ಬೆಂಗಳೂರು: ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ, ಸಚಿವ ಶ್ರೀರಾಮುಲು ಹೆಸರು ಹೇಳಿಕೊಂಡು ಹಲವಾರು ಮಂದಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಎಂಬವರನ್ನು ಗುರುವಾರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಬಿ ವೈ ವಿಜಯೇಂದ್ರ, ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ ಎಂದಿದ್ದಾರೆ. ಈ ಬಗ್ಗೆ …
Read More »ಮದುವೆಯಾಗಿ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ರಸ್ತೆ ಅಪಘಾತ: ವಧು ಸಾವು, ವರನಿಗೆ ಗಂಭೀರ ಗಾಯ
ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮದುವೆಯಾಗಿ ದೇವಸ್ಥಾನಕ್ಕೆ ಹೊರಟಿದ್ದ ನವವಿವಾಹಿತೆ ಸ್ಥಳದಲ್ಲೇ ಮೃತಪಟ್ಟು, ಆಕೆಯ ಪತಿ ಸೇರಿ ಹಲವರು ಗಂಭೀರ ಗಾಯಗೊಂಡಿರುವ ದುರಂತ ಘಟನೆ ಜರುಗಿದೆ. ಸಿಂದಗಿ ತಾಲೂಕಿನ ಯರಗಲ್ ಬಿ.ಕೆ. ಗ್ರಾಮದ ಬಳಿ ಟೆಂಪೋ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ನವ ವಿವಾಹಿತೆ ರಾಣಿ ಗಣೇಶ್ ಚವ್ಹಾಣ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮದುಮಗ ಗಣೇಶ ಚವ್ಹಾಣ ಸೇರಿದಂತೆ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, …
Read More », ಕಾಂಗ್ರೆಸ್‌ನಲ್ಲಿ ಈಗಾಗಲೇ ಹತ್ತು ಜನ ಮುಖ್ಯಮಂತ್ರಿಯಾಗಲು ಸೂಟು-ಬೂಟು ಹೊಲಿಸಿಕೊಂಡು ಕಾದುಕುಳಿತಿದ್ದಾರೆ.: H.D.K.
ಬೆಂಗಳೂರು: “ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಆದರೆ, ಕಾಂಗ್ರೆಸ್‌ನಲ್ಲಿ ಈಗಾಗಲೇ ಹತ್ತು ಜನ ಮುಖ್ಯಮಂತ್ರಿಯಾಗಲು ಸೂಟು-ಬೂಟು ಹೊಲಿಸಿಕೊಂಡು ಕಾದುಕುಳಿತಿದ್ದಾರೆ. ಇದು ಆ ಪಕ್ಷದಲ್ಲಿ ಅಧಿಕಾರದ ದಾಹಕ್ಕೆ ಹಿಡಿದ ಕನ್ನಡಿ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ನಗರದ ಜೆಡಿಎಸ್ ಕಚೇರಿಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ನೂರಾರು ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಹತ್ತು ಜನ ಈಗ ಸಿಎಂ ಗದ್ದುಗೆ ಏರಲು ತುದಿಗಾಲಲ್ಲಿ …
Read More »ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿ ಹೊರತೆಗೆದ ವೈದ್ಯರು
ಕೊಪ್ಪಳ: ಮಗುವಿನ ಗಂಟಲಿನಲ್ಲಿ ಸಿಲುಕಿಕೊಂಡಿದ್ದ ಮೆಂತೋಪ್ಲಸ್ ಡಬ್ಬಿಯನ್ನು ಸರ್ಕಾರಿ ವೈದ್ಯರು ಯಶಸ್ವಿಯಾಗಿ ಹೊರತೆಗೆದು ಅಪಾಯದಿಂದ ಪಾರು ಮಾಡಿದ್ದಾರೆ. ಈ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಹುಣಸಿಹಾಳ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ ಎಂಬ (8) ತಿಂಗಳ ಮಗು ಆಟವಾಡುತ್ತಾ ಮೆಂತೋಪ್ಲಸ್ ಡಬ್ಬಿ ನುಂಗಿತ್ತು. ಕೂಡಲೇ ಇದನ್ನು ಅರಿತ ಮಗುವಿನ ಪೋಷಕರು, ಕೊಪ್ಪಳದ ಸರ್ಕಾರಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿದ್ದಾರೆ.ಮಗುವನ್ನು ಪರೀಕ್ಷಿಸಿದ ವೈದ್ಯರು, ಮಗುವಿನ ಗಂಟಲಿನಲ್ಲಿ ಡಬ್ಬಿ ಸಿಲುಕಿಕೊಂಡಿದೆ. ಹೀಗಾಗಿ ಉಸಿರಾಟಕ್ಕೆ …
