ಬೆಂಗಳೂರು, ಜುಲೈ 01; “ಹಾನಗಲ್ ಉತ್ತರ ಕರ್ನಾಟಕದ ಹೆಬ್ಬಾಗಿಲು. ಉತ್ತರ ಕರ್ನಾಟಕದ ಹೆಬ್ಬಾಗಿಲಿನಲ್ಲಿ ಬಾಗಿಲು ತೆರೆಯುವ ಕೆಲಸವನ್ನು ಜೆಡಿಎಸ್ ಮಾಡುತ್ತಿದೆ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು. ಗುರುವಾರ ಬೆಂಗಳೂರಿನ ಜೆಪಿ ಭವನದಲ್ಲಿ ಹಾನಗಲ್ ಕ್ಷೇತ್ರದ ಉಪ ಚುನಾವಣೆ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಕ್ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಎಚ್. ಡಿ. ಕುಮಾರಸ್ವಾಮಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಮಾರಂಭದಲ್ಲಿ ಮಾತನಾಡಿದ …
Read More »ಕೋವಿಡ್ ಮೃತರ ಕುಟುಂಬಕ್ಕೂ ಪ್ರಧಾನಿಯ ಫೋಟೋ ಹಾಕಿ ಮರಣಪತ್ರ ನೀಡಿ: ಡಾ.ಪುಷ್ಪಾ ಅಮರನಾಥ್ ವಾಗ್ದಾಳಿ
ಮೈಸೂರು,ಜು.1: ಲಸಿಕೆ ಪಡೆದವರಿಗೆ ಪ್ರಧಾನಮಂತ್ರಿ ಭಾವಚಿತ್ರವಿರುವ ಸರ್ಟಿಫಿಕೇಟ್ ನೀಡಲಾಗುತ್ತಿದೆ. ಹಾಗಿದ್ದರೆ ಕೊರೋನದಿಂದ ಸಾವನ್ನಪ್ಪಿದವರ ಕುಟುಂಬಕ್ಕೂ ಇದೇ ರೀತಿ ಪ್ರಧಾನಮಂತ್ರಿ ಫೋಟೊ ಹಾಕಿ ಮರಣಪತ್ರ ನೀಡಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರ ನಾಥ್ ವಾಗ್ದಾಳಿ ನಡೆಸಿದರು. ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಲಸಿಕೆ ನೀಡುತ್ತಿರುವುದು ನಮ್ಮ ತೆರಿಗೆ ಹಣದಲ್ಲಿ ಹೀಗಿರುವಾಗ ನಿಮ್ಮ ಫೋಟೊ ಏಕೆ?. ಹಾಗಿದ್ದರೆ ಕೊರೋನದಿಂದ ಸಾವನ್ನಪ್ಪಿದವರ ಕುಟುಂಬಕ್ಕೂ ಇದೇ …
Read More »ಕೇಂದ್ರ ಜಿಎಸ್‌ಟಿ ಪರಿಹಾರ ವಂಚಿಸಿರುವಾಗ ರಾಜ್ಯಗಳು ಸಂಭ್ರಮಿಸಬೇಕೆ?: H.D.K.
ಬೆಂಗಳೂರು: ಜಿಎಸ್‌ಟಿ ಜಾರಿಗೆ ಬಂದು 4 ವರ್ಷವಾಗಿದ್ದಕ್ಕೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ತೆರಿಗೆ ಮೇಲಿದ್ದ ರಾಜ್ಯಗಳ ಹಕ್ಕು, ಸ್ವಾತಂತ್ರ್ಯ ಕಸಿದು, ಹೊಟ್ಟೆ ತುಂಬಿಸಿಕೊಂಡಿದ್ದಕ್ಕೆ ಕೇಂದ್ರ ಸಂಭ್ರಮಿಸಲೇಬೇಕು. ಜಿಎಸ್‌ಟಿಗೆ ರಾಜ್ಯಗಳನ್ನು ಸೇರಿಸಿಕೊಳ್ಳುವಾಗ ಪರಿಹಾರ ನೀಡುವುದಾಗಿ ಹೇಳಿದ್ದ ಕೇಂದ್ರ, ರಾಜ್ಯಗಳನ್ನು ವಂಚಿಸಿದೆ. ಇದಕ್ಕಾಗಿ ರಾಜ್ಯಗಳು ಸಂಭ್ರಮಿಸಬೇಕೆ? ಎಂದು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ರಾಜ್ಯಕ್ಕೆ ₹9 ಸಾವಿರ ಕೋಟಿಯಷ್ಟು ಜಿಎಸ್‌ಟಿ ಪರಿಹಾರ ಬರಬೇಕು. ಈ ಸಂಭ್ರಮದ ವೇಳೆಯಲ್ಲೇ ಪರಿಹಾರ ಬಿಡುಗಡೆ ಆಗಿದ್ದರೆ …
Read More »ದೇಗುಲದ ಅರ್ಚಕನಿಂದ ಶೌಚಾಲಯ ಶುಚಿ ಮಾಡಿಸಿದ ಅಧಿಕಾರಿ!
