Breaking News

ರಾಜ್ಯ

ತಮ್ಮನ ಮದ್ವೆಗಾಗಿ 2 ದಿನ ರಜೆ ತೆಗೆದುಕೊಳ್ಳಲಿಕ್ಕೂ ಪತ್ರ ಬರೆದು ಕೋರಿಕೊಂಡ ಗ್ರಾಮ ಪಂಚಾಯತ್ ಸದಸ್ಯ!

ದಾವಣಗೆರೆ: ಜನಪ್ರತಿನಿಧಿಗಳೆಂದರೆ ಸಾಮಾನ್ಯವಾಗಿ ಭೇಟಿಗೆ ಸಿಗುವುದೇ ಅಪರೂಪ. ಇನ್ನು ಏನಾದರೂ ಕೆಲಸ ಆಗಬೇಕೆಂದರೆ ಗೆದ್ದ ಮೇಲೆ ಅವರು ಪ್ರಜೆಗಳ ಪಾಲಿಗೆ ಗಗನಕುಸುಮ. ಹೀಗಿರುವಾಗ ಇಲ್ಲೊಬ್ಬ ಜನಪ್ರತಿನಿಧಿ ತನ್ನ ತಮ್ಮನ ಮದುವೆಗಾಗಿ ಎರಡು ದಿನ ರಜೆ ತೆಗೆದುಕೊಳ್ಳಲಿಕ್ಕೂ ಅರ್ಜಿ ಹಾಕಿ ಮನವಿ ಮಾಡಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಾರಿಗನೂರು ಗ್ರಾಮಪಂಚಾಯಿತಿಯ ಅರೇಹಳ್ಳಿ ಗ್ರಾಮದ ವಾರ್ಡ್-04ರ ಸದಸ್ಯ ಚೇತನ್​ ಕುಮಾರ್ ಅರೇಹಳ್ಳಿ ಹೀಗೆ ರಜೆ ಅರ್ಜಿ ಸಲ್ಲಿಸಿ ವಿನಂತಿಸಿಕೊಳ್ಳುವ ಮೂಲಕ ಹಲವರ …

Read More »

ಪೊಲೀಸರೊಂದಿಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಾಗ್ವಾದ

ಬಾಗಲಕೋಟೆ : ಜಿಲ್ಲೆಯ ಇಳಕಲ್ಲ ನಗರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ಪೊಲೀಸರೊಂದಿಗೆ ವಾಗ್ವಾದ ನಡೆದ ಪ್ರಸಂಗ ಶನಿವಾರ ಸಂಜೆ ನಡೆದಿದೆ. ಮಾಜಿ ಶಾಸಕ ಕಾಶಪ್ಪನವರ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ವಿಚಾರಣೆಗೆ ಹಾಜರಾಗುವ ಜಾಮೀನುಸಹಿತ ವಾರೆಂಟ್ ಜಾರಿಯಾಗಿದ್ದು, ಅದನ್ನು ತಲುಪಿಸಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಇದಕ್ಕೂ ಮುಂಚೆ ಕಾಶಪ್ಪನವರ ಮನೆಯಲ್ಲಿ ಕೌಟುಂಬಿಕ ಜಗಳ ನಡೆದಿದೆ ಎಂದು ಅಕ್ಕ-ಪಕ್ಕದ ಮನೆಯವರು ಫೋನ್ ಕಾಲ್ ಮಾಡಿ, ದೂರಿದ್ದರು. …

Read More »

ದಕ್ಷಿಣ ಕನ್ನಡ: ಪದವಿ ವಿದ್ಯಾರ್ಥಿಗಳಿಗೆ, ಭೋಧಕರಿಗೆ ಕೋವಿಡ್‌ ಲಸಿಕೆ ನಾಳೆಯಿಂದ

ಮಂಗಳೂರು: ಮುಂದಿನ ತಿಂಗಳಿಂದ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಸೋಮವಾರದಿಂದ ಜಿಲ್ಲೆಯ ಎಲ್ಲ ಪದವಿ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್‌, ಪ್ಯಾರಾಮೆಡಿಕಲ್‌ ಕಾಲೇಜುಗಳ 18 ವರ್ಷ ಮೇಲಿನ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಭ್ಯತೆಗೆ ಅನುಗುಣವಾಗಿ ಲಸಿಕಾ ಶಿಬಿರ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್‌ಕುಮಾರ್ ಹೇಳಿದ್ದಾರೆ. ಜೂನ್‌ 28 ರಿಂದ ಜಿಲ್ಲೆಯ ಎಲ್ಲ …

Read More »

