Breaking News

ರಾಜ್ಯ

‘ಕೋವಿಡ್‌ ನಿರ್ವಹಣೆ: ಸರ್ಕಾರ ವಿಫಲ’

ಹಾವೇರಿ: ‘ಕೋವಿಡ್‌ ಎರಡನೇ ಅಲೆ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಅಗತ್ಯ ವೈದ್ಯಕೀಯ ಸೌಲಭ್ಯಗಳು ಮತ್ತು ಸಿದ್ಧತೆಯ ಕೊರತೆಯಿಂದ ಸಾವಿರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಆರೋಪಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆಮ್ಲಜನಕ ಸೌಲಭ್ಯವುಳ್ಳ ಹಾಸಿಗೆ, ವೆಂಟಿಲೇಟರ್‌ಗಳು ಸಿಗದೆ ಜನರು ಸಾವು-ನೋವು ಅನುಭವಿಸಿದ್ದಾರೆ. ತಜ್ಞರ ಶಿಫಾರಸುಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿತು. …

Read More »

ಪೆಟ್ರೋಲ್-ಡೀಸೆಲ್-ಗ್ಯಾಸ್ ಬೆಲೆಏರಿಕೆ ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ ಸೈಕಲ್ ಜಾಥಾ

ಬೆಂಗಳೂರು, ಜು.7- ಪೆಟ್ರೋಲ್, ಡೀಸೆಲ್, ಗ್ಯಾಸ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಇಂದು ಸೈಕಲ್ ಜಾಥಾದ ಮೂಲಕ ಪ್ರತಿಭಟನೆ ನಡೆಸಿದ್ದು, ರಾಜ್ಯದಲ್ಲೂ ಕಾಂಗ್ರೆಸ್ ನಾಯಕರು ವಿಧಾನಸಭಾ ಕ್ಷೇತ್ರಗಳಲ್ಲಿ ಸೈಕಲ್ ತುಳಿದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಡುಪಿಯಲ್ಲಿ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರಿನಲ್ಲಿದ್ದು, ಅಲ್ಲಿಯೇ ಸೈಕಲ್ ಜಾಥಾದಲ್ಲಿ ಭಾಗವಹಿದ್ದಾರೆ. ಬೆಂಗಳೂರಿನ ಕೇಂದ್ರ, ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲಾ …

Read More »

ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆದು ಹಣ ಮಾಡುತ್ತಿದ್ದಾರೆ: ಸಿದ್ದು ಆಕ್ರೋಶ

ಮೈಸೂರು: ಇದು ಭಂಡ ಸರಕಾರ. ಮಾನವೀಯತೆಯ ಇಲ್ಲದ ಸರಕಾರ. ಬಿಪಿಎಲ್ ಕಾರ್ಡ್ ದಾರರಿಗೆ ತಲಾ 10 ಸಾವಿರ ಕೊಡಬೇಕಿತ್ತು. ನಮ್ಮ ಸರಕಾರ ಇದ್ದಿದ್ದರೆ 10 ಸಾವಿರ ಹಣ, 10 ಕೆಜಿ ಅಕ್ಕಿ ಕೊಡುತ್ತಿದ್ದೆವು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇವರು ದುಡ್ಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕೆಟ್ಟ ಸರಕಾರವನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿರಲಿಲ್ಲ. ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆಯುತ್ತಾ …

Read More »

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಇಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ: ಸವದಿ

ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಾಗಿ ಕಾರ್ಯಚರಿಸಲಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತಾನಾಡಿದ ಅವರು, ಇಷ್ಟು ವರ್ಷ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಾಗಿ ಸೇವೆ ಸಲ್ಲಿಸಿದ ಸಂಸ್ಥೆ ಇನ್ಮುಂದೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಎನ್ನುವ ಹೆಸರಿನೊಂದಿಗೆ ಸೇವೆ ಮುಂದುವರೆಸಲಿದೆ ಎಂದು ಹೇಳಿದರು. ತಮ್ಮ ಪುತ್ರನ ಕಾರು ಅಪಘಾತ ಪ್ರಕರಣ ಕುರಿತಿ ಪ್ರತಿಕ್ರಿಯಿಸಿದ …

Read More »

ಪಕ್ಷದ ಹಿರಿಯ ನಾಯಕರಿಂದ ಶೋಭಾಗೆ ದೆಹಲಿ ಕರೆ: ಸಚಿವ ಸ್ಥಾನ ಸಿಗುವ ಸಾಧ್ಯತೆ ?

ಕಾರ್ಕಳ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ.   ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರಿಯ ನಾಯಕರಿಂದ ಕರೆ ಬಂದಿದೆ ಎಂದು ಸಂಸದೆ ಆಪ್ತ ಸಹಾಯಕರು ಉದಯವಾಣಿ ಗೆ ಮಾಹಿತಿ ನೀಡಿದ್ದಾರೆ. ಇಂದು ನಡೆಯಲಿರುವ ಕೇಂದ್ರ ಸಂಪುಟ ಪುನಾರಚನೆಯಲ್ಲಿ ರಾಜ್ಯಕ್ಕೆ ಸಂಬಂಧಿಸಿ ಕೆಲ ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ. ರಾಜ್ಯದಿಂದ ಇಬ್ಬರಿಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇದೆ. ಕೋವಿಡ್ ಸೋಂಕಿಗೆ ಬಲಿಯಾಗಿ ಸಾವನ್ನಪ್ಪಿದ್ದ …

Read More »