ಅರ್ಚಕನಿಂದ ಶೌಚಾಲಯವನ್ನು ಅಧಿಕಾರಿಯೊಬ್ಬರು ಶುಚಿ ಮಾಡಿಸಿದ ಘಟನೆ ಕೋಲಾರದ ಐತಿಹಾಸಿಕ ಬಂಗಾರು ತಿರುಪತಿ ದೇವಸ್ಥಾನದಲ್ಲಿ ನಡೆದಿದ್ದು, ಈ ಫೋಟೊಗಳು ಇದೀಗ ವೈರಲ್ ಆಗಿದೆ. ಕೆಜಿಎಫ್ ತಾಲೂಕಿನ ಬೇತಮಂಗಲ ಹೋಬಳಿಯ ಬಂಗಾರು ತಿರುಪತಿ ದೇಗುಲ ಕಾರ್ಯ ನಿರ್ವಾಹಕ ಅಧಿಕಾರಿ ಸುಬ್ರಹ್ಮಣಿ ಎಂಬುವವರು ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣಪ್ಪ ಅವರಿಂದ ದೇವಾಲಯದ ಪ್ರಾಂಗಣ ಮತ್ತು ಶೌಚಾಲಯ ಶುಚಿಗೊಳಿಸಿದ್ದಾರೆ. ಅಂಗಳ ಗ್ರಾಮದ ದೇಗುಲವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡ್ತಿರುವ ಲಕ್ಷ್ಮೀನಾರಾಯಣ ಬಂಗಾರು ತಿರುಪತಿ ದೇಗುಲಕ್ಕೆ ಹೂಗಳನ್ನ ತಂದು …
Read More »ಊರಿಗೆ ತಂಗಿಯ ಶವ ತರುತ್ತಿದ್ದ ಅಣ್ಣನ ಪ್ರಾಣವನ್ನೂ ಮಾರ್ಗಮಧ್ಯೆ ಹೊತ್ತೊಯ್ದ ಜವರಾಯ!
ಚಿತ್ರದುರ್ಗ: ಅಪಘಾತಕ್ಕೀಡಾಗಿ ಮೃತಪಟ್ಟ ತಂಗಿಯ ಶವವನ್ನ ಬೆಂಗಳೂರಿನ ಆಸ್ಪತ್ರೆಯಿಂದ ಊರಿಗೆ ತರುತ್ತಿದ್ದ ಅಣ್ಣನೂ ಮಾರ್ಗಮಧ್ಯೆ ದುರಂತ ಅಂತ್ಯ ಕಂಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನ ರಾಮು ಮುದ್ದಿಗೌಡರ್(56) ಮತ್ತು ಇವರ ಸಹೋದರಿ ರೇಣುಕಾ ಮೃತರು. ಮೂರು ದಿನದ ಹಿಂದೆ ರೇಣುಕಾಗೆ ಅಪಘಾತವಾಗಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರಾಮು ಕರೆದೊಯ್ದಿದ್ದರು. ಚಿಕಿತ್ಸೆ ಫಲಿಸದೆ ರೇಣುಕಾ ಗುರುವಾರ ಮೃತಪಟ್ಟಿದ್ದರು. ಮೃತದೇಹವನ್ನು ಆಂಬುಲೆನ್ಸ್ನಲ್ಲಿ …
Read More »ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಏನು ಆಗುವುದಿಲ್ಲ: ಸಿದ್ದರಾಮಯ್ಯ
ದಾವಣಗೆರೆ: ರಾಜ್ಯದ 20 -25 ಪರ್ಸೆಂಟ್ ಬಿಜೆಪಿ ಸರ್ಕಾರದಲ್ಲಿ ಲಂಚ ಇಲ್ಲದೇ ಯಾವ ಕೆಲಸವೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, “ವಿಜಯೇಂದ್ರ ಡಿ ಪ್ಯಾಕ್ಟರ್ ಸಿಎಂ. ಯಡಿಯೂರಪ್ಪ ಡಿ ಜೀರೋ ಸಿಎಂ. ಸರ್ಕಾರದಲ್ಲಿ ಲಂಚ ನಡೆಯುತ್ತಿರುವುದು ಸತ್ಯ. ಯಡಿಯೂರಪ್ಪನವರ ಮಗ ಹಾಗು ಅಳಿಯ ಬ್ಯಾಂಕ್ ಮುಖಾಂತರ ಲಂಚ ತೆಗೆದು ಕೊಳ್ಳುತ್ತಿದ್ದಾರೆ. ಯಡಿಯೂರಪ್ಪನವರ ಇಡೀ ಕುಟುಂಬ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ. …
Read More »ಮಂಗಳೂರು ವಿಮಾನ ನಿಲ್ದಾಣದಲ್ಲಿ ₹20 ಲಕ್ಷ ಮೌಲ್ಯದ ಅಕ್ರಮ ಚಿನ್ನ ಪತ್ತೆ