Read More »ಕೊರೋನಗೆ ಪೋಷಕರು ಬಲಿ ; ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿದ ರೇಣುಕಾಚಾರ್ಯ
ದಾವಣಗೆರೆ: ಕೊರೊನಾ ಎರಡನೇ ಅಲೆಯಲ್ಲಿ ಸಾಕಷ್ಟು ಸಮಾಜ ಮುಖಿ ಕೆಲಸ ಮಾಡುವ ಮೂಲಕ ಮನೆ ಮಾತಾಗಿರುವ ಶಾಸಕ ಎಂ.ಪಿ ರೇಣುಕಾಚಾರ್ಯರವರು ಇದೀಗ ಅದೇ ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಬಾಲಕಿಯನ್ನು ದತ್ತು ಪಡೆಯಲು ನಿರ್ಧರಿಸಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ದೊಡ್ಡೇರಹಳ್ಳಿ ಗ್ರಾಮದ ಬಾಲಕಿ ಕೊರೊನಾದಿಂದ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ಶಾಸಕ ಎಂಪಿ ರೇಣುಕಾಚಾರ್ಯ ಇಂದು ಅ ಗ್ರಾಮಕ್ಕೆ ಪತ್ನಿ ಸುಮಿತ್ರಾರವರೊಂದಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕೆಲ …
Read More »ಕಟುಕರ ಕೈಯಿಂದ ರಕ್ಷಿಸಲ್ಪಟ್ಟ 11 ಒಂಟೆಗಳು ಮರಳಿ ರಾಜಸ್ಥಾನಕ್ಕೆ ವಾಪಾಸ್
ಮಂಡ್ಯ: ರಾಜಸ್ಥಾನದಿಂದ ರಾಜ್ಯಕ್ಕೆ ಬಕ್ರೀದ್ ವೇಳೆ ಮಾಂಸಕ್ಕೆ ಬಳಸಲು ತರುತ್ತಿದ್ದ 11 ಒಂಟೆಗಳನ್ನು ರಕ್ಷಿಸಿ, ನ್ಯಾಯಾಲಯದ ಆದೇಶದಂತೆ ಮರಳಿ ರಾಜಸ್ತಾನಕ್ಕೆ ಕಳುಹಿಸಲು ಬುಧವಾರ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಚಾಲನೆ ನೀಡಿ ಬಿಗಿ ಭದ್ರತೆಯಲ್ಲಿ ಕಳುಹಿಸಲಾಯಿತು. ಬಕ್ರೀದ್ ಸಂದರ್ಭದಲ್ಲಿ ರಾಜ್ಯಕ್ಕೆ ಮಾಂಸಕ್ಕೆ ಬಳಸಲು ಒಂಟೆಗಳನ್ನು ತರಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿ ಬಳಿ ಬರುತ್ತಿದ್ದಾಗ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿಯ ದಯಾನಂದ ಸ್ವಾಮೀಜಿ ಹಾಗೂ …
Read More »ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಓಡಿದ ಆಸ್ಪತ್ರೆ ವೈದ್ಯ, ಸಿಬ್ಬಂದಿ
ಹುಬ್ಬಳ್ಳಿ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯೊಬ್ಬರು ಮೃತಪಟ್ಟ ಪರಿಣಾಮ ಆಕ್ರೋಶಗೊಂಡ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆಗೆ ಯತ್ನಿಸಿದ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನಗರದ ಜನತಾ ಬಜಾರದಲ್ಲಿರುವ ಭಾಸ್ಕರ ರಾವ್ ಅವರ ಎಲುಬು ಕೀಲು ಮತ್ತು ಅಪಘಾತ ಚಿಕಿತ್ಸಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಉಣಕಲ್ ಗ್ರಾಮದ ಶಾಂತಮ್ಮ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ನಂತರ ಮಹಿಳೆಯ ಸಂಬಂಧಿಕರು ವೈದ್ಯರ ನಿರ್ಲಕ್ಷ ಕಾರಣ ಎಂದು ಆರೋಪಿಸಿ ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಸಂಬಂಧಿಕರ ಆಕ್ರೋಶ …
Read More »ಸಿಎಂಗೆ ಒಂದು ಕಾನೂನ ಜನರಿಗೆ ಒಂದು ಕಾನೂನ ಎಂದು ಸವಾರರ ಅವಾಜ್,ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ B.S.Y.
