Breaking News

ರಾಜ್ಯ

ತೆರವಾಗಿರುವ ಹಾನಗಲ್ ಕ್ಷೇತ್ರದ ಮೇಲೆ ಸಿಎಂ ಪುತ್ರ ವಿಜಯೇಂದ್ರ ಕಣ್ಣು?

ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ರಾಜಕೀಯ ಬದುಕಿಗೆ ಕ್ಷೇತ್ರದ ಸಮಸ್ಯೆ ಎದುರಾಗಿದೆ. ಅವರ ಮುಂದಿನ ರಾಜಕೀಯ ಜೀವನ ಯಾವ ಕ್ಷೇತ್ರದಿಂದ ಆರಂಭವಾಗಲಿದೆ ಎಂಬ ಗೊಂದಲ ಮೊದಲಿನಿಂದಲೂ ಇದೆ. ಇದೀಗ ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರದ ಮೇಲೆ ಸಿಎಂ ಪುತ್ರ ಬಿ ವೈ ವಿಜಯೇಂದ್ರ ಕಣ್ಣು ಹಾಕಿದ್ದಾರೆ ಎಂಬ ಮಾತು ಬಲವಾಗಿ ಕೇಳಿಬರುತ್ತಿದೆ. ಪಕ್ಕಾ ಲಿಂಗಾಯತ ಕ್ಷೇತ್ರವಾಗಿರುವ ಹಾನಗಲ್ …

Read More »

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ!

ಯಾದಗಿರಿ: ಜೂ.28ರ ಬೆಳಗ್ಗೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಡೆದ ದುರಂತ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಈ ಘಟನೆ ನಡೆದು ಎರಡು ದಿನ ಕಳೆದರೂ ಆ ಗ್ರಾಮದ ಪ್ರತಿ ಮನೆಯಲ್ಲೂ ವಿಧಿಯೇ ನೀನೆಷ್ಟು ಕ್ರೂರಿ? ತಂದೆ-ತಾಯಿ ಜತೆ ಆ ನಾಲ್ವರು ಪುಟ್ಟ ಮಕ್ಕಳನ್ನೂ ಬಲಿ ಪಡೆದು ಬಿಟ್ಟೆಯಾ? ಎಂದು ಮಮ್ಮಲ ಮರುಗುತ್ತಿದ್ದಾರೆ. ಅಂದು, ಒಂದೇ ಕುಟುಂಬದ ಆರು ಜನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೀಮರಾಯ ಸುರಪುರ (45), ಇವರ …

Read More »

ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

ದಾವಣಗೆರೆ: ಎರಡೂವರೆ ವರ್ಷದ ಹಿಂದೆ ಕಲಬುರಗಿಯಲ್ಲಿ ಸಿವಿಲ್​ ಇಂಜಿನಿಯರ್​ ಜತೆ ದಾಂಪತ್ಯಕ್ಕೆ ಕಾಲಿಟ್ಟಿದ್ದ 21 ವರ್ಷದ ಯುವತಿ ರಚಿತಾ ಇದೇ ಜೂನ್​ 8ರಂದು ನೇಣಿಗೆ ಶರಣಾಗಿದ್ದಳು. ಕುಣಿಗಲ್ ತಾಲೂಕಿನ ಕಾವೇರಿಪುರದ ನಿವಾಸಿ ನಾಗರಾಜು ಜತೆ ಮದುವೆ ಆಗಿದ್ದ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೊಂಡ್ಲು ಗ್ರಾಮದ ಐಶ್ವರ್ಯ ತುಮಕೂರಿನ ಬಾಡಿಗೆ ಮನೆಯಲ್ಲಿ ಅದೇ ದಿನ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಈ ಇಬ್ಬರೂ ಬಲಿಯಾಗಿದ್ದು ವರದಕ್ಷಿಣೆ ದಾಹಕ್ಕೆ. ಈ ಸಾವಿನ ಸರಣಿ …

Read More »