ಭ್ರಷ್ಟಾಚಾರ ಕುಟುಂಬಶಾಯಿ ವಿರುದ್ದ ನನ್ನ ಹೋರಾಟ ನಿಲ್ಲಿಸಲ್ಲ – ಯತ್ನಾಳ್

ಬಿಜೆಪಿಯ ಕೆಲವರು ವಿಜಯೇಂದ್ರ ಮೊಣಕಾಲಿಗೆ ನಮಸ್ಕಾರ ಮಾಡುತ್ತಾರೆ. ಸಿಎಂ ಮಗನ ಮುಂದೆ ಕೈ ಒಡ್ಡಿ ನಿಲ್ಲುತ್ತಾರೆ. ಅವರೇನು ಗ್ರಾ. ಪಂ ಸದಸ್ಯನೂ ಆಗಿಲ್ಲ. ಅಷ್ಟೊಂದು ಕೆಳಮಟ್ಟದಲ್ಲಿ ಕೆಲವರು ಇದ್ದಾರೆ ಎಂದು ಸಾಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ವಿಶ್ವಾಸರ್ಹ ರಾಷ್ಟನಾಯಕರನ್ನು ರಾಜ್ಯಕ್ಕೆ ಕಳುಹಿಸಿ. ಶಾಸಕಾಂಗ ಸಭೆ ನಡೆಸಿ ಅಭಿಪ್ರಾಯ ಪಡೆಯಿರಿ. ಮೊನ್ನೆ ಅರುಣ್ ಸಿಂಗ್ ಮಾಡಿದ್ದ ನಾಟಕ ಇದೆ ದೆಹಲಿಯಲ್ಲೇ ನಾಯಕತ್ವ ಬದಲಾವಣೆ ಇಲ್ಲ. ಈ …

Read More »

ಕರ್ನಾಟಕದ 2, 3 ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಪಕ್ಕಾ; ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ರಾಜ್ಯದ ಎರಡು, ಮೂರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗುವುದು ಪಕ್ಕಾ ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಕೆಐಎ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಚಿವರು, ಜಾತಿವಾರು ಲೆಕ್ಕಾಚಾರ ಪ್ರಕಾರ ಲಿಂಗಾಯತರಿಗೆ ಒಂದು, ಪರಿಶಿಷ್ಟ ಜಾತಿಗೆ ಒಂದು ಪಕ್ಕಾ ಆಗಿದೆ. ಮತ್ತೊಂದು ಯಾರಿಗೆ ಕೊಡ್ತಾರೋ ನೋಡಬೇಕು ಎಂದು ಅಭಿಪ್ರಾಯಪಟ್ಟರು. ರಾಜ್ಯ ರೈಲ್ವೆ ಖಾತೆ ರಾಜ್ಯಕ್ಕೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ರಮೇಶ್ ಜಿಗಜಿಣಗಿ, ನಾರಾಯಣಸ್ವಾಮಿ, ಉಮೇಶ್ ಜಾಧವ್ …

Read More »

ಇಂದು ಕೇಂದ್ರ ಸಂಪುಟ ಪುನರ್ ರಚನೆ; ದೆಹಲಿಯತ್ತ ಬಿಜೆಪಿ ಸಂಸದರು, ಯಾರಿಗಿದೆ ಲಕ್​​?

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಸಂಜೆ 5.30ಕ್ಕೆ ಸಂಪುಟ ಪುನರ್ ರಚನೆ ಪ್ರಕ್ರಿಯೆ ಆರಂಭವಾಗಲಿದೆ. ಬಳಿಕ ಆಯ್ಕೆಯಾದ ನೂತನ ಸಂಸದರು 6 ಗಂಟೆ ವೇಳೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸಂಪುಟ ರಚನೆಯಲ್ಲಿ ಹಿಂದುಳಿದ ವರ್ಗ ಮತ್ತು ಎಸ್ಸಿ, ಎಸ್ಟಿ ಸಂಸದರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಹೇಗಾದರೂ ಸರಿ ಸಣ್ಣಸಣ್ಣ ಸಮುದಾಯಗಳಿಗೂ ಪ್ರಾತಿನಿಧ್ಯ ನೀಡುವ ಯೋಚನೆ ಬಿಜೆಪಿ …

Read More »

2023ರ ವಿಧಾನಸಭಾ ಚುನಾವಣೆಗೆ ಈಗಲೇ ಸಿದ್ದತೆ ಮಾಡಿಕೊಳ್ಳಿ: ಡಿ.ಕೆ ಅರುಣಾ

ಕಲಬುರಗಿ: ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಕಾರ್ಯಕರ್ತರು ಈಗಲೇ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಂದಾಗುವಂತೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ರಾಜ್ಯದ ಸಹ ಉಸ್ತುವಾರಿ ಡಿ.ಕೆ. ಅರುಣಾ ಕರೆ ನೀಡಿದರು. ನಗರದ ನೀಲಾಂಬಿಕಾ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು. ಕೇಂದ್ರದ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆ- ಮನೆಗೆ ಮುಟ್ಟಿಸುವ ಕಾರ್ಯದಲ್ಲಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಬಹು ಮುಖ್ಯವಾಗಿ ರಾಜ್ಯದ ಲ್ಲಿ ಮತ್ತೆ …

Read More »

ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ದಿಢೀರ್‌ ದೆಹಲಿಗೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಿರಂತರ ಚರ್ಚೆಗೆ ಗ್ರಾಸವಾಗಿರುವ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತೆರೆ ಬಿದ್ದಿದೆ ಎನ್ನುವಷ್ಟಲ್ಲಿ ಮತ್ತೆ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್‌ ನಿರಾಣಿ ದಿಢೀರ್‌ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಭೇಟಿ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮಂಗಳವಾರ ಸಂಜೆ …

Read More »