ಆಟೋ ಚಾಲಕರಿಗೆ ಇನ್ನೂ ಬಾರದ ಕೊವಿಡ್​ ಪರಿಹಾರ ಪ್ಯಾಕೇಜ್​; ಧಾರವಾಡ ಆಟೋ ಚಾಲಕರ ಆಕ್ರೋಶ

ಧಾರವಾಡ: ಕರ್ನಾಟಕ ಸರ್ಕಾರ ಕೊರೊನಾ ಲಾಕ್​ಡೌನ್​​ ಪರಿಣಾಮ ಸಂತ್ರಸ್ತರಾದ ಕೆಲ ವರ್ಗದವರಿಗೆ ಪರಿಹಾರ ಘೋಷಿಸಿದೆ. ಆದರೆ ಈ ಮಹತ್ವಾಕಾಂಕ್ಷಿ ಯೋಜನೆ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪುತ್ತಿಲ್ಲ ಎಂಬ ಕೂಗು ಎದ್ದಿದೆ. ಅದರಲ್ಲೂ ಆಟೋ ಚಾಲಕರಿಗೆ ಪರಿಹಾರ ಕೈಗೆ ಬಾರದೆ ಪರದಾಡುವಂತಾಗಿದೆ. ರಾಜ್ಯ ಸರ್ಕಾರ ಘೋಷಿಸಿದ್ದ 3 ಸಾವಿರ ರೂ. ಪರಿಹಾರ ಮೊತ್ತ ರಾಜ್ಯದ ಅನೇಕ ಕಡೆ ಆಟೋ ಚಾಲಕರಿಗೆ ಇನ್ನೂ ತಲುಪಿಲ್ಲ. ​ಧಾರವಾಡದಲ್ಲಿಯೂ ಆಟೋ ಚಾಲಕರಿಗೆ ಪರಿಹಾರ ಸಿಗದಿರುವುದರಿಂದ ಭಾರೀ ಆಕ್ರೋಶ …

Read More »

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್‌. ನೆಗೆಟಿವ್ ವರದಿ ಕಡ್ಡಾಯ

ಬೆಳಗಾವಿ, – ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ರಾಜ್ಯದ ಗಡಿಭಾಗದಲ್ಲಿ ಇರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಗೆ ಶನಿವಾರ(ಜೂ.26) ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು. ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್‌. ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ವರದಿಯನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.   ಒಂದು ವೇಳೆ …

Read More »

ಪಕ್ಷ ಸಂಘಟನೆ: ಡಿ.ಕೆ. ಶಿವಕುಮಾರ್ ನೇತತ್ವದಲ್ಲಿ ಕಾರ್ಯಾಧ್ಯಕ್ಷರ ಸಭೆ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಂಚೂಣಿ ಘಟಕಗಳನ್ನು ಪುನರ್‌ ರಚಿಸಲು ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪಕ್ಷದ ಕಾರ್ಯಾಧ್ಯಕ್ಷರ ಜತೆ ಶನಿವಾರ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮುಂಚೂಣಿ ಘಟಕಗಳ ಪುನರ್ ರಚನೆ, ಕೆಲವು ಜಿಲ್ಲಾ ಕಾಂಗ್ರೆಸ್ ಘಟಕಗಳ ಅಧ್ಯಕ್ಷರ ಬದಲಾವಣೆ, ಬ್ಲಾಕ್ ಕಾಂಗ್ರೆಸ್ ಘಟಕಗಳ ಪುನರ್ ರಚನೆ ಸಿದ್ಧತೆ ಕುರಿತು ಚರ್ಚೆ ನಡೆಯಿತು. ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ಸತೀಶ ಜಾರಕಿಹೊಳಿ, ಈಶ್ವರ್ …

Read More »

13 ವರ್ಷದ ಬಾಲಕನಲ್ಲಿ ರೂಪಾಂತರಿಯ ವಿಚಿತ್ರ ರೋಗ

ದಾವಣಗೆರೆ: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ರಾಜ್ಯದಲ್ಲಿ ಮಕ್ಕಳಲ್ಲಿ ಎ-ನೆಕ್ ಎಂಬ ಅಪರೂಪದ ಕಾಯಿಲೆ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಅಕ್ಯುಟ್ ನೆಕ್ರೋಟೈಜಿಂಗ್ ಎನ್ಸೆಫಲೋಪತಿ(ANEC) ಎಂಬ ಅಪರೂಪದ ಕಾಯಿಲೆ ದೇಶದಲ್ಲಿಯೇ ಮೊದಲ ಬಾರಿಗೆ ಮಕ್ಕಳಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಪತ್ತೆಯಾಗಿದೆ. ಇಲ್ಲಿನ ಎಸ್.ಎಸ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಹೂವಿನಹಡಗಲಿ ಮೂಲದ 13 ವರ್ಷದ ಬಾಲಕನಲ್ಲಿ ಎ-ನೆಕ್ ಕಾಯಿಲೆ ಪತ್ತೆಯಾಗಿದೆ. ಇದೇ ಆಸ್ಪತ್ರೆಯಲ್ಲಿ ಈ ಕಾಯಿಲೆಯ ರೋಗಲಕ್ಷಣವಿರುವ 6 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು, …