ದೂರು ನೀಡಲು ಠಾಣೆಗೆ ಬಂದವರ ಮೇಲೆ ಪಿಎಸ್‌ಐ ಹಲ್ಲೆ; ಎಸ್​ಪಿ ಮೊರೆ ಹೋದ ಕುಟುಂಬಸ್ಥರು

ಬಾಗಲಕೋಟೆ: ದೂರು ನೀಡಲು ಪೊಲೀಸ್ ಠಾಣೆಗೆ ಬಂದವರ ಮೇಲೆ ಪಿಎಸ್‌ಐ ಹಲ್ಲೆ ಮಾಡಿರುವ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪಿಎಸ್‌ಐ ರವಿ ಪವಾರ್ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮೊದಲ ಪತ್ನಿಗೆ ಗೊತ್ತಾಗದಂತೆ ತುಳಸಿಗೇರಿ ಗ್ರಾಮದ ನಿವಾಸಿ ರಂಗಪ್ಪ ಎಂಬುವವನು ಎರಡನೇ ಮದುವೆಯಾಗಿದ್ದ. ರಂಗಪ್ಪನ ಮೊದಲ ಪತ್ನಿ ಲಕ್ಷ್ಮೀ ಸಹೋದರ ಸಚಿನ್ ಗಿಡ್ಡಿ, ಲಕ್ಷ್ಮೀ ಭಾವ ಶ್ರೀಕಾಂತ್ ರಂಗಪ್ಪನ ವಿರುದ್ಧ ದೂರು ನೀಡಲು ಠಾಣೆಗೆ …

Read More »

ತಂದೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ

ಆನೇಕಲ್ : ತಂದೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸತೀಶ್​ ರೆಡ್ಡಿ (45), ಮಕ್ಕಳಾದ ಕೀರ್ತಿ(19) , ಮೊನಿಷಾ(17) ಮೃತ ದುರ್ದೈವಿಗಳು. ಸತೀಶ್ ರೆಡ್ಡಿಯವರ ಪತ್ನಿ ಆಶಾ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಚಿಕಿತ್ಸೆಯ ಬಳಿಕವೂ ಅಷ್ಟಾಗಿ ಚೇತರಿಸಿಕೊಳ್ಳದ ಆಶಾ ಮೇ.6 ರಂದು ಸಾವನ್ನಪ್ಪುತ್ತಾರೆ. ಅಮ್ಮ ಚೇತರಿಸಿಕೊಂಡು ಮತ್ತೆ ಮನೆಗೆ ಬರುತ್ತಾರೆ ಎಂದುಕೊಂಡಿದ್ದ …

Read More »

ಕರ್ನಾಟಕದ ರಾಜಕೀಯ ಹುಲಿ ಸಿದ್ದರಾಮಯ್ಯ : ಅಭಿಮಾನಿಗಳ ಘೋಷಣೆ

ಮೈಸೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು..? ಅನ್ನೋ ಚರ್ಚೆ ಆರಂಭವಾಗಿದ್ದು, ಪಕ್ಷದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಈ ಮಧ್ಯೆ ಸಿಎಂ ರೇಸ್ ನಲ್ಲಿರುವ ನಾಯಕರುಗಳ ಅಭಿಮಾನಿಗಳು ತರಹೇವಾರಿ ಘೋಷಣೆಗಳನ್ನು ಮೊಳಗಿಸುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಮೈಸೂರಿನಲ್ಲಿ ನಡೆದಿರುವ ಘಟನೆ. ಹೌದು..! ಸಿದ್ದರಾಮಯ್ಯ ಮುಂದಿನ ಸಿಎಂ ಅಭ್ಯರ್ಥಿ ಎಂದು ಸಿದ್ದು ಅಭಿಮಾನಿಗಳು ಈಗಾಗಲೇ ಫಿಕ್ಸ್ ಆಗಿದ್ದು, ಎಲ್ಲೆಲ್ಲೂ ಅದನ್ನೇ ಹೇಳುತ್ತಿದ್ದಾರೆ. ಈ ಮಧ್ಯೆ ಇಂದು ಸಿದ್ದರಾಮಯ್ಯ …

Read More »

ಆ ಲೆವಲ್ ಗೆ ಬಿಲ್ಡಪ್ ಕೊಡಲು ಅವರೇನು ಪ್ರಧಾನ ಮಂತ್ರಿನಾ.? ಅರುಣ್ ಸಿಂಗ್ ರಾಜ್ಯ ಭೇಟಿಗೆ ಯತ್ನಾಳ್ ವ್ಯಂಗ್ಯ

ಬೆಂಗಳೂರು: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ್ದರ ಬಗ್ಗೆ ಲೇವಡಿ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅವರೇನು ಪ್ರಧಾನಮಂತ್ರಿನಾ? ಅಷ್ಟೊಂದು ಬಿಲ್ಡಪ್ ಕೊಡಲು? ಅವರು ಬರುವಾಗಲೇ ಗೊತ್ತಿತ್ತು ಏನ್ ಹೇಳ್ತಾರೆ ಎಂದು ಅದಕ್ಕೆ ಭೇಟಿ ಮಾಡಿಲ್ಲ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಯತ್ನಾಳ್, ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುವಾಗಲೇ ಗೊತ್ತಿತ್ತು, ನಾಯಕತ್ವ ಬದಲಾವಣೆ ವಿಚಾರವಾಗಿ ಅವರು ಏನು ಹೇಳುತ್ತಾರೆ ಎಂದು. ಗೊತ್ತಿದ್ದೇ ಅವರನ್ನು ಭೇಟಿಯಾಗಿಲ್ಲ. …

