂ ಮಾದರಿಯಾಗುವ ಕಾರ್ಯವನ್ನು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಕೃಷಿ ಚಟುವಟಿಕೆಗಳಿಗಾಗಿ ಹೊಸ ಟ್ರ್ಯಾಕ್ಟರ್​ ಖರೀದಿಸಿದ್ದ ಕುಮಾರಸ್ವಾಮಿ ಅವರು, ಸದ್ಯ ಬಿಡದಿಯ ತೋಟದಲ್ಲಿ ಕುರಿ ಸಾಕಾಣಿಕೆಗೆ ಅತ್ಯಾಧುನಿಕವಾಗಿ ಇಸ್ರೇಲ್​ ಮಾದರಿಯಲ್ಲಿ ಕುರಿ ಸಾಕಾಣಿಕೆ ಆರಂಭಿಸಿದ್ದಾರೆ. ಈ ಕುರಿತ …

Read More »