Read More »

ಕೋವಿಡ್​ ನಿಯಮ ಉಲ್ಲಂಘಿಸಿ ಲೋಕೋಪಯೋಗಿ ಅಧಿಕಾರಿಗಳಿಂದ ಬಾಡೂಟ ಪಾರ್ಟಿ

ಚಾಮರಾಜನಗರ: ಲಾಕ್ ಡೌನ್​​​ನಲ್ಲಿ ಲೋಕೋಪಯೋಗಿ ಅಧಿಕಾರಿಗಳು ಭರ್ಜರಿ ಬಾಡೂಟ ಪಾರ್ಟಿ ಮಾಡಿರುವ ಘಟನೆ ಚಾಮರಾಜನಗರ ಸಂತೇಮರಳ್ಳಿ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದಿದೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಯೊಬ್ಬರು ಇದೇ ತಿಂಗಳ 30ರಂದು ನಿವೃತ್ತಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿಕಾರಿಯೊಬ್ಬರಿಗೆ ಬಿಳ್ಕೊಡುಗೆ ನೀಡುವ ನೆಪದಲ್ಲಿ ಅಧಿಕಾರಿಗಳು ಭರ್ಜರಿ ಪಾರ್ಟಿ ನಡೆಸಿದ್ದಾರೆ ಎನ್ನಲಾಗಿದೆ.   ಕೊರೊನಾ ಲಾಕ್​​ಡೌನ್​ ಹಾಗೂ ಮಾರ್ಗಸೂಚಿಗಳನ್ನು ಅಧಿಕಾರಿಗಳು ಉಲ್ಲಂಘನೆ ಮಾಡಿದ್ದು, ಸುಮಾರು 80 ರಿಂದ‌ 100 ಜನರಿಗೆ ಬಾಡೂಟ ಏರ್ಪಡಿಸಿದ್ದರು ಎನ್ನಲಾಗಿದೆ. …

Read More »

ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ರೇಖಾ ಕದಿರೇಶ್ ಹಂತಕರು: ಮತ್ತೆ ನಾಲ್ವರ ಬಂಧನ

ಬೆಂಗಳೂರು: ಛಲವಾದಿಪಾಳ್ಯದ ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಕೊಲೆಗೈದಿದ್ದ ಇಬ್ಬರು ಕಿಂಗ್‌ ಪಿನ್‌ ಗಳಿಗೆ ಪಶ್ಚಿಮ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಅಲ್ಲದೆ ರಾತ್ರಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಛಲವಾದಿ ಪಾಳ್ಯ ನಿವಾಸಿಗಳಾದ ಪೀಟರ್‌(45) ಮತ್ತು ಸೂರ್ಯ(20) ಎಂಬವರು ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ರಾತ್ರಿ ಕದಿರೇಶ್‌ ಸಹೋದರಿ ಮಾಲಾ ಪುತ್ರ ಅರುಳ್‌, ಸ್ಥಳೀಯ ನಿವಾಸಿ …

Read More »

ಜಾರಕಿಹೊಳಿ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ, ಸೂಕ್ತ ಸ್ಥಾನಮಾನ ಸಿಗಲಿದೆ: ಬಿ.ಸಿ.ಪಾಟೀಲ್

ಉಡುಪಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ. ಅವರ ವಿರುದ್ಧ ಪಿತೂರಿ ಮಾಡಿ ಪ್ರಕರಣದಲ್ಲಿ ಸಿಕ್ಕಿಸಿ ಹಾಕಿದ್ದಾರೆ. ಶೀಘ್ರದಲ್ಲಿ ಸತ್ಯ ಹೊರಬರುತ್ತದೆ. ನಂತರ ಅವರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನವನ್ನು ಪಕ್ಷದ ವರಿಷ್ಠರು ಕೊಡತ್ತಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಗೊಂದಲ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿಯಾಗಲು ಕಾಂಗ್ರೆಸ್ ಎಲ್ಲಿದೆ? ಕಾಂಗ್ರೆಸ್ ನಿರ್ನಾಮವಾಗಿದೆ. …

Read More »