Read More »

ಬಿಎಸ್ ವೈ ವಿರುದ್ದ ಮಾತನಾಡಿದ್ರೆ ನಾವು ಸುಟ್ಟು ಹೋಗ್ತೀವಿ : ಸಿ ಪಿ ಯೋಗೇಶ್ವರ್

ಕೊಪ್ಪಳ: ಸಿಎಂ ಬಿ ಎಸ್ ಯಡಿಯೂರಪ್ಪ ಅವರ ವಿರುದ್ದ ನನ್ನನ್ನು ವಿಲನ್ ಮಾಡಬೇಡಿ, ಅವರ ವಿರುದ್ದ ಮಾತನಾಡಿದ್ರೆ ನಾವು ಸುಟ್ಟು ಹೋಗ್ತೀವಿ ಎಂದು ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ಅವರು ಹೇಳಿದರು. ಕೊಪ್ಪಳದ ಅಂಜನಾದ್ರಿ ಬೆಟ್ಟದ ಬಳಿ ಸುದ್ದಿಗಾರರ ಜೊತೆ ಮಾತನಾಡಿ, ಬಿಎಸ್ ವೈ ಅವರು ನಮ್ಮ ನಾಯಕರು. ಅವರನ್ನು ನಾವು ಟಾರ್ಗೇಟ್ ಮಾಡಲ್ಲ. ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವ ಕೆಲಸವನ್ನೂ ನಾವು ಮಾಡುತ್ತಿಲ್ಲ. ನಮ್ಮ ದೆಹಲಿ ಭೇಟಿ …

Read More »

ಯೋಗೇಶ್ವರ್-ಯತ್ನಾಳ್ ರಹಸ್ಯ ಭೇಟಿ: ಬಿಜೆಪಿಯಲ್ಲಿ ಶುರುವಾದ ತಳಮಳ

ವಿಜಯಪುರ: ಆಡಳಿತಾರೂಢ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್​ ಬೆಂಗಳೂರಿಗೆ ಬಂದು ಪಕ್ಷದಲ್ಲಿ ಬಂಡಾಯಕ್ಕೆ ಮುಲಾಮು ಹಚ್ಚಲು ಯತ್ನಿಸಿದ್ದರು. ರಾಜ್ಯದಲ್ಲಿ ನಾಯಕತ್ವ ಬದಲಾಣೆಯಿಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದರು. ಆದರೆ ಬಂಡಾಯ/ ಅತೃಪ್ತಿಗಳು ಇನ್ನೂ ರಾಜ್ಯ ಬಿಜೆಪಿಯಲ್ಲಿ ಮನೆಮಾಡಿದೆ ಎನ್ನಲು ಕೆಲ ದಿಢೀರ್ ಬೆಳವಣಿಗೆಗಳು ಕಂಡು ಬಂದಿವೆ. ಅತ್ತ ರಾಜಧಾನಿ ಬೆಂಗಳೂರಿಗೆ ಬಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದ್ದಕ್ಕಿದ್ದಂತೆ ದೆಹಲಿಗೆ …

Read More »

ಬಿಜೆಪಿಯ ಮೂವರಿಂದ ಅನ್ಯಾಯ : ದಿಲ್ಲಿಯಲ್ಲಿ ರಮೇಶ ಜಾರಕಿಹೊಳಿ ಹೇಳಿಕೆ

ಬೆಂಗಳೂರು : ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ದಿಢೀರ್‌ ದಿಲ್ಲಿಗೆ ತೆರಳಿದ್ದು, ಬಿಜೆಪಿ ವರಿಷ್ಠರನ್ನು ಭೇಟಿಯಾಗುವ ಸುಳಿವು ನೀಡಿದ್ದಾರೆ. ದಿಲ್ಲಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಾರಕಿಹೊಳಿ, ಬಿಜೆಪಿಯ ಮೂವರು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರು ತಮಗೆ ಅನ್ಯಾಯ ಮಾಡಿದ್ದು, ತಕ್ಕ ಪಾಠ ಕಲಿಸುತ್ತೇನೆ ಎಂದು ಪರೋಕ್ಷ ಎಚ್ಚರಿಕೆಯನ್ನೂ ನೀಡಿದ್ದಾರೆ. ಸೋಮವಾರ ರಾತ್ರಿ 2 ಗಂಟೆಗೆ ದಿಲ್ಲಿಯಿಂದ ಕರೆ ಬಂದಿತ್ತು. ಅವರ ಆಹ್ವಾನದ ಮೇರೆಗೆ ನಾನು ಬಂದಿದ್ದೇನೆ. ಯಾರನ್ನು ಭೇಟಿಯಾಗುತ್ತೇನೆ …

Read More »