ನೆಲಮಂಗಲ: ಖಾಸಗಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಭಾಗಿಯಾಗುವ ಮೂಲಕ ಕೋವಿಡ್ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕುಣಿಗಲ್ ರೋಡ್ ನಲ್ಲಿರುವ ರೆಸಾರ್ಟ್ ಗೆ ಭೇಟಿ ನೀಡಿ ಸಿಎಂ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಜನಸಾಮಾನ್ಯರಿಗೆ ಒಂದು ರೂಲ್ಸ್ ರಾಜಕೀಯ ಪ್ರಭಾವಿಗಳಿಗೆ ಒಂದು ರೂಲ್ಸ್ ಎನ್ನುವಂತಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಮದುವೆಗೆ ಕೇವಲ 40 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಆದರೆ 40 ಜನರಿಗೆ ಮಾತ್ರ …
Read More »SDA ಪರೀಕ್ಷೆ’ಗೆ ಕೆಪಿಎಸ್ಸಿಯಿಂದ ಪರಿಷ್ಕೃತ ದಿನಾಂಕ ಪ್ರಕಟ : ಸೆ.18, 19ಕ್ಕೆ ಪರೀಕ್ಷೆ ನಿಗದಿ
ಬೆಂಗಳೂರು : ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದ ಮೂಲಕ ನಡೆಸಲಾಗುತ್ತಿದ್ದಂತ ಎಸ್ ಡಿ ಎ ಪರೀಕ್ಷೆಯನ್ನು ಕೊರೋನಾ ಕಾರಣದಿಂದಾಗಿ ಮುಂದೂಡಲಾಗಿತ್ತು. ಇಂತಹ ಪರೀಕ್ಷೆಯನ್ನು ನಡೆಸಲು ಇದೀಗ ಕೆಪಿಎಸ್ಸಿ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ. ಸೆಪ್ಟೆಂಬರ್ 18 ಹಾಗೂ 19ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿ ಪಡಿಸಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ದಿನಾಂಕ 29-02-2020ರ ಅಧಿಸೂಚನೆಯಲ್ಲಿ 2019ನೇ ಸಾಲಿನ ರಾಜ್ಯದ ವಿವಿಧ ಇಲಾಖೆಯಲ್ಲಿನ ಉಳಿಕ ಮೂಲ …
Read More »ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿಯವರೇ ಹೇಳಬೇಕು: ಸತೀಶ್ ಜಾರಕಿಹೊಳಿ
ಬೆಳಗಾವಿ: ಸ್ವಪಕ್ಷಿಯರೇ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ ಎಂಬ ರಮೇಶ ಜಾರಕಿಹೊಳಿ ಹೇಳಿಕೆಗೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದು ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುದನ್ನು ರಮೇಶ್ ಜಾರಕಿಹೊಳಿಯವರೇ ಹೇಳಬೇಕು ಎಂದಿದ್ದಾರೆ. ಇಲ್ಲಿನ ತಾಲ್ಲೂಕು ಪಂಚಾಯಿತಿಯಲ್ಲಿ ನರೇಗಾ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾತನಾಡಿದ ಸತೀಶ್ ಜಾರಕಿಹೊಳಿ, ಯಾರಿಗೆ ಯಾರು ಮೋಸ ಮಾಡಿದ್ದಾರೆ ಎಂಬುವುದನ್ನು ರಮೇಶ್ ಜಾರಕಿಹೊಳಿ ಅವರಿಗೆ ನೀವೇ ಕೇಳಬೇಕು ಎಂದರು. …
Read More »
Laxmi News 24×7