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದ ವ್ಯಕ್ತಿಯಿಂದ ಸುಮಾರು ₹20.89 ಲಕ್ಷ ಮೌಲ್ಯ ಅಕ್ರಮ ಚಿನ್ನ ಪತ್ತೆಯಾಗಿದ್ದು, ಅದನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಾಸರಗೋಡು ಮೂಲದ ಪ್ರಯಾಣಿಕ ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮೂಲಕ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. …
Read More »ಕರ್ನಾಟಕ ನಂಬರ್ 1 ಕೈಗಾರಿಕಾ ಸ್ನೇಹಿ ರಾಜ್ಯವಾಗುತ್ತೆ: ಜಗದೀಶ್ ಶೆಟ್ಟರ್
ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲೂ ಕರ್ನಾಟಕ ರಾಜ್ಯ ಅತೀ ಹೆಚ್ಚು ಬಂಡವಾಳ ಹೂಡಿಕೆಯ ಪ್ರಸ್ತಾಪಗಳನ್ನು ಹಾಗೂ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರ ಹೊರತಂದಿರುವ ಕ್ರಾಂತಿಕಾರಿ ಕಾನೂನುಗಳು ಹಾಗೂ ನೀತಿಗಳಿಂದ ಕರ್ನಾಟಕ ರಾಜ್ಯ ದೇಶದಲ್ಲಿ ನಂ.1 ಕೈಗಾರಿಕಾ ಸ್ನೇಹಿ ರಾಜ್ಯವಾಗುವತ್ತಾ ದಾಪುಗಾಲು ಇಡುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ಬೆಂಗಳೂರು ನಗರದಲ್ಲಿ ಲಘು …
Read More »ಪಿಗ್ಗಿ ಬ್ಯಾಂಕ್‌ನ ಹಣವನ್ನು ಬಡವರ ಚಿಕಿತ್ಸೆಗೆ ನೀಡಿದ ಪುತ್ತೂರಿನ ಬಾಲೆ
ಮಂಗಳೂರು, ಜುಲೈ 2: ಬಡವರ ಚಿಕಿತ್ಸೆಯ ಖರ್ಚಿಗೆ ತನ್ನ ಪಿಗ್ಗಿ ಬ್ಯಾಂಕ್‌ನ ಹಣವನ್ನು ಆಸ್ಪತ್ರೆಗೆ ನೀಡಿ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಪುಟ್ಟ ಬಾಲೆ ಮಾದರಿಯಾಗಿದ್ದಾಳೆ. ಪುತ್ತೂರಿನ ವಿವೇಕಾನಂದ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ ದಿಶಾ, ತನ್ನ ಪಿಗ್ಗಿ ಬ್ಯಾಂಕ್‌ನಲ್ಲಿ ತಾನು ಜತನದಿಂದ ಕಾಪಾಡಿಕೊಂಡು ಬಂದಿದ್ದ ಸುಮಾರು ಹತ್ತು ಸಾವಿರ ರೂಪಾಯಿಯನ್ನು ಆಸ್ಪತ್ರೆಗೆ ನೀಡಿದ್ದಾಳೆ. ಪುತ್ತೂರಿನ ಖ್ಯಾತ ಸರ್ಜನ್ ಡಾ.ಎಂ.ಕೆ. ಪ್ರಸಾದ್‌ಗೆ ತನ್ನ ಪಿಗ್ಗಿ ಹಣ ನೀಡಿರುವ ದಿಶಾ, ಬಡವರ …
Read More »ಬಿ.ವೈ. ವಿಜಯೇಂದ್ರ ವಿರುದ್ಧ ಸಚಿವ ಶ್ರೀರಾಮುಲು ಅಸಮಾಧಾನ?
ವಿಧಾನಸೌಧ: ತಮ್ಮ ಬಳಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಪ್ರತಿಕ್ರಿಯೆ ನೀಡಿದ ಸಚಿವರು ಯಾರೂ ಕೂಡ ಯಾರ ಹೆಸರನ್ನೂ ದುರ್ಬಳಕೆ ಮಾಡಿಕೊಳ್ಳಬಾರದು, ಅದು ಸರಿಯಲ್ಲ, ನನ್ನ ಬಳಿ ಕೆಲಸಕ್ಕಿದ್ದ ರಾಜಣ್ಣ ವಿರುದ್ಧ ಎಫ್ ಐಆರ್ ದಾಖಲಾಗಿದೆ, ತನಿಖೆ ಕೂಡ ನಡೆಯುತ್ತಿದೆ, ಹೀಗಾಗಿ ನಾನು ಹೆಚ್ಚಿಗೆ ಮಾತನಾಡಲು, ಪ್ರತಿಕ್ರಿಯೆ …
Read More »
Laxmi News 24×7